< דְּבָרִים 32 >

הַאֲזִ֥ינוּ הַשָּׁמַ֖יִם וַאֲדַבֵּ֑רָה וְתִשְׁמַ֥ע הָאָ֖רֶץ אִמְרֵי־פִֽי׃ 1
ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.
יַעֲרֹ֤ף כַּמָּטָר֙ לִקְחִ֔י תִּזַּ֥ל כַּטַּ֖ל אִמְרָתִ֑י כִּשְׂעִירִ֣ם עֲלֵי־דֶ֔שֶׁא וְכִרְבִיבִ֖ים עֲלֵי־עֵֽשֶׂב׃ 2
ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
כִּ֛י שֵׁ֥ם יְהוָ֖ה אֶקְרָ֑א הָב֥וּ גֹ֖דֶל לֵאלֹהֵֽינוּ׃ 3
ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.
הַצּוּר֙ תָּמִ֣ים פָּעֳלֹ֔ו כִּ֥י כָל־דְּרָכָ֖יו מִשְׁפָּ֑ט אֵ֤ל אֱמוּנָה֙ וְאֵ֣ין עָ֔וֶל צַדִּ֥יק וְיָשָׁ֖ר הֽוּא׃ 4
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
שִׁחֵ֥ת לֹ֛ו לֹ֖א בָּנָ֣יו מוּמָ֑ם דֹּ֥ור עִקֵּ֖שׁ וּפְתַלְתֹּֽל׃ 5
ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.
הֲ־לַיְהוָה֙ תִּגְמְלוּ־זֹ֔את עַ֥ם נָבָ֖ל וְלֹ֣א חָכָ֑ם הֲלֹוא־הוּא֙ אָבִ֣יךָ קָּנֶ֔ךָ ה֥וּא עָֽשְׂךָ֖ וַֽיְכֹנְנֶֽךָ׃ 6
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
זְכֹר֙ יְמֹ֣ות עֹולָ֔ם בִּ֖ינוּ שְׁנֹ֣ות דֹּור־וָדֹ֑ור שְׁאַ֤ל אָבִ֙יךָ֙ וְיַגֵּ֔דְךָ זְקֵנֶ֖יךָ וְיֹ֥אמְרוּ לָֽךְ׃ 7
ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.
בְּהַנְחֵ֤ל עֶלְיֹון֙ גֹּויִ֔ם בְּהַפְרִידֹ֖ו בְּנֵ֣י אָדָ֑ם יַצֵּב֙ גְּבֻלֹ֣ת עַמִּ֔ים לְמִסְפַּ֖ר בְּנֵ֥י יִשְׂרָאֵֽל׃ 8
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
כִּ֛י חֵ֥לֶק יְהֹוָ֖ה עַמֹּ֑ו יַעֲקֹ֖ב חֶ֥בֶל נַחֲלָתֹֽו׃ 9
ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.
יִמְצָאֵ֙הוּ֙ בְּאֶ֣רֶץ מִדְבָּ֔ר וּבְתֹ֖הוּ יְלֵ֣ל יְשִׁמֹ֑ן יְסֹֽבְבֶ֙נְהוּ֙ יְבֹ֣ונְנֵ֔הוּ יִצְּרֶ֖נְהוּ כְּאִישֹׁ֥ון עֵינֹֽו׃ 10
೧೦ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.
כְּנֶ֙שֶׁר֙ יָעִ֣יר קִנֹּ֔ו עַל־גֹּוזָלָ֖יו יְרַחֵ֑ף יִפְרֹ֤שׂ כְּנָפָיו֙ יִקָּחֵ֔הוּ יִשָּׂאֵ֖הוּ עַל־אֶבְרָתֹֽו׃ 11
೧೧ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
יְהוָ֖ה בָּדָ֣ד יַנְחֶ֑נּוּ וְאֵ֥ין עִמֹּ֖ו אֵ֥ל נֵכָֽר׃ 12
೧೨ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು.
יַרְכִּבֵ֙הוּ֙ עַל־בָּמֹותֵי (בָּ֣מֳתֵי) אָ֔רֶץ וַיֹּאכַ֖ל תְּנוּבֹ֣ת שָׂדָ֑י וַיֵּנִקֵ֤הֽוּ דְבַשׁ֙ מִסֶּ֔לַע וְשֶׁ֖מֶן מֵחַלְמִ֥ישׁ צֽוּר׃ 13
೧೩ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.
