< יְשַׁעְיָהוּ 5 >

אָשִׁ֤ירָה נָּא֙ לִֽידִידִ֔י שִׁירַ֥ת דֹּודִ֖י לְכַרְמֹ֑ו כֶּ֛רֶם הָיָ֥ה לִֽידִידִ֖י בְּקֶ֥רֶן בֶּן־שָֽׁמֶן׃ 1
ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
וַֽיְעַזְּקֵ֣הוּ וַֽיְסַקְּלֵ֗הוּ וַיִּטָּעֵ֙הוּ֙ שֹׂרֵ֔ק וַיִּ֤בֶן מִגְדָּל֙ בְּתֹוכֹ֔ו וְגַם־יֶ֖קֶב חָצֵ֣ב בֹּ֑ו וַיְקַ֛ו לַעֲשֹׂ֥ות עֲנָבִ֖ים וַיַּ֥עַשׂ בְּאֻשִֽׁים׃ 2
ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
וְעַתָּ֛ה יֹושֵׁ֥ב יְרוּשָׁלַ֖͏ִם וְאִ֣ישׁ יְהוּדָ֑ה שִׁפְטוּ־נָ֕א בֵּינִ֖י וּבֵ֥ין כַּרְמִֽי׃ 3
ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
מַה־לַּעֲשֹׂ֥ות עֹוד֙ לְכַרְמִ֔י וְלֹ֥א עָשִׂ֖יתִי בֹּ֑ו מַדּ֧וּעַ קִוֵּ֛יתִי לַעֲשֹׂ֥ות עֲנָבִ֖ים וַיַּ֥עַשׂ בְּאֻשִֽׁים׃ 4
ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
וְעַתָּה֙ אֹודִֽיעָה־נָּ֣א אֶתְכֶ֔ם אֵ֛ת אֲשֶׁר־אֲנִ֥י עֹשֶׂ֖ה לְכַרְמִ֑י הָסֵ֤ר מְשׂוּכָּתֹו֙ וְהָיָ֣ה לְבָעֵ֔ר פָּרֹ֥ץ גְּדֵרֹ֖ו וְהָיָ֥ה לְמִרְמָֽס׃ 5
ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
וַאֲשִׁיתֵ֣הוּ בָתָ֗ה לֹ֤א יִזָּמֵר֙ וְלֹ֣א יֵעָדֵ֔ר וְעָלָ֥ה שָׁמִ֖יר וָשָׁ֑יִת וְעַ֤ל הֶעָבִים֙ אֲצַוֶּ֔ה מֵהַמְטִ֥יר עָלָ֖יו מָטָֽר׃ 6
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
כִּ֣י כֶ֜רֶם יְהוָ֤ה צְבָאֹות֙ בֵּ֣ית יִשְׂרָאֵ֔ל וְאִ֣ישׁ יְהוּדָ֔ה נְטַ֖ע שַׁעֲשׁוּעָ֑יו וַיְקַ֤ו לְמִשְׁפָּט֙ וְהִנֵּ֣ה מִשְׂפָּ֔ח לִצְדָקָ֖ה וְהִנֵּ֥ה צְעָקָֽה׃ ס 7
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
הֹ֗וי מַגִּיעֵ֥י בַ֙יִת֙ בְּבַ֔יִת שָׂדֶ֥ה בְשָׂדֶ֖ה יַקְרִ֑יבוּ עַ֚ד אֶ֣פֶס מָקֹ֔ום וְהֽוּשַׁבְתֶּ֥ם לְבַדְּכֶ֖ם בְּקֶ֥רֶב הָאָֽרֶץ׃ 8
ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!
בְּאָזְנָ֖י יְהוָ֣ה צְבָאֹ֑ות אִם־לֹ֞א בָּתִּ֤ים רַבִּים֙ לְשַׁמָּ֣ה יִֽהְי֔וּ גְּדֹלִ֥ים וְטֹובִ֖ים מֵאֵ֥ין יֹושֵֽׁב׃ 9
ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
כִּ֗י עֲשֶׂ֙רֶת֙ צִמְדֵּי־כֶ֔רֶם יַעֲשׂ֖וּ בַּ֣ת אֶחָ֑ת וְזֶ֥רַע חֹ֖מֶר יַעֲשֶׂ֥ה אֵיפָֽה׃ פ 10
೧೦ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.
