< דָּנִיֵּאל 2 >

וּבִשְׁנַ֣ת שְׁתַּ֗יִם לְמַלְכוּת֙ נְבֻֽכַדְנֶצַּ֔ר חָלַ֥ם נְבֻֽכַדְנֶצַּ֖ר חֲלֹמֹ֑ות וַתִּתְפָּ֣עֶם רוּחֹ֔ו וּשְׁנָתֹ֖ו נִהְיְתָ֥ה עָלָֽיו׃ 1
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.
וַיֹּ֣אמֶר הַ֠מֶּלֶךְ לִקְרֹ֨א לַֽחַרְטֻמִּ֜ים וְלָֽאַשָּׁפִ֗ים וְלַֽמְכַשְּׁפִים֙ וְלַכַּשְׂדִּ֔ים לְהַגִּ֥יד לַמֶּ֖לֶךְ חֲלֹמֹתָ֑יו וַיָּבֹ֕אוּ וַיַּֽעַמְד֖וּ לִפְנֵ֥י הַמֶּֽלֶךְ׃ 2
ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
וַיֹּ֧אמֶר לָהֶ֛ם הַמֶּ֖לֶךְ חֲלֹ֣ום חָלָ֑מְתִּי וַתִּפָּ֣עֶם רוּחִ֔י לָדַ֖עַת אֶֽת־הַחֲלֹֽום׃ 3
ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.
וַֽיְדַבְּר֧וּ הַכַּשְׂדִּ֛ים לַמֶּ֖לֶךְ אֲרָמִ֑ית מַלְכָּא֙ לְעָלְמִ֣ין חֱיִ֔י אֱמַ֥ר חֶלְמָ֛א לְעַבְדַּיִךְ (לְעַבְדָ֖ךְ) וּפִשְׁרָ֥א נְחַוֵּֽא׃ 4
ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.
עָנֵ֤ה מַלְכָּא֙ וְאָמַ֣ר לְכַשְׂדָּיֵא (לְכַשְׂדָּאֵ֔י) מִלְּתָ֖א מִנִּ֣י אַזְדָּ֑א הֵ֣ן לָ֤א תְהֹֽודְעוּנַּ֙נִי֙ חֶלְמָ֣א וּפִשְׁרֵ֔הּ הַדָּמִין֙ תִּתְעַבְד֔וּן וּבָתֵּיכֹ֖ון נְוָלִ֥י יִתְּשָׂמֽוּן׃ 5
ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
וְהֵ֨ן חֶלְמָ֤א וּפִשְׁרֵהּ֙ תְּֽהַחֲוֹ֔ן מַתְּנָ֤ן וּנְבִזְבָּה֙ וִיקָ֣ר שַׂגִּ֔יא תְּקַבְּל֖וּן מִן־קֳדָמָ֑י לָהֵ֕ן חֶלְמָ֥א וּפִשְׁרֵ֖הּ הַחֲוֹֽנִי׃ 6
ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
עֲנֹ֥ו תִנְיָנ֖וּת וְאָמְרִ֑ין מַלְכָּ֕א חֶלְמָ֛א יֵאמַ֥ר לְעַבְדֹ֖והִי וּפִשְׁרָ֥ה נְהַחֲוֵֽה׃ 7
ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.
עָנֵ֤ה מַלְכָּא֙ וְאָמַ֔ר מִן־יַצִּיב֙ יָדַ֣ע אֲנָ֔ה דִּ֥י עִדָּנָ֖א אַנְתּ֣וּן זָבְנִ֑ין כָּל־קֳבֵל֙ דִּ֣י חֲזֵיתֹ֔ון דִּ֥י אַזְדָּ֖א מִנִּ֥י מִלְּתָֽא׃ 8
ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.
דִּ֣י הֵן־חֶלְמָא֩ לָ֨א תְהֹֽודְעֻנַּ֜נִי חֲדָה־הִ֣יא דָֽתְכֹ֗ון וּמִלָּ֨ה כִדְבָ֤ה וּשְׁחִיתָה֙ הַזְמִנְתּוּן (הִזְדְּמִנְתּוּן֙) לְמֵאמַ֣ר קָֽדָמַ֔י עַ֛ד דִּ֥י עִדָּנָ֖א יִשְׁתַּנֵּ֑א לָהֵ֗ן חֶלְמָא֙ אֱמַ֣רוּ לִ֔י וֽ͏ְאִנְדַּ֕ע דִּ֥י פִשְׁרֵ֖הּ תְּהַחֲוֻנַּֽנִי׃ 9
ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.
