< בְּרֵאשִׁית 21 >

וֽ͏ַיהוָ֛ה פָּקַ֥ד אֶת־שָׂרָ֖ה כַּאֲשֶׁ֣ר אָמָ֑ר וַיַּ֧עַשׂ יְהוָ֛ה לְשָׂרָ֖ה כַּאֲשֶׁ֥ר דִּבֵּֽר׃ 1
ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
וַתַּהַר֩ וַתֵּ֨לֶד שָׂרָ֧ה לְאַבְרָהָ֛ם בֵּ֖ן לִזְקֻנָ֑יו לַמֹּועֵ֕ד אֲשֶׁר־דִּבֶּ֥ר אֹתֹ֖ו אֱלֹהִֽים׃ 2
ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
וַיִּקְרָ֨א אַבְרָהָ֜ם אֶֽת־שֶׁם־בְּנֹ֧ו הַנֹּֽולַד־לֹ֛ו אֲשֶׁר־יָלְדָה־לֹּ֥ו שָׂרָ֖ה יִצְחָֽק׃ 3
ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು.
וַיָּ֤מָל אַבְרָהָם֙ אֶת־יִצְחָ֣ק בְּנֹ֔ו בֶּן־שְׁמֹנַ֖ת יָמִ֑ים כַּאֲשֶׁ֛ר צִוָּ֥ה אֹתֹ֖ו אֱלֹהִֽים׃ 4
ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.
וְאַבְרָהָ֖ם בֶּן־מְאַ֣ת שָׁנָ֑ה בְּהִוָּ֣לֶד לֹ֔ו אֵ֖ת יִצְחָ֥ק בְּנֹֽו׃ 5
ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.
וַתֹּ֣אמֶר שָׂרָ֔ה צְחֹ֕ק עָ֥שָׂה לִ֖י אֱלֹהִ֑ים כָּל־הַשֹּׁמֵ֖עַ יִֽצְחַק־לִֽי׃ 6
ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
וַתֹּ֗אמֶר מִ֤י מִלֵּל֙ לְאַבְרָהָ֔ם הֵינִ֥יקָה בָנִ֖ים שָׂרָ֑ה כִּֽי־יָלַ֥דְתִּי בֵ֖ן לִזְקֻנָֽיו׃ 7
ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.
וַיִּגְדַּ֥ל הַיֶּ֖לֶד וַיִּגָּמַ֑ל וַיַּ֤עַשׂ אַבְרָהָם֙ מִשְׁתֶּ֣ה גָדֹ֔ול בְּיֹ֖ום הִגָּמֵ֥ל אֶת־יִצְחָֽק׃ 8
ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
וַתֵּ֨רֶא שָׂרָ֜ה אֶֽת־בֶּן־הָגָ֧ר הַמִּצְרִ֛ית אֲשֶׁר־יָלְדָ֥ה לְאַבְרָהָ֖ם מְצַחֵֽק׃ 9
ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
וַתֹּ֙אמֶר֙ לְאַבְרָהָ֔ם גָּרֵ֛שׁ הָאָמָ֥ה הַזֹּ֖את וְאֶת־בְּנָ֑הּ כִּ֣י לֹ֤א יִירַשׁ֙ בֶּן־הָאָמָ֣ה הַזֹּ֔את עִם־בְּנִ֖י עִם־יִצְחָֽק׃ 10
೧೦ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
וַיֵּ֧רַע הַדָּבָ֛ר מְאֹ֖ד בְּעֵינֵ֣י אַבְרָהָ֑ם עַ֖ל אֹודֹ֥ת בְּנֹֽו׃ 11
೧೧ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.
וַיֹּ֨אמֶר אֱלֹהִ֜ים אֶל־אַבְרָהָ֗ם אַל־יֵרַ֤ע בְּעֵינֶ֙יךָ֙ עַל־הַנַּ֣עַר וְעַל־אֲמָתֶ֔ךָ כֹּל֩ אֲשֶׁ֨ר תֹּאמַ֥ר אֵלֶ֛יךָ שָׂרָ֖ה שְׁמַ֣ע בְּקֹלָ֑הּ כִּ֣י בְיִצְחָ֔ק יִקָּרֵ֥א לְךָ֖ זָֽרַע׃ 12
೧೨ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
וְגַ֥ם אֶת־בֶּן־הָאָמָ֖ה לְגֹ֣וי אֲשִׂימֶ֑נּוּ כִּ֥י זַרְעֲךָ֖ הֽוּא׃ 13
೧೩ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.