חֶמְאַ֨ת בָּקָ֜ר וַחֲלֵ֣ב צֹ֗אן עִם־חֵ֨לֶב כָּרִ֜ים וְאֵילִ֤ים בְּנֵֽי־בָשָׁן֙ וְעַתּוּדִ֔ים עִם־חֵ֖לֶב כִּלְיֹ֣ות חִטָּ֑ה וְדַם־עֵנָ֖ב תִּשְׁתֶּה־חָֽמֶר׃ 14
೧೪ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
וַיִּשְׁמַ֤ן יְשֻׁרוּן֙ וַיִּבְעָ֔ט שָׁמַ֖נְתָּ עָבִ֣יתָ כָּשִׂ֑יתָ וַיִּטֹּשׁ֙ אֱלֹ֣והַ עָשָׂ֔הוּ וַיְנַבֵּ֖ל צ֥וּר יְשֻׁעָתֹֽו׃ 15
೧೫ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
יַקְנִאֻ֖הוּ בְּזָרִ֑ים בְּתֹועֵבֹ֖ת יַכְעִיסֻֽהוּ׃ 16
೧೬ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.
יִזְבְּח֗וּ לַשֵּׁדִים֙ לֹ֣א אֱלֹ֔הַ אֱלֹהִ֖ים לֹ֣א יְדָע֑וּם חֲדָשִׁים֙ מִקָּרֹ֣ב בָּ֔אוּ לֹ֥א שְׂעָר֖וּם אֲבֹתֵיכֶֽם׃ 17
೧೭ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.
צ֥וּר יְלָדְךָ֖ תֶּ֑שִׁי וַתִּשְׁכַּ֖ח אֵ֥ל מְחֹלְלֶֽךָ׃ 18
೧೮ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.
וַיַּ֥רְא יְהוָ֖ה וַיִּנְאָ֑ץ מִכַּ֥עַס בָּנָ֖יו וּבְנֹתָֽיו׃ 19
೧೯ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.
וַיֹּ֗אמֶר אַסְתִּ֤ירָה פָנַי֙ מֵהֶ֔ם אֶרְאֶ֖ה מָ֣ה אַחֲרִיתָ֑ם כִּ֣י דֹ֤ור תַּהְפֻּכֹת֙ הֵ֔מָּה בָּנִ֖ים לֹא־אֵמֻ֥ן בָּֽם׃ 20
೨೦ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
הֵ֚ם קִנְא֣וּנִי בְלֹא־אֵ֔ל כִּעֲס֖וּנִי בְּהַבְלֵיהֶ֑ם וַאֲנִי֙ אַקְנִיאֵ֣ם בְּלֹא־עָ֔ם בְּגֹ֥וי נָבָ֖ל אַכְעִיסֵֽם׃ 21
೨೧ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.
כִּי־אֵשׁ֙ קָדְחָ֣ה בְאַפִּ֔י וַתִּיקַ֖ד עַד־שְׁאֹ֣ול תַּחְתִּ֑ית וַתֹּ֤אכַל אֶ֙רֶץ֙ וִֽיבֻלָ֔הּ וַתְּלַהֵ֖ט מֹוסְדֵ֥י הָרִֽים׃ (Sheol h7585) 22
೨೨ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. (Sheol h7585)
אַסְפֶּ֥ה עָלֵ֖ימֹו רָעֹ֑ות חִצַּ֖י אֲכַלֶּה־בָּֽם׃ 23
೨೩ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.
מְזֵ֥י רָעָ֛ב וּלְחֻ֥מֵי רֶ֖שֶׁף וְקֶ֣טֶב מְרִירִ֑י וְשֶׁן־בְּהֵמֹות֙ אֲשַׁלַּח־בָּ֔ם עִם־חֲמַ֖ת זֹחֲלֵ֥י עָפָֽר׃ 24
೨೪ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.
מִחוּץ֙ תְּשַׁכֶּל־חֶ֔רֶב וּמֵחֲדָרִ֖ים אֵימָ֑ה גַּם־בָּחוּר֙ גַּם־בְּתוּלָ֔ה יֹונֵ֖ק עִם־אִ֥ישׁ שֵׂיבָֽה׃ 25
೨೫ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
אָמַ֖רְתִּי אַפְאֵיהֶ֑ם אַשְׁבִּ֥יתָה מֵאֱנֹ֖ושׁ זִכְרָֽם׃ 26
೨೬ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
לוּלֵ֗י כַּ֤עַס אֹויֵב֙ אָג֔וּר פֶּֽן־יְנַכְּר֖וּ צָרֵ֑ימֹו פֶּן־יֹֽאמְרוּ֙ יָדֵ֣ינוּ רָ֔מָה וְלֹ֥א יְהוָ֖ה פָּעַ֥ל כָּל־זֹֽאת׃ 27
೨೭ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
כִּי־גֹ֛וי אֹבַ֥ד עֵצֹ֖ות הֵ֑מָּה וְאֵ֥ין בָּהֶ֖ם תְּבוּנָֽה׃ 28
೨೮ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.
