< וַיִּקְרָא 13 >

וַיְדַבֵּ֣ר יְהוָ֔ה אֶל־מֹשֶׁ֥ה וְאֶֽל־אַהֲרֹ֖ן לֵאמֹֽר׃ 1
ಯೆಹೋವ ದೇವರು ಮೋಶೆ ಮತ್ತು ಆರೋನರೊಡನೆ ಮಾತನಾಡಿ ಹೇಳಿದ್ದೇನೆಂದರೆ,
אָדָ֗ם כִּֽי־יִהְיֶ֤ה בְעֹור־בְּשָׂרֹו֙ שְׂאֵ֤ת אֹֽו־סַפַּ֙חַת֙ אֹ֣ו בַהֶ֔רֶת וְהָיָ֥ה בְעֹור־בְּשָׂרֹ֖ו לְנֶ֣גַע צָרָ֑עַת וְהוּבָא֙ אֶל־אַהֲרֹ֣ן הַכֹּהֵ֔ן אֹ֛ו אֶל־אַחַ֥ד מִבָּנָ֖יו הַכֹּהֲנִֽים׃ 2
“ಒಬ್ಬ ಮನುಷ್ಯನು ತನ್ನ ಚರ್ಮದ ಮೇಲೆ ಬಾವಾಗಲಿ, ಕಜ್ಜಿಯಾಗಲಿ, ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಚರ್ಮದಲ್ಲಿ ಕುಷ್ಠದ ವ್ಯಾಧಿಯಂತಿದ್ದರೆ, ಅವನು ಯಾಜಕನಾದ ಆರೋನನ ಬಳಿಗಾದರೂ ಇಲ್ಲವೆ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗಾದರೂ ಕರೆದುಕೊಂಡು ಬರಬೇಕು.
וְרָאָ֣ה הַכֹּהֵ֣ן אֶת־הַנֶּ֣גַע בְּעֹֽור־הַ֠בָּשָׂר וְשֵׂעָ֨ר בַּנֶּ֜גַע הָפַ֣ךְ ׀ לָבָ֗ן וּמַרְאֵ֤ה הַנֶּ֙גַע֙ עָמֹק֙ מֵעֹ֣ור בְּשָׂרֹ֔ו נֶ֥גַע צָרַ֖עַת ה֑וּא וְרָאָ֥הוּ הַכֹּהֵ֖ן וְטִמֵּ֥א אֹתֹֽו׃ 3
ಯಾಜಕನು ಚರ್ಮದ ಮೇಲಿರುವ ವ್ಯಾಧಿಯನ್ನು ಪರೀಕ್ಷಿಸಬೇಕು. ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ, ಆ ವ್ಯಾಧಿಯು ಅವನ ಚರ್ಮಕ್ಕಿಂತಲೂ ಆಳವಾಗಿ ಕಂಡರೆ, ಅದು ಚರ್ಮರೋಗವಾಗಿರುವುದು. ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
וְאִם־בַּהֶרֶת֩ לְבָנָ֨ה הִ֜וא בְּעֹ֣ור בְּשָׂרֹ֗ו וְעָמֹק֙ אֵין־מַרְאֶ֣הָ מִן־הָעֹ֔ור וּשְׂעָרָ֖ה לֹא־הָפַ֣ךְ לָבָ֑ן וְהִסְגִּ֧יר הַכֹּהֵ֛ן אֶת־הַנֶּ֖גַע שִׁבְעַ֥ת יָמִֽים׃ 4
ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು.
וְרָאָ֣הוּ הַכֹּהֵן֮ בַּיֹּ֣ום הַשְּׁבִיעִי֒ וְהִנֵּ֤ה הַנֶּ֙גַע֙ עָמַ֣ד בְּעֵינָ֔יו לֹֽא־פָשָׂ֥ה הַנֶּ֖גַע בָּעֹ֑ור וְהִסְגִּירֹ֧ו הַכֹּהֵ֛ן שִׁבְעַ֥ת יָמִ֖ים שֵׁנִֽית׃ 5
ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
וְרָאָה֩ הַכֹּהֵ֨ן אֹתֹ֜ו בַּיֹּ֣ום הַשְּׁבִיעִי֮ שֵׁנִית֒ וְהִנֵּה֙ כֵּהָ֣ה הַנֶּ֔גַע וְלֹא־פָשָׂ֥ה הַנֶּ֖גַע בָּעֹ֑ור וְטִהֲרֹ֤ו הַכֹּהֵן֙ מִסְפַּ֣חַת הִ֔יא וְכִבֶּ֥ס בְּגָדָ֖יו וְטָהֵֽר׃ 6
ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು.
