< דְּבָרִים 10 >

בָּעֵ֨ת הַהִ֜וא אָמַ֧ר יְהוָ֣ה אֵלַ֗י פְּסָל־לְךָ֞ שְׁנֵֽי־לוּחֹ֤ת אֲבָנִים֙ כָּרִ֣אשֹׁנִ֔ים וַעֲלֵ֥ה אֵלַ֖י הָהָ֑רָה וְעָשִׂ֥יתָ לְּךָ֖ אֲרֹ֥ון עֵֽץ׃ 1
ಆ ಕಾಲದಲ್ಲಿ ಯೆಹೋವ ದೇವರು ನನಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ನೀನು ಕೆತ್ತಿಕೊಂಡು, ಬೆಟ್ಟವನ್ನೇರಿ ನನ್ನ ಬಳಿಗೆ ಬಾ. ಒಂದು ಮರದ ಮಂಜೂಷವನ್ನು ಮಾಡಿಕೊಳ್ಳಬೇಕು.
וְאֶכְתֹּב֙ עַל־הַלֻּחֹ֔ת אֶת־הַדְּבָרִ֔ים אֲשֶׁ֥ר הָי֛וּ עַל־הַלֻּחֹ֥ת הָרִאשֹׁנִ֖ים אֲשֶׁ֣ר שִׁבַּ֑רְתָּ וְשַׂמְתָּ֖ם בָּאָרֹֽון׃ 2
ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು.
וָאַ֤עַשׂ אֲרֹון֙ עֲצֵ֣י שִׁטִּ֔ים וָאֶפְסֹ֛ל שְׁנֵי־לֻחֹ֥ת אֲבָנִ֖ים כָּרִאשֹׁנִ֑ים וָאַ֣עַל הָהָ֔רָה וּשְׁנֵ֥י הַלֻּחֹ֖ת בְּיָדִֽי׃ 3
ಈ ಪ್ರಕಾರ ನಾನು ಜಾಲಿ ಮರದ ಮಂಜೂಷವನ್ನು ಮಾಡಿ, ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳಂತೆ ಕೆತ್ತಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನೇರಿದೆನು.
וַיִּכְתֹּ֨ב עַֽל־הַלֻּחֹ֜ת כַּמִּכְתָּ֣ב הָרִאשֹׁ֗ון אֵ֚ת עֲשֶׂ֣רֶת הַדְּבָרִ֔ים אֲשֶׁ֣ר דִּבֶּר֩ יְהוָ֨ה אֲלֵיכֶ֥ם בָּהָ֛ר מִתֹּ֥וךְ הָאֵ֖שׁ בְּיֹ֣ום הַקָּהָ֑ל וַיִּתְּנֵ֥ם יְהוָ֖ה אֵלָֽי׃ 4
ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು.
וָאֵ֗פֶן וָֽאֵרֵד֙ מִן־הָהָ֔ר וָֽאָשִׂם֙ אֶת־הַלֻּחֹ֔ת בָּאָרֹ֖ון אֲשֶׁ֣ר עָשִׂ֑יתִי וַיִּ֣הְיוּ שָׁ֔ם כַּאֲשֶׁ֥ר צִוַּ֖נִי יְהוָֽה׃ 5
ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ.
וּבְנֵ֣י יִשְׂרָאֵ֗ל נָֽסְע֛וּ מִבְּאֵרֹ֥ת בְּנֵי־יַעֲקָ֖ן מֹוסֵרָ֑ה שָׁ֣ם מֵ֤ת אַהֲרֹן֙ וַיִּקָּבֵ֣ר שָׁ֔ם וַיְכַהֵ֛ן אֶלְעָזָ֥ר בְּנֹ֖ו תַּחְתָּֽיו׃ 6
ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು.
מִשָּׁ֥ם נָסְע֖וּ הַגֻּדְגֹּ֑דָה וּמִן־הַגֻּדְגֹּ֣דָה יָטְבָ֔תָה אֶ֖רֶץ נַֽחֲלֵי מָֽיִם׃ 7
ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಪ್ರವಾಹಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣಮಾಡಿದರು.
בָּעֵ֣ת הַהִ֗וא הִבְדִּ֤יל יְהוָה֙ אֶת־שֵׁ֣בֶט הַלֵּוִ֔י לָשֵׂ֖את אֶת־אֲרֹ֣ון בְּרִית־יְהוָ֑ה לַעֲמֹד֩ לִפְנֵ֨י יְהוָ֤ה לְשָֽׁרְתֹו֙ וּלְבָרֵ֣ךְ בִּשְׁמֹ֔ו עַ֖ד הַיֹּ֥ום הַזֶּֽה׃ 8
ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.
עַל־כֵּ֞ן לֹֽא־הָיָ֧ה לְלֵוִ֛י חֵ֥לֶק וְנַחֲלָ֖ה עִם־אֶחָ֑יו יְהוָה֙ ה֣וּא נַחֲלָתֹ֔ו כַּאֲשֶׁ֥ר דִּבֶּ֛ר יְהוָ֥ה אֱלֹהֶ֖יךָ לֹֽו׃ 9
ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.