עֲנֹ֨ו כַשְׂדָּיֵא (כַשְׂדָּאֵ֤י) קֳדָם־מַלְכָּא֙ וְאָ֣מְרִ֔ין לָֽא־אִיתַ֤י אֲנָשׁ֙ עַל־יַבֶּשְׁתָּ֔א דִּ֚י מִלַּ֣ת מַלְכָּ֔א יוּכַ֖ל לְהַחֲוָיָ֑ה כָּל־קֳבֵ֗ל דִּ֚י כָּל־מֶ֙לֶךְ֙ רַ֣ב וְשַׁלִּ֔יט מִלָּ֤ה כִדְנָה֙ לָ֣א שְׁאֵ֔ל לְכָל־חַרְטֹּ֖ם וְאָשַׁ֥ף וְכַשְׂדָּֽי׃ 10
ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
וּמִלְּתָ֨א דִֽי־מַלְכָּ֤ה שָׁאֵל֙ יַקִּירָ֔ה וְאָחֳרָן֙ לָ֣א אִיתַ֔י דִּ֥י יְחַוִּנַּ֖הּ קֳדָ֣ם מַלְכָּ֑א לָהֵ֣ן אֱלָהִ֔ין דִּ֚י מְדָ֣רְהֹ֔ון עִם־בִּשְׂרָ֖א לָ֥א אִיתֹֽוהִי׃ 11
ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”
כָּל־קֳבֵ֣ל דְּנָ֔ה מַלְכָּ֕א בְּנַ֖ס וּקְצַ֣ף שַׂגִּ֑יא וַאֲמַר֙ לְהֹ֣ובָדָ֔ה לְכֹ֖ל חַכִּימֵ֥י בָבֶֽל׃ 12
ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.
וְדָתָ֣א נֶפְקַ֔ת וְחַכִּֽימַיָּ֖א מִֽתְקַטְּלִ֑ין וּבְעֹ֛ו דָּנִיֵּ֥אל וְחַבְרֹ֖והִי לְהִתְקְטָלָֽה׃ פ 13
ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
בֵּאדַ֣יִן דָּנִיֵּ֗אל הֲתִיב֙ עֵטָ֣א וּטְעֵ֔ם לְאַרְיֹ֕וךְ רַב־טַבָּחַיָּ֖א דִּ֣י מַלְכָּ֑א דִּ֚י נְפַ֣ק לְקַטָּלָ֔ה לְחַכִּימֵ֖י בָּבֶֽל׃ 14
ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.
עָנֵ֣ה וְאָמַ֗ר לְאַרְיֹוךְ֙ שַׁלִּיטָ֣א דִֽי־מַלְכָּ֔א עַל־מָ֥ה דָתָ֛א מְהַחְצְפָ֖ה מִן־קֳדָ֣ם מַלְכָּ֑א אֱדַ֣יִן מִלְּתָ֔א הֹודַ֥ע אַרְיֹ֖וךְ לְדָנִיֵּֽאל׃ 15
ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.