וְאִם־פָּשֹׂ֨ה תִפְשֶׂ֤ה הַמִּסְפַּ֙חַת֙ בָּעֹ֔ור אַחֲרֵ֧י הֵרָאֹתֹ֛ו אֶל־הַכֹּהֵ֖ן לְטָהֳרָתֹ֑ו וְנִרְאָ֥ה שֵׁנִ֖ית אֶל־הַכֹּהֵֽן׃ 7
ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ, ಅವನು ತಿರುಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
וְרָאָה֙ הַכֹּהֵ֔ן וְהִנֵּ֛ה פָּשְׂתָ֥ה הַמִּסְפַּ֖חַת בָּעֹ֑ור וְטִמְּאֹ֥ו הַכֹּהֵ֖ן צָרַ֥עַת הִֽוא׃ פ 8
ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು.
נֶ֣גַע צָרַ֔עַת כִּ֥י תִהְיֶ֖ה בְּאָדָ֑ם וְהוּבָ֖א אֶל־הַכֹּהֵֽן׃ 9
“ಚರ್ಮರೋಗವು ಮನುಷ್ಯನಲ್ಲಿ ಇರುವುದಾದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
וְרָאָ֣ה הַכֹּהֵ֗ן וְהִנֵּ֤ה שְׂאֵת־לְבָנָה֙ בָּעֹ֔ור וְהִ֕יא הָפְכָ֖ה שֵׂעָ֣ר לָבָ֑ן וּמִֽחְיַ֛ת בָּשָׂ֥ר חַ֖י בַּשְׂאֵֽת׃ 10
ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ,
צָרַ֨עַת נֹושֶׁ֤נֶת הִוא֙ בְּעֹ֣ור בְּשָׂרֹ֔ו וְטִמְּאֹ֖ו הַכֹּהֵ֑ן לֹ֣א יַסְגִּרֶ֔נּוּ כִּ֥י טָמֵ֖א הֽוּא׃ 11
ಅದು ಅವನ ಚರ್ಮದಲ್ಲಿ ದೀರ್ಘಕಾಲದ ಚರ್ಮರೋಗವಾಗಿರುವುದು. ಆಗ ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು ಮತ್ತು ಅವನನ್ನು ಪ್ರತ್ಯೇಕವಾಗಿ ಇರಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.
וְאִם־פָּרֹ֨וחַ תִּפְרַ֤ח הַצָּרַ֙עַת֙ בָּעֹ֔ור וְכִסְּתָ֣ה הַצָּרַ֗עַת אֵ֚ת כָּל־עֹ֣ור הַנֶּ֔גַע מֵרֹאשֹׁ֖ו וְעַד־רַגְלָ֑יו לְכָל־מַרְאֵ֖ה עֵינֵ֥י הַכֹּהֵֽן׃ 12
“ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ,
וְרָאָ֣ה הַכֹּהֵ֗ן וְהִנֵּ֨ה כִסְּתָ֤ה הַצָּרַ֙עַת֙ אֶת־כָּל־בְּשָׂרֹ֔ו וְטִהַ֖ר אֶת־הַנָּ֑גַע כֻּלֹּ֛ו הָפַ֥ךְ לָבָ֖ן טָהֹ֥ור הֽוּא׃ 13
ಆಗ ಯಾಜಕನು ಅದನ್ನು ಗಮನಿಸಬೇಕು. ತೊನ್ನು ಹತ್ತಿದರೆ, ಅವನ ಮೈಯೆಲ್ಲವನ್ನು ಹರಡಿಕೊಂಡಿದ್ದರೆ, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವುದರಿಂದ ಅವನು ಶುದ್ಧನಾಗಿರುವನು.
וּבְיֹ֨ום הֵרָאֹ֥ות בֹּ֛ו בָּשָׂ֥ר חַ֖י יִטְמָֽא׃ 14
ಆದರೆ ಹಸಿ ಮಾಂಸವು ಅವನಲ್ಲಿ ಕಾಣಿಸಿಕೊಂಡರೆ ಅವನು ಅಶುದ್ಧನಾಗಿರುವನು.
וְרָאָ֧ה הַכֹּהֵ֛ן אֶת־הַבָּשָׂ֥ר הַחַ֖י וְטִמְּאֹ֑ו הַבָּשָׂ֥ר הַחַ֛י טָמֵ֥א ה֖וּא צָרַ֥עַת הֽוּא׃ 15
ಯಾಜಕನು ಹಸಿ ಮಾಂಸವನ್ನು ಪರೀಕ್ಷಿಸಿ ಅವನು ಅಶುದ್ಧನೆಂದು ನುಡಿಯಬೇಕು. ಏಕೆಂದರೆ ಹಸಿ ಮಾಂಸವು ಅಶುದ್ಧವಾದದ್ದು, ಅದು ಅಶುದ್ಧಗೊಳಿಸುವ ಚರ್ಮರೋಗವೇ.
