< יְחֶזְקֵאל 21 >

וַיְהִ֥י דְבַר־יְהוָ֖ה אֵלַ֥י לֵאמֹֽר׃ 1
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֗ם שִׂ֤ים פָּנֶ֙יךָ֙ אֶל־יְר֣וּשָׁלַ֔͏ִם וְהַטֵּ֖ף אֶל־מִקְדָּשִׁ֑ים וְהִנָּבֵ֖א אֶל־אַדְמַ֥ת יִשְׂרָאֵֽל׃ 2
“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,
וְאָמַרְתָּ֞ לְאַדְמַ֣ת יִשְׂרָאֵ֗ל כֹּ֚ה אָמַ֣ר יְהוָ֔ה הִנְנִ֣י אֵלַ֔יִךְ וְהֹוצֵאתִ֥י חַרְבִּ֖י מִתַּעְרָ֑הּ וְהִכְרַתִּ֥י מִמֵּ֖ךְ צַדִּ֥יק וְרָשָֽׁע׃ 3
ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
יַ֛עַן אֲשֶׁר־הִכְרַ֥תִּי מִמֵּ֖ךְ צַדִּ֣יק וְרָשָׁ֑ע לָ֠כֵן תֵּצֵ֨א חַרְבִּ֧י מִתַּעְרָ֛הּ אֶל־כָּל־בָּשָׂ֖ר מִנֶּ֥גֶב צָפֹֽון׃ 4
ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.
וְיָֽדְעוּ֙ כָּל־בָּשָׂ֔ר כִּ֚י אֲנִ֣י יְהוָ֔ה הֹוצֵ֥אתִי חַרְבִּ֖י מִתַּעְרָ֑הּ לֹ֥א תָשׁ֖וּב עֹֽוד׃ ס 5
ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”
וְאַתָּ֥ה בֶן־אָדָ֖ם הֵֽאָנַ֑ח בְּשִׁבְרֹ֤ון מָתְנַ֙יִם֙ וּבִמְרִיר֔וּת תֵּֽאָנַ֖ח לְעֵינֵיהֶֽם׃ 6
“ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
וְהָיָה֙ כִּֽי־יֹאמְר֣וּ אֵלֶ֔יךָ עַל־מָ֖ה אַתָּ֣ה נֶאֱנָ֑ח וְאָמַרְתָּ֡ אֶל־שְׁמוּעָ֣ה כִֽי־בָאָ֡ה וְנָמֵ֣ס כָּל־לֵב֩ וְרָפ֨וּ כָל־יָדַ֜יִם וְכִהֲתָ֣ה כָל־ר֗וּחַ וְכָל־בִּרְכַּ֙יִם֙ תֵּלַ֣כְנָה מַּ֔יִם הִנֵּ֤ה בָאָה֙ וְנִֽהְיָ֔תָה נְאֻ֖ם אֲדֹנָ֥י יְהוִֽה׃ פ 7
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”
וַיְהִ֥י דְבַר־יְהוָ֖ה אֵלַ֥י לֵאמֹֽר׃ 8
ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָ֕ם הִנָּבֵא֙ וְאָ֣מַרְתָּ֔ כֹּ֖ה אָמַ֣ר אֲדֹנָ֑י אֱמֹ֕ר חֶ֥רֶב חֶ֛רֶב הוּחַ֖דָּה וְגַם־מְרוּטָֽה׃ 9
“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!
לְמַ֨עַן טְבֹ֤חַ טֶ֙בַח֙ הוּחַ֔דָּה לְמַעַן־הֱיֵה־לָ֥הּ בָּ֖רָק מֹרָ֑טָּה אֹ֣ו נָשִׂ֔ישׂ שֵׁ֥בֶט בְּנִ֖י מֹאֶ֥סֶת כָּל־עֵֽץ׃ 10
೧೦ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?
וַיִּתֵּ֥ן אֹתָ֛הּ לְמָרְטָ֖ה לִתְפֹּ֣שׂ בַּכָּ֑ף הִֽיא־הוּחַ֤דָּה חֶ֙רֶב֙ וְהִ֣יא מֹרָ֔טָּה לָתֵ֥ת אֹותָ֖הּ בְּיַד־הֹורֵֽג׃ 11
೧೧ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.
