< יְחֶזְקֵאל 37 >

הָיְתָ֣ה עָלַי֮ יַד־יְהוָה֒ וַיֹּוצִאֵ֤נִי בְר֙וּחַ֙ יְהוָ֔ה וַיְנִיחֵ֖נִי בְּתֹ֣וךְ הַבִּקְעָ֑ה וְהִ֖יא מְלֵאָ֥ה עֲצָמֹֽות׃ 1
ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.
וְהֶעֱבִירַ֥נִי עֲלֵיהֶ֖ם סָבִ֣יב ׀ סָבִ֑יב וְהִנֵּ֨ה רַבֹּ֤ות מְאֹד֙ עַל־פְּנֵ֣י הַבִּקְעָ֔ה וְהִנֵּ֖ה יְבֵשֹׁ֥ות מְאֹֽד׃ 2
ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
וַיֹּ֣אמֶר אֵלַ֔י בֶּן־אָדָ֕ם הֲתִחְיֶ֖ינָה הָעֲצָמֹ֣ות הָאֵ֑לֶּה וָאֹמַ֕ר אֲדֹנָ֥י יְהוִ֖ה אַתָּ֥ה יָדָֽעְתָּ׃ 3
ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.
וַיֹּ֣אמֶר אֵלַ֔י הִנָּבֵ֖א עַל־הָעֲצָמֹ֣ות הָאֵ֑לֶּה וְאָמַרְתָּ֣ אֲלֵיהֶ֔ם הָעֲצָמֹות֙ הַיְבֵשֹׁ֔ות שִׁמְע֖וּ דְּבַר־יְהוָֽה׃ 4
ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ,
כֹּ֤ה אָמַר֙ אֲדֹנָ֣י יְהוִ֔ה לָעֲצָמֹ֖ות הָאֵ֑לֶּה הִנֵּ֨ה אֲנִ֜י מֵבִ֥יא בָכֶ֛ם ר֖וּחַ וִחְיִיתֶֽם׃ 5
ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;
וְנָתַתִּי֩ עֲלֵיכֶ֨ם גִּדִ֜ים וְֽהַעֲלֵתִ֧י עֲלֵיכֶ֣ם בָּשָׂ֗ר וְקָרַמְתִּ֤י עֲלֵיכֶם֙ עֹ֔ור וְנָתַתִּ֥י בָכֶ֛ם ר֖וּחַ וִחְיִיתֶ֑ם וִידַעְתֶּ֖ם כִּֽי־אֲנִ֥י יְהוָֽה׃ 6
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’”
וְנִבֵּ֖אתִי כַּאֲשֶׁ֣ר צֻוֵּ֑יתִי וַֽיְהִי־קֹ֤ול כְּהִנָּֽבְאִי֙ וְהִנֵּה־רַ֔עַשׁ וַתִּקְרְב֣וּ עֲצָמֹ֔ות עֶ֖צֶם אֶל־עַצְמֹֽו׃ 7
ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
וְרָאִ֜יתִי וְהִנֵּֽה־עֲלֵיהֶ֤ם גִּדִים֙ וּבָשָׂ֣ר עָלָ֔ה וַיִּקְרַ֧ם עֲלֵיהֶ֛ם עֹ֖ור מִלְמָ֑עְלָה וְר֖וּחַ אֵ֥ין בָּהֶֽם׃ 8
ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
וַיֹּ֣אמֶר אֵלַ֔י הִנָּבֵ֖א אֶל־הָר֑וּחַ הִנָּבֵ֣א בֶן־אָ֠דָם וְאָמַרְתָּ֙ אֶל־הָר֜וּחַ כֹּֽה־אָמַ֣ר ׀ אֲדֹנָ֣י יְהוִ֗ה מֵאַרְבַּ֤ע רוּחֹות֙ בֹּ֣אִי הָר֔וּחַ וּפְחִ֛י בַּהֲרוּגִ֥ים הָאֵ֖לֶּה וְיִֽחְיֽוּ׃ 9
ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’”
וְהִנַּבֵּ֖אתִי כַּאֲשֶׁ֣ר צִוָּ֑נִי וַתָּבֹוא֩ בָהֶ֨ם הָר֜וּחַ וַיִּֽחְי֗וּ וַיַּֽעַמְדוּ֙ עַל־רַגְלֵיהֶ֔ם חַ֖יִל גָּדֹ֥ול מְאֹד־מְאֹֽד׃ ס 10
ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು.
