< שְׁמֹות 31 >

וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ 1
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ,
רְאֵ֖ה קָרָ֣אתִֽי בְשֵׁ֑ם בְּצַלְאֵ֛ל בֶּן־אוּרִ֥י בֶן־ח֖וּר לְמַטֵּ֥ה יְהוּדָֽה׃ 2
“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.
וָאֲמַלֵּ֥א אֹתֹ֖ו ר֣וּחַ אֱלֹהִ֑ים בְּחָכְמָ֛ה וּבִתְבוּנָ֥ה וּבְדַ֖עַת וּבְכָל־מְלָאכָֽה׃ 3
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.
לַחְשֹׁ֖ב מַחֲשָׁבֹ֑ת לַעֲשֹׂ֛ות בַּזָּהָ֥ב וּבַכֶּ֖סֶף וּבַנְּחֹֽשֶׁת׃ 4
ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ,
וּבַחֲרֹ֥שֶׁת אֶ֛בֶן לְמַלֹּ֖את וּבַחֲרֹ֣שֶׁת עֵ֑ץ לַעֲשֹׂ֖ות בְּכָל־מְלָאכָֽה׃ 5
ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.
וַאֲנִ֞י הִנֵּ֧ה נָתַ֣תִּי אִתֹּ֗ו אֵ֣ת אָהֳלִיאָ֞ב בֶּן־אֲחִֽיסָמָךְ֙ לְמַטֵּה־דָ֔ן וּבְלֵ֥ב כָּל־חֲכַם־לֵ֖ב נָתַ֣תִּי חָכְמָ֑ה וְעָשׂ֕וּ אֵ֖ת כָּל־אֲשֶׁ֥ר צִוִּיתִֽךָ׃ 6
ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.
אֵ֣ת ׀ אֹ֣הֶל מֹועֵ֗ד וְאֶת־הָֽאָרֹן֙ לָֽעֵדֻ֔ת וְאֶת־הַכַּפֹּ֖רֶת אֲשֶׁ֣ר עָלָ֑יו וְאֵ֖ת כָּל־כְּלֵ֥י הָאֹֽהֶל׃ 7
“ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,
וְאֶת־הַשֻּׁלְחָן֙ וְאֶת־כֵּלָ֔יו וְאֶת־הַמְּנֹרָ֥ה הַטְּהֹרָ֖ה וְאֶת־כָּל־כֵּלֶ֑יהָ וְאֵ֖ת מִזְבַּ֥ח הַקְּטֹֽרֶת׃ 8
ಮೇಜು ಅದರ ಉಪಕರಣಗಳು, ಶುದ್ಧ ಬಂಗಾರದ ದೀಪಸ್ತಂಭ, ಅದರ ಎಲ್ಲಾ ಉಪಕರಣಗಳು, ಧೂಪವೇದಿ, ಬಲಿಪೀಠ,
וְאֶת־מִזְבַּ֥ח הָעֹלָ֖ה וְאֶת־כָּל־כֵּלָ֑יו וְאֶת־הַכִּיֹּ֖ור וְאֶת־כַּנֹּֽו׃ 9
ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,
וְאֵ֖ת בִּגְדֵ֣י הַשְּׂרָ֑ד וְאֶת־בִּגְדֵ֤י הַקֹּ֙דֶשׁ֙ לְאַהֲרֹ֣ן הַכֹּהֵ֔ן וְאֶת־בִּגְדֵ֥י בָנָ֖יו לְכַהֵֽן׃ 10
ಯಾಜಕನಾದ ಆರೋನನ ಕಲಾತ್ಮಕವಾಗಿ ನೇಯ್ದ ಸೇವಾವಸ್ತ್ರಗಳು, ಪರಿಶುದ್ಧ ವಸ್ತ್ರಗಳು, ಯಾಜಕನ ಕೆಲಸ ಮಾಡುವುದಕ್ಕೆ ಅವನ ಮಕ್ಕಳ ವಸ್ತ್ರಗಳು,
וְאֵ֨ת שֶׁ֧מֶן הַמִּשְׁחָ֛ה וְאֶת־קְטֹ֥רֶת הַסַּמִּ֖ים לַקֹּ֑דֶשׁ כְּכֹ֥ל אֲשֶׁר־צִוִּיתִ֖ךָ יַעֲשֽׂוּ׃ פ 11
ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.
