< 2 מְלָכִים 9 >

וֶאֱלִישָׁע֙ הַנָּבִ֔יא קָרָ֕א לְאַחַ֖ד מִבְּנֵ֣י הַנְּבִיאִ֑ים וַיֹּ֨אמֶר לֹ֜ו חֲגֹ֣ר מָתְנֶ֗יךָ וְ֠קַח פַּ֣ךְ הַשֶּׁ֤מֶן הַזֶּה֙ בְּיָדֶ֔ךָ וְלֵ֖ךְ רָמֹ֥ת גִּלְעָֽד׃ 1
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.
וּבָ֖אתָ שָׁ֑מָּה וּרְאֵֽה־שָׁ֠ם יֵה֨וּא בֶן־יְהֹושָׁפָ֜ט בֶּן־נִמְשִׁ֗י וּבָ֙אתָ֙ וַהֲקֵֽמֹתֹו֙ מִתֹּ֣וך אֶחָ֔יו וְהֵבֵיאתָ֥ אֹתֹ֖ו חֶ֥דֶר בְּחָֽדֶר׃ 2
ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,
וְלָקַחְתָּ֤ פַךְ־הַשֶּׁ֙מֶן֙ וְיָצַקְתָּ֣ עַל־רֹאשֹׁ֔ו וְאָֽמַרְתָּ֙ כֹּֽה־אָמַ֣ר יְהוָ֔ה מְשַׁחְתִּ֥יךָֽ לְמֶ֖לֶךְ אֶל־יִשְׂרָאֵ֑ל וּפָתַחְתָּ֥ הַדֶּ֛לֶת וְנַ֖סְתָּה וְלֹ֥א תְחַכֶּֽה׃ 3
ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.
וַיֵּ֧לֶךְ הַנַּ֛עַר הַנַּ֥עַר הַנָּבִ֖יא רָמֹ֥ת גִּלְעָֽד׃ 4
ಹಾಗೆಯೇ ಯೌವನಸ್ಥನಾದ ಪ್ರವಾದಿಯು ಗಿಲ್ಯಾದಿನ ರಾಮೋತಿಗೆ ಹೋದನು.
וַיָּבֹ֗א וְהִנֵּ֨ה שָׂרֵ֤י הַחַ֙יִל֙ יֹֽשְׁבִ֔ים וַיֹּ֕אמֶר דָּבָ֥ר לִ֛י אֵלֶ֖יךָ הַשָּׂ֑ר וַיֹּ֤אמֶר יֵהוּא֙ אֶל־מִ֣י מִכֻּלָּ֔נוּ וַיֹּ֖אמֶר אֵלֶ֥יךָ הַשָּֽׂר׃ 5
ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.
וַיָּ֙קָם֙ וַיָּבֹ֣א הַבַּ֔יְתָה וַיִּצֹ֥ק הַשֶּׁ֖מֶן אֶל־רֹאשֹׁ֑ו וַיֹּ֣אמֶר לֹ֗ו כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל מְשַׁחְתִּ֧יךָֽ לְמֶ֛לֶךְ אֶל־עַ֥ם יְהוָ֖ה אֶל־יִשְׂרָאֵֽל׃ 6
ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.
וְהִ֨כִּיתָ֔ה אֶת־בֵּ֥ית אַחְאָ֖ב אֲדֹנֶ֑יךָ וְנִקַּמְתִּ֞י דְּמֵ֣י ׀ עֲבָדַ֣י הַנְּבִיאִ֗ים וּדְמֵ֛י כָּל־עַבְדֵ֥י יְהוָ֖ה מִיַּ֥ד אִיזָֽבֶל׃ 7
ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.
וְאָבַ֖ד כָּל־בֵּ֣ית אַחְאָ֑ב וְהִכְרַתִּ֤י לְאַחְאָב֙ מַשְׁתִּ֣ין בְּקִ֔יר וְעָצ֥וּר וְעָז֖וּב בְּיִשְׂרָאֵֽל׃ 8
ಅಹಾಬನ ಮನೆಯೆಲ್ಲಾ ನಾಶವಾಗುವುದು. ಇಸ್ರಾಯೇಲಿನಲ್ಲಿ ಉಳಿದಿರುವ ಅಹಾಬನ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮರಾಗಲಿ ಎಲ್ಲರನ್ನೂ ತೆಗೆದುಹಾಕುವೆನು.