וְדָ֣נִיֵּ֔אל עַ֖ל וּבְעָ֣ה מִן־מַלְכָּ֑א דִּ֚י זְמָ֣ן יִנְתֵּן־לֵ֔הּ וּפִשְׁרָ֖א לְהַֽחֲוָיָ֥ה לְמַלְכָּֽא׃ פ 16
ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
אֱדַ֥יִן דָּֽנִיֵּ֖אל לְבַיְתֵ֣הּ אֲזַ֑ל וְ֠לַחֲנַנְיָה מִֽישָׁאֵ֧ל וַעֲזַרְיָ֛ה חַבְרֹ֖והִי מִלְּתָ֥א הֹודַֽע׃ 17
ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
וְרַחֲמִ֗ין לְמִבְעֵא֙ מִן־קֳדָם֙ אֱלָ֣הּ שְׁמַיָּ֔א עַל־רָזָ֖ה דְּנָ֑ה דִּ֣י לָ֤א יְהֹֽבְדוּן֙ דָּנִיֵּ֣אל וְחַבְרֹ֔והִי עִם־שְׁאָ֖ר חַכִּימֵ֥י בָבֶֽל׃ 18
ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
אֱדַ֗יִן לְדָנִיֵּ֛אל בְּחֶזְוָ֥א דִֽי־לֵילְיָ֖א רָזָ֣ה גֲלִ֑י אֱדַ֙יִן֙ דָּֽנִיֵּ֔אל בָּרִ֖ךְ לֶאֱלָ֥הּ שְׁמַיָּֽא׃ 19
ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,
עָנֵ֤ה דָֽנִיֵּאל֙ וְאָמַ֔ר לֶהֱוֵ֨א שְׁמֵ֤הּ דִּֽי־אֱלָהָא֙ מְבָרַ֔ךְ מִן־עָלְמָ֖א וְעַ֣ד־עָלְמָ֑א דִּ֧י חָכְמְתָ֛א וּגְבוּרְתָ֖א דִּ֥י לֵֽהּ־הִֽיא׃ 20
ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.
וְ֠הוּא מְהַשְׁנֵ֤א עִדָּנַיָּא֙ וְזִמְנַיָּ֔א מְהַעְדֵּ֥ה מַלְכִ֖ין וּמְהָקֵ֣ים מַלְכִ֑ין יָהֵ֤ב חָכְמְתָא֙ לְחַכִּימִ֔ין וּמַנְדְּעָ֖א לְיָדְעֵ֥י בִינָֽה׃ 21
ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.
ה֛וּא גָּלֵ֥א עַמִּיקָתָ֖א וּמְסַתְּרָתָ֑א יָדַע֙ מָ֣ה בַחֲשֹׁוכָ֔א וּנְהִירָא (וּנְהֹורָ֖א) עִמֵּ֥הּ שְׁרֵֽא׃ 22
ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.
לָ֣ךְ ׀ אֱלָ֣הּ אֲבָהָתִ֗י מְהֹודֵ֤א וּמְשַׁבַּח֙ אֲנָ֔ה דִּ֧י חָכְמְתָ֛א וּגְבוּרְתָ֖א יְהַ֣בְתְּ לִ֑י וּכְעַ֤ן הֹֽודַעְתַּ֙נִי֙ דִּֽי־בְעֵ֣ינָא מִנָּ֔ךְ דִּֽי־מִלַּ֥ת מַלְכָּ֖א הֹודַעְתֶּֽנָא׃ 23
ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”
כָּל־קֳבֵ֣ל דְּנָ֗ה דָּֽנִיֵּאל֙ עַ֣ל עַל־אַרְיֹ֔וךְ דִּ֚י מַנִּ֣י מַלְכָּ֔א לְהֹובָדָ֖ה לְחַכִּימֵ֣י בָבֶ֑ל אֲזַ֣ל ׀ וְכֵ֣ן אֲמַר־לֵ֗הּ לְחַכִּימֵ֤י בָבֶל֙ אַל־תְּהֹובֵ֔ד הַעֵ֙לְנִי֙ קֳדָ֣ם מַלְכָּ֔א וּפִשְׁרָ֖א לְמַלְכָּ֥א אֲחַוֵּֽא׃ ס 24
ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.
אֱדַ֤יִן אַרְיֹוךְ֙ בְּהִתְבְּהָלָ֔ה הַנְעֵ֥ל לְדָנִיֵּ֖אל קֳדָ֣ם מַלְכָּ֑א וְכֵ֣ן אֲמַר־לֵ֗הּ דִּֽי־הַשְׁכַּ֤חַת גְּבַר֙ מִן־בְּנֵ֤י גָֽלוּתָא֙ דִּ֣י יְה֔וּד דִּ֥י פִשְׁרָ֖א לְמַלְכָּ֥א יְהֹודַֽע׃ 25
ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.
עָנֵ֤ה מַלְכָּא֙ וְאָמַ֣ר לְדָנִיֵּ֔אל דִּ֥י שְׁמֵ֖הּ בֵּלְטְשַׁאצַּ֑ר הַאִיתַיִךְ (הַֽאִיתָ֣ךְ) כָּהֵ֗ל לְהֹודָעֻתַ֛נִי חֶלְמָ֥א דִֽי־חֲזֵ֖ית וּפִשְׁרֵֽהּ׃ 26
ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.
