< יְחֶזְקֵאל 12 >

וַיְהִ֥י דְבַר־יְהוָ֖ה אֵלַ֥י לֵאמֹֽר׃ 1
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֕ם בְּתֹ֥וךְ בֵּית־הַמֶּ֖רִי אַתָּ֣ה יֹשֵׁ֑ב אֲשֶׁ֣ר עֵינַיִם֩ לָהֶ֨ם לִרְאֹ֜ות וְלֹ֣א רָא֗וּ אָזְנַ֨יִם לָהֶ֤ם לִשְׁמֹ֙עַ֙ וְלֹ֣א שָׁמֵ֔עוּ כִּ֛י בֵּ֥ית מְרִ֖י הֵֽם׃ 2
“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.
וְאַתָּ֣ה בֶן־אָדָ֗ם עֲשֵׂ֤ה לְךָ֙ כְּלֵ֣י גֹולָ֔ה וּגְלֵ֥ה יֹומָ֖ם לְעֵֽינֵיהֶ֑ם וְגָלִ֨יתָ מִמְּקֹומְךָ֜ אֶל־מָקֹ֤ום אַחֵר֙ לְעֵ֣ינֵיהֶ֔ם אוּלַ֣י יִרְא֔וּ כִּ֛י בֵּ֥ית מְרִ֖י הֵֽמָּה׃ 3
“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.
וְהֹוצֵאתָ֨ כֵלֶ֜יךָ כִּכְלֵ֥י גֹולָ֛ה יֹומָ֖ם לְעֵֽינֵיהֶ֑ם וְאַתָּ֗ה תֵּצֵ֤א בָעֶ֙רֶב֙ לְעֵ֣ינֵיהֶ֔ם כְּמֹוצָאֵ֖י גֹּולָֽה׃ 4
ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
לְעֵינֵיהֶ֖ם חֲתָר־לְךָ֣ בַקִּ֑יר וְהֹוצֵאתָ֖ בֹּֽו׃ 5
ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.
לְעֵ֨ינֵיהֶ֜ם עַל־כָּתֵ֤ף תִּשָּׂא֙ בָּעֲלָטָ֣ה תֹוצִ֔יא פָּנֶ֣יךָ תְכַסֶּ֔ה וְלֹ֥א תִרְאֶ֖ה אֶת־הָאָ֑רֶץ כִּֽי־מֹופֵ֥ת נְתַתִּ֖יךָ לְבֵ֥ית יִשְׂרָאֵֽל׃ 6
ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”
וָאַ֣עַשׂ כֵּן֮ כַּאֲשֶׁ֣ר צֻוֵּיתִי֒ כֵּ֠לַי הֹוצֵ֜אתִי כִּכְלֵ֤י גֹולָה֙ יֹומָ֔ם וּבָעֶ֛רֶב חָתַֽרְתִּי־לִ֥י בַקִּ֖יר בְּיָ֑ד בָּעֲלָטָ֥ה הֹוצֵ֛אתִי עַל־כָּתֵ֥ף נָשָׂ֖אתִי לְעֵינֵיהֶֽם׃ פ 7
ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
וַיְהִ֧י דְבַר־יְהוָ֛ה אֵלַ֖י בַּבֹּ֥קֶר לֵאמֹֽר׃ 8
ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
בֶּן־אָדָ֕ם הֲלֹ֨א אָמְר֥וּ אֵלֶ֛יךָ בֵּ֥ית יִשְׂרָאֵ֖ל בֵּ֣ית הַמֶּ֑רִי מָ֖ה אַתָּ֥ה עֹשֶֽׂה׃ 9
“ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?
