< יְשַׁעְיָהוּ 62 >

לְמַ֤עַן צִיֹּון֙ לֹ֣א אֶחֱשֶׁ֔ה וּלְמַ֥עַן יְרוּשָׁלַ֖͏ִם לֹ֣א אֶשְׁקֹ֑וט עַד־יֵצֵ֤א כַנֹּ֙גַהּ֙ צִדְקָ֔הּ וִישׁוּעָתָ֖הּ כְּלַפִּ֥יד יִבְעָֽר׃ 1
ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.
וְרָא֤וּ גֹויִם֙ צִדְקֵ֔ךְ וְכָל־מְלָכִ֖ים כְּבֹודֵ֑ךְ וְקֹ֤רָא לָךְ֙ שֵׁ֣ם חָדָ֔שׁ אֲשֶׁ֛ר פִּ֥י יְהוָ֖ה יִקֳּבֶֽנּוּ׃ 2
ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
וְהָיִ֛יתְ עֲטֶ֥רֶת תִּפְאֶ֖רֶת בְּיַד־יְהוָ֑ה וּצְנֹוף (וּצְנִ֥יף) מְלוּכָ֖ה בְּכַף־אֱלֹהָֽיִךְ׃ 3
ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
לֹֽא־יֵאָמֵר֩ לָ֨ךְ עֹ֜וד עֲזוּבָ֗ה וּלְאַרְצֵךְ֙ לֹא־יֵאָמֵ֥ר עֹוד֙ שְׁמָמָ֔ה כִּ֣י לָ֗ךְ יִקָּרֵא֙ חֶפְצִי־בָ֔הּ וּלְאַרְצֵ֖ךְ בְּעוּלָ֑ה כִּֽי־חָפֵ֤ץ יְהוָה֙ בָּ֔ךְ וְאַרְצֵ֖ךְ תִּבָּעֵֽל׃ 4
ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
כִּֽי־יִבְעַ֤ל בָּחוּר֙ בְּתוּלָ֔ה יִבְעָל֖וּךְ בָּנָ֑יִךְ וּמְשֹׂ֤ושׂ חָתָן֙ עַל־כַּלָּ֔ה יָשִׂ֥ישׂ עָלַ֖יִךְ אֱלֹהָֽיִךְ׃ 5
ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
עַל־חֹומֹתַ֣יִךְ יְרוּשָׁלַ֗͏ִם הִפְקַ֙דְתִּי֙ שֹֽׁמְרִ֔ים כָּל־הַיֹּ֧ום וְכָל־הַלַּ֛יְלָה תָּמִ֖יד לֹ֣א יֶחֱשׁ֑וּ הַמַּזְכִּרִים֙ אֶת־יְהוָ֔ה אַל־דֳּמִ֖י לָכֶֽם׃ 6
ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,
וְאַֽל־תִּתְּנ֥וּ דֳמִ֖י לֹ֑ו עַד־יְכֹונֵ֞ן וְעַד־יָשִׂ֧ים אֶת־יְרֽוּשָׁלַ֛͏ִם תְּהִלָּ֖ה בָּאָֽרֶץ׃ 7
ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.
נִשְׁבַּ֧ע יְהוָ֛ה בִּֽימִינֹ֖ו וּבִזְרֹ֣ועַ עֻזֹּ֑ו אִם־אֶתֵּן֩ אֶת־דְּגָנֵ֨ךְ עֹ֤וד מַֽאֲכָל֙ לְאֹ֣יְבַ֔יִךְ וְאִם־יִשְׁתּ֤וּ בְנֵֽי־נֵכָר֙ תִּֽירֹושֵׁ֔ךְ אֲשֶׁ֥ר יָגַ֖עַתְּ בֹּֽו׃ 8
ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
כִּ֤י מְאַסְפָיו֙ יֹאכְלֻ֔הוּ וְהִֽלְל֖וּ אֶת־יְהוָ֑ה וּֽמְקַבְּצָ֥יו יִשְׁתֻּ֖הוּ בְּחַצְרֹ֥ות קָדְשִֽׁי׃ ס 9
ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.
עִבְר֤וּ עִבְרוּ֙ בַּשְּׁעָרִ֔ים פַּנּ֖וּ דֶּ֣רֶךְ הָעָ֑ם סֹ֣לּוּ סֹ֤לּוּ הַֽמְסִלָּה֙ סַקְּל֣וּ מֵאֶ֔בֶן הָרִ֥ימוּ נֵ֖ס עַל־הָעַמִּֽים׃ 10
೧೦ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
הִנֵּ֣ה יְהוָ֗ה הִשְׁמִ֙יעַ֙ אֶל־קְצֵ֣ה הָאָ֔רֶץ אִמְרוּ֙ לְבַת־צִיֹּ֔ון הִנֵּ֥ה יִשְׁעֵ֖ךְ בָּ֑א הִנֵּ֤ה שְׂכָרֹו֙ אִתֹּ֔ו וּפְעֻלָּתֹ֖ו לְפָנָֽיו׃ 11
೧೧“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
וְקָרְא֥וּ לָהֶ֛ם עַם־הַקֹּ֖דֶשׁ גְּאוּלֵ֣י יְהוָ֑ה וְלָךְ֙ יִקָּרֵ֣א דְרוּשָׁ֔ה עִ֖יר לֹ֥א נֶעֱזָֽבָה׃ ס 12
೧೨ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.

< יְשַׁעְיָהוּ 62 >