< 2 דִּבְרֵי הַיָּמִים 13 >

בִּשְׁנַ֛ת שְׁמֹונֶ֥ה עֶשְׂרֵ֖ה לַמֶּ֣לֶךְ יָרָבְעָ֑ם וַיִּמְלֹ֥ךְ אֲבִיָּ֖ה עַל־יְהוּדָֽה׃ 1
ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
שָׁלֹ֣ושׁ שָׁנִ֗ים מָלַךְ֙ בִּיר֣וּשָׁלַ֔͏ִם וְשֵׁ֣ם אִמֹּ֔ו מִיכָיָ֥הוּ בַת־אוּרִיאֵ֖ל מִן־גִּבְעָ֑ה וּמִלְחָמָ֥ה הָיְתָ֛ה בֵּ֥ין אֲבִיָּ֖ה וּבֵ֥ין יָרָבְעָֽם׃ 2
ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
וַיֶּאְסֹ֨ר אֲבִיָּ֜ה אֶת־הַמִּלְחָמָ֗ה בְּחַ֙יִל֙ גִּבֹּורֵ֣י מִלְחָמָ֔ה אַרְבַּע־מֵאֹ֥ות אֶ֖לֶף אִ֣ישׁ בָּח֑וּר ס וְיָרָבְעָ֗ם עָרַ֤ךְ עִמֹּו֙ מִלְחָמָ֔ה בִּשְׁמֹונֶ֨ה מֵאֹ֥ות אֶ֛לֶף אִ֥ישׁ בָּח֖וּר גִּבֹּ֥ור חָֽיִל׃ ס 3
ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
וַיָּ֣קָם אֲבִיָּ֗ה מֵעַל֙ לְהַ֣ר צְמָרַ֔יִם אֲשֶׁ֖ר בְּהַ֣ר אֶפְרָ֑יִם וַיֹּ֕אמֶר שְׁמָע֖וּנִי יָרָבְעָ֥ם וְכָל־יִשְׂרָאֵֽל׃ 4
ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.
הֲלֹ֤א לָכֶם֙ לָדַ֔עַת כִּ֞י יְהוָ֣ה ׀ אֱלֹהֵ֣י יִשְׂרָאֵ֗ל נָתַ֨ן מַמְלָכָ֧ה לְדָוִ֛יד עַל־יִשְׂרָאֵ֖ל לְעֹולָ֑ם לֹ֥ו וּלְבָנָ֖יו בְּרִ֥ית מֶֽלַח׃ ס 5
ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
וַיָּ֙קָם֙ יָרָבְעָ֣ם בֶּן־נְבָ֔ט עֶ֖בֶד שְׁלֹמֹ֣ה בֶן־דָּוִ֑יד וַיִּמְרֹ֖ד עַל־אֲדֹנָֽיו׃ 6
ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.
וַיִּקָּבְצ֣וּ עָלָ֗יו אֲנָשִׁ֤ים רֵקִים֙ בְּנֵ֣י בְלִיַּ֔עַל וַיִּֽתְאַמְּצ֖וּ עַל־רְחַבְעָ֣ם בֶּן־שְׁלֹמֹ֑ה וּרְחַבְעָ֗ם הָ֤יָה נַ֙עַר֙ וְרַךְ־לֵבָ֔ב וְלֹ֥א הִתְחַזַּ֖ק לִפְנֵיהֶֽם׃ 7
ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
וְעַתָּ֣ה ׀ אַתֶּ֣ם אֹֽמְרִ֗ים לְהִתְחַזֵּק֙ לִפְנֵי֙ מַמְלֶ֣כֶת יְהוָ֔ה בְּיַ֖ד בְּנֵ֣י דָוִ֑יד וְאַתֶּם֙ הָמֹ֣ון רָ֔ב וְעִמָּכֶם֙ עֶגְלֵ֣י זָהָ֔ב אֲשֶׁ֨ר עָשָׂ֥ה לָכֶ֛ם יָרָבְעָ֖ם לֵאלֹהִֽים׃ 8
ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
הֲלֹ֤א הִדַּחְתֶּם֙ אֶת־כֹּהֲנֵ֣י יְהוָ֔ה אֶת־בְּנֵ֥י אַהֲרֹ֖ן וְהַלְוִיִּ֑ם וַתַּעֲשׂ֨וּ לָכֶ֤ם כֹּהֲנִים֙ כְּעַמֵּ֣י הָאֲרָצֹ֔ות כָּל־הַבָּ֗א לְמַלֵּ֨א יָדֹ֜ו בְּפַ֤ר בֶּן־בָּקָר֙ וְאֵילִ֣ם שִׁבְעָ֔ה וְהָיָ֥ה כֹהֵ֖ן לְלֹ֥א אֱלֹהִֽים׃ ס 9
ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.