וַיַּשְׁכֵּ֣ם אַבְרָהָ֣ם ׀ בַּבֹּ֡קֶר וַיִּֽקַּֽח־לֶחֶם֩ וְחֵ֨מַת מַ֜יִם וַיִּתֵּ֣ן אֶל־הָ֠גָר שָׂ֧ם עַל־שִׁכְמָ֛הּ וְאֶת־הַיֶּ֖לֶד וַֽיְשַׁלְּחֶ֑הָ וַתֵּ֣לֶךְ וַתֵּ֔תַע בְּמִדְבַּ֖ר בְּאֵ֥ר שָֽׁבַע׃ 14
೧೪ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.
וַיִּכְל֥וּ הַמַּ֖יִם מִן־הַחֵ֑מֶת וַתַּשְׁלֵ֣ךְ אֶת־הַיֶּ֔לֶד תַּ֖חַת אַחַ֥ד הַשִּׂיחִֽם׃ 15
೧೫ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
וַתֵּלֶךְ֩ וַתֵּ֨שֶׁב לָ֜הּ מִנֶּ֗גֶד הַרְחֵק֙ כִּמְטַחֲוֵ֣י קֶ֔שֶׁת כִּ֣י אֽ͏ָמְרָ֔ה אַל־אֶרְאֶ֖ה בְּמֹ֣ות הַיָּ֑לֶד וַתֵּ֣שֶׁב מִנֶּ֔גֶד וַתִּשָּׂ֥א אֶת־קֹלָ֖הּ וַתֵּֽבְךְּ׃ 16
೧೬ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.
וַיִּשְׁמַ֣ע אֱלֹהִים֮ אֶת־קֹ֣ול הַנַּעַר֒ וַיִּקְרָא֩ מַלְאַ֨ךְ אֱלֹהִ֤ים ׀ אֶל־הָגָר֙ מִן־הַשָּׁמַ֔יִם וַיֹּ֥אמֶר לָ֖הּ מַה־לָּ֣ךְ הָגָ֑ר אַל־תִּ֣ירְאִ֔י כִּֽי־שָׁמַ֧ע אֱלֹהִ֛ים אֶל־קֹ֥ול הַנַּ֖עַר בַּאֲשֶׁ֥ר הוּא־שָֽׁם׃ 17
೧೭ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
ק֚וּמִי שְׂאִ֣י אֶת־הַנַּ֔עַר וְהַחֲזִ֥יקִי אֶת־יָדֵ֖ךְ בֹּ֑ו כִּֽי־לְגֹ֥וי גָּדֹ֖ול אֲשִׂימֶֽנּוּ׃ 18
೧೮ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
וַיִּפְקַ֤ח אֱלֹהִים֙ אֶת־עֵינֶ֔יהָ וַתֵּ֖רֶא בְּאֵ֣ר מָ֑יִם וַתֵּ֜לֶךְ וַתְּמַלֵּ֤א אֶת־הַחֵ֙מֶת֙ מַ֔יִם וַתַּ֖שְׁקְ אֶת־הַנָּֽעַר׃ 19
೧೯ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
וַיְהִ֧י אֱלֹהִ֛ים אֶת־הַנַּ֖עַר וַיִּגְדָּ֑ל וַיֵּ֙שֶׁב֙ בַּמִּדְבָּ֔ר וַיְהִ֖י רֹבֶ֥ה קַשָּֽׁת׃ 20
೨೦ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
וַיֵּ֖שֶׁב בְּמִדְבַּ֣ר פָּארָ֑ן וַתִּֽקַּֽח־לֹ֥ו אִמֹּ֛ו אִשָּׁ֖ה מֵאֶ֥רֶץ מִצְרָֽיִם׃ פ 21
೨೧ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.
וֽ͏ַיְהִי֙ בָּעֵ֣ת הַהִ֔וא וַיֹּ֣אמֶר אֲבִימֶ֗לֶךְ וּפִיכֹל֙ שַׂר־צְבָאֹ֔ו אֶל־אַבְרָהָ֖ם לֵאמֹ֑ר אֱלֹהִ֣ים עִמְּךָ֔ בְּכֹ֥ל אֲשֶׁר־אַתָּ֖ה עֹשֶֽׂה׃ 22
೨೨ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.
