< Κατα Λουκαν 6 >

1 εγενετο δε εν σαββατω δευτεροπρωτω διαπορευεσθαι αυτον δια των σποριμων και ετιλλον οι μαθηται αυτου τουσ σταχυασ και ησθιον ψωχοντεσ ταισ χερσιν
ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
2 τινεσ δε των φαρισαιων ειπον αυτοισ τι ποιειτε ο ουκ εξεστιν ποιειν εν τοισ σαββασιν
ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
3 και αποκριθεισ προσ αυτουσ ειπεν ο ιησουσ ουδε τουτο ανεγνωτε ο εποιησεν δαυιδ οποτε επεινασεν αυτοσ και οι μετ αυτου οντεσ
ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
4 ωσ εισηλθεν εισ τον οικον του θεου και τουσ αρτουσ τησ προθεσεωσ ελαβεν και εφαγεν και εδωκεν και τοισ μετ αυτου ουσ ουκ εξεστιν φαγειν ει μη μονουσ τουσ ιερεισ
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
5 και ελεγεν αυτοισ οτι κυριοσ εστιν ο υιοσ του ανθρωπου και του σαββατου
“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
6 εγενετο δε και εν ετερω σαββατω εισελθειν αυτον εισ την συναγωγην και διδασκειν και ην εκει ανθρωποσ και η χειρ αυτου η δεξια ην ξηρα
ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
7 παρετηρουν δε οι γραμματεισ και οι φαρισαιοι ει εν τω σαββατω θεραπευσει ινα ευρωσιν κατηγοριαν αυτου
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
8 αυτοσ δε ηδει τουσ διαλογισμουσ αυτων και ειπεν τω ανθρωπω τω ξηραν εχοντι την χειρα εγειραι και στηθι εισ το μεσον ο δε αναστασ εστη
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
9 ειπεν ουν ο ιησουσ προσ αυτουσ επερωτησω υμασ τι εξεστιν τοισ σαββασιν αγαθοποιησαι η κακοποιησαι ψυχην σωσαι η αποκτειναι
ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
10 και περιβλεψαμενοσ παντασ αυτουσ ειπεν αυτω εκτεινον την χειρα σου ο δε εποιησεν και αποκατεσταθη η χειρ αυτου υγιησ ωσ η αλλη
೧೦ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
11 αυτοι δε επλησθησαν ανοιασ και διελαλουν προσ αλληλουσ τι αν ποιησειαν τω ιησου
೧೧ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
12 εγενετο δε εν ταισ ημεραισ ταυταισ εξηλθεν εισ το οροσ προσευξασθαι και ην διανυκτερευων εν τη προσευχη του θεου
೧೨ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
13 και οτε εγενετο ημερα προσεφωνησεν τουσ μαθητασ αυτου και εκλεξαμενοσ απ αυτων δωδεκα ουσ και αποστολουσ ωνομασεν
೧೩ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 σιμωνα ον και ωνομασεν πετρον και ανδρεαν τον αδελφον αυτου ιακωβον και ιωαννην φιλιππον και βαρθολομαιον
೧೪ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 ματθαιον και θωμαν ιακωβον τον του αλφαιου και σιμωνα τον καλουμενον ζηλωτην
೧೫ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
16 ιουδαν ιακωβου και ιουδαν ισκαριωτην οσ και εγενετο προδοτησ
೧೬ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
17 και καταβασ μετ αυτων εστη επι τοπου πεδινου και οχλοσ μαθητων αυτου και πληθοσ πολυ του λαου απο πασησ τησ ιουδαιασ και ιερουσαλημ και τησ παραλιου τυρου και σιδωνοσ οι ηλθον ακουσαι αυτου και ιαθηναι απο των νοσων αυτων
೧೭ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
18 και οι οχλουμενοι υπο πνευματων ακαθαρτων και εθεραπευοντο
೧೮ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
19 και πασ ο οχλοσ εζητει απτεσθαι αυτου οτι δυναμισ παρ αυτου εξηρχετο και ιατο παντασ
೧೯ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
20 και αυτοσ επαρασ τουσ οφθαλμουσ αυτου εισ τουσ μαθητασ αυτου ελεγεν μακαριοι οι πτωχοι οτι υμετερα εστιν η βασιλεια του θεου
೨೦ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
21 μακαριοι οι πεινωντεσ νυν οτι χορτασθησεσθε μακαριοι οι κλαιοντεσ νυν οτι γελασετε
೨೧ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
22 μακαριοι εστε οταν μισησωσιν υμασ οι ανθρωποι και οταν αφορισωσιν υμασ και ονειδισωσιν και εκβαλωσιν το ονομα υμων ωσ πονηρον ενεκα του υιου του ανθρωπου
೨೨“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
23 χαρητε εν εκεινη τη ημερα και σκιρτησατε ιδου γαρ ο μισθοσ υμων πολυσ εν τω ουρανω κατα ταυτα γαρ εποιουν τοισ προφηταισ οι πατερεσ αυτων
೨೩ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
24 πλην ουαι υμιν τοισ πλουσιοισ οτι απεχετε την παρακλησιν υμων
೨೪“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
25 ουαι υμιν οι εμπεπλησμενοι οτι πεινασετε ουαι υμιν οι γελωντεσ νυν οτι πενθησετε και κλαυσετε
೨೫ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
26 ουαι οταν καλωσ υμασ ειπωσιν οι ανθρωποι κατα ταυτα γαρ εποιουν τοισ ψευδοπροφηταισ οι πατερεσ αυτων
೨೬“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.
