< אֶסְתֵר 1 >

וַיְהִ֖י בִּימֵ֣י אֲחַשְׁוֵרֹ֑ושׁ ה֣וּא אֲחַשְׁוֵרֹ֗ושׁ הַמֹּלֵךְ֙ מֵהֹ֣דּוּ וְעַד־כּ֔וּשׁ שֶׁ֛בַע וְעֶשְׂרִ֥ים וּמֵאָ֖ה מְדִינָֽה׃ 1
ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
בַּיָּמִ֖ים הָהֵ֑ם כְּשֶׁ֣בֶת ׀ הַמֶּ֣לֶךְ אֲחַשְׁוֵרֹ֗ושׁ עַ֚ל כִּסֵּ֣א מַלְכוּתֹ֔ו אֲשֶׁ֖ר בְּשׁוּשַׁ֥ן הַבִּירָֽה׃ 2
ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
בִּשְׁנַ֤ת שָׁלֹושׁ֙ לְמָלְכֹ֔ו עָשָׂ֣ה מִשְׁתֶּ֔ה לְכָל־שָׂרָ֖יו וַעֲבָדָ֑יו חֵ֣יל ׀ פָּרַ֣ס וּמָדַ֗י הַֽפַּרְתְּמִ֛ים וְשָׂרֵ֥י הַמְּדִינֹ֖ות לְפָנָֽיו׃ 3
ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
בְּהַרְאֹתֹ֗ו אֶת־עֹ֙שֶׁר֙ כְּבֹ֣וד מַלְכוּתֹ֔ו וְאֶ֨ת־יְקָ֔ר תִּפְאֶ֖רֶת גְּדוּלָּתֹ֑ו יָמִ֣ים רַבִּ֔ים שְׁמֹונִ֥ים וּמְאַ֖ת יֹֽום׃ 4
ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
וּבִמְלֹ֣ואת ׀ הַיָּמִ֣ים הָאֵ֗לֶּה עָשָׂ֣ה הַמֶּ֡לֶךְ לְכָל־הָעָ֣ם הַנִּמְצְאִים֩ בְּשׁוּשַׁ֨ן הַבִּירָ֜ה לְמִגָּ֧דֹול וְעַד־קָטָ֛ן מִשְׁתֶּ֖ה שִׁבְעַ֣ת יָמִ֑ים בַּחֲצַ֕ר גִּנַּ֥ת בִּיתַ֖ן הַמֶּֽלֶךְ׃ 5
ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
ח֣וּר ׀ כַּרְפַּ֣ס וּתְכֵ֗לֶת אָחוּז֙ בְּחַבְלֵי־ב֣וּץ וְאַרְגָּמָ֔ן עַל־גְּלִ֥ילֵי כֶ֖סֶף וְעַמּ֣וּדֵי שֵׁ֑שׁ מִטֹּ֣ות ׀ זָהָ֣ב וָכֶ֗סֶף עַ֛ל רִֽצְפַ֥ת בַּהַט־וָשֵׁ֖שׁ וְדַ֥ר וְסֹחָֽרֶת׃ 6
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
וְהַשְׁקֹות֙ בִּכְלֵ֣י זָהָ֔ב וְכֵלִ֖ים מִכֵּלִ֣ים שֹׁונִ֑ים וְיֵ֥ין מַלְכ֛וּת רָ֖ב כְּיַ֥ד הַמֶּֽלֶךְ׃ 7
ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
וְהַשְּׁתִיָּ֥ה כַדָּ֖ת אֵ֣ין אֹנֵ֑ס כִּי־כֵ֣ן ׀ יִסַּ֣ד הַמֶּ֗לֶךְ עַ֚ל כָּל־רַ֣ב בֵּיתֹ֔ו לַעֲשֹׂ֖ות כִּרְצֹ֥ון אִישׁ־וָאִֽישׁ׃ 8
“ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
גַּ֚ם וַשְׁתִּ֣י הַמַּלְכָּ֔ה עָשְׂתָ֖ה מִשְׁתֵּ֣ה נָשִׁ֑ים בֵּ֚ית הַמַּלְכ֔וּת אֲשֶׁ֖ר לַמֶּ֥לֶךְ אֲחַשְׁוֵרֹֽושׁ׃ ס 9
ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
בַּיֹּום֙ הַשְּׁבִיעִ֔י כְּטֹ֥וב לֵב־הַמֶּ֖לֶךְ בַּיָּ֑יִן אָמַ֡ר לִ֠מְהוּמָן בִּזְּתָ֨א חַרְבֹונָ֜א בִּגְתָ֤א וַאֲבַגְתָא֙ זֵתַ֣ר וְכַרְכַּ֔ס שִׁבְעַת֙ הַסָּ֣רִיסִ֔ים הַמְשָׁ֣רְתִ֔ים אֶת־פְּנֵ֖י הַמֶּ֥לֶךְ אֲחַשְׁוֵרֹֽושׁ׃ 10
೧೦ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
לְ֠הָבִיא אֶת־וַשְׁתִּ֧י הַמַּלְכָּ֛ה לִפְנֵ֥י הַמֶּ֖לֶךְ בְּכֶ֣תֶר מַלְכ֑וּת לְהַרְאֹ֨ות הָֽעַמִּ֤ים וְהַשָּׂרִים֙ אֶת־יָפְיָ֔הּ כִּֽי־טֹובַ֥ת מַרְאֶ֖ה הִֽיא׃ 11
೧೧“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
וַתְּמָאֵ֞ן הַמַּלְכָּ֣ה וַשְׁתִּ֗י לָבֹוא֙ בִּדְבַ֣ר הַמֶּ֔לֶךְ אֲשֶׁ֖ר בְּיַ֣ד הַסָּרִיסִ֑ים וַיִּקְצֹ֤ף הַמֶּ֙לֶךְ֙ מְאֹ֔ד וַחֲמָתֹ֖ו בָּעֲרָ֥ה בֹֽו׃ 12
೧೨ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
וַיֹּ֣אמֶר הַמֶּ֔לֶךְ לַחֲכָמִ֖ים יֹדְעֵ֣י הֽ͏ָעִתִּ֑ים כִּי־כֵן֙ דְּבַ֣ר הַמֶּ֔לֶךְ לִפְנֵ֕י כָּל־יֹדְעֵ֖י דָּ֥ת וָדִֽין׃ 13
೧೩ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
וְהַקָּרֹ֣ב אֵלָ֗יו כַּרְשְׁנָ֤א שֵׁתָר֙ אַדְמָ֣תָא תַרְשִׁ֔ישׁ מֶ֥רֶס מַרְסְנָ֖א מְמוּכָ֑ן שִׁבְעַ֞ת שָׂרֵ֣י ׀ פָּרַ֣ס וּמָדַ֗י רֹאֵי֙ פְּנֵ֣י הַמֶּ֔לֶךְ הַיֹּשְׁבִ֥ים רִאשֹׁנָ֖ה בַּמַּלְכֽוּת׃ 14
೧೪ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
כְּדָת֙ מַֽה־לַּעֲשֹׂ֔ות בַּמַּלְכָּ֖ה וַשְׁתִּ֑י עַ֣ל ׀ אֲשֶׁ֣ר לֹֽא־עָשְׂתָ֗ה אֶֽת־מַאֲמַר֙ הַמֶּ֣לֶךְ אֲחַשְׁוֵרֹ֔ושׁ בְּיַ֖ד הַסָּרִיסִֽים׃ ס 15
೧೫ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
וַיֹּ֣אמֶר מוּמְכָן (מְמוּכָ֗ן) לִפְנֵ֤י הַמֶּ֙לֶךְ֙ וְהַשָּׂרִ֔ים לֹ֤א עַל־הַמֶּ֙לֶךְ֙ לְבַדֹּ֔ו עָוְתָ֖ה וַשְׁתִּ֣י הַמַּלְכָּ֑ה כִּ֤י עַל־כָּל־הַשָּׂרִים֙ וְעַל־כָּל־הָ֣עַמִּ֔ים אֲשֶׁ֕ר בְּכָל־מְדִינֹ֖ות הַמֶּ֥לֶךְ אֲחַשְׁוֵרֹֽושׁ׃ 16
೧೬ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.