וְנָֽתַתִּי֙ אֶת־בֵּ֣ית אַחְאָ֔ב כְּבֵ֖ית יָרָבְעָ֣ם בֶּן־נְבָ֑ט וּכְבֵ֖ית בַּעְשָׁ֥א בֶן־אֲחִיָּֽה׃ 9
ಅಹಾಬನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು.
וְאֶת־אִיזֶ֜בֶל יֹאכְל֧וּ הַכְּלָבִ֛ים בְּחֵ֥לֶק יִזְרְעֶ֖אל וְאֵ֣ין קֹבֵ֑ר וַיִּפְתַּ֥ח הַדֶּ֖לֶת וַיָּנֹֽס׃ 10
ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
וְיֵה֗וּא יָצָא֙ אֶל־עַבְדֵ֣י אֲדֹנָ֔יו וַיֹּ֤אמֶר לֹו֙ הֲשָׁלֹ֔ום מַדּ֛וּעַ בָּֽא־הַמְשֻׁגָּ֥ע הַזֶּ֖ה אֵלֶ֑יךָ וַיֹּ֣אמֶר אֲלֵיהֶ֔ם אַתֶּ֛ם יְדַעְתֶּ֥ם אֶת־הָאִ֖ישׁ וְאֶת־שִׂיחֹֽו׃ 11
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.
וַיֹּאמְר֣וּ שֶׁ֔קֶר הַגֶּד־נָ֖א לָ֑נוּ וַיֹּ֗אמֶר כָּזֹ֤את וְכָזֹאת֙ אָמַ֤ר אֵלַי֙ לֵאמֹ֔ר כֹּ֚ה אָמַ֣ר יְהוָ֔ה מְשַׁחְתִּ֥יךָֽ לְמֶ֖לֶךְ אֶל־יִשְׂרָאֵֽל׃ 12
ಅದಕ್ಕವರು, “ಅದು ಸುಳ್ಳು, ದಯಮಾಡಿ ನಮಗೆ ತಿಳಿಸು,” ಎಂದರು. ಆದ್ದರಿಂದ ಅವನು, “ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆಂಬುದಾಗಿ ಯೆಹೋವ ದೇವರು ಹೇಳುತ್ತಾರೆಂದು ಹೀಗೆ ನನಗೆ ಹೇಳಿದನು,” ಎಂದನು.
וַֽיְמַהֲר֗וּ וַיִּקְחוּ֙ אִ֣ישׁ בִּגְדֹ֔ו וַיָּשִׂ֥ימוּ תַחְתָּ֖יו אֶל־גֶּ֣רֶם הַֽמַּעֲלֹ֑ות וַֽיִּתְקְעוּ֙ בַּשֹּׁופָ֔ר וַיֹּאמְר֖וּ מָלַ֥ךְ יֵהֽוּא׃ 13
ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.
וַיִּתְקַשֵּׁ֗ר יֵה֛וּא בֶּן־יְהֹושָׁפָ֥ט בֶּן־נִמְשִׁ֖י אֶל־יֹורָ֑ם וְיֹורָם֩ הָיָ֨ה שֹׁמֵ֜ר בְּרָמֹ֣ת גִּלְעָ֗ד ה֚וּא וְכָל־יִשְׂרָאֵ֔ל מִפְּנֵ֥י חֲזָאֵ֖ל מֶֽלֶךְ־אֲרָֽם׃ 14
ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.
וַיָּשָׁב֩ יְהֹורָ֨ם הַמֶּ֜לֶךְ לְהִתְרַפֵּ֣א בִיְזְרְעֶ֗אל מִן־הַמַּכִּים֙ אֲשֶׁ֣ר יַכֻּ֣הוּ אֲרַמִּ֔ים בְּהִלָּ֣חֲמֹ֔ו אֶת־חֲזָאֵ֖ל מֶ֣לֶךְ אֲרָ֑ם וַיֹּ֤אמֶר יֵהוּא֙ אִם־יֵ֣שׁ נַפְשְׁכֶ֔ם אַל־יֵצֵ֤א פָלִיט֙ מִן־הָעִ֔יר לָלֶ֖כֶת לַגִּיד (לְהַגִּ֥יד) בְּיִזְרְעֶֽאל׃ 15
ಆದರೆ ಅರಸನಾದ ಯೋರಾಮನು ಅರಾಮಿನ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ, ಅರಾಮ್ಯರು ತನ್ನನ್ನು ಹೊಡೆದ ಗಾಯವನ್ನು ಸ್ವಸ್ಥಮಾಡಿಕೊಳ್ಳುವ ನಿಮಿತ್ತ ಇಜ್ರೆಯೇಲಿಗೆ ಹೋಗಿದ್ದನು. ಆಗ ಯೇಹುವು, “ನಿಮಗೆ ಮನಸ್ಸಿದ್ದರೆ ಇದನ್ನು ಇಜ್ರೆಯೇಲಿಗೆ ಹೋಗಿ ತಿಳಿಸಲು ಪಟ್ಟಣದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ,” ಎಂದನು.
