< 1 Mose 36 >

1 Das ist das Geschlecht Esaus, der da heißt Edom.
ಎದೋಮ್ ಎಂಬ ಏಸಾವನ ವಂಶಾವಳಿ ಇದು:
2 Esau nahm Weiber von den Töchtern Kanaans: Ada, die Tochter Elons, des Hethiters, und Oholibama, die Tochter des Ana, die Enkelin des Zibeons, des Heviters,
ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,
3 und Basmath, Ismaels Tochter, Nebajoths Schwester.
ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
4 Und Ada gebar dem Esau Eliphas, aber Basmath gebar Reguel.
ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
5 Oholibama gebar Jehus, Jaelam und Korah. Das sind Esaus Kinder, die ihm geboren sind im Lande Kanaan.
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
6 Und Esau nahm seine Weiber, Söhne und Töchter und alle Seelen seines Hauses, seine Habe und alles Vieh mit allen Gütern, so er im Lande Kanaan erworben hatte, und zog in ein ander Land, hinweg von seinem Bruder Jakob.
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
7 Denn ihre Habe war zu groß, daß sie nicht konnten beieinander wohnen; und das Land darin sie Fremdlinge waren, vermochte sie nicht zu ertragen vor der Menge ihres Viehs.
ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8 Also wohnte Esau auf dem Gebirge Seir. Und Esau ist der Edom.
ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.
9 Dies ist das Geschlecht Esaus, von dem die Edomiter herkommen, auf dem Gebirge Seir.
ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
10 Und so heißen die Kinder Esaus: Eliphas, der Sohn Adas, Esaus Weibes; Reguel, der Sohn Basmaths, Esaus Weibes.
೧೦ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
11 Des Eliphas Söhne aber waren diese: Theman, Omar, Zepho, Gaetham und Kenas.
೧೧ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
12 Und Thimna war ein Kebsweib des Eliphas, Esaus Sohnes; die gebar ihm Amalek. Das sind die Kinder von Ada, Esaus Weib.
೧೨ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
13 Die Kinder aber Reguels sind diese: Nahath, Serah, Samma, Missa. Das sind die Kinder von Basmath, Esaus Weib.
೧೩ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
14 Die Kinder aber von Oholibama, Esaus Weib, der Tochter des Ana, der Enkelin Zibeons, sind diese, die sie dem Esau gebar: Jehus, Jaelam und Korah.
೧೪ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
15 Das sind die Fürsten unter den Kindern Esaus. Die Kinder des Eliphas, des ersten Sohnes Esaus: der Fürst Theman, der Fürst Omar, der Fürst Zepho, der Fürst Kenas,
೧೫ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
16 der Fürst Korah, der Fürst Gaetham, der Fürst Amalek. Das sind die Fürsten von Eliphas im Lande Edom und sind Kinder der Ada.
೧೬ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.
17 Und das sind die Kinder Reguels, Esaus Sohnes: der Fürst Nahath, der Fürst Serah, der Fürst Samma, der Fürst Missa. Das sind die Fürsten von Reguel im Lande der Edomiter und sind Kinder von der Basmath, Esaus Weib.
೧೭ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
18 Das sind die Kinder Oholibamas, Esaus Weibes: der Fürst Jehus, der Fürst Jaelam, der Fürst Korah. Das sind die Fürsten von Oholibama, der Tochter des Ana, Esaus Weib.
೧೮ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
19 Das sind die Kinder und ihre Fürsten. Er ist der Edom.
೧೯ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.
20 Die Kinder aber von Seir, dem Horiter, die im Lande wohnten, sind diese: Lotan, Sobal, Zibeon, Ana, Dison, Ezer und Disan.
೨೦ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
21 Das sind die Fürsten der Horiter, Kinder des Seir, im Lande Edom.
೨೧ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.
22 Aber des Lotan Kinder waren diese: Hori, Heman; und Lotans Schwester hieß Thimna.
೨೨ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
23 Die Kinder von Sobal waren diese: Alwan, Manahath, Ebal, Sepho und Onam.
೨೩ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
24 Die Kinder von Zibeon waren diese: Aja und Ana. Das ist der Ana, der in der Wüste die warmen Quellen fand, da er seines Vaters Zibeon Esel hütete.
೨೪ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
25 Die Kinder aber Anas waren: Dison und Oholibama, das ist die Tochter Anas.
೨೫ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26 Die Kinder Disons waren: Hemdan, Esban, Jethran und Cheran.
೨೬ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.
27 Die Kinder Ezers waren: Bilhan, Sawan und Akan.
೨೭ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.
28 Die Kinder Disans waren: Uz und Aran.
೨೮ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
29 Dies sind die Fürsten der Horiter: der Fürst Lotan, der Fürst Sobal, der Fürst Zibeon, der Fürst Ana,
೨೯ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
30 der Fürst Dison, der Fürst Ezer, der Fürst Disan. Das sind die Fürsten der Horiter, die regiert haben im Lande Seir.
೩೦ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.
31 Die Könige aber, die im Lande Edom regiert haben, ehe denn die Kinder Israel Könige hatten, sind diese:
೩೧ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
32 Bela war König in Edom, ein Sohn Beors, und seine Stadt hieß Dinhaba.
೩೨ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
33 Und da Bela starb, ward König an seiner Statt Jobab, ein Sohn Serahs von Bozra.
೩೩ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.
34 Da Jobab starb, ward an seiner Statt König Husam aus der Themaniter Lande.
೩೪ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.
35 Da Husam starb, ward König an seiner Statt Hadad, ein Sohn Bedads, der die Midianiter schlug auf der Moabiter Felde; und seine Stadt hieß Awith.
೩೫ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
36 Da Hadad starb, regierte Samla von Masrek.
೩೬ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
37 Da Samla starb, ward Saul König, von Rehoboth am Strom.
೩೭ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
38 Da Saul starb, ward an seiner Statt König Baal-Hanan, der Sohn Achbors.
೩೮ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
39 Da Baal-Hanan, Achbors Sohn, starb, ward an seiner Statt König Hadar; und seine Stadt hieß Pagu, und sein Weib Mehetabeel, eine Tochter Matreds, die Mesahabs Tochter war.
೩೯ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40 Also heißen die Fürsten von Esau in ihren Geschlechtern, Örtern und Namen: der Fürst Thimna, der Fürst Alwa, der Fürst Jetheth,
೪೦ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
41 der Fürst Oholibama, der Fürst Ela, der Fürst Pinon,
೪೧ಒಹೋಲಿಬಾಮ, ಏಲಾ, ಪೀನೋನ್,
42 der Fürst Kenas, der Fürst Theman, der Fürst Mibzar,
೪೨ಕೆನೆಜ್, ತೇಮಾನ್, ಮಿಪ್ಚಾರ್
43 der Fürst Magdiel, der Fürst Iram. Das sind die Fürsten in Edom, wie sie gewohnt haben in ihrem Erblande. Das ist Esau, der Vater der Edomiter.
೪೩ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.

< 1 Mose 36 >