< מִשְׁלֵי 20 >

לֵ֣ץ הַ֭יַּין הֹמֶ֣ה שֵׁכָ֑ר וְכָל־שֹׁ֥גֶה בֹּ֝֗ו לֹ֣א יֶחְכָּֽם׃ 1
ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.
נַ֣הַם כַּ֭כְּפִיר אֵ֣ימַת מֶ֑לֶךְ מִ֝תְעַבְּרֹ֗ו חֹוטֵ֥א נַפְשֹֽׁו׃ 2
ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.
כָּבֹ֣וד לָ֭אִישׁ שֶׁ֣בֶת מֵרִ֑יב וְכָל־אֱ֝וִ֗יל יִתְגַּלָּֽע׃ 3
ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.
מֵ֭חֹרֶף עָצֵ֣ל לֹא־יַחֲרֹ֑שׁ יִשְׁאַל (וְשָׁאַ֖ל) בַּקָּצִ֣יר וָאָֽיִן׃ 4
ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.
מַ֣יִם עֲ֭מֻקִּים עֵצָ֣ה בְלֶב־אִ֑ישׁ וְאִ֖ישׁ תְּבוּנָ֣ה יִדְלֶֽנָּה׃ 5
ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.
רָב־אָדָ֗ם יִ֭קְרָא אִ֣ישׁ חַסְדֹּ֑ו וְאִ֥ישׁ אֱ֝מוּנִ֗ים מִ֣י יִמְצָֽא׃ 6
ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
מִתְהַלֵּ֣ךְ בְּתֻמֹּ֣ו צַדִּ֑יק אַשְׁרֵ֖י בָנָ֣יו אַחֲרָֽיו׃ 7
ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.
מֶ֗לֶךְ יֹושֵׁ֥ב עַל־כִּסֵּא־דִ֑ין מְזָרֶ֖ה בְעֵינָ֣יו כָּל־רָֽע׃ 8
ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
מִֽי־יֹ֭אמַר זִכִּ֣יתִי לִבִּ֑י טָ֝הַ֗רְתִּי מֵחַטָּאתִֽי׃ 9
“ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?
אֶ֣בֶן וָ֭אֶבֶן אֵיפָ֣ה וְאֵיפָ֑ה תֹּועֲבַ֥ת יְ֝הוָ֗ה גַּם־שְׁנֵיהֶֽם׃ 10
ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.
גַּ֣ם בְּ֭מַעֲלָלָיו יִתְנַכֶּר־נָ֑עַר אִם־זַ֖ךְ וְאִם־יָשָׁ֣ר פָּעֳלֹֽו׃ 11
ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.
אֹ֣זֶן שֹׁ֭מַעַת וְעַ֣יִן רֹאָ֑ה יְ֝הוָ֗ה עָשָׂ֥ה גַם־שְׁנֵיהֶֽם׃ 12
ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.
אַל־תֶּֽאֱהַ֣ב שֵׁ֭נָה פֶּן־תִּוָּרֵ֑שׁ פְּקַ֖ח עֵינֶ֣יךָ שְֽׂבַֽע־לָֽחֶם׃ 13
ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!
רַ֣ע רַ֭ע יֹאמַ֣ר הַקֹּונֶ֑ה וְאֹזֵ֥ל לֹ֝֗ו אָ֣ז יִתְהַלָּֽל׃ 14
“ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.
יֵ֣שׁ זָ֭הָב וְרָב־פְּנִינִ֑ים וּכְלִ֥י יְ֝קָ֗ר שִׂפְתֵי־דָֽעַת׃ 15
ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.
לְֽקַח־בִּ֭גְדֹו כִּי־עָ֣רַב זָ֑ר וּבְעַ֖ד נָכְרִים (נָכְרִיָּ֣ה) חַבְלֵֽהוּ׃ 16
ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.
עָרֵ֣ב לָ֭אִישׁ לֶ֣חֶם שָׁ֑קֶר וְ֝אַחַ֗ר יִמָּֽלֵא־פִ֥יהוּ חָצָֽץ׃ 17
ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.
מַ֭חֲשָׁבֹות בְּעֵצָ֣ה תִכֹּ֑ון וּ֝בְתַחְבֻּלֹ֗ות עֲשֵׂ֣ה מִלְחָמָֽה׃ 18
ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.
גֹּֽולֶה־סֹּ֭וד הֹולֵ֣ךְ רָכִ֑יל וּלְפֹתֶ֥ה שְׂ֝פָתָ֗יו לֹ֣א תִתְעָרָֽב׃ 19
ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.
מְ֭קַלֵּל אָבִ֣יו וְאִמֹּ֑ו יִֽדְעַ֥ךְ נֵ֝רֹ֗ו בְּאִישֹׁון (בֶּאֱשׁ֥וּן) חֹֽשֶׁךְ׃ 20
ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
נַ֭חֲלָה מְבֻחֶלֶת (מְבֹהֶ֣לֶת) בָּרִאשֹׁנָ֑ה וְ֝אַחֲרִיתָ֗הּ לֹ֣א תְבֹרָֽךְ׃ 21
ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.
אַל־תֹּאמַ֥ר אֲשַׁלְּמָה־רָ֑ע קַוֵּ֥ה לַֽ֝יהוָ֗ה וְיֹ֣שַֽׁע לָֽךְ׃ 22
ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.
תֹּועֲבַ֣ת יְ֭הוָה אֶ֣בֶן וָאָ֑בֶן וּמֹאזְנֵ֖י מִרְמָ֣ה לֹא־טֹֽוב׃ 23
ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.
מֵיְהוָ֥ה מִצְעֲדֵי־גָ֑בֶר וְ֝אָדָ֗ם מַה־יָּבִ֥ין דַּרְכֹּֽו׃ 24
ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?
מֹוקֵ֣שׁ אָ֭דָם יָ֣לַע קֹ֑דֶשׁ וְאַחַ֖ר נְדָרִ֣ים לְבַקֵּֽר׃ 25
ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.
מְזָרֶ֣ה רְ֭שָׁעִים מֶ֣לֶךְ חָכָ֑ם וַיָּ֖שֶׁב עֲלֵיהֶ֣ם אֹופָֽן׃ 26
ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.
נֵ֣ר יְ֭הוָה נִשְׁמַ֣ת אָדָ֑ם חֹ֝פֵ֗שׂ כָּל־חַדְרֵי־בָֽטֶן׃ 27
ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.
חֶ֣סֶד וֶ֭אֱמֶת יִצְּרוּ־מֶ֑לֶךְ וְסָעַ֖ד בַּחֶ֣סֶד כִּסְאֹֽו׃ 28
ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
תִּפְאֶ֣רֶת בַּחוּרִ֣ים כֹּחָ֑ם וַהֲדַ֖ר זְקֵנִ֣ים שֵׂיבָֽה׃ 29
ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.
חַבֻּרֹ֣ות פֶּ֭צַע תַּמְרִיק (תַּמְר֣וּק) בְּרָ֑ע וּ֝מַכֹּ֗ות חַדְרֵי־בָֽטֶן׃ 30
ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.

< מִשְׁלֵי 20 >