< בְּמִדְבַּר 26 >

וַיְהִ֖י אַחֲרֵ֣י הַמַּגֵּפָ֑ה פ וַיֹּ֤אמֶר יְהוָה֙ אֶל־מֹשֶׁ֔ה וְאֶ֧ל אֶלְעָזָ֛ר בֶּן־אַהֲרֹ֥ן הַכֹּהֵ֖ן לֵאמֹֽר׃ 1
ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
שְׂא֞וּ אֶת־רֹ֣אשׁ ׀ כָּל־עֲדַ֣ת בְּנֵי־יִשְׂרָאֵ֗ל מִבֶּ֨ן עֶשְׂרִ֥ים שָׁנָ֛ה וָמַ֖עְלָה לְבֵ֣ית אֲבֹתָ֑ם כָּל־יֹצֵ֥א צָבָ֖א בְּיִשְׂרָאֵֽל׃ 2
“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
וַיְדַבֵּ֨ר מֹשֶׁ֜ה וְאֶלְעָזָ֧ר הַכֹּהֵ֛ן אֹתָ֖ם בְּעַֽרְבֹ֣ת מֹואָ֑ב עַל־יַרְדֵּ֥ן יְרֵחֹ֖ו לֵאמֹֽר׃ 3
ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
מִבֶּ֛ן עֶשְׂרִ֥ים שָׁנָ֖ה וָמָ֑עְלָה כַּאֲשֶׁר֩ צִוָּ֨ה יְהוָ֤ה אֶת־מֹשֶׁה֙ וּבְנֵ֣י יִשְׂרָאֵ֔ל הַיֹּצְאִ֖ים מֵאֶ֥רֶץ מִצְרָֽיִם׃ 4
“ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
רְאוּבֵ֖ן בְּכֹ֣ור יִשְׂרָאֵ֑ל בְּנֵ֣י רְאוּבֵ֗ן חֲנֹוךְ֙ מִשְׁפַּ֣חַת הַחֲנֹכִ֔י לְפַלּ֕וּא מִשְׁפַּ֖חַת הַפַּלֻּאִֽי׃ 5
ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
לְחֶצְרֹ֕ן מִשְׁפַּ֖חַת הַֽחֶצְרֹונִ֑י לְכַרְמִ֕י מִשְׁפַּ֖חַת הַכַּרְמִֽי׃ 6
ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
אֵ֖לֶּה מִשְׁפְּחֹ֣ת הָרֻֽאוּבֵנִ֑י וַיִּהְי֣וּ פְקֻדֵיהֶ֗ם שְׁלֹשָׁ֤ה וְאַרְבָּעִים֙ אֶ֔לֶף וּשְׁבַ֥ע מֵאֹ֖ות וּשְׁלֹשִֽׁים׃ 7
ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
וּבְנֵ֥י פַלּ֖וּא אֱלִיאָֽב׃ 8
ಪಲ್ಲೂವಿನ ಮಗನು ಎಲೀಯಾಬ್.