וְאָנֹכִ֞י עָמַ֣דְתִּי בָהָ֗ר כַּיָּמִים֙ הָרִ֣אשֹׁנִ֔ים אַרְבָּעִ֣ים יֹ֔ום וְאַרְבָּעִ֖ים לָ֑יְלָה וַיִּשְׁמַ֨ע יְהוָ֜ה אֵלַ֔י גַּ֚ם בַּפַּ֣עַם הַהִ֔וא לֹא־אָבָ֥ה יְהוָ֖ה הַשְׁחִיתֶֽךָ׃ 10
ಇದಲ್ಲದೆ ನಾನು ಮೊದಲಿನಂತೆ ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿ ನಿಂತೆನು. ಯೆಹೋವ ದೇವರು ಆ ಕಾಲದಲ್ಲಿ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
וַיֹּ֤אמֶר יְהוָה֙ אֵלַ֔י ק֛וּם לֵ֥ךְ לְמַסַּ֖ע לִפְנֵ֣י הָעָ֑ם וְיָבֹ֙אוּ֙ וְיִֽרְשׁ֣וּ אֶת־הָאָ֔רֶץ אֲשֶׁר־נִשְׁבַּ֥עְתִּי לַאֲבֹתָ֖ם לָתֵ֥ת לָהֶֽם׃ פ 11
ಯೆಹೋವ ದೇವರು ನನಗೆ, “ಜನರ ಮುಂದೆ ಹೋಗು, ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,” ಎಂದು ಆಜ್ಞಾಪಿಸಿದರು.
וְעַתָּה֙ יִשְׂרָאֵ֔ל מָ֚ה יְהוָ֣ה אֱלֹהֶ֔יךָ שֹׁאֵ֖ל מֵעִמָּ֑ךְ כִּ֣י אִם־לְ֠יִרְאָה אֶת־יְהוָ֨ה אֱלֹהֶ֜יךָ לָלֶ֤כֶת בְּכָל־דְּרָכָיו֙ וּלְאַהֲבָ֣ה אֹתֹ֔ו וְלַֽעֲבֹד֙ אֶת־יְהוָ֣ה אֱלֹהֶ֔יךָ בְּכָל־לְבָבְךָ֖ וּבְכָל־נַפְשֶֽׁךָ׃ 12
ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.
לִשְׁמֹ֞ר אֶת־מִצְוֹ֤ת יְהוָה֙ וְאֶת־חֻקֹּתָ֔יו אֲשֶׁ֛ר אָנֹכִ֥י מְצַוְּךָ֖ הַיֹּ֑ום לְטֹ֖וב לָֽךְ׃ 13
ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ?
הֵ֚ן לַיהוָ֣ה אֱלֹהֶ֔יךָ הַשָּׁמַ֖יִם וּשְׁמֵ֣י הַשָּׁמָ֑יִם הָאָ֖רֶץ וְכָל־אֲשֶׁר־בָּֽהּ׃ 14
ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.
רַ֧ק בַּאֲבֹתֶ֛יךָ חָשַׁ֥ק יְהוָ֖ה לְאַהֲבָ֣ה אֹותָ֑ם וַיִּבְחַ֞ר בְּזַרְעָ֣ם אַחֲרֵיהֶ֗ם בָּכֶ֛ם מִכָּל־הָעַמִּ֖ים כַּיֹּ֥ום הַזֶּֽה׃ 15
ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.
וּמַלְתֶּ֕ם אֵ֖ת עָרְלַ֣ת לְבַבְכֶ֑ם וְעָ֨רְפְּכֶ֔ם לֹ֥א תַקְשׁ֖וּ עֹֽוד׃ 16
ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.
כִּ֚י יְהוָ֣ה אֱלֹֽהֵיכֶ֔ם ה֚וּא אֱלֹהֵ֣י הָֽאֱלֹהִ֔ים וַאֲדֹנֵ֖י הָאֲדֹנִ֑ים הָאֵ֨ל הַגָּדֹ֤ל הַגִּבֹּר֙ וְהַנֹּורָ֔א אֲשֶׁר֙ לֹא־יִשָּׂ֣א פָנִ֔ים וְלֹ֥א יִקַּ֖ח שֹֽׁחַד׃ 17
ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.
עֹשֶׂ֛ה מִשְׁפַּ֥ט יָתֹ֖ום וְאַלְמָנָ֑ה וְאֹהֵ֣ב גֵּ֔ר לָ֥תֶת לֹ֖ו לֶ֥חֶם וְשִׂמְלָֽה׃ 18
ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.
וַאֲהַבְתֶּ֖ם אֶת־הַגֵּ֑ר כִּֽי־גֵרִ֥ים הֱיִיתֶ֖ם בְּאֶ֥רֶץ מִצְרָֽיִם׃ 19
ಹೀಗಿರುವುದರಿಂದ ನೀವು ಪರದೇಶಿಯರನ್ನು ಪ್ರೀತಿಸಿರಿ. ಏಕೆಂದರೆ ನೀವು ಈಜಿಪ್ಟಿನಲ್ಲಿ ಪರದೇಶಿಗಳಾಗಿದ್ದೀರಿ.
אֶת־יְהוָ֧ה אֱלֹהֶ֛יךָ תִּירָ֖א אֹתֹ֣ו תַעֲבֹ֑ד וּבֹ֣ו תִדְבָּ֔ק וּבִשְׁמֹ֖ו תִּשָּׁבֵֽעַ׃ 20
ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.
ה֥וּא תְהִלָּתְךָ֖ וְה֣וּא אֱלֹהֶ֑יךָ אֲשֶׁר־עָשָׂ֣ה אִתְּךָ֗ אֶת־הַגְּדֹלֹ֤ת וְאֶת־הַנֹּֽורָאֹת֙ הָאֵ֔לֶּה אֲשֶׁ֥ר רָא֖וּ עֵינֶֽיךָ׃ 21
ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.
בְּשִׁבְעִ֣ים נֶ֔פֶשׁ יָרְד֥וּ אֲבֹתֶ֖יךָ מִצְרָ֑יְמָה וְעַתָּ֗ה שָֽׂמְךָ֙ יְהוָ֣ה אֱלֹהֶ֔יךָ כְּכֹוכְבֵ֥י הַשָּׁמַ֖יִם לָרֹֽב׃ 22
ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.

< דְּבָרִים 10 >