< בְּרֵאשִׁית 4 >

וְהָ֣אָדָ֔ם יָדַ֖ע אֶת־חַוָּ֣ה אִשְׁתֹּ֑ו וַתַּ֙הַר֙ וַתֵּ֣לֶד אֶת־קַ֔יִן וַתֹּ֕אמֶר קָנִ֥יתִי אִ֖ישׁ אֶת־יְהוָֽה׃ 1
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.
וַתֹּ֣סֶף לָלֶ֔דֶת אֶת־אָחִ֖יו אֶת־הָ֑בֶל וַֽיְהִי־הֶ֙בֶל֙ רֹ֣עֵה צֹ֔אן וְקַ֕יִן הָיָ֖ה עֹבֵ֥ד אֲדָמָֽה׃ 2
ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.
וֽ͏ַיְהִ֖י מִקֵּ֣ץ יָמִ֑ים וַיָּבֵ֨א קַ֜יִן מִפְּרִ֧י הֽ͏ָאֲדָמָ֛ה מִנְחָ֖ה לַֽיהוָֽה׃ 3
ಸ್ವಲ್ಪ ಕಾಲದ ತರುವಾಯ, ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು, ಯೆಹೋವ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದನು.
וְהֶ֨בֶל הֵבִ֥יא גַם־ה֛וּא מִבְּכֹרֹ֥ות צֹאנֹ֖ו וּמֵֽחֶלְבֵהֶ֑ן וַיִּ֣שַׁע יְהוָ֔ה אֶל־הֶ֖בֶל וְאֶל־מִנְחָתֹֽו׃ 4
ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.
וְאֶל־קַ֥יִן וְאֶל־מִנְחָתֹ֖ו לֹ֣א שָׁעָ֑ה וַיִּ֤חַר לְקַ֙יִן֙ מְאֹ֔ד וַֽיִּפְּל֖וּ פָּנָֽיו׃ 5
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.
וַיֹּ֥אמֶר יְהוָ֖ה אֶל־קָ֑יִן לָ֚מָּה חָ֣רָה לָ֔ךְ וְלָ֖מָּה נָפְל֥וּ פָנֶֽיךָ׃ 6
ಆಗ ಯೆಹೋವ ದೇವರು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ಏಕೆ ನಿನ್ನ ಮುಖವು ಬಾಡಿದೆ?
הֲלֹ֤וא אִם־תֵּיטִיב֙ שְׂאֵ֔ת וְאִם֙ לֹ֣א תֵיטִ֔יב לַפֶּ֖תַח חַטָּ֣את רֹבֵ֑ץ וְאֵלֶ֙יךָ֙ תְּשׁ֣וּקָתֹ֔ו וְאַתָּ֖ה תִּמְשָׁל־בֹּֽו׃ 7
ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.
וַיֹּ֥אמֶר קַ֖יִן אֶל־הֶ֣בֶל אָחִ֑יו וֽ͏ַיְהִי֙ בִּהְיֹותָ֣ם בַּשָּׂדֶ֔ה וַיָּ֥קָם קַ֛יִן אֶל־הֶ֥בֶל אָחִ֖יו וַיַּהַרְגֵֽהוּ׃ 8
ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.
וַיֹּ֤אמֶר יְהוָה֙ אֶל־קַ֔יִן אֵ֖י הֶ֣בֶל אָחִ֑יךָ וַיֹּ֙אמֶר֙ לֹ֣א יָדַ֔עְתִּי הֲשֹׁמֵ֥ר אָחִ֖י אָנֹֽכִי׃ 9
ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.
וַיֹּ֖אמֶר מֶ֣ה עָשִׂ֑יתָ קֹ֚ול דְּמֵ֣י אָחִ֔יךָ צֹעֲקִ֥ים אֵלַ֖י מִן־הָֽאֲדָמָֽה׃ 10
ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.
וְעַתָּ֖ה אָר֣וּר אָ֑תָּה מִן־הָֽאֲדָמָה֙ אֲשֶׁ֣ר פָּצְתָ֣ה אֶת־פִּ֔יהָ לָקַ֛חַת אֶת־דְּמֵ֥י אָחִ֖יךָ מִיָּדֶֽךָ׃ 11
ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.
כִּ֤י תַֽעֲבֹד֙ אֶת־הָ֣אֲדָמָ֔ה לֹֽא־תֹסֵ֥ף תֵּת־כֹּחָ֖הּ לָ֑ךְ נָ֥ע וָנָ֖ד תִּֽהְיֶ֥ה בָאָֽרֶץ׃ 12
ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.
וַיֹּ֥אמֶר קַ֖יִן אֶל־יְהוָ֑ה גָּדֹ֥ול עֲוֹנִ֖י מִנְּשֹֽׂא׃ 13
ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.