וּבְנֵ֣י אֱלִיאָ֔ב נְמוּאֵ֖ל וְדָתָ֣ן וַאֲבִירָ֑ם הֽוּא־דָתָ֨ן וַאֲבִירָ֜ם קְרוּאֵי (קְרִיאֵ֣י) הָעֵדָ֗ה אֲשֶׁ֨ר הִצּ֜וּ עַל־מֹשֶׁ֤ה וְעַֽל־אַהֲרֹן֙ בַּעֲדַת־קֹ֔רַח בְּהַצֹּתָ֖ם עַל־יְהוָֽה׃ 9
ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
וַתִּפְתַּ֨ח הָאָ֜רֶץ אֶת־פִּ֗יהָ וַתִּבְלַ֥ע אֹתָ֛ם וְאֶת־קֹ֖רַח בְּמֹ֣ות הָעֵדָ֑ה בַּאֲכֹ֣ל הָאֵ֗שׁ אֵ֣ת חֲמִשִּׁ֤ים וּמָאתַ֙יִם֙ אִ֔ישׁ וַיִּהְי֖וּ לְנֵֽס׃ 10
೧೦ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
וּבְנֵי־קֹ֖רַח לֹא־מֵֽתוּ׃ ס 11
೧೧ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
בְּנֵ֣י שִׁמְעֹון֮ לְמִשְׁפְּחֹתָם֒ לִנְמוּאֵ֗ל מִשְׁפַּ֙חַת֙ הַנְּמ֣וּאֵלִ֔י לְיָמִ֕ין מִשְׁפַּ֖חַת הַיָּמִינִ֑י לְיָכִ֕ין מִשְׁפַּ֖חַת הַיָּכִינִֽי׃ 12
೧೨ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,
לְזֶ֕רַח מִשְׁפַּ֖חַת הַזַּרְחִ֑י לְשָׁא֕וּל מִשְׁפַּ֖חַת הַשָּׁאוּלִֽי׃ 13
೧೩ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
אֵ֖לֶּה מִשְׁפְּחֹ֣ת הַשִּׁמְעֹנִ֑י שְׁנַ֧יִם וְעֶשְׂרִ֛ים אֶ֖לֶף וּמָאתָֽיִם׃ ס 14
೧೪ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
בְּנֵ֣י גָד֮ לְמִשְׁפְּחֹתָם֒ לִצְפֹ֗ון מִשְׁפַּ֙חַת֙ הַצְּפֹונִ֔י לְחַגִּ֕י מִשְׁפַּ֖חַת הַֽחַגִּ֑י לְשׁוּנִ֕י מִשְׁפַּ֖חַת הַשּׁוּנִֽי׃ 15
೧೫ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
לְאָזְנִ֕י מִשְׁפַּ֖חַת הָאָזְנִ֑י לְעֵרִ֕י מִשְׁפַּ֖חַת הָעֵרִֽי׃ 16
೧೬ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
לַאֲרֹ֕וד מִשְׁפַּ֖חַת הָאֲרֹודִ֑י לְאַ֨רְאֵלִ֔י מִשְׁפַּ֖חַת הָאַרְאֵלִֽי׃ 17
೧೭ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
אֵ֛לֶּה מִשְׁפְּחֹ֥ת בְּנֵֽי־גָ֖ד לִפְקֻדֵיהֶ֑ם אַרְבָּעִ֥ים אֶ֖לֶף וַחֲמֵ֥שׁ מֵאֹֽות׃ ס 18
೧೮ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
בְּנֵ֥י יְהוּדָ֖ה עֵ֣ר וְאֹונָ֑ן וַיָּ֥מָת עֵ֛ר וְאֹונָ֖ן בְּאֶ֥רֶץ כְּנָֽעַן׃ 19
೧೯ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
וַיִּהְי֣וּ בְנֵי־יְהוּדָה֮ לְמִשְׁפְּחֹתָם֒ לְשֵׁלָ֗ה מִשְׁפַּ֙חַת֙ הַשֵּׁ֣לָנִ֔י לְפֶ֕רֶץ מִשְׁפַּ֖חַת הַפַּרְצִ֑י לְזֶ֕רַח מִשְׁפַּ֖חַת הַזַּרְחִֽי׃ 20
೨೦ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
