< חַגַּי 2 >

בַּשְּׁבִיעִ֕י בְּעֶשְׂרִ֥ים וְאֶחָ֖ד לַחֹ֑דֶשׁ הָיָה֙ דְּבַר־יְהוָ֔ה בְּיַד־חַגַּ֥י הַנָּבִ֖יא לֵאמֹֽר׃ 1
ಏಳನೆಯ ತಿಂಗಳಿನ, ಇಪ್ಪತ್ತೊಂದನೆಯ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:
אֱמָר־נָ֗א אֶל־זְרֻבָּבֶ֤ל בֶּן־שַׁלְתִּיאֵל֙ פַּחַ֣ת יְהוּדָ֔ה וְאֶל־יְהֹושֻׁ֥עַ בֶּן־יְהֹוצָדָ֖ק הַכֹּהֵ֣ן הַגָּדֹ֑ול וְאֶל־שְׁאֵרִ֥ית הָעָ֖ם לֵאמֹֽר׃ 2
“ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.
מִ֤י בָכֶם֙ הַנִּשְׁאָ֔ר אֲשֶׁ֤ר רָאָה֙ אֶת־הַבַּ֣יִת הַזֶּ֔ה בִּכְבֹודֹ֖ו הָרִאשֹׁ֑ון וּמָ֨ה אַתֶּ֜ם רֹאִ֤ים אֹתֹו֙ עַ֔תָּה הֲלֹ֥וא כָמֹ֛הוּ כְּאַ֖יִן בְּעֵינֵיכֶֽם׃ 3
ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?
וְעַתָּ֣ה חֲזַ֣ק זְרֻבָּבֶ֣ל ׀ נְאֻם־יְהוָ֡ה וַחֲזַ֣ק יְהֹושֻׁ֣עַ בֶּן־יְהֹוצָדָק֩ הַכֹּהֵ֨ן הַגָּדֹ֜ול וַחֲזַ֨ק כָּל־עַ֥ם הָאָ֛רֶץ נְאֻם־יְהוָ֖ה וַֽעֲשׂ֑וּ כִּֽי־אֲנִ֣י אִתְּכֶ֔ם נְאֻ֖ם יְהוָ֥ה צְבָאֹֽות׃ 4
ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
אֶֽת־הַדָּבָ֞ר אֲשֶׁר־כָּרַ֤תִּי אִתְּכֶם֙ בְּצֵאתְכֶ֣ם מִמִּצְרַ֔יִם וְרוּחִ֖י עֹמֶ֣דֶת בְּתֹוכְכֶ֑ם אַל־תִּירָֽאוּ׃ ס 5
ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.
כִּ֣י כֹ֤ה אָמַר֙ יְהוָ֣ה צְבָאֹ֔ות עֹ֥וד אַחַ֖ת מְעַ֣ט הִ֑יא וַאֲנִ֗י מַרְעִישׁ֙ אֶת־הַשָּׁמַ֣יִם וְאֶת־הָאָ֔רֶץ וְאֶת־הַיָּ֖ם וְאֶת־הֶחָרָבָֽה׃ 6
“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.
וְהִרְעַשְׁתִּי֙ אֶת־כָּל־הַגֹּויִ֔ם וּבָ֖אוּ חֶמְדַּ֣ת כָּל־הַגֹּויִ֑ם וּמִלֵּאתִ֞י אֶת־הַבַּ֤יִת הַזֶּה֙ כָּבֹ֔וד אָמַ֖ר יְהוָ֥ה צְבָאֹֽות׃ 7
ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
לִ֥י הַכֶּ֖סֶף וְלִ֣י הַזָּהָ֑ב נְאֻ֖ם יְהוָ֥ה צְבָאֹֽות׃ 8
‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
גָּדֹ֣ול יִֽהְיֶ֡ה כְּבֹוד֩ הַבַּ֨יִת הַזֶּ֤ה הָאַֽחֲרֹון֙ מִן־הָ֣רִאשֹׁ֔ון אָמַ֖ר יְהוָ֣ה צְבָאֹ֑ות וּבַמָּקֹ֤ום הַזֶּה֙ אֶתֵּ֣ן שָׁלֹ֔ום נְאֻ֖ם יְהוָ֥ה צְבָאֹֽות׃ פ 9
‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”
בְּעֶשְׂרִ֤ים וְאַרְבָּעָה֙ לַתְּשִׁיעִ֔י בִּשְׁנַ֥ת שְׁתַּ֖יִם לְדָרְיָ֑וֶשׁ הָיָה֙ דְּבַר־יְהוָ֔ה אֶל־חַגַּ֥י הַנָּבִ֖יא לֵאמֹֽר׃ 10
ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು:
כֹּ֥ה אָמַ֖ר יְהוָ֣ה צְבָאֹ֑ות שְׁאַל־נָ֧א אֶת־הַכֹּהֲנִ֛ים תֹּורָ֖ה לֵאמֹֽר׃ 11
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,
הֵ֣ן ׀ יִשָּׂא־אִ֨ישׁ בְּשַׂר־קֹ֜דֶשׁ בִּכְנַ֣ף בִּגְדֹ֗ו וְנָגַ֣ע בִּ֠כְנָפֹו אֶל־הַלֶּ֨חֶם וְאֶל־הַנָּזִ֜יד וְאֶל־הַיַּ֧יִן וְאֶל־שֶׁ֛מֶן וְאֶל־כָּל־מַאֲכָ֖ל הֲיִקְדָּ֑שׁ וַיַּעֲנ֧וּ הַכֹּהֲנִ֛ים וַיֹּאמְר֖וּ לֹֽא׃ 12
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.
