< יְשַׁעְיָהוּ 36 >

וַיְהִ֡י בְּאַרְבַּע֩ עֶשְׂרֵ֨ה שָׁנָ֜ה לַמֶּ֣לֶךְ חִזְקִיָּ֗הוּ עָלָ֞ה סַנְחֵרִ֤יב מֶֽלֶךְ־אַשּׁוּר֙ עַ֣ל כָּל־עָרֵ֧י יְהוּדָ֛ה הַבְּצֻרֹ֖ות וַֽיִּתְפְּשֵֽׂם׃ 1
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
וַיִּשְׁלַ֣ח מֶֽלֶךְ־אַשּׁ֣וּר ׀ אֶת־רַב־שָׁקֵ֨ה מִלָּכִ֧ישׁ יְרוּשָׁלַ֛͏ְמָה אֶל־הַמֶּ֥לֶךְ חִזְקִיָּ֖הוּ בְּחֵ֣יל כָּבֵ֑ד וַֽיַּעֲמֹ֗ד בִּתְעָלַת֙ הַבְּרֵכָ֣ה הָעֶלְיֹונָ֔ה בִּמְסִלַּ֖ת שְׂדֵ֥ה כֹובֵֽס׃ 2
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
וַיֵּצֵ֥א אֵלָ֛יו אֶלְיָקִ֥ים בֶּן־חִלְקִיָּ֖הוּ אֲשֶׁ֣ר עַל־הַבָּ֑יִת וְשֶׁבְנָא֙ הַסֹּפֵ֔ר וְיֹואָ֥ח בֶּן־אָסָ֖ף הַמַּזְכִּֽיר׃ 3
ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.
וַיֹּ֤אמֶר אֲלֵיהֶם֙ רַב־שָׁקֵ֔ה אִמְרוּ־נָ֖א אֶל־חִזְקִיָּ֑הוּ כֹּֽה־אָמַ֞ר הַמֶּ֤לֶךְ הַגָּדֹול֙ מֶ֣לֶךְ אַשּׁ֔וּר מָ֧ה הַבִּטָּחֹ֛ון הַזֶּ֖ה אֲשֶׁ֥ר בָּטָֽחְתָּ׃ 4
ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?
אָמַ֙רְתִּי֙ אַךְ־דְּבַר־שְׂפָתַ֔יִם עֵצָ֥ה וּגְבוּרָ֖ה לַמִּלְחָמָ֑ה עַתָּה֙ עַל־מִ֣י בָטַ֔חְתָּ כִּ֥י מָרַ֖דְתָּ בִּֽי׃ 5
ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’
הִנֵּ֣ה בָטַ֡חְתָּ עַל־מִשְׁעֶנֶת֩ הַקָּנֶ֨ה הָרָצ֤וּץ הַזֶּה֙ עַל־מִצְרַ֔יִם אֲשֶׁ֨ר יִסָּמֵ֥ךְ אִישׁ֙ עָלָ֔יו וּבָ֥א בְכַפֹּ֖ו וּנְקָבָ֑הּ כֵּ֚ן פַּרְעֹ֣ה מֶֽלֶךְ־מִצְרַ֔יִם לְכָֽל־הַבֹּטְחִ֖ים עָלָֽיו׃ 6
“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.
וְכִי־תֹאמַ֣ר אֵלַ֔י אֶל־יְהוָ֥ה אֱלֹהֵ֖ינוּ בָּטָ֑חְנוּ הֲלֹוא־ה֗וּא אֲשֶׁ֨ר הֵסִ֤יר חִזְקִיָּ֙הוּ֙ אֶת־בָּמֹתָ֣יו וְאֶת־מִזְבְּחֹתָ֔יו וַיֹּ֤אמֶר לִֽיהוּדָה֙ וְלִיר֣וּשָׁלַ֔͏ִם לִפְנֵ֛י הַמִּזְבֵּ֥חַ הַזֶּ֖ה תִּֽשְׁתַּחֲוֽוּ׃ 7
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
וְעַתָּה֙ הִתְעָ֣רֶב נָ֔א אֶת־אֲדֹנִ֖י הַמֶּ֣לֶךְ אַשּׁ֑וּר וְאֶתְּנָ֤ה לְךָ֙ אַלְפַּ֣יִם סוּסִ֔ים אִם־תּוּכַ֕ל לָ֥תֶת לְךָ֖ רֹכְבִ֥ים עֲלֵיהֶֽם׃ 8
“ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?
