< 1 שְׁמוּאֵל 4 >

וַיְהִ֥י דְבַר־שְׁמוּאֵ֖ל לְכָל־יִשְׂרָאֵ֑ל וַיֵּצֵ֣א יִשְׂרָאֵל֩ לִקְרַ֨את פְּלִשְׁתִּ֜ים לַמִּלְחָמָ֗ה וַֽיַּחֲנוּ֙ עַל־הָאֶ֣בֶן הָעֵ֔זֶר וּפְלִשְׁתִּ֖ים חָנ֥וּ בַאֲפֵֽק׃ 1
ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
וַיַּעַרְכ֨וּ פְלִשְׁתִּ֜ים לִקְרַ֣את יִשְׂרָאֵ֗ל וַתִּטֹּשׁ֙ הַמִּלְחָמָ֔ה וַיִּנָּ֥גֶף יִשְׂרָאֵ֖ל לִפְנֵ֣י פְלִשְׁתִּ֑ים וַיַּכּ֤וּ בַמַּֽעֲרָכָה֙ בַּשָּׂדֶ֔ה כְּאַרְבַּ֥עַת אֲלָפִ֖ים אִֽישׁ׃ 2
ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು.
וַיָּבֹ֣א הָעָם֮ אֶל־הַֽמַּחֲנֶה֒ וַיֹּֽאמְרוּ֙ זִקְנֵ֣י יִשְׂרָאֵ֔ל לָ֣מָּה נְגָפָ֧נוּ יְהוָ֛ה הַיֹּ֖ום לִפְנֵ֣י פְלִשְׁתִּ֑ים נִקְחָ֧ה אֵלֵ֣ינוּ מִשִּׁלֹ֗ה אֶת־אֲרֹון֙ בְּרִ֣ית יְהוָ֔ה וְיָבֹ֣א בְקִרְבֵּ֔נוּ וְיֹשִׁעֵ֖נוּ מִכַּ֥ף אֹיְבֵֽינוּ׃ 3
ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.
וַיִּשְׁלַ֤ח הָעָם֙ שִׁלֹ֔ה וַיִּשְׂא֣וּ מִשָּׁ֗ם אֵ֣ת אֲרֹ֧ון בְּרִית־יְהוָ֛ה צְבָאֹ֖ות יֹשֵׁ֣ב הַכְּרֻבִ֑ים וְשָׁ֞ם שְׁנֵ֣י בְנֵֽי־עֵלִ֗י עִם־אֲרֹון֙ בְּרִ֣ית הָאֱלֹהִ֔ים חָפְנִ֖י וּפִֽינְחָֽס׃ 4
ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.
וַיְהִ֗י כְּבֹ֨וא אֲרֹ֤ון בְּרִית־יְהוָה֙ אֶל־הַֽמַּחֲנֶ֔ה וַיָּרִ֥עוּ כָל־יִשְׂרָאֵ֖ל תְּרוּעָ֣ה גְדֹולָ֑ה וַתֵּהֹ֖ם הָאָֽרֶץ׃ 5
ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
וַיִּשְׁמְע֤וּ פְלִשְׁתִּים֙ אֶת־קֹ֣ול הַתְּרוּעָ֔ה וַיֹּ֣אמְר֔וּ מֶ֠ה קֹ֣ול הַתְּרוּעָ֧ה הַגְּדֹולָ֛ה הַזֹּ֖את בְּמַחֲנֵ֣ה הָעִבְרִ֑ים וַיֵּ֣דְע֔וּ כִּ֚י אֲרֹ֣ון יְהוָ֔ה בָּ֖א אֶל־הַֽמַּחֲנֶֽה׃ 6
ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು.
וַיִּֽרְאוּ֙ הַפְּלִשְׁתִּ֔ים כִּ֣י אָמְר֔וּ בָּ֥א אֱלֹהִ֖ים אֶל־הַֽמַּחֲנֶ֑ה וַיֹּאמְרוּ֙ אֹ֣וי לָ֔נוּ כִּ֣י לֹ֥א הָיְתָ֛ה כָּזֹ֖את אֶתְמֹ֥ול שִׁלְשֹֽׁם׃ 7
“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
אֹ֣וי לָ֔נוּ מִ֣י יַצִּילֵ֔נוּ מִיַּ֛ד הָאֱלֹהִ֥ים הָאַדִּירִ֖ים הָאֵ֑לֶּה אֵ֧לֶּה הֵ֣ם הָאֱלֹהִ֗ים הַמַּכִּ֧ים אֶת־מִצְרַ֛יִם בְּכָל־מַכָּ֖ה בַּמִּדְבָּֽר׃ 8
ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
הִֽתְחַזְּק֞וּ וִֽהְי֤וּ לֽ͏ַאֲנָשִׁים֙ פְּלִשְׁתִּ֔ים פֶּ֚ן תַּעַבְד֣וּ לָעִבְרִ֔ים כַּאֲשֶׁ֥ר עָבְד֖וּ לָכֶ֑ם וִהְיִיתֶ֥ם לַאֲנָשִׁ֖ים וְנִלְחַמְתֶּֽם׃ 9
ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.
וַיִּלָּחֲמ֣וּ פְלִשְׁתִּ֗ים וַיִּנָּ֤גֶף יִשְׂרָאֵל֙ וַיָּנֻ֙סוּ֙ אִ֣ישׁ לְאֹהָלָ֔יו וַתְּהִ֥י הַמַּכָּ֖ה גְּדֹולָ֣ה מְאֹ֑ד וַיִּפֹּל֙ מִיִּשְׂרָאֵ֔ל שְׁלֹשִׁ֥ים אֶ֖לֶף רַגְלִֽי׃ 10
ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
וַאֲרֹ֥ון אֱלֹהִ֖ים נִלְקָ֑ח וּשְׁנֵ֤י בְנֵֽי־עֵלִי֙ מֵ֔תוּ חָפְנִ֖י וּפִֽינְחָֽס׃ 11
ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.