וַיִּרְכַּ֤ב יֵהוּא֙ וַיֵּ֣לֶךְ יִזְרְעֶ֔אלָה כִּ֥י יֹורָ֖ם שֹׁכֵ֣ב שָׁ֑מָּה וֽ͏ַאֲחַזְיָה֙ מֶ֣לֶךְ יְהוּדָ֔ה יָרַ֖ד לִרְאֹ֥ות אֶת־יֹורָֽם׃ 16
ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
וְהַצֹּפֶה֩ עֹמֵ֨ד עַֽל־הַמִּגְדָּ֜ל בְּיִזְרְעֶ֗אל וַיַּ֞רְא אֶת־שִׁפְעַ֤ת יֵהוּא֙ בְּבֹאֹ֔ו וַיֹּ֕אמֶר שִׁפְעַ֖ת אֲנִ֣י רֹאֶ֑ה וַיֹּ֣אמֶר יְהֹורָ֗ם קַ֥ח רַכָּ֛ב וּֽשְׁלַ֥ח לִקְרָאתָ֖ם וְיֹאמַ֥ר הֲשָׁלֹֽום׃ 17
ಇಜ್ರೆಯೇಲ್ ಪಟ್ಟಣದ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕೆ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.
וַיֵּלֶךְ֩ רֹכֵ֨ב הַסּ֜וּס לִקְרָאתֹ֗ו וַיֹּ֙אמֶר֙ כֹּֽה־אָמַ֤ר הַמֶּ֙לֶךְ֙ הֲשָׁלֹ֔ום וַיֹּ֧אמֶר יֵה֛וּא מַה־לְּךָ֥ וּלְשָׁלֹ֖ום סֹ֣ב אֶֽל־אַחֲרָ֑י וַיַּגֵּ֤ד הַצֹּפֶה֙ לֵאמֹ֔ר בָּֽא־הַמַּלְאָ֥ךְ עַד־הֵ֖ם וְלֹֽא־שָֽׁב׃ 18
ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.
וַיִּשְׁלַ֗ח רֹכֵ֣ב סוּס֮ שֵׁנִי֒ וַיָּבֹ֣א אֲלֵהֶ֔ם וַיֹּ֛אמֶר כֹּֽה־אָמַ֥ר הַמֶּ֖לֶךְ שָׁלֹ֑ום וַיֹּ֧אמֶר יֵה֛וּא מַה־לְּךָ֥ וּלְשָׁלֹ֖ום סֹ֥ב אֶֽל־אַחֲרָֽי׃ 19
ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.
וַיַגֵּ֤ד הַצֹּפֶה֙ לֵאמֹ֔ר בָּ֥א עַד־אֲלֵיהֶ֖ם וְלֹֽא־שָׁ֑ב וְהַמִּנְהָ֗ג כְּמִנְהַג֙ יֵה֣וּא בֶן־נִמְשִׁ֔י כִּ֥י בְשִׁגָּעֹ֖ון יִנְהָֽג׃ 20
ಆಗ ಕಾವಲುಗಾರನು, “ಇವನೂ ಅವರ ಬಳಿಗೆ ಹೋಗಿ ತಿರುಗಿ ಬರಲಿಲ್ಲ. ಇದಲ್ಲದೆ ರಥವನ್ನು ಓಡಿಸುವುದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ, ಏಕೆಂದರೆ ಅವನು ಹುಚ್ಚನಂತೆ ಓಡಿಸುತ್ತಿದ್ದಾನೆ,” ಎಂದನು.