וְאֵ֣יךְ תָּשִׁ֗יב אֵ֠ת פְּנֵ֨י פַחַ֥ת אַחַ֛ד עַבְדֵ֥י אֲדֹנִ֖י הַקְטַנִּ֑ים וַתִּבְטַ֤ח לְךָ֙ עַל־מִצְרַ֔יִם לְרֶ֖כֶב וּלְפָרָשִֽׁים׃ 9
“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
וְעַתָּה֙ הֲמִבַּלְעֲדֵ֣י יְהוָ֔ה עָלִ֛יתִי עַל־הָאָ֥רֶץ הַזֹּ֖את לְהַשְׁחִיתָ֑הּ יְהוָה֙ אָמַ֣ר אֵלַ֔י עֲלֵ֛ה אֶל־הָאָ֥רֶץ הַזֹּ֖את וְהַשְׁחִיתָֽהּ׃ 10
೧೦ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು.
וַיֹּ֣אמֶר אֶלְיָקִים֩ וְשֶׁבְנָ֨א וְיֹואָ֜ח אֶל־רַב־שָׁקֵ֗ה דַּבֶּר־נָ֤א אֶל־עֲבָדֶ֙יךָ֙ אֲרָמִ֔ית כִּ֥י שֹׁמְעִ֖ים אֲנָ֑חְנוּ וְאַל־תְּדַבֵּ֤ר אֵלֵ֙ינוּ֙ יְהוּדִ֔ית בְּאָזְנֵ֣י הָעָ֔ם אֲשֶׁ֖ר עַל־הַחֹומָֽה׃ 11
೧೧ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
וַיֹּ֣אמֶר רַב־שָׁקֵ֗ה הַאֶ֨ל אֲדֹנֶ֤יךָ וְאֵלֶ֙יךָ֙ שְׁלָחַ֣נִי אֲדֹנִ֔י לְדַבֵּ֖ר אֶת־הַדְּבָרִ֣ים הָאֵ֑לֶּה הֲלֹ֣א עַל־הָאֲנָשִׁ֗ים הַיֹּֽשְׁבִים֙ עַל־הַ֣חֹומָ֔ה לֶאֱכֹ֣ל אֶת־חַרְאֵיהֶם (צֹואָתָ֗ם) וְלִשְׁתֹּ֛ות אֶת־שֵׁינֵיהֶם (מֵימֵ֥י רַגְלֵיהֶ֖ם) עִמָּכֶֽם׃ 12
೧೨ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
וַֽיַּעֲמֹד֙ רַב־שָׁקֵ֔ה וַיִּקְרָ֥א בְקֹול־גָּדֹ֖ול יְהוּדִ֑ית וַיֹּ֕אמֶר שִׁמְע֗וּ אֶת־דִּבְרֵ֛י הַמֶּ֥לֶךְ הַגָּדֹ֖ול מֶ֥לֶךְ אַשּֽׁוּר׃ 13
೧೩ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
כֹּ֚ה אָמַ֣ר הַמֶּ֔לֶךְ אַל־יַשִּׁ֥א לָכֶ֖ם חִזְקִיָּ֑הוּ כִּ֥י לֹֽא־יוּכַ֖ל לְהַצִּ֥יל אֶתְכֶֽם׃ 14
೧೪ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’
וְאַל־יַבְטַ֨ח אֶתְכֶ֤ם חִזְקִיָּ֙הוּ֙ אֶל־יְהוָ֣ה לֵאמֹ֔ר הַצֵּ֥ל יַצִּילֵ֖נוּ יְהוָ֑ה לֹ֤א תִנָּתֵן֙ הָעִ֣יר הַזֹּ֔את בְּיַ֖ד מֶ֥לֶךְ אַשּֽׁוּר׃ 15
೧೫ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,
אַֽל־תִּשְׁמְע֖וּ אֶל־חִזְקִיָּ֑הוּ ס כִּי֩ כֹ֨ה אָמַ֜ר הַמֶּ֣לֶךְ אַשּׁ֗וּר עֲשֽׂוּ־אִתִּ֤י בְרָכָה֙ וּצְא֣וּ אֵלַ֔י וְאִכְל֤וּ אִישׁ־גַּפְנֹו֙ וְאִ֣ישׁ תְּאֵנָתֹ֔ו וּשְׁת֖וּ אִ֥ישׁ מֵי־בֹורֹֽו׃ 16
೧೬ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.