אֹ֣ו כִ֥י יָשׁ֛וּב הַבָּשָׂ֥ר הַחַ֖י וְנֶהְפַּ֣ךְ לְלָבָ֑ן וּבָ֖א אֶל־הַכֹּהֵֽן׃ 16
ಹಸಿ ಮಾಂಸವು ಮತ್ತೆ ಬದಲಾಗಿ ಬೆಳ್ಳಗಾದರೆ, ಅವನು ಯಾಜಕನ ಬಳಿಗೆ ಬರಬೇಕು.
וְרָאָ֙הוּ֙ הַכֹּהֵ֔ן וְהִנֵּ֛ה נֶהְפַּ֥ךְ הַנֶּ֖גַע לְלָבָ֑ן וְטִהַ֧ר הַכֹּהֵ֛ן אֶת־הַנֶּ֖גַע טָהֹ֥ור הֽוּא׃ פ 17
ಆಗ ಯಾಜಕನು ಅವನನ್ನು ಪರೀಕ್ಷಿಸಿ, ಆ ವ್ಯಾಧಿಯು ಬೆಳ್ಳಗಾಗಿದ್ದರೆ, ಯಾಜಕನು, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅವನು ಶುದ್ಧನಾಗಿರುವನು.
וּבָשָׂ֕ר כִּֽי־יִהְיֶ֥ה בֹֽו־בְעֹרֹ֖ו שְׁחִ֑ין וְנִרְפָּֽא׃ 18
“ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
וְהָיָ֞ה בִּמְקֹ֤ום הַשְּׁחִין֙ שְׂאֵ֣ת לְבָנָ֔ה אֹ֥ו בַהֶ֖רֶת לְבָנָ֣ה אֲדַמְדָּ֑מֶת וְנִרְאָ֖ה אֶל־הַכֹּהֵֽן׃ 19
ಆ ಹುಣ್ಣಿನ ಜಾಗದಲ್ಲಿ ಬಿಳಿಯ ಊತವಾಗಲಿ ಇಲ್ಲವೆ ಬಿಳುಪಾದ ಮಚ್ಚೆಯಾಗಲಿ, ಕೆಂಪು ಮಿಶ್ರಿತ ಕಲೆ ಉಂಟಾದರೆ ಅದನ್ನು ಯಾಜಕನಿಗೆ ತೋರಿಸಬೇಕು.
וְרָאָ֣ה הַכֹּהֵ֗ן וְהִנֵּ֤ה מַרְאֶ֙הָ֙ שָׁפָ֣ל מִן־הָעֹ֔ור וּשְׂעָרָ֖הּ הָפַ֣ךְ לָבָ֑ן וְטִמְּאֹ֧ו הַכֹּהֵ֛ן נֶֽגַע־צָרַ֥עַת הִ֖וא בַּשְּׁחִ֥ין פָּרָֽחָה׃ 20
ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು.
וְאִ֣ם ׀ יִרְאֶ֣נָּה הַכֹּהֵ֗ן וְהִנֵּ֤ה אֵֽין־בָּהּ֙ שֵׂעָ֣ר לָבָ֔ן וּשְׁפָלָ֥ה אֵינֶ֛נָּה מִן־הָעֹ֖ור וְהִ֣יא כֵהָ֑ה וְהִסְגִּירֹ֥ו הַכֹּהֵ֖ן שִׁבְעַ֥ת יָמִֽים׃ 21
ಆದರೆ ಯಾಜಕನು ಅದನ್ನು ಪರೀಕ್ಷಿಸಲು, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದಿದ್ದರೆ ಮತ್ತು ಸ್ವಲ್ಪ ಮಬ್ಬಾಗಿದ್ದರೆ, ಆಗ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
וְאִם־פָּשֹׂ֥ה תִפְשֶׂ֖ה בָּעֹ֑ור וְטִמֵּ֧א הַכֹּהֵ֛ן אֹתֹ֖ו נֶ֥גַע הִֽוא׃ 22
ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು. ಅದು ಚರ್ಮರೋಗವಾಗಿದೆ.