וַיֹּ֣אמֶר חַגַּ֔י אִם־יִגַּ֧ע טְמֵא־נֶ֛פֶשׁ בְּכָל־אֵ֖לֶּה הֲיִטְמָ֑א וַיַּעֲנ֧וּ הַכֹּהֲנִ֛ים וַיֹּאמְר֖וּ יִטְמָֽא׃ 13
ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.
וַיַּ֨עַן חַגַּ֜י וַיֹּ֗אמֶר כֵּ֣ן הָֽעָם־הַ֠זֶּה וְכֵן־הַגֹּ֨וי הַזֶּ֤ה לְפָנַי֙ נְאֻם־יְהוָ֔ה וְכֵ֖ן כָּל־מַעֲשֵׂ֣ה יְדֵיהֶ֑ם וַאֲשֶׁ֥ר יַקְרִ֛יבוּ שָׁ֖ם טָמֵ֥א הֽוּא׃ 14
ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.
וְעַתָּה֙ שִֽׂימוּ־נָ֣א לְבַבְכֶ֔ם מִן־הַיֹּ֥ום הַזֶּ֖ה וָמָ֑עְלָה מִטֶּ֧רֶם שֽׂוּם־אֶ֛בֶן אֶל־אֶ֖בֶן בְּהֵיכַ֥ל יְהוָֽה׃ 15
“ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
מִֽהְיֹותָ֥ם בָּא֙ אֶל־עֲרֵמַ֣ת עֶשְׂרִ֔ים וְהָיְתָ֖ה עֲשָׂרָ֑ה בָּ֣א אֶל־הַיֶּ֗קֶב לַחְשֹׂף֙ חֲמִשִּׁ֣ים פּוּרָ֔ה וְהָיְתָ֖ה עֶשְׂרִֽים׃ 16
ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.
הִכֵּ֨יתִי אֶתְכֶ֜ם בַּשִּׁדָּפֹ֤ון וּבַיֵּֽרָקֹון֙ וּבַבָּרָ֔ד אֵ֖ת כָּל־מַעֲשֵׂ֣ה יְדֵיכֶ֑ם וְאֵין־אֶתְכֶ֥ם אֵלַ֖י נְאֻם־יְהוָֽה׃ 17
ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.
שִׂימוּ־נָ֣א לְבַבְכֶ֔ם מִן־הַיֹּ֥ום הַזֶּ֖ה וָמָ֑עְלָה מִיֹּום֩ עֶשְׂרִ֨ים וְאַרְבָּעָ֜ה לַתְּשִׁיעִ֗י לְמִן־הַיֹּ֛ום אֲשֶׁר־יֻסַּ֥ד הֵֽיכַל־יְהוָ֖ה שִׂ֥ימוּ לְבַבְכֶֽם׃ 18
ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.
הַעֹ֤וד הַזֶּ֙רַע֙ בַּמְּגוּרָ֔ה וְעַד־הַגֶּ֨פֶן וְהַתְּאֵנָ֧ה וְהָרִמֹּ֛ון וְעֵ֥ץ הַזַּ֖יִת לֹ֣א נָשָׂ֑א מִן־הַיֹּ֥ום הַזֶּ֖ה אֲבָרֵֽךְ׃ ס 19
ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.
וַיְהִ֨י דְבַר־יְהוָ֤ה ׀ שֵׁנִית֙ אֶל־חַגַּ֔י בְּעֶשְׂרִ֧ים וְאַרְבָּעָ֛ה לַחֹ֖דֶשׁ לֵאמֹֽר׃ 20
ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.
אֱמֹ֕ר אֶל־זְרֻבָּבֶ֥ל פַּֽחַת־יְהוּדָ֖ה לֵאמֹ֑ר אֲנִ֣י מַרְעִ֔ישׁ אֶת־הַשָּׁמַ֖יִם וְאֶת־הָאָֽרֶץ׃ 21
ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.
וְהָֽפַכְתִּי֙ כִּסֵּ֣א מַמְלָכֹ֔ות וְהִ֨שְׁמַדְתִּ֔י חֹ֖זֶק מַמְלְכֹ֣ות הַגֹּויִ֑ם וְהָפַכְתִּ֤י מֶרְכָּבָה֙ וְרֹ֣כְבֶ֔יהָ וְיָרְד֤וּ סוּסִים֙ וְרֹ֣כְבֵיהֶ֔ם אִ֖ישׁ בְּחֶ֥רֶב אָחִֽיו׃ 22
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.
בַּיֹּ֣ום הַה֣וּא נְאֻם־יְהוָ֣ה צְבָאֹ֡ות אֶ֠קָּחֲךָ זְרֻבָּבֶ֨ל בֶּן־שְׁאַלְתִּיאֵ֤ל עַבְדִּי֙ נְאֻם־יְהוָ֔ה וְשַׂמְתִּ֖יךָ כַּֽחֹותָ֑ם כִּֽי־בְךָ֣ בָחַ֔רְתִּי נְאֻ֖ם יְהוָ֥ה צְבָאֹֽות׃ 23
“ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”

< חַגַּי 2 >