עָנֵ֧ה דָנִיֵּ֛אל קֳדָ֥ם מַלְכָּ֖א וְאָמַ֑ר רָזָה֙ דִּֽי־מַלְכָּ֣א שָׁאֵ֔ל לָ֧א חַכִּימִ֣ין אָֽשְׁפִ֗ין חַרְטֻמִּין֙ גָּזְרִ֔ין יָכְלִ֖ין לְהַֽחֲוָיָ֥ה לְמַלְכָּֽא׃ 27
ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
בְּרַ֡ם אִיתַ֞י אֱלָ֤הּ בִּשְׁמַיָּא֙ גָּלֵ֣א רָזִ֔ין וְהֹודַ֗ע לְמַלְכָּא֙ נְבֽוּכַדְנֶצַּ֔ר מָ֛ה דִּ֥י לֶהֱוֵ֖א בְּאַחֲרִ֣ית יֹומַיָּ֑א חֶלְמָ֨ךְ וְחֶזְוֵ֥י רֵאשָׁ֛ךְ עַֽל־מִשְׁכְּבָ֖ךְ דְּנָ֥ה הֽוּא׃ פ 28
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.
אַנְתָּה (אַ֣נְתְּ) מַלְכָּ֗א רַעְיֹונָךְ֙ עַל־מִשְׁכְּבָ֣ךְ סְלִ֔קוּ מָ֛ה דִּ֥י לֶהֱוֵ֖א אַחֲרֵ֣י דְנָ֑ה וְגָלֵ֧א רָזַיָּ֛א הֹודְעָ֖ךְ מָה־דִ֥י לֶהֱוֵֽא׃ 29
“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.
וַאֲנָ֗ה לָ֤א בְחָכְמָה֙ דִּֽי־אִיתַ֥י בִּי֙ מִן־כָּל־חַיַּיָּ֔א רָזָ֥א דְנָ֖ה גֱּלִ֣י לִ֑י לָהֵ֗ן עַל־דִּבְרַת֙ דִּ֤י פִשְׁרָא֙ לְמַלְכָּ֣א יְהֹודְע֔וּן וְרַעְיֹונֵ֥י לִבְבָ֖ךְ תִּנְדַּֽע׃ 30
ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.
אַנְתָּה (אַ֣נְתְּ) מַלְכָּ֗א חָזֵ֤ה הֲוַ֙יְתָ֙ וַאֲל֨וּ צְלֵ֥ם חַד֙ שַׂגִּ֔יא צַלְמָ֨א דִּכֵּ֥ן רַ֛ב וְזִיוֵ֥הּ יַתִּ֖יר קָאֵ֣ם לְקָבְלָ֑ךְ וְרֵוֵ֖הּ דְּחִֽיל׃ 31
“ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.
ה֣וּא צַלְמָ֗א רֵאשֵׁהּ֙ דִּֽי־דְהַ֣ב טָ֔ב חֲדֹ֥והִי וּדְרָעֹ֖והִי דִּ֣י כְסַ֑ף מְעֹ֥והִי וְיַרְכָתֵ֖הּ דִּ֥י נְחָֽשׁ׃ 32
ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,
שָׁקֹ֖והִי דִּ֣י פַרְזֶ֑ל רַגְלֹ֕והִי מִנְּהֹון (מִנְּהֵין֙) דִּ֣י פַרְזֶ֔ל וּמִנְּהֹון (וּמִנְּהֵ֖ין) דִּ֥י חֲסַֽף׃ 33
ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.
חָזֵ֣ה הֲוַ֗יְתָ עַ֠ד דִּ֣י הִתְגְּזֶ֤רֶת אֶ֙בֶן֙ דִּי־לָ֣א בִידַ֔יִן וּמְחָ֤ת לְצַלְמָא֙ עַל־רַגְלֹ֔והִי דִּ֥י פַרְזְלָ֖א וְחַסְפָּ֑א וְהַדֵּ֖קֶת הִמֹּֽון׃ 34
ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.