הֵן֩ גֵּרַ֨שְׁתָּ אֹתִ֜י הַיֹּ֗ום מֵעַל֙ פְּנֵ֣י הֽ͏ָאֲדָמָ֔ה וּמִפָּנֶ֖יךָ אֶסָּתֵ֑ר וְהָיִ֜יתִי נָ֤ע וָנָד֙ בָּאָ֔רֶץ וְהָיָ֥ה כָל־מֹצְאִ֖י יֽ͏ַהַרְגֵֽנִי׃ 14
ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.
וַיֹּ֧אמֶר לֹ֣ו יְהוָ֗ה לָכֵן֙ כָּל־הֹרֵ֣ג קַ֔יִן שִׁבְעָתַ֖יִם יֻקָּ֑ם וַיָּ֨שֶׂם יְהוָ֤ה לְקַ֙יִן֙ אֹ֔ות לְבִלְתִּ֥י הַכֹּות־אֹתֹ֖ו כָּל־מֹצְאֹֽו׃ 15
ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.
וַיֵּ֥צֵא קַ֖יִן מִלִּפְנֵ֣י יְהוָ֑ה וַיֵּ֥שֶׁב בְּאֶֽרֶץ־נֹ֖וד קִדְמַת־עֵֽדֶן׃ 16
ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.
וַיֵּ֤דַע קַ֙יִן֙ אֶת־אִשְׁתֹּ֔ו וַתַּ֖הַר וַתֵּ֣לֶד אֶת־חֲנֹ֑וךְ וַֽיְהִי֙ בֹּ֣נֶה עִ֔יר וַיִּקְרָא֙ שֵׁ֣ם הָעִ֔יר כְּשֵׁ֖ם בְּנֹ֥ו חֲנֹֽוךְ׃ 17
ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.
וַיִּוָּלֵ֤ד לַֽחֲנֹוךְ֙ אֶת־עִירָ֔ד וְעִירָ֕ד יָלַ֖ד אֶת־מְחֽוּיָאֵ֑ל וּמְחִיּיָאֵ֗ל יָלַד֙ אֶת־מְת֣וּשָׁאֵ֔ל וּמְתוּשָׁאֵ֖ל יָלַ֥ד אֶת־לָֽמֶךְ׃ 18
ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
וַיִּֽקַּֽח־לֹ֥ו לֶ֖מֶךְ שְׁתֵּ֣י נָשִׁ֑ים שֵׁ֤ם הָֽאַחַת֙ עָדָ֔ה וְשֵׁ֥ם הַשֵּׁנִ֖ית צִלָּֽה׃ 19
ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.
וַתֵּ֥לֶד עָדָ֖ה אֶת־יָבָ֑ל ה֣וּא הָיָ֔ה אֲבִ֕י יֹשֵׁ֥ב אֹ֖הֶל וּמִקְנֶֽה׃ 20
ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.
וְשֵׁ֥ם אָחִ֖יו יוּבָ֑ל ה֣וּא הָיָ֔ה אֲבִ֕י כָּל־תֹּפֵ֥שׂ כִּנֹּ֖ור וְעוּגָֽב׃ 21
ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.
וְצִלָּ֣ה גַם־הִ֗וא יָֽלְדָה֙ אֶת־תּ֣וּבַל קַ֔יִן לֹטֵ֕שׁ כָּל־חֹרֵ֥שׁ נְחֹ֖שֶׁת וּבַרְזֶ֑ל וַֽאֲחֹ֥ות תּֽוּבַל־קַ֖יִן נַֽעֲמָֽה׃ 22
ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
וַיֹּ֨אמֶר לֶ֜מֶךְ לְנָשָׁ֗יו עָדָ֤ה וְצִלָּה֙ שְׁמַ֣עַן קֹולִ֔י נְשֵׁ֣י לֶ֔מֶךְ הַאְזֵ֖נָּה אִמְרָתִ֑י כִּ֣י אִ֤ישׁ הָרַ֙גְתִּי֙ לְפִצְעִ֔י וְיֶ֖לֶד לְחַבֻּרָתִֽי׃ 23
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.
כִּ֥י שִׁבְעָתַ֖יִם יֻקַּם־קָ֑יִן וְלֶ֖מֶךְ שִׁבְעִ֥ים וְשִׁבְעָֽה׃ 24
ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”
וַיֵּ֨דַע אָדָ֥ם עֹוד֙ אֶת־אִשְׁתֹּ֔ו וַתֵּ֣לֶד בֵּ֔ן וַתִּקְרָ֥א אֶת־שְׁמֹ֖ו שֵׁ֑ת כִּ֣י שָֽׁת־לִ֤י אֱלֹהִים֙ זֶ֣רַע אַחֵ֔ר תַּ֣חַת הֶ֔בֶל כִּ֥י הֲרָגֹ֖ו קָֽיִן׃ 25
ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.
וּלְשֵׁ֤ת גַּם־הוּא֙ יֻלַּד־בֵּ֔ן וַיִּקְרָ֥א אֶת־שְׁמֹ֖ו אֱנֹ֑ושׁ אָ֣ז הוּחַ֔ל לִקְרֹ֖א בְּשֵׁ֥ם יְהוָֽה׃ פ 26
ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.

< בְּרֵאשִׁית 4 >