הֹ֛וי מַשְׁכִּימֵ֥י בַבֹּ֖קֶר שֵׁכָ֣ר יִרְדֹּ֑פוּ מְאַחֲרֵ֣י בַנֶּ֔שֶׁף יַ֖יִן יַדְלִיקֵֽם׃ 11
೧೧ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
וְהָיָ֨ה כִנֹּ֜ור וָנֶ֗בֶל תֹּ֧ף וְחָלִ֛יל וָיַ֖יִן מִשְׁתֵּיהֶ֑ם וְאֵ֨ת פֹּ֤עַל יְהוָה֙ לֹ֣א יַבִּ֔יטוּ וּמַעֲשֵׂ֥ה יָדָ֖יו לֹ֥א רָאֽוּ׃ 12
೧೨ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
לָכֵ֛ן גָּלָ֥ה עַמִּ֖י מִבְּלִי־דָ֑עַת וּכְבֹודֹו֙ מְתֵ֣י רָעָ֔ב וַהֲמֹונֹ֖ו צִחֵ֥ה צָמָֽא׃ 13
೧೩ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
לָכֵ֗ן הִרְחִ֤יבָה שְּׁאֹול֙ נַפְשָׁ֔הּ וּפָעֲרָ֥ה פִ֖יהָ לִבְלִי־חֹ֑ק וְיָרַ֨ד הֲדָרָ֧הּ וַהֲמֹונָ֛הּ וּשְׁאֹונָ֖הּ וְעָלֵ֥ז בָּֽהּ׃ (Sheol h7585) 14
೧೪ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. (Sheol h7585)
וַיִּשַּׁ֥ח אָדָ֖ם וַיִּשְׁפַּל־אִ֑ישׁ וְעֵינֵ֥י גְבֹהִ֖ים תִּשְׁפַּֽלְנָה׃ 15
೧೫ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
וַיִּגְבַּ֛ה יְהוָ֥ה צְבָאֹ֖ות בַּמִּשְׁפָּ֑ט וְהָאֵל֙ הַקָּדֹ֔ושׁ נִקְדָּ֖שׁ בִּצְדָקָֽה׃ 16
೧೬ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
וְרָע֥וּ כְבָשִׂ֖ים כְּדָבְרָ֑ם וְחָרְבֹ֥ות מֵחִ֖ים גָּרִ֥ים יֹאכֵֽלוּ׃ 17
೧೭ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.
הֹ֛וי מֹשְׁכֵ֥י הֶֽעָוֹ֖ן בְּחַבְלֵ֣י הַשָּׁ֑וְא וְכַעֲבֹ֥ות הָעֲגָלָ֖ה חַטָּאָֽה׃ 18
೧೮ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
הָאֹמְרִ֗ים יְמַהֵ֧ר ׀ יָחִ֛ישָׁה מַעֲשֵׂ֖הוּ לְמַ֣עַן נִרְאֶ֑ה וְתִקְרַ֣ב וְתָבֹ֗ואָה עֲצַ֛ת קְדֹ֥ושׁ יִשְׂרָאֵ֖ל וְנֵדָֽעָה׃ ס 19
೧೯ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
הֹ֣וי הָאֹמְרִ֥ים לָרַ֛ע טֹ֖וב וְלַטֹּ֣וב רָ֑ע שָׂמִ֨ים חֹ֤שֶׁךְ לְאֹור֙ וְאֹ֣ור לְחֹ֔שֶׁךְ שָׂמִ֥ים מַ֛ר לְמָתֹ֖וק וּמָתֹ֥וק לְמָֽר׃ ס 20
೨೦ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
הֹ֖וי חֲכָמִ֣ים בְּעֵֽינֵיהֶ֑ם וְנֶ֥גֶד פְּנֵיהֶ֖ם נְבֹנִֽים׃ 21
೨೧ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!