ל֥וּ חָכְמ֖וּ יַשְׂכִּ֣ילוּ זֹ֑את יָבִ֖ינוּ לְאַחֲרִיתָֽם׃ 29
೨೯ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!
אֵיכָ֞ה יִרְדֹּ֤ף אֶחָד֙ אֶ֔לֶף וּשְׁנַ֖יִם יָנִ֣יסוּ רְבָבָ֑ה אִם־לֹא֙ כִּי־צוּרָ֣ם מְכָרָ֔ם וַֽיהוָ֖ה הִסְגִּירָֽם׃ 30
೩೦ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
כִּ֛י לֹ֥א כְצוּרֵ֖נוּ צוּרָ֑ם וְאֹיְבֵ֖ינוּ פְּלִילִֽים׃ 31
೩೧ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.
כִּֽי־מִגֶּ֤פֶן סְדֹם֙ גַּפְנָ֔ם וּמִשַּׁדְמֹ֖ת עֲמֹרָ֑ה עֲנָבֵ֙מֹו֙ עִנְּבֵי־רֹ֔ושׁ אַשְׁכְּלֹ֥ת מְרֹרֹ֖ת לָֽמֹו׃ 32
೩೨ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.
חֲמַ֥ת תַּנִּינִ֖ם יֵינָ֑ם וְרֹ֥אשׁ פְּתָנִ֖ים אַכְזָֽר׃ 33
೩೩ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.
הֲלֹא־ה֖וּא כָּמֻ֣ס עִמָּדִ֑י חָתֻ֖ם בְּאֹוצְרֹתָֽי׃ 34
೩೪ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?
לִ֤י נָקָם֙ וְשִׁלֵּ֔ם לְעֵ֖ת תָּמ֣וּט רַגְלָ֑ם כִּ֤י קָרֹוב֙ יֹ֣ום אֵידָ֔ם וְחָ֖שׁ עֲתִדֹ֥ת לָֽמֹו׃ 35
೩೫ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.
כִּֽי־יָדִ֤ין יְהוָה֙ עַמֹּ֔ו וְעַל־עֲבָדָ֖יו יִתְנֶחָ֑ם כִּ֤י יִרְאֶה֙ כִּי־אָ֣זְלַת יָ֔ד וְאֶ֖פֶס עָצ֥וּר וְעָזֽוּב׃ 36
೩೬ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
וְאָמַ֖ר אֵ֣י אֱלֹהֵ֑ימֹו צ֖וּר חָסָ֥יוּ בֹֽו׃ 37
೩೭ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
אֲשֶׁ֨ר חֵ֤לֶב זְבָחֵ֙ימֹו֙ יֹאכֵ֔לוּ יִשְׁתּ֖וּ יֵ֣ין נְסִיכָ֑ם יָק֙וּמוּ֙ וְיַעְזְרֻכֶ֔ם יְהִ֥י עֲלֵיכֶ֖ם סִתְרָֽה׃ 38
೩೮ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
רְא֣וּ ׀ עַתָּ֗ה כִּ֣י אֲנִ֤י אֲנִי֙ ה֔וּא וְאֵ֥ין אֱלֹהִ֖ים עִמָּדִ֑י אֲנִ֧י אָמִ֣ית וַאֲחַיֶּ֗ה מָחַ֙צְתִּי֙ וַאֲנִ֣י אֶרְפָּ֔א וְאֵ֥ין מִיָּדִ֖י מַצִּֽיל׃ 39
೩೯ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
כִּֽי־אֶשָּׂ֥א אֶל־שָׁמַ֖יִם יָדִ֑י וְאָמַ֕רְתִּי חַ֥י אָנֹכִ֖י לְעֹלָֽם׃ 40
೪೦ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,
אִם־שַׁנֹּותִי֙ בְּרַ֣ק חַרְבִּ֔י וְתֹאחֵ֥ז בְּמִשְׁפָּ֖ט יָדִ֑י אָשִׁ֤יב נָקָם֙ לְצָרָ֔י וְלִמְשַׂנְאַ֖י אֲשַׁלֵּֽם׃ 41
೪೧‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
אַשְׁכִּ֤יר חִצַּי֙ מִדָּ֔ם וְחַרְבִּ֖י תֹּאכַ֣ל בָּשָׂ֑ר מִדַּ֤ם חָלָל֙ וְשִׁבְיָ֔ה מֵרֹ֖אשׁ פַּרְעֹ֥ות אֹויֵֽב׃ 42
೪೨ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.