וְאִם־תַּחְתֶּ֜יהָ תַּעֲמֹ֤ד הַבַּהֶ֙רֶת֙ לֹ֣א פָשָׂ֔תָה צָרֶ֥בֶת הַשְּׁחִ֖ין הִ֑וא וְטִהֲרֹ֖ו הַכֹּהֵֽן׃ ס 23
ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
אֹ֣ו בָשָׂ֔ר כִּֽי־יִהְיֶ֥ה בְעֹרֹ֖ו מִכְוַת־אֵ֑שׁ וְֽהָיְתָ֞ה מִֽחְיַ֣ת הַמִּכְוָ֗ה בַּהֶ֛רֶת לְבָנָ֥ה אֲדַמְדֶּ֖מֶת אֹ֥ו לְבָנָֽה׃ 24
“ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಸಹ ಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಕಲೆಯಾಗಿದ್ದರೆ,
וְרָאָ֣ה אֹתָ֣הּ הַכֹּהֵ֡ן וְהִנֵּ֣ה נֶהְפַּךְ֩ שֵׂעָ֨ר לָבָ֜ן בַּבַּהֶ֗רֶת וּמַרְאֶ֙הָ֙ עָמֹ֣ק מִן־הָעֹ֔ור צָרַ֣עַת הִ֔וא בַּמִּכְוָ֖ה פָּרָ֑חָה וְטִמֵּ֤א אֹתֹו֙ הַכֹּהֵ֔ן נֶ֥גַע צָרַ֖עַת הִֽוא׃ 25
ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಹೊಳಪಾದ ಕಲೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆಯಿಂದ ಒಡೆದ ಚರ್ಮರೋಗವಾಗಿರುವುದು. ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಚರ್ಮವ್ಯಾಧಿಯಾಗಿದೆ.
וְאִ֣ם ׀ יִרְאֶ֣נָּה הַכֹּהֵ֗ן וְהִנֵּ֤ה אֵֽין־בַּבֶּהֶ֙רֶת֙ שֵׂעָ֣ר לָבָ֔ן וּשְׁפָלָ֥ה אֵינֶ֛נָּה מִן־הָעֹ֖ור וְהִ֣וא כֵהָ֑ה וְהִסְגִּירֹ֥ו הַכֹּהֵ֖ן שִׁבְעַ֥ת יָמִֽים׃ 26
ಆದರೆ ಯಾಜಕನು ಅದನ್ನು ಪರೀಕ್ಷಿಸಿದಾಗ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೋಟಾಗಿದ್ದರೆ, ಯಾಜಕನು ಆಗ ಅವನನ್ನು ಏಳು ದಿನಗಳ ಕಾಲ ಮುಚ್ಚಿಡಬೇಕು.
וְרָאָ֥הוּ הַכֹּהֵ֖ן בַּיֹּ֣ום הַשְּׁבִיעִ֑י אִם־פָּשֹׂ֤ה תִפְשֶׂה֙ בָּעֹ֔ור וְטִמֵּ֤א הַכֹּהֵן֙ אֹתֹ֔ו נֶ֥גַע צָרַ֖עַת הִֽוא׃ 27
ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ಚರ್ಮರೋಗ.
וְאִם־תַּחְתֶּיהָ֩ תַעֲמֹ֨ד הַבַּהֶ֜רֶת לֹא־פָשְׂתָ֤ה בָעֹור֙ וְהִ֣וא כֵהָ֔ה שְׂאֵ֥ת הַמִּכְוָ֖ה הִ֑וא וְטִֽהֲרֹו֙ הַכֹּהֵ֔ן כִּֽי־צָרֶ֥בֶת הַמִּכְוָ֖ה הִֽוא׃ פ 28
ಆ ಹೊಳಪಾದ ಕಲೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮಬ್ಬಾಗಿದ್ದರೆ, ಬೆಂಕಿ ಸುಟ್ಟ ಬೊಬ್ಬೆಯ ಊತವೆಂದು ಮತ್ತು ಅವನು ಶುದ್ಧನೆಂದು ಯಾಜಕನು ನುಡಿಯಬೇಕು. ಏಕೆಂದರೆ ಅದು ಬೆಂಕಿಯ ಬೊಬ್ಬೆಯಾಗಿರುವುದು.
וְאִישׁ֙ אֹ֣ו אִשָּׁ֔ה כִּֽי־יִהְיֶ֥ה בֹ֖ו נָ֑גַע בְּרֹ֖אשׁ אֹ֥ו בְזָקָֽן׃ 29
“ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,
וְרָאָ֨ה הַכֹּהֵ֜ן אֶת־הַנֶּ֗גַע וְהִנֵּ֤ה מַרְאֵ֙הוּ֙ עָמֹ֣ק מִן־הָעֹ֔ור וּבֹ֛ו שֵׂעָ֥ר צָהֹ֖ב דָּ֑ק וְטִמֵּ֨א אֹתֹ֤ו הַכֹּהֵן֙ נֶ֣תֶק ה֔וּא צָרַ֧עַת הָרֹ֛אשׁ אֹ֥ו הַזָּקָ֖ן הֽוּא׃ 30
ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.
