< יְחֶזְקֵאל 13 >

וַיְהִ֥י דְבַר־יְהוָ֖ה אֵלַ֥י לֵאמֹֽר׃ 1
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֕ם הִנָּבֵ֛א אֶל־נְבִיאֵ֥י יִשְׂרָאֵ֖ל הַנִּבָּאִ֑ים וְאָֽמַרְתָּ֙ לִנְבִיאֵ֣י מִלִּבָּ֔ם שִׁמְע֖וּ דְּבַר־יְהוָֽה׃ 2
“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.
כֹּ֤ה אָמַר֙ אֲדֹנָ֣י יְהוִ֔ה הֹ֖וי עַל־הַנְּבִיאִ֣ים הַנְּבָלִ֑ים אֲשֶׁ֥ר הֹלְכִ֛ים אַחַ֥ר רוּחָ֖ם וּלְבִלְתִּ֥י רָאֽוּ׃ 3
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!
כְּשֻׁעָלִ֖ים בָּחֳרָבֹ֑ות נְבִיאֶ֥יךָ יִשְׂרָאֵ֖ל הָיֽוּ׃ 4
ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.
לֹ֤א עֲלִיתֶם֙ בַּפְּרָצֹ֔ות וַתִּגְדְּר֥וּ גָדֵ֖ר עַל־בֵּ֣ית יִשְׂרָאֵ֑ל לַעֲמֹ֥ד בַּמִּלְחָמָ֖ה בְּיֹ֥ום יְהוָֽה׃ 5
ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,
חָ֤זוּ שָׁוְא֙ וְקֶ֣סֶם כָּזָ֔ב הָאֹֽמְרִים֙ נְאֻם־יְהוָ֔ה וַֽיהוָ֖ה לֹ֣א שְׁלָחָ֑ם וְיִֽחֲל֖וּ לְקַיֵּ֥ם דָּבָֽר׃ 6
ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
הֲלֹ֤וא מַֽחֲזֵה־שָׁוְא֙ חֲזִיתֶ֔ם וּמִקְסַ֥ם כָּזָ֖ב אֲמַרְתֶּ֑ם וְאֹֽמְרִים֙ נְאֻם־יְהוָ֔ה וַאֲנִ֖י לֹ֥א דִבַּֽרְתִּי׃ ס 7
ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.
לָכֵ֗ן כֹּ֤ה אָמַר֙ אֲדֹנָ֣י יְהוִ֔ה יַ֚עַן דַּבֶּרְכֶ֣ם שָׁ֔וְא וַחֲזִיתֶ֖ם כָּזָ֑ב לָכֵן֙ הִנְנִ֣י אֲלֵיכֶ֔ם נְאֻ֖ם אֲדֹנָ֥י יְהוִֽה׃ 8
“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.
וְהָיְתָ֣ה יָדִ֗י אֶֽל־הַנְּבִיאִ֞ים הַחֹזִ֣ים שָׁוְא֮ וְהַקֹּסְמִ֣ים כָּזָב֒ בְּסֹ֧וד עַמִּ֣י לֹֽא־יִהְי֗וּ וּבִכְתָ֤ב בֵּֽית־יִשְׂרָאֵל֙ לֹ֣א יִכָּתֵ֔בוּ וְאֶל־אַדְמַ֥ת יִשְׂרָאֵ֖ל לֹ֣א יָבֹ֑אוּ וִידַעְתֶּ֕ם כִּ֥י אֲנִ֖י אֲדֹנָ֥י יְהוִֽה׃ 9
‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
יַ֣עַן וּבְיַ֜עַן הִטְע֧וּ אֶת־עַמִּ֛י לֵאמֹ֥ר שָׁלֹ֖ום וְאֵ֣ין שָׁלֹ֑ום וְהוּא֙ בֹּ֣נֶה חַ֔יִץ וְהִנָּ֛ם טָחִ֥ים אֹתֹ֖ו תָּפֵֽל׃ 10
೧೦“ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;
אֱמֹ֛ר אֶל־טָחֵ֥י תָפֵ֖ל וְיִפֹּ֑ל הָיָ֣ה ׀ גֶּ֣שֶׁם שֹׁוטֵ֗ף וְאַתֵּ֜נָה אַבְנֵ֤י אֶלְגָּבִישׁ֙ תִּפֹּ֔לְנָה וְר֥וּחַ סְעָרֹ֖ות תְּבַקֵּֽעַ׃ 11
೧೧ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
וְהִנֵּ֖ה נָפַ֣ל הַקִּ֑יר הֲלֹוא֙ יֵאָמֵ֣ר אֲלֵיכֶ֔ם אַיֵּ֥ה הַטִּ֖יחַ אֲשֶׁ֥ר טַחְתֶּֽם׃ ס 12
೧೨ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”
לָכֵ֗ן כֹּ֤ה אָמַר֙ אֲדֹנָ֣י יְהוִ֔ה וּבִקַּעְתִּ֥י רֽוּחַ־סְעָרֹ֖ות בַּֽחֲמָתִ֑י וְגֶ֤שֶׁם שֹׁטֵף֙ בְּאַפִּ֣י יִֽהְיֶ֔ה וְאַבְנֵ֥י אֶלְגָּבִ֖ישׁ בְּחֵמָ֥ה לְכָלָֽה׃ 13
೧೩ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;
וְהָ֨רַסְתִּ֜י אֶת־הַקִּ֨יר אֲשֶׁר־טַחְתֶּ֥ם תָּפֵ֛ל וְהִגַּעְתִּ֥יהוּ אֶל־הָאָ֖רֶץ וְנִגְלָ֣ה יְסֹדֹ֑ו וְנָֽפְלָה֙ וּכְלִיתֶ֣ם בְּתֹוכָ֔הּ וִֽידַעְתֶּ֖ם כִּֽי־אֲנִ֥י יְהוָֽה׃ 14
೧೪ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
וְכִלֵּיתִ֤י אֶת־חֲמָתִי֙ בַּקִּ֔יר וּבַטָּחִ֥ים אֹתֹ֖ו תָּפֵ֑ל וְאֹמַ֤ר לָכֶם֙ אֵ֣ין הַקִּ֔יר וְאֵ֖ין הַטָּחִ֥ים אֹתֹֽו׃ 15
೧೫ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,
נְבִיאֵ֣י יִשְׂרָאֵ֗ל הַֽנִבְּאִים֙ אֶל־יְר֣וּשָׁלַ֔͏ִם וְהַחֹזִ֥ים לָ֖הּ חֲזֹ֣ון שָׁלֹ֑ם וְאֵ֣ין שָׁלֹ֔ם נְאֻ֖ם אֲדֹנָ֥י יְהֹוִֽה׃ פ 16
೧೬‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.