וַיִּהְי֣וּ בְנֵי־פֶ֔רֶץ לְחֶצְרֹ֕ן מִשְׁפַּ֖חַת הַֽחֶצְרֹנִ֑י לְחָמ֕וּל מִשְׁפַּ֖חַת הֶחָמוּלִֽי׃ 21
೨೧ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
אֵ֛לֶּה מִשְׁפְּחֹ֥ת יְהוּדָ֖ה לִפְקֻדֵיהֶ֑ם שִׁשָּׁ֧ה וְשִׁבְעִ֛ים אֶ֖לֶף וַחֲמֵ֥שׁ מֵאֹֽות׃ ס 22
೨೨ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
בְּנֵ֤י יִשָּׂשכָר֙ לְמִשְׁפְּחֹתָ֔ם תֹּולָ֕ע מִשְׁפַּ֖חַת הַתֹּולָעִ֑י לְפֻוָ֕ה מִשְׁפַּ֖חַת הַפּוּנִֽי׃ 23
೨೩ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
לְיָשׁ֕וּב מִשְׁפַּ֖חַת הַיָּשׁוּבִ֑י לְשִׁמְרֹ֕ן מִשְׁפַּ֖חַת הַשִּׁמְרֹנִֽי׃ 24
೨೪ಯಾಶೂಬನ ವಂಶಸ್ಥರಾದ ಯಾಶೂಬ್ಯರು, ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
אֵ֛לֶּה מִשְׁפְּחֹ֥ת יִשָּׂשכָ֖ר לִפְקֻדֵיהֶ֑ם אַרְבָּעָ֧ה וְשִׁשִּׁ֛ים אֶ֖לֶף וּשְׁלֹ֥שׁ מֵאֹֽות׃ ס 25
೨೫ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
בְּנֵ֣י זְבוּלֻן֮ לְמִשְׁפְּחֹתָם֒ לְסֶ֗רֶד מִשְׁפַּ֙חַת֙ הַסַּרְדִּ֔י לְאֵלֹ֕ון מִשְׁפַּ֖חַת הָאֵלֹנִ֑י לְיַ֨חְלְאֵ֔ל מִשְׁפַּ֖חַת הַיַּחְלְאֵלִֽי׃ 26
೨೬ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
אֵ֛לֶּה מִשְׁפְּחֹ֥ת הַזְּבוּלֹנִ֖י לִפְקֻדֵיהֶ֑ם שִׁשִּׁ֥ים אֶ֖לֶף וַחֲמֵ֥שׁ מֵאֹֽות׃ ס 27
೨೭ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
בְּנֵ֥י יֹוסֵ֖ף לְמִשְׁפְּחֹתָ֑ם מְנַשֶּׁ֖ה וְאֶפְרָֽיִם׃ 28
೨೮ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
בְּנֵ֣י מְנַשֶּׁ֗ה לְמָכִיר֙ מִשְׁפַּ֣חַת הַמָּכִירִ֔י וּמָכִ֖יר הֹולִ֣יד אֶת־גִּלְעָ֑ד לְגִלְעָ֕ד מִשְׁפַּ֖חַת הַגִּלְעָדִֽי׃ 29
೨೯ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
אֵ֚לֶּה בְּנֵ֣י גִלְעָ֔ד אִיעֶ֕זֶר מִשְׁפַּ֖חַת הָאִֽיעֶזְרִ֑י לְחֵ֕לֶק מִשְׁפַּ֖חַת הַֽחֶלְקִֽי׃ 30
೩೦ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,
וְאַ֨שְׂרִיאֵ֔ל מִשְׁפַּ֖חַת הָֽאַשְׂרִֽאֵלִ֑י וְשֶׁ֕כֶם מִשְׁפַּ֖חַת הַשִּׁכְמִֽי׃ 31
೩೧ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು, ಶೆಕೆಮನ ವಂಶಸ್ಥರಾದ ಶೆಕೆಮ್ಯರು,
וּשְׁמִידָ֕ע מִשְׁפַּ֖חַת הַשְּׁמִידָעִ֑י וְחֵ֕פֶר מִשְׁפַּ֖חַת הַֽחֶפְרִֽי׃ 32
೩೨ಶೆಮೀದಾಯನ ವಂಶಸ್ಥರಾದ ಶೆಮೀದಾಯರು, ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