וְכִֽי־יִרְאֶ֨ה הַכֹּהֵ֜ן אֶת־נֶ֣גַע הַנֶּ֗תֶק וְהִנֵּ֤ה אֵין־מַרְאֵ֙הוּ֙ עָמֹ֣ק מִן־הָעֹ֔ור וְשֵׂעָ֥ר שָׁחֹ֖ר אֵ֣ין בֹּ֑ו וְהִסְגִּ֧יר הַכֹּהֵ֛ן אֶת־נֶ֥גַע הַנֶּ֖תֶק שִׁבְעַ֥ת יָמִֽים׃ 31
ಯಾಜಕನು ಆ ಇಸಬಿನ ವ್ಯಾಧಿಯನ್ನು ನೋಡಿದಾಗ, ಅದು ಉಳಿದ ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪುಕೂದಲು ಇರದಿದ್ದರೆ, ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಬೇಕು.
וְרָאָ֨ה הַכֹּהֵ֣ן אֶת־הַנֶּגַע֮ בַּיֹּ֣ום הַשְּׁבִיעִי֒ וְהִנֵּה֙ לֹא־פָשָׂ֣ה הַנֶּ֔תֶק וְלֹא־הָ֥יָה בֹ֖ו שֵׂעָ֣ר צָהֹ֑ב וּמַרְאֵ֣ה הַנֶּ֔תֶק אֵ֥ין עָמֹ֖ק מִן־הָעֹֽור׃ 32
ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ,
וְהִ֨תְגַּלָּ֔ח וְאֶת־הַנֶּ֖תֶק לֹ֣א יְגַלֵּ֑חַ וְהִסְגִּ֨יר הַכֹּהֵ֧ן אֶת־הַנֶּ֛תֶק שִׁבְעַ֥ת יָמִ֖ים שֵׁנִֽית׃ 33
ಅವನು ಕ್ಷೌರ ಮಾಡಿಸಿಕೊಳ್ಳಲಿ. ಆದರೆ ಅವನು ಇಸಬನ್ನು ಕ್ಷೌರ ಮಾಡಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.
וְרָאָה֩ הַכֹּהֵ֨ן אֶת־הַנֶּ֜תֶק בַּיֹּ֣ום הַשְּׁבִיעִ֗י וְ֠הִנֵּה לֹא־פָשָׂ֤ה הַנֶּ֙תֶק֙ בָּעֹ֔ור וּמַרְאֵ֕הוּ אֵינֶ֥נּוּ עָמֹ֖ק מִן־הָעֹ֑ור וְטִהַ֤ר אֹתֹו֙ הַכֹּהֵ֔ן וְכִבֶּ֥ס בְּגָדָ֖יו וְטָהֵֽר׃ 34
ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು.
וְאִם־פָּשֹׂ֥ה יִפְשֶׂ֛ה הַנֶּ֖תֶק בָּעֹ֑ור אַחֲרֵ֖י טָהֳרָתֹֽו׃ 35
ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿರದಿದ್ದರೆ,
וְרָאָ֙הוּ֙ הַכֹּהֵ֔ן וְהִנֵּ֛ה פָּשָׂ֥ה הַנֶּ֖תֶק בָּעֹ֑ור לֹֽא־יְבַקֵּ֧ר הַכֹּהֵ֛ן לַשֵּׂעָ֥ר הַצָּהֹ֖ב טָמֵ֥א הֽוּא׃ 36
ಯಾಜಕನು ಆಗ ಅವನನ್ನು ಪರೀಕ್ಷಿಸಬೇಕು, ಆ ಇಸಬು ಚರ್ಮದಲ್ಲಿ ಹರಡಿದ್ದರೆ, ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ. ಅವನು ಅಶುದ್ಧನು.