עַד־בֹּאִ֕י וְלָקַחְתִּ֥י אֶתְכֶ֖ם אֶל־אֶ֣רֶץ כְּאַרְצְכֶ֑ם אֶ֤רֶץ דָּגָן֙ וְתִירֹ֔ושׁ אֶ֥רֶץ לֶ֖חֶם וּכְרָמִֽים׃ 17
೧೭ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”
פֶּן־יַסִּ֨ית אֶתְכֶ֤ם חִזְקִיָּ֙הוּ֙ לֵאמֹ֔ר יְהוָ֖ה יַצִּילֵ֑נוּ הַהִצִּ֜ילוּ אֱלֹהֵ֤י הַגֹּויִם֙ אִ֣ישׁ אֶת־אַרְצֹ֔ו מִיַּ֖ד מֶ֥לֶךְ אַשּֽׁוּר׃ 18
೧೮“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
אַיֵּ֞ה אֱלֹהֵ֤י חֲמָת֙ וְאַרְפָּ֔ד אַיֵּ֖ה אֱלֹהֵ֣י סְפַרְוָ֑יִם וְכִֽי־הִצִּ֥ילוּ אֶת־שֹׁמְרֹ֖ון מִיָּדִֽי׃ 19
೧೯ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
מִ֗י בְּכָל־אֱלֹהֵ֤י הָֽאֲרָצֹות֙ הָאֵ֔לֶּה אֲשֶׁר־הִצִּ֥ילוּ אֶת־אַרְצָ֖ם מִיָּדִ֑י כִּֽי־יַצִּ֧יל יְהוָ֛ה אֶת־יְרוּשָׁלַ֖͏ִם מִיָּדִֽי׃ 20
೨೦ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.
וַֽיַּחֲרִ֔ישׁוּ וְלֹֽא־עָנ֥וּ אֹתֹ֖ו דָּבָ֑ר כִּֽי־מִצְוַ֨ת הַמֶּ֥לֶךְ הִ֛יא לֵאמֹ֖ר לֹ֥א תַעֲנֻֽהוּ׃ 21
೨೧ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.
וַיָּבֹ֣א אֶלְיָקִ֣ים בֶּן־חִלְקִיָּ֣הוּ אֲשֶׁר־עַל־הַ֠בַּיִת וְשֶׁבְנָ֨א הַסֹּופֵ֜ר וְיֹואָ֨ח בֶּן־אָסָ֧ף הַמַּזְכִּ֛יר אֶל־חִזְקִיָּ֖הוּ קְרוּעֵ֣י בְגָדִ֑ים וַיַּגִּ֣ידוּ לֹ֔ו אֵ֖ת דִּבְרֵ֥י רַב־שָׁקֵֽה׃ ס 22
೨೨ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

< יְשַׁעְיָהוּ 36 >