וַאֲנַ֛חְנוּ יְהוָ֥ה אֱלֹהֵ֖ינוּ וְלֹ֣א עֲזַבְנֻ֑הוּ וְכֹ֨הֲנִ֜ים מְשָׁרְתִ֤ים לַֽיהוָה֙ בְּנֵ֣י אַהֲרֹ֔ן וְהַלְוִיִּ֖ם בַּמְלָֽאכֶת׃ 10
೧೦ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
וּמַקְטִרִ֣ים לַיהוָ֡ה עֹלֹ֣ות בַּבֹּֽקֶר־בַּבֹּ֣קֶר וּבָעֶֽרֶב־בָּעֶ֣רֶב וּקְטֹֽרֶת־סַמִּים֩ וּמַעֲרֶ֨כֶת לֶ֜חֶם עַל־הַשֻּׁלְחָ֣ן הַטָּהֹ֗ור וּמְנֹורַ֨ת הַזָּהָ֤ב וְנֵרֹתֶ֙יהָ֙ לְבָעֵר֙ בָּעֶ֣רֶב בָּעֶ֔רֶב כִּֽי־שֹׁמְרִ֣ים אֲנַ֔חְנוּ אֶת־מִשְׁמֶ֖רֶת יְהוָ֣ה אֱלֹהֵ֑ינוּ וְאַתֶּ֖ם עֲזַבְתֶּ֥ם אֹתֹֽו׃ 11
೧೧ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
וְהִנֵּה֩ עִמָּ֨נוּ בָרֹ֜אשׁ הָאֱלֹהִ֧ים ׀ וְכֹהֲנָ֛יו וַחֲצֹצְרֹ֥ות הַתְּרוּעָ֖ה לְהָרִ֣יעַ עֲלֵיכֶ֑ם בְּנֵ֣י יִשְׂרָאֵ֗ל אַל־תִּלָּֽחֲמ֛וּ עִם־יְהוָ֥ה אֱלֹהֵֽי־אֲבֹתֵיכֶ֖ם כִּי־לֹ֥א תַצְלִֽיחוּ׃ 12
೧೨ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.
וְיָֽרָבְעָ֗ם הֵסֵב֙ אֶת־הַמַּאְרָ֔ב לָבֹ֖וא מֵֽאַחֲרֵיהֶ֑ם וַיִּֽהְיוּ֙ לִפְנֵ֣י יְהוּדָ֔ה וְהַמַּאְרָ֖ב מֵאַחֲרֵיהֶֽם׃ 13
೧೩ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.
וַיִּפְנ֣וּ יְהוּדָ֗ה וְהִנֵּ֨ה לָהֶ֤ם הַמִּלְחָמָה֙ פָּנִ֣ים וְאָחֹ֔ור וַֽיִּצְעֲק֖וּ לַיהוָ֑ה וְהַכֹּ֣הֲנִ֔ים מַחֲצֹצְִרים (מַחְצְרִ֖ים) בַּחֲצֹצְרֹֽות׃ 14
೧೪ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
וַיָּרִ֖יעוּ אִ֣ישׁ יְהוּדָ֑ה וַיְהִ֗י בְּהָרִ֙יעַ֙ אִ֣ישׁ יְהוּדָ֔ה וְהָאֱלֹהִ֗ים נָגַ֤ף אֶת־יָֽרָבְעָם֙ וְכָל־יִשְׂרָאֵ֔ל לִפְנֵ֥י אֲבִיָּ֖ה וִיהוּדָֽה׃ 15
೧೫ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.
וַיָּנ֥וּסוּ בְנֵי־יִשְׂרָאֵ֖ל מִפְּנֵ֣י יְהוּדָ֑ה וַיִּתְּנֵ֥ם אֱלֹהִ֖ים בְּיָדָֽם׃ 16
೧೬ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.
וַיַּכּ֥וּ בָהֶ֛ם אֲבִיָּ֥ה וְעַמֹּ֖ו מַכָּ֣ה רַבָּ֑ה וַיִּפְּל֤וּ חֲלָלִים֙ מִיִּשְׂרָאֵ֔ל חֲמֵשׁ־מֵאֹ֥ות אֶ֖לֶף אִ֥ישׁ בָּחֽוּר׃ 17
೧೭ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
וַיִּכָּנְע֥וּ בְנֵי־יִשְׂרָאֵ֖ל בָּעֵ֣ת הַהִ֑יא וַיֶּֽאֶמְצוּ֙ בְּנֵ֣י יְהוּדָ֔ה כִּ֣י נִשְׁעֲנ֔וּ עַל־יְהוָ֖ה אֱלֹהֵ֥י אֲבֹותֵיהֶֽם׃ 18
೧೮ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
וַיִּרְדֹּ֣ף אֲבִיָּה֮ אַחֲרֵ֣י יָרָבְעָם֒ וַיִּלְכֹּ֤ד מִמֶּ֙נּוּ֙ עָרִ֔ים אֶת־בֵּֽית־אֵל֙ וְאֶת־בְּנֹותֶ֔יהָ וְאֶת־יְשָׁנָ֖ה וְאֶת־בְּנֹותֶ֑יהָ וְאֶת־עֶפְרֹון (עֶפְרַ֖יִן) וּבְנֹתֶֽיהָ׃ 19
೧೯ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
וְלֹֽא־עָצַ֧ר כֹּֽחַ־יָרָבְעָ֛ם עֹ֖וד בִּימֵ֣י אֲבִיָּ֑הוּ וַיִּגְּפֵ֥הוּ יְהוָ֖ה וַיָּמֹֽת׃ פ 20
೨೦ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.
וַיִּתְחַזֵּ֣ק אֲבִיָּ֔הוּ וַיִּ֨שָּׂא־לֹ֔ו נָשִׁ֖ים אַרְבַּ֣ע עֶשְׂרֵ֑ה וַיֹּ֗ולֶד עֶשְׂרִ֤ים וּשְׁנַ֙יִם֙ בָּנִ֔ים וְשֵׁ֥שׁ עֶשְׂרֵ֖ה בָּנֹֽות׃ ס 21
೨೧ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
וְיֶ֙תֶר֙ דִּבְרֵ֣י אֲבִיָּ֔ה וּדְרָכָ֖יו וּדְבָרָ֑יו כְּתוּבִ֕ים בְּמִדְרַ֖שׁ הַנָּבִ֥יא עִדֹּֽו׃ 22
೨೨ಅಬೀಯನ ಉಳಿದ‍ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.

< 2 דִּבְרֵי הַיָּמִים 13 >