וְאִם־בְּעֵינָיו֩ עָמַ֨ד הַנֶּ֜תֶק וְשֵׂעָ֨ר שָׁחֹ֧ר צָֽמַח־בֹּ֛ו נִרְפָּ֥א הַנֶּ֖תֶק טָהֹ֣ור ה֑וּא וְטִהֲרֹ֖ו הַכֹּהֵֽן׃ ס 37
ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಮತ್ತು ಅದರಲ್ಲಿ ಕಪ್ಪುಕೂದಲು ಬೆಳೆದರೆ, ಇಸಬು ವಾಸಿಯಾಗಿ ಅವನು ಶುದ್ಧನಾಗುವನು, ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
וְאִישׁ֙ אֹֽו־אִשָּׁ֔ה כִּֽי־יִהְיֶ֥ה בְעֹור־בְּשָׂרָ֖ם בֶּהָרֹ֑ת בֶּהָרֹ֖ת לְבָנֹֽת׃ 38
“ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ದೇಹದ ಚರ್ಮದಲ್ಲಿ ಬಿಳಿಯ ಹೊಳಪಾದ ಮಚ್ಚೆಗಳು ಅಲ್ಲಲ್ಲಿ ಇದ್ದರೆ,
וְרָאָ֣ה הַכֹּהֵ֗ן וְהִנֵּ֧ה בְעֹור־בְּשָׂרָ֛ם בֶּהָרֹ֖ת כֵּהֹ֣ות לְבָנֹ֑ת בֹּ֥הַק ה֛וּא פָּרַ֥ח בָּעֹ֖ור טָהֹ֥ור הֽוּא׃ ס 39
ಅವುಗಳನ್ನು ಯಾಜಕನು ಪರೀಕ್ಷಿಸಬೇಕು, ಅವರ ದೇಹದ ಚರ್ಮದಲ್ಲಿ ಹೊಳಪಾದ ಕಲೆಗಳು ಮಬ್ಬಾಗಿ ಬಿಳುಪಾಗಿದ್ದರೆ, ಅದು ಚರ್ಮದ ಮೇಲೆ ಬಿಸಿಲಿನಿಂದಾದ ಕೆಂಪು ಮಚ್ಚೆಯಾಗಿರುವುದು. ಅವನು ಶುದ್ಧನಾಗಿರುವನು.
וְאִ֕ישׁ כִּ֥י יִמָּרֵ֖ט רֹאשֹׁ֑ו קֵרֵ֥חַ ה֖וּא טָהֹ֥ור הֽוּא׃ 40
“ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು.
וְאִם֙ מִפְּאַ֣ת פָּנָ֔יו יִמָּרֵ֖ט רֹאשֹׁ֑ו גִּבֵּ֥חַ ה֖וּא טָהֹ֥ור הֽוּא׃ 41
ಮುಂದಲೆಯ ಭಾಗದಲ್ಲಿ ಕೂದಲು ಉದುರಿ ಹೋಗಿದ್ದರೆ, ಅವನು ಪಟ್ಟೆ ತಲೆಯವನು, ಆದರೂ ಅವನು ಶುದ್ಧನಾಗಿರುವನು.
וְכִֽי־יִהְיֶ֤ה בַקָּרַ֙חַת֙ אֹ֣ו בַגַּבַּ֔חַת נֶ֖גַע לָבָ֣ן אֲדַמְדָּ֑ם צָרַ֤עַת פֹּרַ֙חַת֙ הִ֔וא בְּקָרַחְתֹּ֖ו אֹ֥ו בְגַבַּחְתֹּֽו׃ 42
ಆದರೆ ಆ ಬೋಳು ತಲೆಯಲ್ಲಿ ಇಲ್ಲವೆ ಪಟ್ಟೆ ತಲೆಯಲ್ಲಿ ಕೆಂಪಗಿರುವ ಬಿಳುಪಾದ ಮಚ್ಚೆಯಿದ್ದರೆ, ಅದು ಅವನ ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆ ತಲೆಯಲ್ಲಾಗಲಿ ಹುಟ್ಟುತ್ತಿರುವ ಚರ್ಮರೋಗವೇ.
וְרָאָ֨ה אֹתֹ֜ו הַכֹּהֵ֗ן וְהִנֵּ֤ה שְׂאֵת־הַנֶּ֙גַע֙ לְבָנָ֣ה אֲדַמְדֶּ֔מֶת בְּקָרַחְתֹּ֖ו אֹ֣ו בְגַבַּחְתֹּ֑ו כְּמַרְאֵ֥ה צָרַ֖עַת עֹ֥ור בָּשָֽׂר׃ 43
ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು. ಅವನ ಬೋಳು ತಲೆಯಲ್ಲಾಗಲಿ, ಇಲ್ಲವೆ ಅವನ ಪಟ್ಟೆ ತಲೆಯಲ್ಲಾಗಲಿ ಏಳುತ್ತಿರುವ ಆ ಕಲೆಯು ಬಿಳುಪಾಗಿ ಕೆಂಪಾಗಿದ್ದರೆ ಮತ್ತು ಮಾಂಸದ ತೊಗಲಿನಲ್ಲಿ ಇರುವ ಚರ್ಮರೋಗದ ಹಾಗಿದ್ದರೆ, ಅವನು ರೋಗಿ ಎಂದೂ ಅಶುದ್ಧನೆಂದೂ
אִישׁ־צָר֥וּעַ ה֖וּא טָמֵ֣א ה֑וּא טַמֵּ֧א יְטַמְּאֶ֛נּוּ הַכֹּהֵ֖ן בְּרֹאשֹׁ֥ו נִגְעֹֽו׃ 44
ಅವನ ವ್ಯಾಧಿಯು ಅವನ ತಲೆಯಲ್ಲಿ ಕಾಣಿಸಿದ್ದರಿಂದ ಅವನು ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
וְהַצָּר֜וּעַ אֲשֶׁר־בֹּ֣ו הַנֶּ֗גַע בְּגָדָ֞יו יִהְי֤וּ פְרֻמִים֙ וְרֹאשֹׁו֙ יִהְיֶ֣ה פָר֔וּעַ וְעַל־שָׂפָ֖ם יַעְטֶ֑ה וְטָמֵ֥א ׀ טָמֵ֖א יִקְרָֽא׃ 45
“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.