וַיֹּ֥אמֶר יְהוָ֖ה אֶל־מֹשֶׁ֥ה לֵּאמֹֽר׃ 12
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
וְאַתָּ֞ה דַּבֵּ֨ר אֶל־בְּנֵ֤י יִשְׂרָאֵל֙ לֵאמֹ֔ר אַ֥ךְ אֶת־שַׁבְּתֹתַ֖י תִּשְׁמֹ֑רוּ כִּי֩ אֹ֨ות הִ֜וא בֵּינִ֤י וּבֵֽינֵיכֶם֙ לְדֹרֹ֣תֵיכֶ֔ם לָדַ֕עַת כִּ֛י אֲנִ֥י יְהוָ֖ה מְקַדִּשְׁכֶֽם׃ 13
“ನೀನು ಇಸ್ರಾಯೇಲರೊಂದಿಗೆ ಮಾತನಾಡಿ, ‘ನಿಶ್ಚಯವಾಗಿ ನೀವು ನನ್ನ ವಿಶ್ರಾಂತಿಯ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ನಿಮ್ಮನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ, ನಿಮಗೂ, ನಿಮ್ಮ ಸಂತತಿಯವರಿಗೂ ಗುರುತಾಗಿರುವುದು.
וּשְׁמַרְתֶּם֙ אֶת־הַשַּׁבָּ֔ת כִּ֛י קֹ֥דֶשׁ הִ֖וא לָכֶ֑ם מְחַֽלְלֶ֙יהָ֙ מֹ֣ות יוּמָ֔ת כִּ֗י כָּל־הָעֹשֶׂ֥ה בָהּ֙ מְלָאכָ֔ה וְנִכְרְתָ֛ה הַנֶּ֥פֶשׁ הַהִ֖וא מִקֶּ֥רֶב עַמֶּֽיהָ׃ 14
“‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.
שֵׁ֣שֶׁת יָמִים֮ יֵעָשֶׂ֣ה מְלָאכָה֒ וּבַיֹּ֣ום הַשְּׁבִיעִ֗י שַׁבַּ֧ת שַׁבָּתֹ֛ון קֹ֖דֶשׁ לַיהוָ֑ה כָּל־הָעֹשֶׂ֧ה מְלָאכָ֛ה בְּיֹ֥ום הַשַּׁבָּ֖ת מֹ֥ות יוּמָֽת׃ 15
ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.
וְשָׁמְר֥וּ בְנֵֽי־יִשְׂרָאֵ֖ל אֶת־הַשַּׁבָּ֑ת לַעֲשֹׂ֧ות אֶת־הַשַּׁבָּ֛ת לְדֹרֹתָ֖ם בְּרִ֥ית עֹולָֽם׃ 16
ಹೀಗಿರಲಾಗಿ ಇಸ್ರಾಯೇಲರು ತಮ್ಮ ತಲತಲಾಂತರಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ ದಿನವನ್ನು ಕೈಗೊಳ್ಳಬೇಕು.
בֵּינִ֗י וּבֵין֙ בְּנֵ֣י יִשְׂרָאֵ֔ל אֹ֥ות הִ֖וא לְעֹלָ֑ם כִּי־שֵׁ֣שֶׁת יָמִ֗ים עָשָׂ֤ה יְהוָה֙ אֶת־הַשָּׁמַ֣יִם וְאֶת־הָאָ֔רֶץ וּבַיֹּום֙ הַשְּׁבִיעִ֔י שָׁבַ֖ת וַיִּנָּפַֽשׁ׃ ס 17
ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’” ಎಂದರು.
וַיִּתֵּ֣ן אֶל־מֹשֶׁ֗ה כְּכַלֹּתֹו֙ לְדַבֵּ֤ר אִתֹּו֙ בְּהַ֣ר סִינַ֔י שְׁנֵ֖י לֻחֹ֣ת הָעֵדֻ֑ת לֻחֹ֣ת אֶ֔בֶן כְּתֻבִ֖ים בְּאֶצְבַּ֥ע אֱלֹהִֽים׃ 18
ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.

< שְׁמֹות 31 >