< מִשְׁלֵי 31 >

דִּ֭בְרֵי לְמוּאֵ֣ל מֶ֑לֶךְ מַ֝שָּׂ֗א אֲ‍ֽשֶׁר־יִסְּרַ֥תּוּ אִמֹּֽו׃ 1
ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,
מַה־בְּ֭רִי וּמַֽה־בַּר־בִּטְנִ֑י וּ֝מֶה בַּר־נְדָרָֽי׃ 2
ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?
אַל־תִּתֵּ֣ן לַנָּשִׁ֣ים חֵילֶ֑ךָ וּ֝דְרָכֶ֗יךָ לַֽמְחֹ֥ות מְלָכִֽין׃ 3
ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.
אַ֤ל לַֽמְלָכִ֨ים ׀ לְֽמֹואֵ֗ל אַ֣ל לַֽמְלָכִ֣ים שְׁתֹו־יָ֑יִן וּ֝לְרֹוזְנִ֗ים אֹו (אֵ֣י) שֵׁכָֽר׃ 4
ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
פֶּן־יִ֭שְׁתֶּה וְיִשְׁכַּ֣ח מְחֻקָּ֑ק וִֽ֝ישַׁנֶּה דִּ֣ין כָּל־בְּנֵי־עֹֽנִי׃ 5
ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
תְּנוּ־שֵׁכָ֣ר לְאֹובֵ֑ד וְ֝יַיִן לְמָ֣רֵי נָֽפֶשׁ׃ 6
ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
יִ֭שְׁתֶּה וְיִשְׁכַּ֣ח רִישֹׁ֑ו וַ֝עֲמָלֹ֗ו לֹ֣א יִזְכָּר־עֹֽוד׃ 7
ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
פְּתַח־פִּ֥יךָ לְאִלֵּ֑ם אֶל־דִּ֝֗ין כָּל־בְּנֵ֥י חֲלֹֽוף׃ 8
ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
פְּתַח־פִּ֥יךָ שְׁפָט־צֶ֑דֶק וְ֝דִ֗ין עָנִ֥י וְאֶבְיֹֽון׃ פ 9
ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.
אֵֽשֶׁת־חַ֭יִל מִ֣י יִמְצָ֑א וְרָחֹ֖ק מִפְּנִינִ֣ים מִכְרָֽהּ׃ 10
೧೦ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
בָּ֣טַח בָּ֭הּ לֵ֣ב בַּעְלָ֑הּ וְ֝שָׁלָ֗ל לֹ֣א יֶחְסָֽר׃ 11
೧೧ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
גְּמָלַ֣תְהוּ טֹ֣וב וְלֹא־רָ֑ע כֹּ֝֗ל יְמֵ֣י חַיֶּֽיה׃ 12
೧೨ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
דָּ֭רְשָׁה צֶ֣מֶר וּפִשְׁתִּ֑ים וַ֝תַּ֗עַשׂ בְּחֵ֣פֶץ כַּפֶּֽיהָ׃ 13
೧೩ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
הָ֭יְתָה כָּאֳנִיֹּ֣ות סֹוחֵ֑ר מִ֝מֶּרְחָ֗ק תָּבִ֥יא לַחְמָֽהּ׃ 14
೧೪ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
וַתָּ֤קָם ׀ בְּעֹ֬וד לַ֗יְלָה וַתִּתֵּ֣ן טֶ֣רֶף לְבֵיתָ֑הּ וְ֝חֹ֗ק לְנַעֲרֹתֶֽיהָ׃ 15
೧೫ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
זָמְמָ֣ה שָׂ֭דֶה וַתִּקָּחֵ֑הוּ מִפְּרִ֥י כַ֝פֶּ֗יהָ נְטַע (נָ֣טְעָה) כָּֽרֶם׃ 16
೧೬ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
חָֽגְרָ֣ה בְעֹ֣וז מָתְנֶ֑יהָ וַ֝תְּאַמֵּ֗ץ זְרֹעֹותֶֽיהָ׃ 17
೧೭ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
טָ֭עֲמָה כִּי־טֹ֣וב סַחְרָ֑הּ לֹֽא־יִכְבֶּ֖ה בַלַּיִל (בַלַּ֣יְלָה) נֵרָֽהּ׃ 18
೧೮ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
יָ֭דֶיהָ שִׁלְּחָ֣ה בַכִּישֹׁ֑ור וְ֝כַפֶּ֗יהָ תָּ֣מְכוּ פָֽלֶךְ׃ 19
೧೯ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
כַּ֭פָּהּ פָּרְשָׂ֣ה לֶעָנִ֑י וְ֝יָדֶ֗יהָ שִׁלְּחָ֥ה לָֽאֶבְיֹֽון׃ 20
೨೦ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
לֹא־תִירָ֣א לְבֵיתָ֣הּ מִשָּׁ֑לֶג כִּ֥י כָל־בֵּ֝יתָ֗הּ לָבֻ֥שׁ שָׁנִֽים׃ 21
೨೧ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
מַרְבַדִּ֥ים עָֽשְׂתָה־לָּ֑הּ שֵׁ֖שׁ וְאַרְגָּמָ֣ן לְבוּשָֽׁהּ׃ 22
೨೨ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.
נֹודָ֣ע בַּשְּׁעָרִ֣ים בַּעְלָ֑הּ בְּ֝שִׁבְתֹּ֗ו עִם־זִקְנֵי־אָֽרֶץ׃ 23
೨೩ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.
סָדִ֣ין עָ֭שְׂתָה וַתִּמְכֹּ֑ר וַ֝חֲגֹ֗ור נָתְנָ֥ה לַֽכְּנַעֲנִֽי׃ 24
೨೪ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.
עֹז־וְהָדָ֥ר לְבוּשָׁ֑הּ וַ֝תִּשְׂחַ֗ק לְיֹ֣ום אַחֲרֹֽון׃ 25
೨೫ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.
פִּ֭יהָ פָּתְחָ֣ה בְחָכְמָ֑ה וְתֹֽורַת־חֶ֝֗סֶד עַל־לְשֹׁונָֽהּ׃ 26
೨೬ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.
צֹ֭ופִיָּה הֲלִיכֹ֣ות בֵּיתָ֑הּ וְלֶ֥חֶם עַ֝צְל֗וּת לֹ֣א תֹאכֵֽל׃ 27
೨೭ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
קָ֣מוּ בָ֭נֶיהָ וַֽיְאַשְּׁר֑וּהָ בַּ֝עְלָ֗הּ וַֽיְהַֽלְלָֽהּ׃ 28
೨೮ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.
רַבֹּ֣ות בָּ֭נֹות עָ֣שׂוּ חָ֑יִל וְ֝אַ֗תְּ עָלִ֥ית עַל־כֻּלָּֽנָה׃ 29
೨೯ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.
שֶׁ֣קֶר הַ֭חֵן וְהֶ֣בֶל הַיֹּ֑פִי אִשָּׁ֥ה יִרְאַת־יְ֝הוָ֗ה הִ֣יא תִתְהַלָּֽל׃ 30
೩೦ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
תְּנוּ־לָ֭הּ מִפְּרִ֣י יָדֶ֑יהָ וִֽיהַלְל֖וּהָ בַשְּׁעָרִ֣ים מַעֲשֶֽׂיהָ׃ 31
೩೧ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.

< מִשְׁלֵי 31 >