וַיֹּ֤אמֶר יְהֹורָם֙ אֱסֹ֔ר וַיֶּאְסֹ֖ר רִכְבֹּ֑ו וַיֵּצֵ֣א יְהֹורָ֣ם מֶֽלֶךְ־יִ֠שְׂרָאֵל וַאֲחַזְיָ֨הוּ מֶֽלֶךְ־יְהוּדָ֜ה אִ֣ישׁ בְּרִכְבֹּ֗ו וַיֵּֽצְאוּ֙ לִקְרַ֣את יֵה֔וּא וַיִּמְצָאֻ֔הוּ בְּחֶלְקַ֖ת נָבֹ֥ות הַיִּזְרְעֵאלִֽי׃ 21
ಯೋರಾಮನು, “ನನ್ನ ರಥವನ್ನು ಸಿದ್ಧಮಾಡು,” ಎಂದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ, ಯೆಹೂದದ ಅರಸನಾದ ಅಹಜ್ಯನೂ ಹೊರಟು, ಅವರವರು ತಮ್ಮ ತಮ್ಮ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು, ಇಜ್ರೆಯೇಲಿನವನಾದ ನಾಬೋತನಿಗೆ ಸಂಬಂಧಿಸಿದ ಸ್ಥಳದಲ್ಲಿ ಅವನನ್ನು ಸಂಧಿಸಿದರು.
וַיְהִ֗י כִּרְאֹ֤ות יְהֹורָם֙ אֶת־יֵה֔וּא וַיֹּ֖אמֶר הֲשָׁלֹ֣ום יֵה֑וּא וַיֹּ֙אמֶר֙ מָ֣ה הַשָּׁלֹ֔ום עַד־זְנוּנֵ֞י אִיזֶ֧בֶל אִמְּךָ֛ וּכְשָׁפֶ֖יהָ הָרַבִּֽים׃ 22
ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.
וַיַּהֲפֹ֧ךְ יְהֹורָ֛ם יָדָ֖יו וַיָּנֹ֑ס וַיֹּ֥אמֶר אֶל־אֲחַזְיָ֖הוּ מִרְמָ֥ה אֲחַזְיָֽה׃ 23
ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
וְיֵה֞וּא מִלֵּ֧א יָדֹ֣ו בַקֶּ֗שֶׁת וַיַּ֤ךְ אֶת־יְהֹורָם֙ בֵּ֣ין זְרֹעָ֔יו וַיֵּצֵ֥א הַחֵ֖צִי מִלִּבֹּ֑ו וַיִּכְרַ֖ע בְּרִכְבֹּֽו׃ 24
ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.
וַיֹּ֗אמֶר אֶל־בִּדְקַר֙ שְׁלֹשָׁה (שָֽׁלִשֹׁ֔ו) שָׂ֚א הַשְׁלִכֵ֔הוּ בְּחֶלְקַ֕ת שְׂדֵ֖ה נָבֹ֣ות הַיִּזְרְעֵאלִ֑י כִּֽי־זְכֹ֞ר אֲנִ֣י וָאַ֗תָּה אֵ֣ת רֹכְבִ֤ים צְמָדִים֙ אַֽחֲרֵי֙ אַחְאָ֣ב אָבִ֔יו וַֽיהוָה֙ נָשָׂ֣א עָלָ֔יו אֶת־הַמַּשָּׂ֖א הַזֶּֽה׃ 25
ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ.
אִם־לֹ֡א אֶת־דְּמֵ֣י נָבֹות֩ וְאֶת־דְּמֵ֨י בָנָ֜יו רָאִ֤יתִי אֶ֙מֶשׁ֙ נְאֻם־יְהוָ֔ה וְשִׁלַּמְתִּ֥י לְךָ֛ בַּחֶלְקָ֥ה הַזֹּ֖את נְאֻם־יְהוָ֑ה וְעַתָּ֗ה שָׂ֧א הַשְׁלִכֵ֛הוּ בַּחֶלְקָ֖ה כִּדְבַ֥ר יְהוָֽה׃ 26
ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.
וַאֲחַזְיָ֤ה מֶֽלֶךְ־יְהוּדָה֙ רָאָ֔ה וַיָּ֕נָס דֶּ֖רֶךְ בֵּ֣ית הַגָּ֑ן וַיִּרְדֹּ֨ף אַחֲרָ֜יו יֵה֗וּא וַ֠יֹּאמֶר גַּם־אֹתֹ֞ו הַכֻּ֣הוּ אֶל־הַמֶּרְכָּבָ֗ה בְּמַֽעֲלֵה־גוּר֙ אֲשֶׁ֣ר אֶֽת־יִבְלְעָ֔ם וַיָּ֥נָס מְגִדֹּ֖ו וַיָּ֥מָת שָֽׁם׃ 27
ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
וַיַּרְכִּ֧בוּ אֹתֹ֛ו עֲבָדָ֖יו יְרוּשָׁלָ֑͏ְמָה וַיִּקְבְּר֨וּ אֹתֹ֧ו בִקְבֻרָתֹ֛ו עִם־אֲבֹתָ֖יו בְּעִ֥יר דָּוִֽד׃ פ 28
ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.