וּצְלָפְחָ֣ד בֶּן־חֵ֗פֶר לֹא־הָ֥יוּ לֹ֛ו בָּנִ֖ים כִּ֣י אִם־בָּנֹ֑ות וְשֵׁם֙ בְּנֹ֣ות צְלָפְחָ֔ד מַחְלָ֣ה וְנֹעָ֔ה חָגְלָ֥ה מִלְכָּ֖ה וְתִרְצָֽה׃ 33
೩೩ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
אֵ֖לֶּה מִשְׁפְּחֹ֣ת מְנַשֶּׁ֑ה וּפְקֻ֣דֵיהֶ֔ם שְׁנַ֧יִם וַחֲמִשִּׁ֛ים אֶ֖לֶף וּשְׁבַ֥ע מֵאֹֽות׃ ס 34
೩೪ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
אֵ֣לֶּה בְנֵי־אֶפְרַיִם֮ לְמִשְׁפְּחֹתָם֒ לְשׁוּתֶ֗לַח מִשְׁפַּ֙חַת֙ הַשֻּׁ֣תַלְחִ֔י לְבֶ֕כֶר מִשְׁפַּ֖חַת הַבַּכְרִ֑י לְתַ֕חַן מִשְׁפַּ֖חַת הַֽתַּחֲנִֽי׃ 35
೩೫ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
וְאֵ֖לֶּה בְּנֵ֣י שׁוּתָ֑לַח לְעֵרָ֕ן מִשְׁפַּ֖חַת הָעֵרָנִֽי׃ 36
೩೬ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
אֵ֣לֶּה מִשְׁפְּחֹ֤ת בְּנֵי־אֶפְרַ֙יִם֙ לִפְקֻ֣דֵיהֶ֔ם שְׁנַ֧יִם וּשְׁלֹשִׁ֛ים אֶ֖לֶף וַחֲמֵ֣שׁ מֵאֹ֑ות אֵ֥לֶּה בְנֵי־יֹוסֵ֖ף לְמִשְׁפְּחֹתָֽם׃ ס 37
೩೭ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
בְּנֵ֣י בִנְיָמִן֮ לְמִשְׁפְּחֹתָם֒ לְבֶ֗לַע מִשְׁפַּ֙חַת֙ הַבַּלְעִ֔י לְאַשְׁבֵּ֕ל מִשְׁפַּ֖חַת הָֽאַשְׁבֵּלִ֑י לַאֲחִירָ֕ם מִשְׁפַּ֖חַת הָאֲחִירָמִֽי׃ 38
೩೮ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
לִשְׁפוּפָ֕ם מִשְׁפַּ֖חַת הַשּׁוּפָמִ֑י לְחוּפָ֕ם מִשְׁפַּ֖חַת הַחוּפָמִֽי׃ 39
೩೯ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
וַיִּהְי֥וּ בְנֵי־בֶ֖לַע אַ֣רְדְּ וְנַעֲמָ֑ן מִשְׁפַּ֙חַת֙ הָֽאַרְדִּ֔י לְנַֽעֲמָ֔ן מִשְׁפַּ֖חַת הַֽנַּעֲמִֽי׃ 40
೪೦ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
אֵ֥לֶּה בְנֵי־בִנְיָמִ֖ן לְמִשְׁפְּחֹתָ֑ם וּפְקֻ֣דֵיהֶ֔ם חֲמִשָּׁ֧ה וְאַרְבָּעִ֛ים אֶ֖לֶף וְשֵׁ֥שׁ מֵאֹֽות׃ ס 41
೪೧ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
אֵ֤לֶּה בְנֵי־דָן֙ לְמִשְׁפְּחֹתָ֔ם לְשׁוּחָ֕ם מִשְׁפַּ֖חַת הַשּׁוּחָמִ֑י אֵ֛לֶּה מִשְׁפְּחֹ֥ת דָּ֖ן לְמִשְׁפְּחֹתָֽם׃ 42
೪೨ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
כָּל־מִשְׁפְּחֹ֥ת הַשּׁוּחָמִ֖י לִפְקֻדֵיהֶ֑ם אַרְבָּעָ֧ה וְשִׁשִּׁ֛ים אֶ֖לֶף וְאַרְבַּ֥ע מֵאֹֽות׃ ס 43
೪೩ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
בְּנֵ֣י אָשֵׁר֮ לְמִשְׁפְּחֹתָם֒ לְיִמְנָ֗ה מִשְׁפַּ֙חַת֙ הַיִּמְנָ֔ה לְיִשְׁוִ֕י מִשְׁפַּ֖חַת הַיִּשְׁוִ֑י לִבְרִיעָ֕ה מִשְׁפַּ֖חַת הַבְּרִיעִֽי׃ 44