וַיָּ֤רָץ אִישׁ־בִּנְיָמִן֙ מֵהַמַּ֣עֲרָכָ֔ה וַיָּבֹ֥א שִׁלֹ֖ה בַּיֹּ֣ום הַה֑וּא וּמַדָּ֣יו קְרֻעִ֔ים וַאֲדָמָ֖ה עַל־רֹאשֹֽׁו׃ 12
ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.
וַיָּבֹ֗וא וְהִנֵּ֣ה עֵ֠לִי יֹשֵׁ֨ב עַֽל־הַכִּסֵּ֜א יַךְ (יַ֥ד) דֶּ֙רֶךְ֙ מְצַפֶּ֔ה כִּֽי־הָיָ֤ה לִבֹּו֙ חָרֵ֔ד עַ֖ל אֲרֹ֣ון הָאֱלֹהִ֑ים וְהָאִ֗ישׁ בָּ֚א לְהַגִּ֣יד בָּעִ֔יר וַתִּזְעַ֖ק כָּל־הָעִֽיר׃ 13
ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
וַיִּשְׁמַ֤ע עֵלִי֙ אֶת־קֹ֣ול הַצְּעָקָ֔ה וַיֹּ֕אמֶר מֶ֛ה קֹ֥ול הֶהָמֹ֖ון הַזֶּ֑ה וְהָאִ֣ישׁ מִהַ֔ר וַיָּבֹ֖א וַיַּגֵּ֥ד לְעֵלִֽי׃ 14
ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
וְעֵלִ֕י בֶּן־תִּשְׁעִ֥ים וּשְׁמֹנֶ֖ה שָׁנָ֑ה וְעֵינָ֣יו קָ֔מָה וְלֹ֥א יָכֹ֖ול לִרְאֹֽות׃ 15
ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು.
וַיֹּ֨אמֶר הָאִ֜ישׁ אֶל־עֵלִ֗י אָֽנֹכִי֙ הַבָּ֣א מִן־הַמַּעֲרָכָ֔ה וַאֲנִ֕י מִן־הַמַּעֲרָכָ֖ה נַ֣סְתִּי הַיֹּ֑ום וַיֹּ֛אמֶר מֶֽה־הָיָ֥ה הַדָּבָ֖ר בְּנִֽי׃ 16
ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು.
וַיַּ֨עַן הַֽמְבַשֵּׂ֜ר וַיֹּ֗אמֶר נָ֤ס יִשְׂרָאֵל֙ לִפְנֵ֣י פְלִשְׁתִּ֔ים וְגַ֛ם מַגֵּפָ֥ה גְדֹולָ֖ה הָיְתָ֣ה בָעָ֑ם וְגַם־שְׁנֵ֨י בָנֶ֜יךָ מֵ֗תוּ חָפְנִי֙ וּפִ֣ינְחָ֔ס וַאֲרֹ֥ון הָאֱלֹהִ֖ים נִלְקָֽחָה׃ פ 17
ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು.
וַיְהִ֞י כְּהַזְכִּירֹ֣ו ׀ אֶת־אֲרֹ֣ון הָאֱלֹהִ֗ים וַיִּפֹּ֣ל מֵֽעַל־הַ֠כִּסֵּא אֲחֹ֨רַנִּ֜ית בְּעַ֣ד ׀ יַ֣ד הַשַּׁ֗עַר וַתִּשָּׁבֵ֤ר מַפְרַקְתֹּו֙ וַיָּמֹ֔ת כִּֽי־זָקֵ֥ן הָאִ֖ישׁ וְכָבֵ֑ד וְה֛וּא שָׁפַ֥ט אֶת־יִשְׂרָאֵ֖ל אַרְבָּעִ֥ים שָׁנָֽה׃ 18
ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು.
וְכַלָּתֹ֣ו אֵֽשֶׁת־פִּינְחָס֮ הָרָ֣ה לָלַת֒ וַתִּשְׁמַ֣ע אֶת־הַשְּׁמֻעָ֔ה אֶל־הִלָּקַח֙ אֲרֹ֣ון הָאֱלֹהִ֔ים וּמֵ֥ת חָמִ֖יהָ וְאִישָׁ֑הּ וַתִּכְרַ֣ע וַתֵּ֔לֶד כִּֽי־נֶהֶפְכ֥וּ עָלֶ֖יהָ צִרֶֽיהָ׃ 19
ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು.
וּכְעֵ֣ת מוּתָ֗הּ וַתְּדַבֵּ֙רְנָה֙ הַנִּצָּבֹ֣ות עָלֶ֔יהָ אַל־תִּֽירְאִ֖י כִּ֣י בֵ֣ן יָלָ֑דְתְּ וְלֹ֥א עָנְתָ֖ה וְלֹא־שָׁ֥תָה לִבָּֽהּ׃ 20
ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ.
וַתִּקְרָ֣א לַנַּ֗עַר אִֽי־כָבֹוד֙ לֵאמֹ֔ר גָּלָ֥ה כָבֹ֖וד מִיִּשְׂרָאֵ֑ל אֶל־הִלָּקַח֙ אֲרֹ֣ון הָאֱלֹהִ֔ים וְאֶל־חָמִ֖יהָ וְאִישָֽׁהּ׃ 21
ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.
וַתֹּ֕אמֶר גָּלָ֥ה כָבֹ֖וד מִיִּשְׂרָאֵ֑ל כִּ֥י נִלְקַ֖ח אֲרֹ֥ון הָאֱלֹהִֽים׃ פ 22
ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.

< 1 שְׁמוּאֵל 4 >