זְעַ֤ק וְהֵילֵל֙ בֶּן־אָדָ֔ם כִּי־הִיא֙ הָיתָ֣ה בְעַמִּ֔י הִ֖יא בְּכָל־נְשִׂיאֵ֣י יִשְׂרָאֵ֑ל מְגוּרֵ֤י אֶל־חֶ֙רֶב֙ הָי֣וּ אֶת־עַמִּ֔י לָכֵ֖ן סְפֹ֥ק אֶל־יָרֵֽךְ׃ 12
೧೨ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”
כִּ֣י בֹ֔חַן וּמָ֕ה אִם־גַּם־שֵׁ֥בֶט מֹאֶ֖סֶת לֹ֣א יִֽהְיֶ֑ה נְאֻ֖ם אֲדֹנָ֥י יְהוִֽה׃ פ 13
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?
וְאַתָּ֣ה בֶן־אָדָ֔ם הִנָּבֵ֕א וְהַ֖ךְ כַּ֣ף אֶל־כָּ֑ף וְתִכָּפֵ֞ל חֶ֤רֶב שְׁלִישִׁ֙תָה֙ חֶ֣רֶב חֲלָלִ֔ים הִ֗יא חֶ֚רֶב חָלָ֣ל הַגָּדֹ֔ול הַחֹדֶ֖רֶת לָהֶֽם׃ 14
೧೪ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!
לְמַ֣עַן ׀ לָמ֣וּג לֵ֗ב וְהַרְבֵּה֙ הַמִּכְשֹׁלִ֔ים עַ֚ל כָּל־שַׁ֣עֲרֵיהֶ֔ם נָתַ֖תִּי אִבְחַת־חָ֑רֶב אָ֛ח עֲשׂוּיָ֥ה לְבָרָ֖ק מְעֻטָּ֥ה לְטָֽבַח׃ 15
೧೫ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
הִתְאַחֲדִ֥י הֵימִ֖נִי הָשִׂ֣ימִי הַשְׂמִ֑ילִי אָ֖נָה פָּנַ֥יִךְ מֻעָדֹֽות׃ 16
೧೬ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.
וְגַם־אֲנִ֗י אַכֶּ֤ה כַפִּי֙ אֶל־כַּפִּ֔י וַהֲנִחֹתִ֖י חֲמָתִ֑י אֲנִ֥י יְהוָ֖ה דִּבַּֽרְתִּי׃ פ 17
೧೭ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”
וַיְהִ֥י דְבַר־יְהוָ֖ה אֵלַ֥י לֵאמֹֽר׃ 18
೧೮ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು,
וְאַתָּ֨ה בֶן־אָדָ֜ם שִׂים־לְךָ֣ ׀ שְׁנַ֣יִם דְּרָכִ֗ים לָבֹוא֙ חֶ֣רֶב מֶֽלֶךְ־בָּבֶ֔ל מֵאֶ֥רֶץ אֶחָ֖ד יֵצְא֣וּ שְׁנֵיהֶ֑ם וְיָ֣ד בָּרֵ֔א בְּרֹ֥אשׁ דֶּֽרֶךְ־עִ֖יר בָּרֵֽא׃ 19
೧೯“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
דֶּ֣רֶךְ תָּשִׂ֔ים לָבֹ֣וא חֶ֔רֶב אֵ֖ת רַבַּ֣ת בְּנֵֽי־עַמֹּ֑ון וְאֶת־יְהוּדָ֥ה בִירוּשָׁלַ֖͏ִם בְּצוּרָֽה׃ 20
೨೦ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
כִּֽי־עָמַ֨ד מֶלֶךְ־בָּבֶ֜ל אֶל־אֵ֣ם הַדֶּ֗רֶךְ בְּרֹ֛אשׁ שְׁנֵ֥י הַדְּרָכִ֖ים לִקְסָם־קָ֑סֶם קִלְקַ֤ל בַּֽחִצִּים֙ שָׁאַ֣ל בַּתְּרָפִ֔ים רָאָ֖ה בַּכָּבֵֽד׃ 21
೨೧“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.