כָּל־יְמֵ֞י אֲשֶׁ֨ר הַנֶּ֥גַע בֹּ֛ו יִטְמָ֖א טָמֵ֣א ה֑וּא בָּדָ֣ד יֵשֵׁ֔ב מִח֥וּץ לַֽמַּחֲנֶ֖ה מֹושָׁבֹֽו׃ ס 46
ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
וְהַבֶּ֕גֶד כִּֽי־יִהְיֶ֥ה בֹ֖ו נֶ֣גַע צָרָ֑עַת בְּבֶ֣גֶד צֶ֔מֶר אֹ֖ו בְּבֶ֥גֶד פִּשְׁתִּֽים׃ 47
“ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ,
אֹ֤ו בִֽשְׁתִי֙ אֹ֣ו בְעֵ֔רֶב לַפִּשְׁתִּ֖ים וְלַצָּ֑מֶר אֹ֣ו בְעֹ֔ור אֹ֖ו בְּכָל־מְלֶ֥אכֶת עֹֽור׃ 48
ನಾರಿನ ಇಲ್ಲವೆ ಉಣ್ಣೆಯ ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ಚರ್ಮದಲ್ಲಾಗಲಿ, ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಇದಲ್ಲದೆ ಹಸುರಾಗಿ ಇಲ್ಲವೆ,
וְהָיָ֨ה הַנֶּ֜גַע יְרַקְרַ֣ק ׀ אֹ֣ו אֲדַמְדָּ֗ם בַּבֶּגֶד֩ אֹ֨ו בָעֹ֜ור אֹֽו־בַשְּׁתִ֤י אֹו־בָעֵ֙רֶב֙ אֹ֣ו בְכָל־כְּלִי־עֹ֔ור נֶ֥גַע צָרַ֖עַת ה֑וּא וְהָרְאָ֖ה אֶת־הַכֹּהֵֽן׃ 49
ಆ ಬಟ್ಟೆ ತೊಗಲು ಹಾಸು ಇಲ್ಲವೆ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ, ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಬೂಜಾಗಿದೆ. ಅದನ್ನು ಯಾಜಕನಿಗೆ ತೋರಿಸಬೇಕು.
וְרָאָ֥ה הַכֹּהֵ֖ן אֶת־הַנָּ֑גַע וְהִסְגִּ֥יר אֶת־הַנֶּ֖גַע שִׁבְעַ֥ת יָמִֽים׃ 50
ಯಾಜಕನು ಅದನ್ನು ಪರೀಕ್ಷಿಸಿ, ಆ ವಸ್ತುವನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
וְרָאָ֨ה אֶת־הַנֶּ֜גַע בַּיֹּ֣ום הַשְּׁבִיעִ֗י כִּֽי־פָשָׂ֤ה הַנֶּ֙גַע֙ בַּ֠בֶּגֶד אֹֽו־בַשְּׁתִ֤י אֹֽו־בָעֵ֙רֶב֙ אֹ֣ו בָעֹ֔ור לְכֹ֛ל אֲשֶׁר־יֵעָשֶׂ֥ה הָעֹ֖ור לִמְלָאכָ֑ה צָרַ֧עַת מַמְאֶ֛רֶת הַנֶּ֖גַע טָמֵ֥א הֽוּא׃ 51
ಅವನು ಏಳನೆಯ ದಿನದಲ್ಲಿ ಅದನ್ನು ಪರೀಕ್ಷಿಸಬೇಕು. ಆ ಬೂಜು ಅವನ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಹರಡಿದ್ದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದು ಅಶುದ್ಧವು.
וְשָׂרַ֨ף אֶת־הַבֶּ֜גֶד אֹ֥ו אֶֽת־הַשְּׁתִ֣י ׀ אֹ֣ו אֶת־הָעֵ֗רֶב בַּצֶּ֙מֶר֙ אֹ֣ו בַפִּשְׁתִּ֔ים אֹ֚ו אֶת־כָּל־כְּלִ֣י הָעֹ֔ור אֲשֶׁר־יִהְיֶ֥ה בֹ֖ו הַנָּ֑גַע כִּֽי־צָרַ֤עַת מַמְאֶ֙רֶת֙ הִ֔וא בָּאֵ֖שׁ תִּשָּׂרֵֽף׃ 52
ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.
