< דְּבָרִים 18 >

לֹֽא־יִ֠הְיֶה לַכֹּהֲנִ֨ים הַלְוִיִּ֜ם כָּל־שֵׁ֧בֶט לֵוִ֛י חֵ֥לֶק וְנַחֲלָ֖ה עִם־יִשְׂרָאֵ֑ל אִשֵּׁ֧י יְהוָ֛ה וְנַחֲלָתֹ֖ו יֹאכֵלֽוּן׃ 1
ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ.
וְנַחֲלָ֥ה לֹא־יִֽהְיֶה־לֹּ֖ו בְּקֶ֣רֶב אֶחָ֑יו יְהוָה֙ ה֣וּא נַחֲלָתֹ֔ו כַּאֲשֶׁ֖ר דִּבֶּר־לֹֽו׃ ס 2
ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.
וְזֶ֡ה יִהְיֶה֩ מִשְׁפַּ֨ט הַכֹּהֲנִ֜ים מֵאֵ֣ת הָעָ֗ם מֵאֵ֛ת זֹבְחֵ֥י הַזֶּ֖בַח אִם־שֹׁ֣ור אִם־שֶׂ֑ה וְנָתַן֙ לַכֹּהֵ֔ן הַזְּרֹ֥עַ וְהַלְּחָיַ֖יִם וְהַקֵּבָֽה׃ 3
ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.
רֵאשִׁ֨ית דְּגֽ͏ָנְךָ֜ תִּֽירֹשְׁךָ֣ וְיִצְהָרֶ֗ךָ וְרֵאשִׁ֛ית גֵּ֥ז צֹאנְךָ֖ תִּתֶּן־לֹּֽו׃ 4
ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.
כִּ֣י בֹ֗ו בָּחַ֛ר יְהוָ֥ה אֱלֹהֶ֖יךָ מִכָּל־שְׁבָטֶ֑יךָ לַעֲמֹ֨ד לְשָׁרֵ֧ת בְּשֵׁם־יְהוָ֛ה ה֥וּא וּבָנָ֖יו כָּל־הַיָּמִֽים׃ ס 5
ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.
וְכִֽי־יָבֹ֨א הַלֵּוִ֜י מֵאַחַ֤ד שְׁעָרֶ֙יךָ֙ מִכָּל־יִשְׂרָאֵ֔ל אֲשֶׁר־ה֖וּא גָּ֣ר שָׁ֑ם וּבָא֙ בְּכָל־אַוַּ֣ת נַפְשֹׁ֔ו אֶל־הַמָּקֹ֖ום אֲשֶׁר־יִבְחַ֥ר יְהוָֽה׃ 6
ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು.
וְשֵׁרֵ֕ת בְּשֵׁ֖ם יְהוָ֣ה אֱלֹהָ֑יו כְּכָל־אֶחָיו֙ הַלְוִיִּ֔ם הָעֹמְדִ֥ים שָׁ֖ם לִפְנֵ֥י יְהוָֽה׃ 7
ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು.
חֵ֥לֶק כְּחֵ֖לֶק יֹאכֵ֑לוּ לְבַ֥ד מִמְכָּרָ֖יו עַל־הָאָבֹֽות׃ ס 8
ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.
כִּ֤י אַתָּה֙ בָּ֣א אֶל־הָאָ֔רֶץ אֲשֶׁר־יְהוָ֥ה אֱלֹהֶ֖יךָ נֹתֵ֣ן לָ֑ךְ לֹֽא־תִלְמַ֣ד לַעֲשֹׂ֔ות כְּתֹועֲבֹ֖ת הַגֹּויִ֥ם הָהֵֽם׃ 9
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.
לֹֽא־יִמָּצֵ֣א בְךָ֔ מַעֲבִ֥יר בְּנֹֽו־וּבִתֹּ֖ו בָּאֵ֑שׁ קֹסֵ֣ם קְסָמִ֔ים מְעֹונֵ֥ן וּמְנַחֵ֖שׁ וּמְכַשֵּֽׁף׃ 10
ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,
וְחֹבֵ֖ר חָ֑בֶר וְשֹׁאֵ֥ל אֹוב֙ וְיִדְּעֹנִ֔י וְדֹרֵ֖שׁ אֶל־הַמֵּתִֽים׃ 11
ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.
כִּֽי־תֹועֲבַ֥ת יְהוָ֖ה כָּל־עֹ֣שֵׂה אֵ֑לֶּה וּבִגְלַל֙ הַתֹּועֵבֹ֣ת הָאֵ֔לֶּה יְהוָ֣ה אֱלֹהֶ֔יךָ מֹורִ֥ישׁ אֹותָ֖ם מִפָּנֶֽיךָ׃ 12
ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.