בֵּאדַ֣יִן דָּ֣קוּ כַחֲדָ֡ה פַּרְזְלָא֩ חַסְפָּ֨א נְחָשָׁ֜א כַּסְפָּ֣א וְדַהֲבָ֗א וַהֲוֹו֙ כְּע֣וּר מִן־אִדְּרֵי־קַ֔יִט וּנְשָׂ֤א הִמֹּון֙ רוּחָ֔א וְכָל־אֲתַ֖ר לָא־הִשְׁתֲּכַ֣ח לְהֹ֑ון וְאַבְנָ֣א ׀ דִּֽי־מְחָ֣ת לְצַלְמָ֗א הֲוָ֛ת לְט֥וּר רַ֖ב וּמְלָ֥ת כָּל־אַרְעָֽא׃ 35
ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
דְּנָ֣ה חֶלְמָ֔א וּפִשְׁרֵ֖הּ נֵאמַ֥ר קֳדָם־מַלְכָּֽא׃ 36
“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.
אַנְתָּה (אַ֣נְתְּ) מַלְכָּ֔א מֶ֖לֶךְ מַלְכַיָּ֑א דִּ֚י אֱלָ֣הּ שְׁמַיָּ֔א מַלְכוּתָ֥א חִסְנָ֛א וְתָקְפָּ֥א וִֽיקָרָ֖א יְהַב־לָֽךְ׃ 37
ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.
וּבְכָל־דִּ֣י דָאֲרִין (דָֽיְרִ֣ין) בְּֽנֵי־אֲ֠נָשָׁא חֵיוַ֨ת בָּרָ֤א וְעֹוף־שְׁמַיָּא֙ יְהַ֣ב בִּידָ֔ךְ וְהַשְׁלְטָ֖ךְ בְּכָלְּהֹ֑ון אַנְתָּה (אַנְתְּ)־ה֔וּא רֵאשָׁ֖ה דִּ֥י דַהֲבָֽא׃ 38
ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.
וּבָתְרָ֗ךְ תְּק֛וּם מַלְכ֥וּ אָחֳרִ֖י אֲרַ֣עא מִנָּ֑ךְ וּמַלְכ֨וּ תְלִיתָיָא (תְלִיתָאָ֤ה) אָחֳרִי֙ דִּ֣י נְחָשָׁ֔א דִּ֥י תִשְׁלַ֖ט בְּכָל־אַרְעָֽא׃ 39
“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.
וּמַלְכוּ֙ רְבִיעָיָה (רְבִ֣יעָאָ֔ה) תֶּהֱוֵ֥א תַקִּיפָ֖ה כְּפַרְזְלָ֑א כָּל־קֳבֵ֗ל דִּ֤י פַרְזְלָא֙ מְהַדֵּ֤ק וְחָשֵׁל֙ כֹּ֔לָּא וּֽכְפַרְזְלָ֛א דִּֽי־מְרָעַ֥ע כָּל־אִלֵּ֖ין תַּדִּ֥ק וְתֵרֹֽעַ׃ 40
ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
וְדִֽי־חֲזַ֜יְתָה רַגְלַיָּ֣א וְאֶצְבְּעָתָ֗א מִנְּהֹון (מִנְּהֵ֞ן) חֲסַ֤ף דִּֽי־פֶחָר֙ וּמִנְּהֹון (וּמִנְּהֵ֣ין) פַּרְזֶ֔ל מַלְכ֤וּ פְלִיגָה֙ תֶּהֱוֵ֔ה וּמִן־נִצְבְּתָ֥א דִ֥י פַרְזְלָ֖א לֶֽהֱוֵא־בַ֑הּ כָּל־קֳבֵל֙ דִּ֣י חֲזַ֔יְתָה פַּ֨רְזְלָ֔א מְעָרַ֖ב בַּחֲסַ֥ף טִינָֽא׃ 41
ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.
וְאֶצְבְּעָת֙ רַגְלַיָּ֔א מִנְּהֹון (מִנְּהֵ֥ין) פַּרְזֶ֖ל וּמִנְּהֹון (וּמִנְּהֵ֣ין) חֲסַ֑ף מִן־קְצָ֤ת מַלְכוּתָא֙ תֶּהֱוֵ֣ה תַקִּיפָ֔ה וּמִנַּ֖הּ תֶּהֱוֵ֥ה תְבִירָֽה׃ 42
ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.