וְעַתָּ֗ה הִשָּׁ֨בְעָה לִּ֤י בֵֽאלֹהִים֙ הֵ֔נָּה אִם־תִּשְׁקֹ֣ר לִ֔י וּלְנִינִ֖י וּלְנֶכְדִּ֑י כַּחֶ֜סֶד אֲשֶׁר־עָשִׂ֤יתִי עִמְּךָ֙ תַּעֲשֶׂ֣ה עִמָּדִ֔י וְעִם־הָאָ֖רֶץ אֲשֶׁר־גַּ֥רְתָּה בָּֽהּ׃ 23
೨೩ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
וַיֹּ֙אמֶר֙ אַבְרָהָ֔ם אָנֹכִ֖י אִשָּׁבֵֽעַ׃ 24
೨೪ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು.
וְהֹוכִ֥חַ אַבְרָהָ֖ם אֶת־אֲבִימֶ֑לֶךְ עַל־אֹדֹות֙ בְּאֵ֣ר הַמַּ֔יִם אֲשֶׁ֥ר גָּזְל֖וּ עַבְדֵ֥י אֲבִימֶֽלֶךְ׃ 25
೨೫ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
וַיֹּ֣אמֶר אֲבִימֶ֔לֶךְ לֹ֣א יָדַ֔עְתִּי מִ֥י עָשָׂ֖ה אֶת־הַדָּבָ֣ר הַזֶּ֑ה וְגַם־אַתָּ֞ה לֹא־הִגַּ֣דְתָּ לִּ֗י וְגַ֧ם אָנֹכִ֛י לֹ֥א שָׁמַ֖עְתִּי בִּלְתִּ֥י הַיֹּֽום׃ 26
೨೬ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.
וַיִּקַּ֤ח אַבְרָהָם֙ צֹ֣אן וּבָקָ֔ר וַיִּתֵּ֖ן לַאֲבִימֶ֑לֶךְ וַיִּכְרְת֥וּ שְׁנֵיהֶ֖ם בְּרִֽית׃ 27
೨೭ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.
וַיַּצֵּ֣ב אַבְרָהָ֗ם אֶת־שֶׁ֛בַע כִּבְשֹׂ֥ת הַצֹּ֖אן לְבַדְּהֶֽן׃ 28
೨೮ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು,
וַיֹּ֥אמֶר אֲבִימֶ֖לֶךְ אֶל־אַבְרָהָ֑ם מָ֣ה הֵ֗נָּה שֶׁ֤בַע כְּבָשֹׂת֙ הָאֵ֔לֶּה אֲשֶׁ֥ר הִצַּ֖בְתָּ לְבַדָּֽנָה׃ 29
೨೯ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು.
וַיֹּ֕אמֶר כִּ֚י אֶת־שֶׁ֣בַע כְּבָשֹׂ֔ת תִּקַּ֖ח מִיָּדִ֑י בַּעֲבוּר֙ תִּֽהְיֶה־לִּ֣י לְעֵדָ֔ה כִּ֥י חָפַ֖רְתִּי אֶת־הַבְּאֵ֥ר הַזֹּֽאת׃ 30
೩೦ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.
עַל־כֵּ֗ן קָרָ֛א לַמָּקֹ֥ום הַה֖וּא בְּאֵ֣ר שָׁ֑בַע כִּ֛י שָׁ֥ם נִשְׁבְּע֖וּ שְׁנֵיהֶֽם׃ 31
೩೧ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.
וַיִּכְרְת֥וּ בְרִ֖ית בִּבְאֵ֣ר שָׁ֑בַע וַיָּ֣קָם אֲבִימֶ֗לֶךְ וּפִיכֹל֙ שַׂר־צְבָאֹ֔ו וַיָּשֻׁ֖בוּ אֶל־אֶ֥רֶץ פְּלִשְׁתִּֽים׃ 32
೩೨ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.
וַיִּטַּ֥ע אֶ֖שֶׁל בִּבְאֵ֣ר שָׁ֑בַע וַיִּ֨קְרָא־שָׁ֔ם בְּשֵׁ֥ם יְהוָ֖ה אֵ֥ל עֹולָֽם׃ 33
೩೩ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
וַיָּ֧גָר אַבְרָהָ֛ם בְּאֶ֥רֶץ פְּלִשְׁתִּ֖ים יָמִ֥ים רַבִּֽים׃ פ 34
೩೪ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.

< בְּרֵאשִׁית 21 >