೪೪ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
לִבְנֵ֣י בְרִיעָ֔ה לְחֶ֕בֶר מִשְׁפַּ֖חַת הַֽחֶבְרִ֑י לְמַ֨לְכִּיאֵ֔ל מִשְׁפַּ֖חַת הַמַּלְכִּיאֵלִֽי׃ 45
೪೫ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
וְשֵׁ֥ם בַּת־אָשֵׁ֖ר שָֽׂרַח׃ 46
೪೬ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
אֵ֛לֶּה מִשְׁפְּחֹ֥ת בְּנֵי־אָשֵׁ֖ר לִפְקֻדֵיהֶ֑ם שְׁלֹשָׁ֧ה וַחֲמִשִּׁ֛ים אֶ֖לֶף וְאַרְבַּ֥ע מֵאֹֽות׃ ס 47
೪೭ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
בְּנֵ֤י נַפְתָּלִי֙ לְמִשְׁפְּחֹתָ֔ם לְיַ֨חְצְאֵ֔ל מִשְׁפַּ֖חַת הַיַּחְצְאֵלִ֑י לְגוּנִ֕י מִשְׁפַּ֖חַת הַגּוּנִֽי׃ 48
೪೮ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
לְיֵ֕צֶר מִשְׁפַּ֖חַת הַיִּצְרִ֑י לְשִׁלֵּ֕ם מִשְׁפַּ֖חַת הַשִּׁלֵּמִֽי׃ 49
೪೯ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
אֵ֛לֶּה מִשְׁפְּחֹ֥ת נַפְתָּלִ֖י לְמִשְׁפְּחֹתָ֑ם וּפְקֻ֣דֵיהֶ֔ם חֲמִשָּׁ֧ה וְאַרְבָּעִ֛ים אֶ֖לֶף וְאַרְבַּ֥ע מֵאֹֽות׃ 50
೫೦ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
אֵ֗לֶּה פְּקוּדֵי֙ בְּנֵ֣י יִשְׂרָאֵ֔ל שֵׁשׁ־מֵאֹ֥ות אֶ֖לֶף וָאָ֑לֶף שְׁבַ֥ע מֵאֹ֖ות וּשְׁלֹשִֽׁים׃ פ 51
೫೧ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ 52
೫೨ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
לָאֵ֗לֶּה תֵּחָלֵ֥ק הָאָ֛רֶץ בְּנַחֲלָ֖ה בְּמִסְפַּ֥ר שֵׁמֹֽות׃ 53
೫೩“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
לָרַ֗ב תַּרְבֶּה֙ נַחֲלָתֹ֔ו וְלַמְעַ֕ט תַּמְעִ֖יט נַחֲלָתֹ֑ו אִ֚ישׁ לְפִ֣י פְקֻדָ֔יו יֻתַּ֖ן נַחֲלָתֹֽו׃ 54
೫೪ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
אַךְ־בְּגֹורָ֕ל יֵחָלֵ֖ק אֶת־הָאָ֑רֶץ לִשְׁמֹ֥ות מַטֹּות־אֲבֹתָ֖ם יִנְחָֽלוּ׃ 55
೫೫ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
עַל־פִּי֙ הַגֹּורָ֔ל תֵּחָלֵ֖ק נַחֲלָתֹ֑ו בֵּ֥ין רַ֖ב לִמְעָֽט׃ ס 56
೫೬ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
וְאֵ֨לֶּה פְקוּדֵ֣י הַלֵּוִי֮ לְמִשְׁפְּחֹתָם֒ לְגֵרְשֹׁ֗ון מִשְׁפַּ֙חַת֙ הַגֵּ֣רְשֻׁנִּ֔י לִקְהָ֕ת מִשְׁפַּ֖חַת הַקְּהָתִ֑י לִמְרָרִ֕י מִשְׁפַּ֖חַת הַמְּרָרִֽי׃ 57
೫೭ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.