אֱמֹ֣ר אֲלֵיהֶ֔ם כֹּ֥ה אָמַ֖ר אֲדֹנָ֣י יְהֹוִ֑ה הַנָּשִׂ֞יא הַמַּשָּׂ֤א הַזֶּה֙ בִּיר֣וּשָׁלַ֔ם וְכָל־בֵּ֥ית יִשְׂרָאֵ֖ל אֲשֶׁר־הֵ֥מָּה בְתֹוכָֽם׃ 10
೧೦ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’
אֱמֹ֖ר אֲנִ֣י מֹֽופֶתְכֶ֑ם כַּאֲשֶׁ֣ר עָשִׂ֗יתִי כֵּ֚ן יֵעָשֶׂ֣ה לָהֶ֔ם בַּגֹּולָ֥ה בַשְּׁבִ֖י יֵלֵֽכוּ׃ 11
೧೧ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.
וְהַנָּשִׂ֨יא אֲשֶׁר־בְּתֹוכָ֜ם אֶל־כָּתֵ֤ף יִשָּׂא֙ בָּעֲלָטָ֣ה וְיֵצֵ֔א בַּקִּ֥יר יַחְתְּר֖וּ לְהֹ֣וצִיא בֹ֑ו פָּנָ֣יו יְכַסֶּ֔ה יַ֗עַן אֲשֶׁ֨ר לֹא־יִרְאֶ֥ה לַעַ֣יִן ה֖וּא אֶת־הָאָֽרֶץ׃ 12
೧೨ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’
וּפָרַשְׂתִּ֤י אֶת־רִשְׁתִּי֙ עָלָ֔יו וְנִתְפַּ֖שׂ בִּמְצֽוּדָתִ֑י וְהֵבֵאתִ֨י אֹתֹ֤ו בָבֶ֙לָה֙ אֶ֣רֶץ כַּשְׂדִּ֔ים וְאֹותָ֥הּ לֹֽא־יִרְאֶ֖ה וְשָׁ֥ם יָמֽוּת׃ 13
೧೩ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.
וְכֹל֩ אֲשֶׁ֨ר סְבִיבֹתָ֥יו עֶזְרֹה (עֶזְרֹ֛ו) וְכָל־אֲגַפָּ֖יו אֱזָרֶ֣ה לְכָל־ר֑וּחַ וְחֶ֖רֶב אָרִ֥יק אַחֲרֵיהֶֽם׃ 14
೧೪ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
וְיָדְע֖וּ כִּֽי־אֲנִ֣י יְהוָ֑ה בַּהֲפִיצִ֤י אֹותָם֙ בַּגֹּויִ֔ם וְזֵרִיתִ֥י אֹותָ֖ם בָּאֲרָצֹֽות׃ 15
೧೫“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.
וְהֹותַרְתִּ֤י מֵהֶם֙ אַנְשֵׁ֣י מִסְפָּ֔ר מֵחֶ֖רֶב מֵרָעָ֣ב וּמִדָּ֑בֶר לְמַ֨עַן יְסַפְּר֜וּ אֶת־כָּל־תֹּועֲבֹֽותֵיהֶ֗ם בַּגֹּויִם֙ אֲשֶׁר־בָּ֣אוּ שָׁ֔ם וְיָדְע֖וּ כִּֽי־אֲנִ֥י יְהוָֽה׃ פ 16
೧೬ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”
וַיְהִ֥י דְבַר־יְהוָ֖ה אֵלַ֥י לֵאמֹֽר׃ 17
೧೭ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֕ם לַחְמְךָ֖ בְּרַ֣עַשׁ תֹּאכֵ֑ל וּמֵימֶ֕יךָ בְּרָגְזָ֥ה וּבִדְאָגָ֖ה תִּשְׁתֶּֽה׃ 18
೧೮“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.
וְאָמַרְתָּ֣ אֶל־עַ֣ם הָאָ֡רֶץ כֹּֽה־אָמַר֩ אֲדֹנָ֨י יְהוִ֜ה לְיֹושְׁבֵ֤י יְרוּשָׁלַ֙͏ִם֙ אֶל־אַדְמַ֣ת יִשְׂרָאֵ֔ל לַחְמָם֙ בִּדְאָגָ֣ה יֹאכֵ֔לוּ וּמֵֽימֵיהֶ֖ם בְּשִׁמָּמֹ֣ון יִשְׁתּ֑וּ לְמַ֜עַן תֵּשַׁ֤ם אַרְצָהּ֙ מִמְּלֹאָ֔הּ מֵחֲמַ֖ס כָּֽל־הַיֹּשְׁבִ֥ים בָּֽהּ׃ 19
೧೯ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.