הֹ֕וי גִּבֹּורִ֖ים לִשְׁתֹּ֣ות יָ֑יִן וְאַנְשֵׁי־חַ֖יִל לִמְסֹ֥ךְ שֵׁכָֽר׃ 22
೨೨ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
מַצְדִּיקֵ֥י רָשָׁ֖ע עֵ֣קֶב שֹׁ֑חַד וְצִדְקַ֥ת צַדִּיקִ֖ים יָסִ֥ירוּ מִמֶּֽנּוּ׃ ס 23
೨೩ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
לָכֵן֩ כֶּאֱכֹ֨ל קַ֜שׁ לְשֹׁ֣ון אֵ֗שׁ וַחֲשַׁ֤שׁ לֶֽהָבָה֙ יִרְפֶּ֔ה שָׁרְשָׁם֙ כַּמָּ֣ק יִֽהְיֶ֔ה וּפִרְחָ֖ם כָּאָבָ֣ק יַעֲלֶ֑ה כִּ֣י מָאֲס֗וּ אֵ֚ת תֹּורַת֙ יְהוָ֣ה צְבָאֹ֔ות וְאֵ֛ת אִמְרַ֥ת קְדֹֽושׁ־יִשְׂרָאֵ֖ל נִאֵֽצוּ׃ 24
೨೪ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
עַל־כֵּ֡ן חָרָה֩ אַף־יְהוָ֨ה בְּעַמֹּ֜ו וַיֵּ֣ט יָדֹ֧ו עָלָ֣יו וַיַּכֵּ֗הוּ וַֽיִּרְגְּזוּ֙ הֶֽהָרִ֔ים וַתְּהִ֧י נִבְלָתָ֛ם כַּסּוּחָ֖ה בְּקֶ֣רֶב חוּצֹ֑ות בְּכָל־זֹאת֙ לֹא־שָׁ֣ב אַפֹּ֔ו וְעֹ֖וד יָדֹ֥ו נְטוּיָֽה׃ 25
೨೫ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
וְנָֽשָׂא־נֵ֤ס לַגֹּויִם֙ מֵרָחֹ֔וק וְשָׁ֥רַק לֹ֖ו מִקְצֵ֣ה הָאָ֑רֶץ וְהִנֵּ֥ה מְהֵרָ֖ה קַ֥ל יָבֹֽוא׃ 26
೨೬ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
אֵין־עָיֵ֤ף וְאֵין־כֹּושֵׁל֙ בֹּ֔ו לֹ֥א יָנ֖וּם וְלֹ֣א יִישָׁ֑ן וְלֹ֤א נִפְתַּח֙ אֵזֹ֣ור חֲלָצָ֔יו וְלֹ֥א נִתַּ֖ק שְׂרֹ֥וךְ נְעָלָֽיו׃ 27
೨೭ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
אֲשֶׁ֤ר חִצָּיו֙ שְׁנוּנִ֔ים וְכָל־קַשְּׁתֹתָ֖יו דְּרֻכֹ֑ות פַּרְסֹ֤ות סוּסָיו֙ כַּצַּ֣ר נֶחְשָׁ֔בוּ וְגַלְגִּלָּ֖יו כַּסּוּפָֽה׃ 28
೨೮ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
שְׁאָגָ֥ה לֹ֖ו כַּלָּבִ֑יא וְשָׁאַג (יִשְׁאַ֨ג) כַּכְּפִירִ֤ים וְיִנְהֹם֙ וְיֹאחֵ֣ז טֶ֔רֶף וְיַפְלִ֖יט וְאֵ֥ין מַצִּֽיל׃ 29
೨೯ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
וְיִנְהֹ֥ם עָלָ֛יו בַּיֹּ֥ום הַה֖וּא כְּנַהֲמַת־יָ֑ם וְנִבַּ֤ט לָאָ֙רֶץ֙ וְהִנֵּה־חֹ֔שֶׁךְ צַ֣ר וָאֹ֔ור חָשַׁ֖ךְ בַּעֲרִיפֶֽיהָ׃ פ 30
೩೦ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.

< יְשַׁעְיָהוּ 5 >