וּבִשְׁנַת֙ אַחַ֣ת עֶשְׂרֵ֣ה שָׁנָ֔ה לְיֹורָ֖ם בֶּן־אַחְאָ֑ב מָלַ֥ךְ אֲחַזְיָ֖ה עַל־יְהוּדָֽה׃ 29
ಅಹಾಬನ ಮಗ ಯೋರಾಮನ ಹನ್ನೊಂದನೆಯ ವರ್ಷದಲ್ಲಿ ಅಹಜ್ಯನು ಯೆಹೂದದ ಅರಸನಾಗಿದ್ದನು.
וַיָּבֹ֥וא יֵה֖וּא יִזְרְעֶ֑אלָה וְאִיזֶ֣בֶל שָׁמְעָ֗ה וַתָּ֨שֶׂם בַּפּ֤וּךְ עֵינֶ֙יהָ֙ וַתֵּ֣יטֶב אֶת־רֹאשָׁ֔הּ וַתַּשְׁקֵ֖ף בְּעַ֥ד הַחַלֹּֽון׃ 30
ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.
וְיֵה֖וּא בָּ֣א בַשָּׁ֑עַר וַתֹּ֣אמֶר הֲשָׁלֹ֔ום זִמְרִ֖י הֹרֵ֥ג אֲדֹנָֽיו׃ 31
ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.
וַיִּשָּׂ֤א פָנָיו֙ אֶל־הַ֣חַלֹּ֔ון וַיֹּ֕אמֶר מִ֥י אִתִּ֖י מִ֑י וַיַּשְׁקִ֣יפוּ אֵלָ֔יו שְׁנַ֥יִם שְׁלֹשָׁ֖ה סָרִיסִֽים׃ 32
ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.
וַיֹּ֥אמֶר שִׁמְטֻהוּ (שִׁמְט֖וּהָ) וַֽיִּשְׁמְט֑וּהָ וַיִּ֨ז מִדָּמָ֧הּ אֶל־הַקִּ֛יר וְאֶל־הַסּוּסִ֖ים וַֽיִּרְמְסֶֽנָּה׃ 33
ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.
וַיָּבֹ֖א וַיֹּ֣אכַל וַיֵּ֑שְׁתְּ וַיֹּ֗אמֶר פִּקְדוּ־נָ֞א אֶת־הָאֲרוּרָ֤ה הַזֹּאת֙ וְקִבְר֔וּהָ כִּ֥י בַת־מֶ֖לֶךְ הִֽיא׃ 34
ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.
וַיֵּלְכ֖וּ לְקָבְרָ֑הּ וְלֹא־מָ֣צְאוּ בָ֗הּ כִּ֧י אִם־הַגֻּלְגֹּ֛לֶת וְהָרַגְלַ֖יִם וְכַפֹּ֥ות הַיָּדָֽיִם׃ 35
ಅವರು ಅವಳನ್ನು ಹೂಳಿಡಲು ಹೋದಾಗ, ಅವಳ ತಲೆ ಬುರುಡೆಯೂ, ಕಾಲುಗಳೂ, ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಆದ್ದರಿಂದ ಅವರು ತಿರುಗಿಬಂದು ಅವನಿಗೆ ತಿಳಿಸಿದರು.
וַיָּשֻׁבוּ֮ וַיַּגִּ֣ידוּ לֹו֒ וַיֹּ֙אמֶר֙ דְּבַר־יְהוָ֣ה ה֔וּא אֲשֶׁ֣ר דִּבֶּ֗ר בְּיַד־עַבְדֹּ֛ו אֵלִיָּ֥הוּ הַתִּשְׁבִּ֖י לֵאמֹ֑ר בְּחֵ֣לֶק יִזְרְעֶ֔אל יֹאכְל֥וּ הַכְּלָבִ֖ים אֶת־בְּשַׂ֥ר אִיזָֽבֶל׃ 36
ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.
וְהָיָת (וְֽהָיְתָ֞ה) נִבְלַ֣ת אִיזֶ֗בֶל כְּדֹ֛מֶן עַל־פְּנֵ֥י הַשָּׂדֶ֖ה בְּחֵ֣לֶק יִזְרְעֶ֑אל אֲשֶׁ֥ר לֹֽא־יֹאמְר֖וּ זֹ֥את אִיזָֽבֶל׃ פ 37
ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.

< 2 מְלָכִים 9 >