כִּֽי־יֵצֵ֤א דְבַר־הַמַּלְכָּה֙ עַל־כָּל־הַנָּשִׁ֔ים לְהַבְזֹ֥ות בַּעְלֵיהֶ֖ן בְּעֵינֵיהֶ֑ן בְּאָמְרָ֗ם הַמֶּ֣לֶךְ אֲחַשְׁוֵרֹ֡ושׁ אָמַ֞ר לְהָבִ֨יא אֶת־וַשְׁתִּ֧י הַמַּלְכָּ֛ה לְפָנָ֖יו וְלֹא־בָֽאָה׃ 17
೧೭ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
וְֽהַיֹּ֨ום הַזֶּ֜ה תֹּאמַ֣רְנָה ׀ שָׂרֹ֣ות פָּֽרַס־וּמָדַ֗י אֲשֶׁ֤ר שָֽׁמְעוּ֙ אֶת־דְּבַ֣ר הַמַּלְכָּ֔ה לְכֹ֖ל שָׂרֵ֣י הַמֶּ֑לֶךְ וּכְדַ֖י בִּזָּיֹ֥ון וָקָֽצֶף׃ 18
೧೮ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
אִם־עַל־הַמֶּ֣לֶךְ טֹ֗וב יֵצֵ֤א דְבַר־מַלְכוּת֙ מִלְּפָנָ֔יו וְיִכָּתֵ֛ב בְּדָתֵ֥י פָֽרַס־וּמָדַ֖י וְלֹ֣א יַעֲבֹ֑ור אֲשֶׁ֨ר לֹֽא־תָבֹ֜וא וַשְׁתִּ֗י לִפְנֵי֙ הַמֶּ֣לֶךְ אֲחַשְׁוֵרֹ֔ושׁ וּמַלְכוּתָהּ֙ יִתֵּ֣ן הַמֶּ֔לֶךְ לִרְעוּתָ֖הּ הַטֹּובָ֥ה מִמֶּֽנָּה׃ 19
೧೯ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
וְנִשְׁמַע֩ פִּתְגָ֨ם הַמֶּ֤לֶךְ אֲשֶֽׁר־יַעֲשֶׂה֙ בְּכָל־מַלְכוּתֹ֔ו כִּ֥י רַבָּ֖ה הִ֑יא וְכָל־הַנָּשִׁ֗ים יִתְּנ֤וּ יְקָר֙ לְבַעְלֵיהֶ֔ן לְמִגָּדֹ֖ול וְעַד־קָטָֽן׃ 20
೨೦ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
וַיִּיטַב֙ הַדָּבָ֔ר בְּעֵינֵ֥י הַמֶּ֖לֶךְ וְהַשָּׂרִ֑ים וַיַּ֥עַשׂ הַמֶּ֖לֶךְ כִּדְבַ֥ר מְמוּכָֽן׃ 21
೨೧ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.
וַיִּשְׁלַ֤ח סְפָרִים֙ אֶל־כָּל־מְדִינֹ֣ות הַמֶּ֔לֶךְ אֶל־מְדִינָ֤ה וּמְדִינָה֙ כִּכְתָבָ֔הּ וְאֶל־עַ֥ם וָעָ֖ם כִּלְשֹׁונֹ֑ו לִהְיֹ֤ות כָּל־אִישׁ֙ שֹׂרֵ֣ר בְּבֵיתֹ֔ו וּמְדַבֵּ֖ר כִּלְשֹׁ֥ון עַמֹּֽו׃ פ 22
೨೨ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.

< אֶסְתֵר 1 >