הַרְנִ֤ינוּ גֹויִם֙ עַמֹּ֔ו כִּ֥י דַם־עֲבָדָ֖יו יִקֹּ֑ום וְנָקָם֙ יָשִׁ֣יב לְצָרָ֔יו וְכִפֶּ֥ר אַדְמָתֹ֖ו עַמֹּֽו׃ פ 43
೪೩ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
וַיָּבֹ֣א מֹשֶׁ֗ה וַיְדַבֵּ֛ר אֶת־כָּל־דִּבְרֵ֥י הַשִּׁירָֽה־הַזֹּ֖את בְּאָזְנֵ֣י הָעָ֑ם ה֖וּא וְהֹושֵׁ֥עַ בִּן־נֽוּן׃ 44
೪೪ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”
וַיְכַ֣ל מֹשֶׁ֗ה לְדַבֵּ֛ר אֶת־כָּל־הַדְּבָרִ֥ים הָאֵ֖לֶּה אֶל־כָּל־יִשְׂרָאֵֽל׃ 45
೪೫ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,
וַיֹּ֤אמֶר אֲלֵהֶם֙ שִׂ֣ימוּ לְבַבְכֶ֔ם לְכָל־הַדְּבָרִ֔ים אֲשֶׁ֧ר אָנֹכִ֛י מֵעִ֥יד בָּכֶ֖ם הַיֹּ֑ום אֲשֶׁ֤ר תְּצַוֻּם֙ אֶת־בְּנֵיכֶ֔ם לִשְׁמֹ֣ר לַעֲשֹׂ֔ות אֶת־כָּל־דִּבְרֵ֖י הַתֹּורָ֥ה הַזֹּֽאת׃ 46
೪೬ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
כִּ֠י לֹֽא־דָבָ֨ר רֵ֥ק הוּא֙ מִכֶּ֔ם כִּי־ה֖וּא חַיֵּיכֶ֑ם וּבַדָּבָ֣ר הַזֶּ֗ה תַּאֲרִ֤יכוּ יָמִים֙ עַל־הָ֣אֲדָמָ֔ה אֲשֶׁ֨ר אַתֶּ֜ם עֹבְרִ֧ים אֶת־הַיַּרְדֵּ֛ן שָׁ֖מָּה לְרִשְׁתָּֽהּ׃ פ 47
೪೭ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.
וַיְדַבֵּ֤ר יְהוָה֙ אֶל־מֹשֶׁ֔ה בְּעֶ֛צֶם הַיֹּ֥ום הַזֶּ֖ה לֵאמֹֽר׃ 48
೪೮ಆದೇ ದಿನ ಯೆಹೋವನು ಮೋಶೆಗೆ,
עֲלֵ֡ה אֶל־הַר֩ הָעֲבָרִ֨ים הַזֶּ֜ה הַר־נְבֹ֗ו אֲשֶׁר֙ בְּאֶ֣רֶץ מֹואָ֔ב אֲשֶׁ֖ר עַל־פְּנֵ֣י יְרֵחֹ֑ו וּרְאֵה֙ אֶת־אֶ֣רֶץ כְּנַ֔עַן אֲשֶׁ֨ר אֲנִ֥י נֹתֵ֛ן לִבְנֵ֥י יִשְׂרָאֵ֖ל לַאֲחֻזָּֽה׃ 49
೪೯“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.
וּמֻ֗ת בָּהָר֙ אֲשֶׁ֤ר אַתָּה֙ עֹלֶ֣ה שָׁ֔מָּה וְהֵאָסֵ֖ף אֶל־עַמֶּ֑יךָ כּֽ͏ַאֲשֶׁר־מֵ֞ת אַהֲרֹ֤ן אָחִ֙יךָ֙ בְּהֹ֣ר הָהָ֔ר וַיֵּאָ֖סֶף אֶל־עַמָּֽיו׃ 50
೫೦ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.
עַל֩ אֲשֶׁ֨ר מְעַלְתֶּ֜ם בִּ֗י בְּתֹוךְ֙ בְּנֵ֣י יִשְׂרָאֵ֔ל בְּמֵֽי־מְרִיבַ֥ת קָדֵ֖שׁ מִדְבַּר־צִ֑ן עַ֣ל אֲשֶׁ֤ר לֹֽא־קִדַּשְׁתֶּם֙ אֹותִ֔י בְּתֹ֖וךְ בְּנֵ֥י יִשְׂרָאֵֽל׃ 51
೫೧ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
כִּ֥י מִנֶּ֖גֶד תִּרְאֶ֣ה אֶת־הָאָ֑רֶץ וְשָׁ֙מָּה֙ לֹ֣א תָבֹ֔וא אֶל־הָאָ֕רֶץ אֲשֶׁר־אֲנִ֥י נֹתֵ֖ן לִבְנֵ֥י יִשְׂרָאֵֽל׃ פ 52
೫೨ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.

< דְּבָרִים 32 >