וַיֹּאמֶר֮ אֵלַי֒ בֶּן־אָדָ֕ם הָעֲצָמֹ֣ות הָאֵ֔לֶּה כָּל־בֵּ֥ית יִשְׂרָאֵ֖ל הֵ֑מָּה הִנֵּ֣ה אֹמְרִ֗ים יָבְשׁ֧וּ עַצְמֹותֵ֛ינוּ וְאָבְדָ֥ה תִקְוָתֵ֖נוּ נִגְזַ֥רְנוּ לָֽנוּ׃ 11
ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’
לָכֵן֩ הִנָּבֵ֨א וְאָמַרְתָּ֜ אֲלֵיהֶ֗ם כֹּֽה־אָמַר֮ אֲדֹנָ֣י יְהוִה֒ הִנֵּה֩ אֲנִ֨י פֹתֵ֜חַ אֶת־קִבְרֹֽותֵיכֶ֗ם וְהַעֲלֵיתִ֥י אֶתְכֶ֛ם מִקִּבְרֹותֵיכֶ֖ם עַמִּ֑י וְהֵבֵאתִ֥י אֶתְכֶ֖ם אֶל־אַדְמַ֥ת יִשְׂרָאֵֽל׃ ס 12
ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
וִֽידַעְתֶּ֖ם כִּֽי־אֲנִ֣י יְהוָ֑ה בְּפִתְחִ֣י אֶת־קִבְרֹֽותֵיכֶ֗ם וּבְהַעֲלֹותִ֥י אֶתְכֶ֛ם מִקִּבְרֹותֵיכֶ֖ם עַמִּֽי׃ 13
ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
וְנָתַתִּ֨י רוּחִ֤י בָכֶם֙ וִחְיִיתֶ֔ם וְהִנַּחְתִּ֥י אֶתְכֶ֖ם עַל־אַדְמַתְכֶ֑ם וִידַעְתֶּ֞ם כִּי־אֲנִ֧י יְהוָ֛ה דִּבַּ֥רְתִּי וְעָשִׂ֖יתִי נְאֻם־יְהוָֽה׃ פ 14
ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’”
וַיְהִ֥י דְבַר־יְהוָ֖ה אֵלַ֥י לֵאמֹֽר׃ 15
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
וְאַתָּ֣ה בֶן־אָדָ֗ם קַח־לְךָ֙ עֵ֣ץ אֶחָ֔ד וּכְתֹ֤ב עָלָיו֙ לִֽיהוּדָ֔ה וְלִבְנֵ֥י יִשְׂרָאֵ֖ל חֲבֵרֹו (חֲבֵרָ֑יו) וּלְקַח֙ עֵ֣ץ אֶחָ֔ד וּכְתֹ֣וב עָלָ֗יו לְיֹוסֵף֙ עֵ֣ץ אֶפְרַ֔יִם וְכָל־בֵּ֥ית יִשְׂרָאֵ֖ל חֲבֵרֹו (חֲבֵרָֽיו)׃ 16
“ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು.
וְקָרַ֨ב אֹתָ֜ם אֶחָ֧ד אֶל־אֶחָ֛ד לְךָ֖ לְעֵ֣ץ אֶחָ֑ד וְהָי֥וּ לַאֲחָדִ֖ים בְּיָדֶֽךָ׃ 17
ಆ ಎರಡನ್ನು ಒಂದೇ ಕೋಲಾಗುವ ಹಾಗೆ ಜೋಡಿಸು. ಅವು ಒಂದಾಗಿ ನಿನ್ನ ಕೈಯಲ್ಲಿರುವುವು.
וְכַֽאֲשֶׁר֙ יֹאמְר֣וּ אֵלֶ֔יךָ בְּנֵ֥י עַמְּךָ֖ לֵאמֹ֑ר הֲלֹֽוא־תַגִּ֥יד לָ֖נוּ מָה־אֵ֥לֶּה לָּֽךְ׃ 18
“‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ,
דַּבֵּ֣ר אֲלֵהֶ֗ם כֹּֽה־אָמַר֮ אֲדֹנָ֣י יְהוִה֒ הִנֵּה֩ אֲנִ֨י לֹקֵ֜חַ אֶת־עֵ֤ץ יֹוסֵף֙ אֲשֶׁ֣ר בְּיַד־אֶפְרַ֔יִם וְשִׁבְטֵ֥י יִשְׂרָאֵ֖ל חֶבְרֹו (חֲבֵרָ֑יו) וְנָתַתִּי֩ אֹותָ֨ם עָלָ֜יו אֶת־עֵ֣ץ יְהוּדָ֗ה וַֽעֲשִׂיתִם֙ לְעֵ֣ץ אֶחָ֔ד וְהָי֥וּ אֶחָ֖ד בְּיָדִֽי׃ 19
ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.