וְאִם֮ יִרְאֶ֣ה הַכֹּהֵן֒ וְהִנֵּה֙ לֹא־פָשָׂ֣ה הַנֶּ֔גַע בַּבֶּ֕גֶד אֹ֥ו בַשְּׁתִ֖י אֹ֣ו בָעֵ֑רֶב אֹ֖ו בְּכָל־כְּלִי־עֹֽור׃ 53
“ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ,
וְצִוָּה֙ הַכֹּהֵ֔ן וְכִ֨בְּס֔וּ אֵ֥ת אֲשֶׁר־בֹּ֖ו הַנָּ֑גַע וְהִסְגִּירֹ֥ו שִׁבְעַת־יָמִ֖ים שֵׁנִֽית׃ 54
ಆಗ ಯಾಜಕನು ಆ ಬೂಜುಳ್ಳ ವಸ್ತುವನ್ನು ತೊಳೆಯುವಂತೆ ಆಜ್ಞಾಪಿಸಿ, ಅದನ್ನು ಅವನು ಏಳು ದಿನಗಳ ಕಾಲ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.
וְרָאָ֨ה הַכֹּהֵ֜ן אַחֲרֵ֣י ׀ הֻכַּבֵּ֣ס אֶת־הַנֶּ֗גַע וְ֠הִנֵּה לֹֽא־הָפַ֨ךְ הַנֶּ֤גַע אֶת־עֵינֹו֙ וְהַנֶּ֣גַע לֹֽא־פָשָׂ֔ה טָמֵ֣א ה֔וּא בָּאֵ֖שׁ תִּשְׂרְפֶ֑נּוּ פְּחֶ֣תֶת הִ֔וא בְּקָרַחְתֹּ֖ו אֹ֥ו בְגַבַּחְתֹּֽו׃ 55
ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.
וְאִם֮ רָאָ֣ה הַכֹּהֵן֒ וְהִנֵּה֙ כֵּהָ֣ה הַנֶּ֔גַע אַחֲרֵ֖י הֻכַּבֵּ֣ס אֹתֹ֑ו וְקָרַ֣ע אֹתֹ֗ו מִן־הַבֶּ֙גֶד֙ אֹ֣ו מִן־הָעֹ֔ור אֹ֥ו מִן־הַשְּׁתִ֖י אֹ֥ו מִן־הָעֵֽרֶב׃ 56
ಯಾಜಕನು ಅದನ್ನು ಪರೀಕ್ಷಿಸಿದರೆ, ಆ ಬೂಜು ಹಿಡಿದ ವಸ್ತುವನ್ನು ತೊಳೆದ ನಂತರ ಮಬ್ಬಾಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ, ಚರ್ಮದಿಂದಾಗಲಿ, ಹಾಸಿನಿಂದಾಗಲಿ, ಹೊಕ್ಕಿನಿಂದಾಗಲಿ ಹರಿದುಹಾಕಬೇಕು.
וְאִם־תֵּרָאֶ֨ה עֹ֜וד בַּ֠בֶּגֶד אֹֽו־בַשְּׁתִ֤י אֹֽו־בָעֵ֙רֶב֙ אֹ֣ו בְכָל־כְּלִי־עֹ֔ור פֹּרַ֖חַת הִ֑וא בָּאֵ֣שׁ תִּשְׂרְפֶ֔נּוּ אֵ֥ת אֲשֶׁר־בֹּ֖ו הַנָּֽגַע׃ 57
ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು.
וְהַבֶּ֡גֶד אֹֽו־הַשְּׁתִ֨י אֹו־הָעֵ֜רֶב אֹֽו־כָל־כְּלִ֤י הָעֹור֙ אֲשֶׁ֣ר תְּכַבֵּ֔ס וְסָ֥ר מֵהֶ֖ם הַנָּ֑גַע וְכֻבַּ֥ס שֵׁנִ֖ית וְטָהֵֽר׃ 58
ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.”
זֹ֠את תֹּורַ֨ת נֶֽגַע־צָרַ֜עַת בֶּ֥גֶד הַצֶּ֣מֶר ׀ אֹ֣ו הַפִּשְׁתִּ֗ים אֹ֤ו הַשְּׁתִי֙ אֹ֣ו הָעֵ֔רֶב אֹ֖ו כָּל־כְּלִי־עֹ֑ור לְטַהֲרֹ֖ו אֹ֥ו לְטַמְּאֹֽו׃ פ 59
ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ.

< וַיִּקְרָא 13 >