תָּמִ֣ים תִּֽהְיֶ֔ה עִ֖ם יְהוָ֥ה אֱלֹהֶֽיךָ׃ ס 13
ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿರ್ದೋಷಿಯಾಗಿರಬೇಕು.
כִּ֣י ׀ הַגֹּויִ֣ם הָאֵ֗לֶּה אֲשֶׁ֤ר אַתָּה֙ יֹורֵ֣שׁ אֹותָ֔ם אֶל־מְעֹנְנִ֥ים וְאֶל־קֹסְמִ֖ים יִשְׁמָ֑עוּ וְאַתָּ֕ה לֹ֣א כֵ֔ן נָ֥תַן לְךָ֖ יְהוָ֥ה אֱלֹהֶֽיךָ׃ 14
ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.
נָבִ֨יא מִקִּרְבְּךָ֤ מֵאַחֶ֙יךָ֙ כָּמֹ֔נִי יָקִ֥ים לְךָ֖ יְהוָ֣ה אֱלֹהֶ֑יךָ אֵלָ֖יו תִּשְׁמָעֽוּן׃ 15
ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.
כְּכֹ֨ל אֲשֶׁר־שָׁאַ֜לְתָּ מֵעִ֨ם יְהוָ֤ה אֱלֹהֶ֙יךָ֙ בְּחֹרֵ֔ב בְּיֹ֥ום הַקָּהָ֖ל לֵאמֹ֑ר לֹ֣א אֹסֵ֗ף לִשְׁמֹ֙עַ֙ אֶת־קֹול֙ יְהוָ֣ה אֱלֹהָ֔י וְאֶת־הָאֵ֨שׁ הַגְּדֹלָ֥ה הַזֹּ֛את לֹֽא־אֶרְאֶ֥ה עֹ֖וד וְלֹ֥א אָמֽוּת׃ 16
ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ.
וַיֹּ֥אמֶר יְהוָ֖ה אֵלָ֑י הֵיטִ֖יבוּ אֲשֶׁ֥ר דִּבֵּֽרוּ׃ 17
ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.
נָבִ֨יא אָקִ֥ים לָהֶ֛ם מִקֶּ֥רֶב אֲחֵיהֶ֖ם כָּמֹ֑וךָ וְנָתַתִּ֤י דְבָרַי֙ בְּפִ֔יו וְדִבֶּ֣ר אֲלֵיהֶ֔ם אֵ֖ת כָּל־אֲשֶׁ֥ר אֲצַוֶּֽנּוּ׃ 18
ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.
וְהָיָ֗ה הָאִישׁ֙ אֲשֶׁ֤ר לֹֽא־יִשְׁמַע֙ אֶל־דְּבָרַ֔י אֲשֶׁ֥ר יְדַבֵּ֖ר בִּשְׁמִ֑י אָנֹכִ֖י אֶדְרֹ֥שׁ מֵעִמֹּֽו׃ 19
ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
אַ֣ךְ הַנָּבִ֡יא אֲשֶׁ֣ר יָזִיד֩ לְדַבֵּ֨ר דָּבָ֜ר בִּשְׁמִ֗י אֵ֣ת אֲשֶׁ֤ר לֹֽא־צִוִּיתִיו֙ לְדַבֵּ֔ר וַאֲשֶׁ֣ר יְדַבֵּ֔ר בְּשֵׁ֖ם אֱלֹהִ֣ים אֲחֵרִ֑ים וּמֵ֖ת הַנָּבִ֥יא הַהֽוּא׃ 20
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”
וְכִ֥י תֹאמַ֖ר בִּלְבָבֶ֑ךָ אֵיכָה֙ נֵדַ֣ע אֶת־הַדָּבָ֔ר אֲשֶׁ֥ר לֹא־דִבְּרֹ֖ו יְהוָֽה׃ 21
ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.
אֲשֶׁר֩ יְדַבֵּ֨ר הַנָּבִ֜יא בְּשֵׁ֣ם יְהוָ֗ה וְלֹֽא־יִהְיֶ֤ה הַדָּבָר֙ וְלֹ֣א יָבֹ֔וא ה֣וּא הַדָּבָ֔ר אֲשֶׁ֥ר לֹא־דִבְּרֹ֖ו יְהוָ֑ה בְּזָדֹון֙ דִּבְּרֹ֣ו הַנָּבִ֔יא לֹ֥א תָג֖וּר מִמֶּֽנּוּ׃ ס 22
ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.

< דְּבָרִים 18 >