< אִיּוֹב 8 >

וַ֭יַּעַן בִּלְדַּ֥ד הַשּׁוּחִ֗י וַיֹאמַֽר׃ 1
ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:
עַד־אָ֥ן תְּמַלֶּל־אֵ֑לֶּה וְר֥וּחַ כַּ֝בִּיר אִמְרֵי־פִֽיךָ׃ 2
“ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ? ನೀನು ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ.
הַ֭אֵל יְעַוֵּ֣ת מִשְׁפָּ֑ט וְאִם־שַׁ֝דַּ֗י יְעַוֵּֽת־צֶֽדֶק׃ 3
ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?
אִם־בָּנֶ֥יךָ חָֽטְאוּ־לֹ֑ו וַֽ֝יְשַׁלְּחֵ֗ם בְּיַד־פִּשְׁעָֽם׃ 4
ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು.
אִם־אַ֭תָּה תְּשַׁחֵ֣ר אֶל־אֵ֑ל וְאֶל־שַׁ֝דַּ֗י תִּתְחַנָּֽן׃ 5
ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, ಸರ್ವಶಕ್ತರಿಗೆ ಬಿನ್ನಹ ಮಾಡು.
אִם־זַ֥ךְ וְיָשָׁ֗ר אָ֥תָּה כִּי־עַ֭תָּה יָעִ֣יר עָלֶ֑יךָ וְ֝שִׁלַּ֗ם נְוַ֣ת צִדְקֶֽךָ׃ 6
ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು.
וְהָיָ֣ה רֵאשִׁיתְךָ֣ מִצְעָ֑ר וְ֝אַחֲרִיתְךָ֗ יִשְׂגֶּ֥ה מְאֹֽד׃ 7
ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು.
כִּֽי־שְׁאַל־נָ֭א לְדֹ֣ר רִישֹׁ֑ון וְ֝כֹונֵ֗ן לְחֵ֣קֶר אֲבֹותָֽם׃ 8
“ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.
כִּֽי־תְמֹ֣ול אֲ֭נַחְנוּ וְלֹ֣א נֵדָ֑ע כִּ֤י צֵ֖ל יָמֵ֣ינוּ עֲלֵי־אָֽרֶץ׃ 9
ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ.
הֲלֹא־הֵ֣ם יֹ֭ורוּךָ יֹ֣אמְרוּ לָ֑ךְ וּ֝מִלִּבָּ֗ם יֹוצִ֥אוּ מִלִּֽים׃ 10
ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?
הֲיִֽגְאֶה־גֹּ֭מֶא בְּלֹ֣א בִצָּ֑ה יִשְׂגֶּה־אָ֥חוּ בְלִי־מָֽיִם׃ 11
ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ?
עֹדֶ֣נּוּ בְ֭אִבֹּו לֹ֣א יִקָּטֵ֑ף וְלִפְנֵ֖י כָל־חָצִ֣יר יִיבָֽשׁ׃ 12
ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು.
כֵּ֗ן אָ֭רְחֹות כָּל־שֹׁ֣כְחֵי אֵ֑ל וְתִקְוַ֖ת חָנֵ֣ף תֹּאבֵֽד׃ 13
ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.
אֲשֶׁר־יָקֹ֥וט כִּסְלֹ֑ו וּבֵ֥ית עַ֝כָּבִ֗ישׁ מִבְטַחֹֽו׃ 14
ಅಂಥವರ ಭರವಸೆಯು ಭಂಗವಾಗುವುದು; ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು.
יִשָּׁעֵ֣ן עַל־בֵּ֭יתֹו וְלֹ֣א יַעֲמֹ֑ד יַחֲזִ֥יק בֹּ֝֗ו וְלֹ֣א יָקֽוּם׃ 15
ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು.
רָטֹ֣ב ה֖וּא לִפְנֵי־שָׁ֑מֶשׁ וְעַ֥ל גַּ֝נָּתֹ֗ו יֹֽנַקְתֹּ֥ו תֵצֵֽא׃ 16
ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.
עַל־גַּ֭ל שָֽׁרָשָׁ֣יו יְסֻבָּ֑כוּ בֵּ֖ית אֲבָנִ֣ים יֶחֱזֶֽה׃ 17
ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, ಕಲ್ಲುಗಳ ನಡುವೆ ನುಗ್ಗುತ್ತವೆ.
אִם־יְבַלְּעֶ֥נּוּ מִמְּקֹומֹ֑ו וְכִ֥חֶשׁ בֹּ֝֗ו לֹ֣א רְאִיתִֽיךָ׃ 18
ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು.
הֶן־ה֭וּא מְשֹׂ֣ושׂ דַּרְכֹּ֑ו וּ֝מֵעָפָ֗ר אַחֵ֥ר יִצְמָֽחוּ׃ 19
ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು.
הֶן־אֵ֭ל לֹ֣א יִמְאַס־תָּ֑ם וְלֹֽא־יַ֝חֲזִ֗יק בְּיַד־מְרֵעִֽים׃ 20
“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.
עַד־יְמַלֵּ֣ה שְׂחֹ֣וק פִּ֑יךָ וּשְׂפָתֶ֥יךָ תְרוּעָֽה׃ 21
ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು.
שֹׂנְאֶ֥יךָ יִלְבְּשׁוּ־בֹ֑שֶׁת וְאֹ֖הֶל רְשָׁעִ֣ים אֵינֶֽנּוּ׃ פ 22
ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”

< אִיּוֹב 8 >