וְאַתָּ֣ה בֶן־אָדָ֗ם שִׂ֤ים פָּנֶ֙יךָ֙ אֶל־בְּנֹ֣ות עַמְּךָ֔ הַמִּֽתְנַבְּאֹ֖ות מִֽלִּבְּהֶ֑ן וְהִנָּבֵ֖א עֲלֵיהֶֽן׃ 17
೧೭“‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’
וְאָמַרְתָּ֞ כֹּה־אָמַ֣ר ׀ אֲדֹנָ֣י יְהוִ֗ה הֹוי֩ לִֽמְתַפְּרֹ֨ות כְּסָתֹ֜ות עַ֣ל ׀ כָּל־אַצִּילֵ֣י יָדַ֗י וְעֹשֹׂ֧ות הַמִּסְפָּחֹ֛ות עַל־רֹ֥אשׁ כָּל־קֹומָ֖ה לְצֹודֵ֣ד נְפָשֹׁ֑ות הַנְּפָשֹׁות֙ תְּצֹודֵ֣דְנָה לְעַמִּ֔י וּנְפָשֹׁ֖ות לָכֶ֥נָה תְחַיֶּֽינָה׃ 18
೧೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?
וַתְּחַלֶּלְ֨נָה אֹתִ֜י אֶל־עַמִּ֗י בְּשַׁעֲלֵ֣י שְׂעֹרִים֮ וּבִפְתֹ֣ותֵי לֶחֶם֒ לְהָמִ֤ית נְפָשֹׁות֙ אֲשֶׁ֣ר לֹֽא־תְמוּתֶ֔נָה וּלְחַיֹּ֥ות נְפָשֹׁ֖ות אֲשֶׁ֣ר לֹא־תִֽחְיֶ֑ינָה בְּכַ֨זֶּבְכֶ֔ם לְעַמִּ֖י שֹׁמְעֵ֥י כָזָֽב׃ ס 19
೧೯ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’
לָכֵ֞ן כֹּה־אָמַ֣ר ׀ אֲדֹנָ֣י יְהוִ֗ה הִנְנִ֤י אֶל־כִּסְּתֹותֵיכֶ֙נָה֙ אֲשֶׁ֣ר אַ֠תֵּנָה מְצֹדְדֹ֨ות שָׁ֤ם אֶת־הַנְּפָשֹׁות֙ לְפֹ֣רְחֹ֔ות וְקָרַעְתִּ֣י אֹתָ֔ם מֵעַ֖ל זְרֹועֹֽתֵיכֶ֑ם וְשִׁלַּחְתִּי֙ אֶת־הַנְּפָשֹׁ֔ות אֲשֶׁ֥ר אַתֶּ֛ם מְצֹדְדֹ֥ות אֶת־נְפָשִׁ֖ים לְפֹרְחֹֽת׃ 20
೨೦“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
וְקָרַעְתִּ֞י אֶת־מִסְפְּחֹֽתֵיכֶ֗ם וְהִצַּלְתִּ֤י אֶת־עַמִּי֙ מִיֶּדְכֶ֔ן וְלֹֽא־יִהְי֥וּ עֹ֛וד בְּיֶדְכֶ֖ן לִמְצוּדָ֑ה וִֽידַעְתֶּ֖ן כִּֽי־אֲנִ֥י יְהוָֽה׃ 21
೨೧ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
יַ֣עַן הַכְאֹ֤ות לֵב־צַדִּיק֙ שֶׁ֔קֶר וַאֲנִ֖י לֹ֣א הִכְאַבְתִּ֑יו וּלְחַזֵּק֙ יְדֵ֣י רָשָׁ֔ע לְבִלְתִּי־שׁ֛וּב מִדַּרְכֹּ֥ו הָרָ֖ע לְהַחֲיֹתֹֽו׃ 22
೨೨ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
לָכֵ֗ן שָׁ֚וְא לֹ֣א תֶחֱזֶ֔ינָה וְקֶ֖סֶם לֹא־תִקְסַ֣מְנָה עֹ֑וד וְהִצַּלְתִּ֤י אֶת־עַמִּי֙ מִיֶּדְכֶ֔ן וִֽידַעְתֶּ֖ן כִּֽי־אֲנִ֥י יְהוָֽה׃ 23
೨೩ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”

< יְחֶזְקֵאל 13 >