וְהָי֨וּ הָעֵצִ֜ים אֲ‍ֽשֶׁר־תִּכְתֹּ֧ב עֲלֵיהֶ֛ם בְּיָדְךָ֖ לְעֵינֵיהֶֽם׃ 20
ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು:
וְדַבֵּ֣ר אֲלֵיהֶ֗ם כֹּֽה־אָמַר֮ אֲדֹנָ֣י יְהוִה֒ הִנֵּ֨ה אֲנִ֤י לֹקֵ֙חַ֙ אֶת־בְּנֵ֣י יִשְׂרָאֵ֔ל מִבֵּ֥ין הַגֹּויִ֖ם אֲשֶׁ֣ר הָֽלְכוּ־שָׁ֑ם וְקִבַּצְתִּ֤י אֹתָם֙ מִסָּבִ֔יב וְהֵבֵאתִ֥י אֹותָ֖ם אֶל־אַדְמָתָֽם׃ 21
‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.
וְעָשִׂ֣יתִי אֹ֠תָם לְגֹ֨וי אֶחָ֤ד בָּאָ֙רֶץ֙ בְּהָרֵ֣י יִשְׂרָאֵ֔ל וּמֶ֧לֶךְ אֶחָ֛ד יִֽהְיֶ֥ה לְכֻלָּ֖ם לְמֶ֑לֶךְ וְלֹ֤א יִהְיֶה־ (יִֽהְיוּ)־עֹוד֙ לִשְׁנֵ֣י גֹויִ֔ם וְלֹ֨א יֵחָ֥צוּ עֹ֛וד לִשְׁתֵּ֥י מַמְלָכֹ֖ות עֹֽוד׃ 22
ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
וְלֹ֧א יִֽטַמְּא֣וּ עֹ֗וד בְּגִלּֽוּלֵיהֶם֙ וּבְשִׁקּ֣וּצֵיהֶ֔ם וּבְכֹ֖ל פִּשְׁעֵיהֶ֑ם וְהֹושַׁעְתִּ֣י אֹתָ֗ם מִכֹּ֤ל מֹושְׁבֹֽתֵיהֶם֙ אֲשֶׁ֣ר חָטְא֣וּ בָהֶ֔ם וְטִהַרְתִּ֤י אֹותָם֙ וְהָיוּ־לִ֣י לְעָ֔ם וַאֲנִ֕י אֶהְיֶ֥ה לָהֶ֖ם לֵאלֹהִֽים׃ 23
ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
וְעַבְדִּ֤י דָוִד֙ מֶ֣לֶךְ עֲלֵיהֶ֔ם וְרֹועֶ֥ה אֶחָ֖ד יִהְיֶ֣ה לְכֻלָּ֑ם וּבְמִשְׁפָּטַ֣י יֵלֵ֔כוּ וְחֻקֹּתַ֥י יִשְׁמְר֖וּ וְעָשׂ֥וּ אֹותָֽם׃ 24
“‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.
וְיָשְׁב֣וּ עַל־הָאָ֗רֶץ אֲשֶׁ֤ר נָתַ֙תִּי֙ לְעַבְדִּ֣י לְיַֽעֲקֹ֔ב אֲשֶׁ֥ר יָֽשְׁבוּ־בָ֖הּ אֲבֹֽותֵיכֶ֑ם וְיָשְׁב֣וּ עָלֶ֡יהָ הֵ֠מָּה וּבְנֵיהֶ֞ם וּבְנֵ֤י בְנֵיהֶם֙ עַד־עֹולָ֔ם וְדָוִ֣ד עַבְדִּ֔י נָשִׂ֥יא לָהֶ֖ם לְעֹולָֽם׃ 25
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.
וְכָרַתִּ֤י לָהֶם֙ בְּרִ֣ית שָׁלֹ֔ום בְּרִ֥ית עֹולָ֖ם יִהְיֶ֣ה אֹותָ֑ם וּנְתַתִּים֙ וְהִרְבֵּיתִ֣י אֹותָ֔ם וְנָתַתִּ֧י אֶת־מִקְדָּשִׁ֛י בְּתֹוכָ֖ם לְעֹולָֽם׃ 26
ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
וְהָיָ֤ה מִשְׁכָּנִי֙ עֲלֵיהֶ֔ם וְהָיִ֥יתִי לָהֶ֖ם לֵֽאלֹהִ֑ים וְהֵ֖מָּה יִֽהְיוּ־לִ֥י לְעָֽם׃ 27
ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.
וְיָֽדְעוּ֙ הַגֹּויִ֔ם כִּ֚י אֲנִ֣י יְהוָ֔ה מְקַדֵּ֖שׁ אֶת־יִשְׂרָאֵ֑ל בִּהְיֹ֧ות מִקְדָּשִׁ֛י בְּתֹוכָ֖ם לְעֹולָֽם׃ ס 28
ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’”

< יְחֶזְקֵאל 37 >