< מִשְׁלֵי 21 >

פַּלְגֵי־מַ֣יִם לֶב־מֶ֭לֶךְ בְּיַד־יְהוָ֑ה עַֽל־כָּל־אֲשֶׁ֖ר יַחְפֹּ֣ץ יַטֶּֽנּוּ׃ 1
ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
כָּֽל־דֶּרֶךְ־אִ֭ישׁ יָשָׁ֣ר בְּעֵינָ֑יו וְתֹכֵ֖ן לִבֹּ֣ות יְהוָֽה׃ 2
ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.
עֲ֭שֹׂה צְדָקָ֣ה וּמִשְׁפָּ֑ט נִבְחָ֖ר לַיהוָ֣ה מִזָּֽבַח׃ 3
ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.
רוּם־עֵ֭ינַיִם וּרְחַב־לֵ֑ב נִ֖ר רְשָׁעִ֣ים חַטָּֽאת׃ 4
ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.
מַחְשְׁבֹ֣ות חָ֭רוּץ אַךְ־לְמֹותָ֑ר וְכָל־אָ֝֗ץ אַךְ־לְמַחְסֹֽור׃ 5
ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; ಆತುರತೆಯು ಬಡತನಕ್ಕೆ ನಡೆಸುತ್ತದೆ.
פֹּ֣עַל אֹ֭וצָרֹות בִּלְשֹׁ֣ון שָׁ֑קֶר הֶ֥בֶל נִ֝דָּ֗ף מְבַקְשֵׁי־מָֽוֶת׃ 6
ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.
שֹׁד־רְשָׁעִ֥ים יְגֹורֵ֑ם כִּ֥י מֵ֝אֲנ֗וּ לַעֲשֹׂ֥ות מִשְׁפָּֽט׃ 7
ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.
הֲפַכְפַּ֬ךְ דֶּ֣רֶךְ אִ֣ישׁ וָזָ֑ר וְ֝זַ֗ךְ יָשָׁ֥ר פָּעֳלֹֽו׃ 8
ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.
טֹ֗וב לָשֶׁ֥בֶת עַל־פִּנַּת־גָּ֑ג מֵאֵ֥שֶׁת מִ֝דְיָנִ֗ים וּבֵ֥ית חָֽבֶר׃ 9
ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
נֶ֣פֶשׁ רָ֭שָׁע אִוְּתָה־רָ֑ע לֹא־יֻחַ֖ן בְּעֵינָ֣יו רֵעֵֽהוּ׃ 10
ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.
בַּעְנָשׁ־לֵ֭ץ יֶחְכַּם־פֶּ֑תִי וּבְהַשְׂכִּ֥יל לְ֝חָכָ֗ם יִקַּח־דָּֽעַת׃ 11
ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ.
מַשְׂכִּ֣יל צַ֭דִּיק לְבֵ֣ית רָשָׁ֑ע מְסַלֵּ֖ף רְשָׁעִ֣ים לָרָֽע׃ 12
ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.
אֹטֵ֣ם אָ֭זְנֹו מִזַּעֲקַת־דָּ֑ל גַּֽם־ה֥וּא יִ֝קְרָ֗א וְלֹ֣א יֵעָנֶֽה׃ 13
ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.
מַתָּ֣ן בַּ֭סֵּתֶר יִכְפֶּה־אָ֑ף וְשֹׁ֥חַד בַּ֝חֵ֗ק חֵמָ֥ה עַזָּֽה׃ 14
ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.
שִׂמְחָ֣ה לַ֭צַּדִּיק עֲשֹׂ֣ות מִשְׁפָּ֑ט וּ֝מְחִתָּ֗ה לְפֹ֣עֲלֵי אָֽוֶן׃ 15
ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ.
אָדָ֗ם תֹּ֭ועֶה מִדֶּ֣רֶךְ הַשְׂכֵּ֑ל בִּקְהַ֖ל רְפָאִ֣ים יָנֽוּחַ׃ 16
ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.
אִ֣ישׁ מַ֭חְסֹור אֹהֵ֣ב שִׂמְחָ֑ה אֹהֵ֥ב יַֽיִן־וָ֝שֶׁ֗מֶן לֹ֣א יַעֲשִֽׁיר׃ 17
ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು.
כֹּ֣פֶר לַצַּדִּ֣יק רָשָׁ֑ע וְתַ֖חַת יְשָׁרִ֣ים בֹּוגֵֽד׃ 18
ದುಷ್ಟರು ನೀತಿವಂತರಿಗೂ, ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ.
טֹ֗וב שֶׁ֥בֶת בְּאֶֽרֶץ־מִדְבָּ֑ר מֵאֵ֖שֶׁת מְדֹונִים (מִדְיָנִ֣ים) וָכָֽעַס׃ 19
ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.
אֹוצָ֤ר ׀ נֶחְמָ֣ד וָ֭שֶׁמֶן בִּנְוֵ֣ה חָכָ֑ם וּכְסִ֖יל אָדָ֣ם יְבַלְּעֶֽנּוּ׃ 20
ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.
רֹ֭דֵף צְדָקָ֣ה וָחָ֑סֶד יִמְצָ֥א חַ֝יִּ֗ים צְדָקָ֥ה וְכָבֹֽוד׃ 21
ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.
עִ֣יר גִּ֭בֹּרִים עָלָ֣ה חָכָ֑ם וַ֝יֹּ֗רֶד עֹ֣ז מִבְטֶחָֽה׃ 22
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.
שֹׁמֵ֣ר פִּ֭יו וּלְשֹׁונֹ֑ו שֹׁמֵ֖ר מִצָּרֹ֣ות נַפְשֹֽׁו׃ 23
ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
זֵ֣ד יָ֭הִיר לֵ֣ץ שְׁמֹ֑ו עֹ֝ושֶׂ֗ה בְּעֶבְרַ֥ת זָדֹֽון׃ 24
ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.
תַּאֲוַ֣ת עָצֵ֣ל תְּמִיתֶ֑נּוּ כִּֽי־מֵאֲנ֖וּ יָדָ֣יו לַעֲשֹֽׂות׃ 25
ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.
כָּל־הַ֭יֹּום הִתְאַוָּ֣ה תַאֲוָ֑ה וְצַדִּ֥יק יִ֝תֵּ֗ן וְלֹ֣א יַחְשֹֽׂךְ׃ 26
ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
זֶ֣בַח רְ֭שָׁעִים תֹּועֵבָ֑ה אַ֝֗ף כִּֽי־בְזִמָּ֥ה יְבִיאֶֽנּוּ׃ 27
ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.
עֵד־כְּזָבִ֥ים יֹאבֵ֑ד וְאִ֥ישׁ שֹׁ֝ומֵ֗עַ לָנֶ֥צַח יְדַבֵּֽר׃ 28
ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.
הֵעֵ֬ז אִ֣ישׁ רָשָׁ֣ע בְּפָנָ֑יו וְ֝יָשָׁ֗ר ה֤וּא ׀ יָכִין (יָבִ֬ין) דְּרָכָיו (דַּרְכֹּֽו)׃ 29
ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.
אֵ֣ין חָ֭כְמָה וְאֵ֣ין תְּבוּנָ֑ה וְאֵ֥ין עֵ֝צָ֗ה לְנֶ֣גֶד יְהוָֽה׃ פ 30
ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.
ס֗וּס מ֭וּכָן לְיֹ֣ום מִלְחָמָ֑ה וְ֝לַֽיהוָ֗ה הַתְּשׁוּעָֽה׃ 31
ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.

< מִשְׁלֵי 21 >