וְהֶעָרִ֤ים הַנֹּֽושָׁבֹות֙ תֶּחֱרַ֔בְנָה וְהָאָ֖רֶץ שְׁמָמָ֣ה תִֽהְיֶ֑ה וִֽידַעְתֶּ֖ם כִּֽי־אֲנִ֥י יְהוָֽה׃ פ 20
೨೦ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
וַיְהִ֥י דְבַר־יְהוָ֖ה אֵלַ֥י לֵאמֹֽר׃ 21
೨೧ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֗ם מָֽה־הַמָּשָׁ֤ל הַזֶּה֙ לָכֶ֔ם עַל־אַדְמַ֥ת יִשְׂרָאֵ֖ל לֵאמֹ֑ר יַֽאַרְכוּ֙ הַיָּמִ֔ים וְאָבַ֖ד כָּל־חָזֹֽון׃ 22
೨೨“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”
לָכֵ֞ן אֱמֹ֣ר אֲלֵיהֶ֗ם כֹּֽה־אָמַר֮ אֲדֹנָ֣י יְהוִה֒ הִשְׁבַּ֙תִּי֙ אֶת־הַמָּשָׁ֣ל הַזֶּ֔ה וְלֹֽא־יִמְשְׁל֥וּ אֹתֹ֛ו עֹ֖וד בְּיִשְׂרָאֵ֑ל כִּ֚י אִם־דַּבֵּ֣ר אֲלֵיהֶ֔ם קָֽרְבוּ֙ הַיָּמִ֔ים וּדְבַ֖ר כָּל־חָזֹֽון׃ 23
೨೩ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
כִּ֠י לֹ֣א יִֽהְיֶ֥ה עֹ֛וד כָּל־חֲזֹ֥ון שָׁ֖וְא וּמִקְסַ֣ם חָלָ֑ק בְּתֹ֖וךְ בֵּ֥ית יִשְׂרָאֵֽל׃ 24
೨೪ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.
כִּ֣י ׀ אֲנִ֣י יְהוָ֗ה אֲדַבֵּר֙ אֵת֩ אֲשֶׁ֨ר אֲדַבֵּ֤ר דָּבָר֙ וְיֵ֣עָשֶׂ֔ה לֹ֥א תִמָּשֵׁ֖ךְ עֹ֑וד כִּ֣י בִֽימֵיכֶ֞ם בֵּ֣ית הַמֶּ֗רִי אֲדַבֵּ֤ר דָּבָר֙ וַעֲשִׂיתִ֔יו נְאֻ֖ם אֲדֹנָ֥י יְהוִֽה׃ פ 25
೨೫ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.
וַיְהִ֥י דְבַר־יְהוָ֖ה אֵלַ֥י לֵאמֹֽר׃ 26
೨೬ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֗ם הִנֵּ֤ה בֵֽית־יִשְׂרָאֵל֙ אֹֽמְרִ֔ים הֶחָזֹ֛ון אֲשֶׁר־ה֥וּא חֹזֶ֖ה לְיָמִ֣ים רַבִּ֑ים וּלְעִתִּ֥ים רְחֹוקֹ֖ות ה֥וּא נִבָּֽא׃ 27
೨೭“ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.
לָכֵ֞ן אֱמֹ֣ר אֲלֵיהֶ֗ם כֹּ֤ה אָמַר֙ אֲדֹנָ֣י יְהוִ֔ה לֹא־תִמָּשֵׁ֥ךְ עֹ֖וד כָּל־דְּבָרָ֑י אֲשֶׁ֨ר אֲדַבֵּ֤ר דָּבָר֙ וְיֵ֣עָשֶׂ֔ה נְאֻ֖ם אֲדֹנָ֥י יְהוִֽה׃ ס 28
೨೮“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”

< יְחֶזְקֵאל 12 >