בִּֽימִינֹ֞ו הָיָ֣ה ׀ הַקֶּ֣סֶם יְרוּשָׁלַ֗͏ִם לָשׂ֤וּם כָּרִים֙ לִפְתֹּ֤חַ פֶּה֙ בְּרֶ֔צַח לְהָרִ֥ים קֹ֖ול בִּתְרוּעָ֑ה לָשׂ֤וּם כָּרִים֙ עַל־שְׁעָרִ֔ים לִשְׁפֹּ֥ךְ סֹלְלָ֖ה לִבְנֹ֥ות דָּיֵֽק׃ 22
೨೨ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
וְהָיָ֨ה לָהֶ֤ם כִּקְסֹום־ (כִּקְסָם)־שָׁוְא֙ בְּעֵ֣ינֵיהֶ֔ם שְׁבֻעֵ֥י שְׁבֻעֹ֖ות לָהֶ֑ם וְהֽוּא־מַזְכִּ֥יר עָוֹ֖ן לְהִתָּפֵֽשׂ׃ פ 23
೨೩ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”
לָכֵ֗ן כֹּֽה־אָמַר֮ אֲדֹנָ֣י יְהוִה֒ יַ֗עַן הַזְכַּרְכֶם֙ עֲוֹ֣נְכֶ֔ם בְּהִגָּלֹ֣ות פִּשְׁעֵיכֶ֗ם לְהֵֽרָאֹות֙ חַטֹּ֣אותֵיכֶ֔ם בְּכֹ֖ל עֲלִילֹֽותֵיכֶ֑ם יַ֚עַן הִזָּ֣כֶרְכֶ֔ם בַּכַּ֖ף תִּתָּפֵֽשׂוּ׃ פ 24
೨೪ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.
וְאַתָּה֙ חָלָ֣ל רָשָׁ֔ע נְשִׂ֖יא יִשְׂרָאֵ֑ל אֲשֶׁר־בָּ֣א יֹומֹ֔ו בְּעֵ֖ת עֲוֹ֥ן קֵֽץ׃ ס 25
೨೫ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”
כֹּ֤ה אָמַר֙ אֲדֹנָ֣י יְהוִ֔ה הָסִיר֙ הַמִּצְנֶ֔פֶת וְהָרִ֖ים הָֽעֲטָרָ֑ה זֹ֣את לֹא־זֹ֔את הַשָּׁפָ֣לָה הַגְבֵּ֔הַ וְהַגָּבֹ֖הַ הַשְׁפִּֽיל׃ 26
೨೬ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.
עַוָּ֥ה עַוָּ֖ה עַוָּ֣ה אֲשִׂימֶ֑נָּה גַּם־זֹאת֙ לֹ֣א הָיָ֔ה עַד־בֹּ֛א אֲשֶׁר־לֹ֥ו הַמִּשְׁפָּ֖ט וּנְתַתִּֽיו׃ פ 27
೨೭ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”
וְאַתָּ֣ה בֶן־אָדָ֗ם הִנָּבֵ֤א וְאָֽמַרְתָּ֙ כֹּ֤ה אָמַר֙ אֲדֹנָ֣י יְהֹוִ֔ה אֶל־בְּנֵ֥י עַמֹּ֖ון וְאֶל־חֶרְפָּתָ֑ם וְאָמַרְתָּ֗ חֶ֣רֶב חֶ֤רֶב פְּתוּחָה֙ לְטֶ֣בַח מְרוּטָ֔ה לְהָכִ֖יל לְמַ֥עַן בָּרָֽק׃ 28
೨೮ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
בַּחֲזֹ֥ות לָךְ֙ שָׁ֔וְא בִּקְסָם־לָ֖ךְ כָּזָ֑ב לָתֵ֣ת אֹותָ֗ךְ אֶֽל־צַוְּארֵי֙ חַֽלְלֵ֣י רְשָׁעִ֔ים אֲשֶׁר־בָּ֣א יֹומָ֔ם בְּעֵ֖ת עֲוֹ֥ן קֵֽץ׃ 29
೨೯ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
הָשַׁ֖ב אֶל־תַּעְרָ֑הּ בִּמְקֹ֧ום אֲשֶׁר־נִבְרֵ֛את בְּאֶ֥רֶץ מְכֻרֹותַ֖יִךְ אֶשְׁפֹּ֥ט אֹתָֽךְ׃ 30
೩೦“‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.
וְשָׁפַכְתִּ֤י עָלַ֙יִךְ֙ זַעְמִ֔י בְּאֵ֥שׁ עֶבְרָתִ֖י אָפִ֣יחַ עָלָ֑יִךְ וּנְתַתִּ֗יךְ בְּיַד֙ אֲנָשִׁ֣ים בֹּֽעֲרִ֔ים חָרָשֵׁ֖י מַשְׁחִֽית׃ 31
೩೧ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.
לָאֵ֤שׁ תִּֽהְיֶה֙ לְאָכְלָ֔ה דָּמֵ֥ךְ יִהְיֶ֖ה בְּתֹ֣וךְ הָאָ֑רֶץ לֹ֣א תִזָּכֵ֔רִי כִּ֛י אֲנִ֥י יְהוָ֖ה דִּבַּֽרְתִּי׃ פ 32
೩೨ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

< יְחֶזְקֵאל 21 >