27 αλλ υμιν λεγω τοισ ακουουσιν αγαπατε τουσ εχθρουσ υμων καλωσ ποιειτε τοισ μισουσιν υμασ
೨೭“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
28 ευλογειτε τουσ καταρωμενουσ υμιν προσευχεσθε υπερ των επηρεαζοντων υμασ
೨೮ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29 τω τυπτοντι σε επι την σιαγονα παρεχε και την αλλην και απο του αιροντοσ σου το ιματιον και τον χιτωνα μη κωλυσησ
೨೯ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
30 παντι δε τω αιτουντι σε διδου και απο του αιροντοσ τα σα μη απαιτει
೩೦ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
31 και καθωσ θελετε ινα ποιωσιν υμιν οι ανθρωποι και υμεισ ποιειτε αυτοισ ομοιωσ
೩೧ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32 και ει αγαπατε τουσ αγαπωντασ υμασ ποια υμιν χαρισ εστιν και γαρ οι αμαρτωλοι τουσ αγαπωντασ αυτουσ αγαπωσιν
೩೨“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33 και εαν αγαθοποιητε τουσ αγαθοποιουντασ υμασ ποια υμιν χαρισ εστιν και γαρ οι αμαρτωλοι το αυτο ποιουσιν
೩೩ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34 και εαν δανειζητε παρ ων ελπιζετε απολαβειν ποια υμιν χαρισ εστιν και γαρ αμαρτωλοι αμαρτωλοισ δανειζουσιν ινα απολαβωσιν τα ισα
೩೪ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
35 πλην αγαπατε τουσ εχθρουσ υμων και αγαθοποιειτε και δανειζετε μηδεν απελπιζοντεσ και εσται ο μισθοσ υμων πολυσ και εσεσθε υιοι υψιστου οτι αυτοσ χρηστοσ εστιν επι τουσ αχαριστουσ και πονηρουσ
೩೫ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36 γινεσθε ουν οικτιρμονεσ καθωσ και ο πατηρ υμων οικτιρμων εστιν
೩೬ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
37 και μη κρινετε και ου μη κριθητε μη καταδικαζετε και ου μη καταδικασθητε απολυετε και απολυθησεσθε
೩೭“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
38 διδοτε και δοθησεται υμιν μετρον καλον πεπιεσμενον και σεσαλευμενον και υπερεκχυνομενον δωσουσιν εισ τον κολπον υμων τω γαρ αυτω μετρω ω μετρειτε αντιμετρηθησεται υμιν
೩೮ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
39 ειπεν δε παραβολην αυτοισ μητι δυναται τυφλοσ τυφλον οδηγειν ουχι αμφοτεροι εισ βοθυνον πεσουνται
೩೯ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
40 ουκ εστιν μαθητησ υπερ τον διδασκαλον αυτου κατηρτισμενοσ δε πασ εσται ωσ ο διδασκαλοσ αυτου
೪೦ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41 τι δε βλεπεισ το καρφοσ το εν τω οφθαλμω του αδελφου σου την δε δοκον την εν τω ιδιω οφθαλμω ου κατανοεισ
೪೧“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
42 η πωσ δυνασαι λεγειν τω αδελφω σου αδελφε αφεσ εκβαλω το καρφοσ το εν τω οφθαλμω σου αυτοσ την εν τω οφθαλμω σου δοκον ου βλεπων υποκριτα εκβαλε πρωτον την δοκον εκ του οφθαλμου σου και τοτε διαβλεψεισ εκβαλειν το καρφοσ το εν τω οφθαλμω του αδελφου σου
೪೨ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
43 ου γαρ εστιν δενδρον καλον ποιουν καρπον σαπρον ουδε δενδρον σαπρον ποιουν καρπον καλον
೪೩ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
44 εκαστον γαρ δενδρον εκ του ιδιου καρπου γινωσκεται ου γαρ εξ ακανθων συλλεγουσιν συκα ουδε εκ βατου τρυγωσιν σταφυλην
೪೪ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
45 ο αγαθοσ ανθρωποσ εκ του αγαθου θησαυρου τησ καρδιασ αυτου προφερει το αγαθον και ο πονηροσ ανθρωποσ εκ του πονηρου θησαυρου τησ καρδιασ αυτου προφερει το πονηρον εκ γαρ του περισσευματοσ τησ καρδιασ λαλει το στομα αυτου
೪೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
46 τι δε με καλειτε κυριε κυριε και ου ποιειτε α λεγω
೪೬“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
47 πασ ο ερχομενοσ προσ με και ακουων μου των λογων και ποιων αυτουσ υποδειξω υμιν τινι εστιν ομοιοσ
೪೭ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
48 ομοιοσ εστιν ανθρωπω οικοδομουντι οικιαν οσ εσκαψεν και εβαθυνεν και εθηκεν θεμελιον επι την πετραν πλημμυρασ δε γενομενησ προσερρηξεν ο ποταμοσ τη οικια εκεινη και ουκ ισχυσεν σαλευσαι αυτην τεθεμελιωτο γαρ επι την πετραν
೪೮ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
49 ο δε ακουσασ και μη ποιησασ ομοιοσ εστιν ανθρωπω οικοδομησαντι οικιαν επι την γην χωρισ θεμελιου η προσερρηξεν ο ποταμοσ και ευθεωσ επεσεν και εγενετο το ρηγμα τησ οικιασ εκεινησ μεγα
೪೯ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

< Κατα Λουκαν 6 >