אֵ֣לֶּה ׀ מִשְׁפְּחֹ֣ת לֵוִ֗י מִשְׁפַּ֨חַת הַלִּבְנִ֜י מִשְׁפַּ֤חַת הַֽחֶבְרֹנִי֙ מִשְׁפַּ֤חַת הַמַּחְלִי֙ מִשְׁפַּ֣חַת הַמּוּשִׁ֔י מִשְׁפַּ֖חַת הַקָּרְחִ֑י וּקְהָ֖ת הֹולִ֥ד אֶת־עַמְרָֽם׃ 58
೫೮ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.
וְשֵׁ֣ם ׀ אֵ֣שֶׁת עַמְרָ֗ם יֹוכֶ֙בֶד֙ בַּת־לֵוִ֔י אֲשֶׁ֨ר יָלְדָ֥ה אֹתָ֛הּ לְלֵוִ֖י בְּמִצְרָ֑יִם וַתֵּ֣לֶד לְעַמְרָ֗ם אֶֽת־אַהֲרֹן֙ וְאֶת־מֹשֶׁ֔ה וְאֵ֖ת מִרְיָ֥ם אֲחֹתָֽם׃ 59
೫೯ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
וַיִּוָּלֵ֣ד לְאַהֲרֹ֔ן אֶת־נָדָ֖ב וְאֶת־אֲבִיה֑וּא אֶת־אֶלְעָזָ֖ר וְאֶת־אִיתָמָֽר׃ 60
೬೦ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
וַיָּ֥מָת נָדָ֖ב וַאֲבִיה֑וּא בְּהַקְרִיבָ֥ם אֵשׁ־זָרָ֖ה לִפְנֵ֥י יְהוָֽה׃ 61
೬೧ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
וַיִּהְי֣וּ פְקֻדֵיהֶ֗ם שְׁלֹשָׁ֤ה וְעֶשְׂרִים֙ אֶ֔לֶף כָּל־זָכָ֖ר מִבֶּן־חֹ֣דֶשׁ וָמָ֑עְלָה כִּ֣י ׀ לֹ֣א הָתְפָּקְד֗וּ בְּתֹוךְ֙ בְּנֵ֣י יִשְׂרָאֵ֔ל כִּ֠י לֹא־נִתַּ֤ן לָהֶם֙ נַחֲלָ֔ה בְּתֹ֖וךְ בְּנֵ֥י יִשְׂרָאֵֽל׃ 62
೬೨ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
אֵ֚לֶּה פְּקוּדֵ֣י מֹשֶׁ֔ה וְאֶלְעָזָ֖ר הַכֹּהֵ֑ן אֲשֶׁ֨ר פּֽ͏ָקְד֜וּ אֶת־בְּנֵ֤י יִשְׂרָאֵל֙ בְּעַֽרְבֹ֣ת מֹואָ֔ב עַ֖ל יַרְדֵּ֥ן יְרֵחֹֽו׃ 63
೬೩ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
וּבְאֵ֙לֶּה֙ לֹא־הָ֣יָה אִ֔ישׁ מִפְּקוּדֵ֣י מֹשֶׁ֔ה וְאַהֲרֹ֖ן הַכֹּהֵ֑ן אֲשֶׁ֥ר פָּקְד֛וּ אֶת־בְּנֵ֥י יִשְׂרָאֵ֖ל בְּמִדְבַּ֥ר סִינָֽי׃ 64
೬೪ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
כִּֽי־אָמַ֤ר יְהוָה֙ לָהֶ֔ם מֹ֥ות יָמֻ֖תוּ בַּמִּדְבָּ֑ר וְלֹא־נֹותַ֤ר מֵהֶם֙ אִ֔ישׁ כִּ֚י אִם־כָּלֵ֣ב בֶּן־יְפֻנֶּ֔ה וִיהֹושֻׁ֖עַ בִּן־נֽוּן׃ ס 65
೬೫ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

< בְּמִדְבַּר 26 >