דִי (וְדִ֣י) חֲזַ֗יְתָ פַּרְזְלָא֙ מְעָרַב֙ בַּחֲסַ֣ף טִינָ֔א מִתְעָרְבִ֤ין לֶהֱוֹן֙ בִּזְרַ֣ע אֲנָשָׁ֔א וְלָֽא־לֶהֱוֹ֥ן דָּבְקִ֖ין דְּנָ֣ה עִם־דְּנָ֑ה הֵֽא־כְדִ֣י פַרְזְלָ֔א לָ֥א מִתְעָרַ֖ב עִם־חַסְפָּֽא׃ 43
ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.
וּֽבְיֹומֵיהֹ֞ון דִּ֧י מַלְכַיָּ֣א אִנּ֗וּן יְקִים֩ אֱלָ֨הּ שְׁמַיָּ֤א מַלְכוּ֙ דִּ֤י לְעָלְמִין֙ לָ֣א תִתְחַבַּ֔ל וּמַ֨לְכוּתָ֔ה לְעַ֥ם אָחֳרָ֖ן לָ֣א תִשְׁתְּבִ֑ק תַּדִּ֤ק וְתָסֵיף֙ כָּל־אִלֵּ֣ין מַלְכְוָתָ֔א וְהִ֖יא תְּק֥וּם לְעָלְמַיָּֽא׃ 44
“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.
כָּל־קֳבֵ֣ל דִּֽי־חֲזַ֡יְתָ דִּ֣י מִטּוּרָא֩ אִתְגְּזֶ֨רֶת אֶ֜בֶן דִּי־לָ֣א בִידַ֗יִן וְ֠הַדֶּקֶת פַּרְזְלָ֨א נְחָשָׁ֤א חַסְפָּא֙ כַּסְפָּ֣א וְדַהֲבָ֔א אֱלָ֥הּ רַב֙ הֹודַ֣ע לְמַלְכָּ֔א מָ֛ה דִּ֥י לֶהֱוֵ֖א אַחֲרֵ֣י דְנָ֑ה וְיַצִּ֥יב חֶלְמָ֖א וּמְהֵימַ֥ן פִּשְׁרֵֽהּ׃ פ 45
ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.
בֵּ֠אדַיִן מַלְכָּ֤א נְבֽוּכַדְנֶצַּר֙ נְפַ֣ל עַל־אַנְפֹּ֔והִי וּלְדָנִיֵּ֖אל סְגִ֑ד וּמִנְחָה֙ וְנִ֣יחֹחִ֔ין אֲמַ֖ר לְנַסָּ֥כָה לֵֽהּ׃ 46
ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.
עָנֵה֩ מַלְכָּ֨א לְדָנִיֵּ֜אל וְאָמַ֗ר מִן־קְשֹׁט֙ דִּ֣י אֱלָהֲכֹ֗ון ה֣וּא אֱלָ֧הּ אֱלָהִ֛ין וּמָרֵ֥א מַלְכִ֖ין וְגָלֵ֣ה רָזִ֑ין דִּ֣י יְכֵ֔לְתָּ לְמִגְלֵ֖א רָזָ֥ה דְנָֽה׃ 47
ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.
אֱדַ֨יִן מַלְכָּ֜א לְדָנִיֵּ֣אל רַבִּ֗י וּמַתְּנָ֨ן רַבְרְבָ֤ן שַׂגִּיאָן֙ יְהַב־לֵ֔הּ וְהַ֨שְׁלְטֵ֔הּ עַ֖ל כָּל־מְדִינַ֣ת בָּבֶ֑ל וְרַב־סִגְנִ֔ין עַ֖ל כָּל־חַכִּימֵ֥י בָבֶֽל׃ 48
ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.
וְדָנִיֵּאל֙ בְּעָ֣א מִן־מַלְכָּ֔א וּמַנִּ֗י עַ֤ל עֲבִֽידְתָּא֙ דִּ֚י מְדִינַ֣ת בָּבֶ֔ל לְשַׁדְרַ֥ךְ מֵישַׁ֖ךְ וַעֲבֵ֣ד נְגֹ֑ו וְדָנִיֵּ֖אל בִּתְרַ֥ע מַלְכָּֽא׃ פ 49
ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.

< דָּנִיֵּאל 2 >