< תְהִלִּים 10 >

לָמָ֣ה יְ֭הוָה תַּעֲמֹ֣ד בְּרָחֹ֑וק תַּ֝עְלִ֗ים לְעִתֹּ֥ות בַּצָּרֽ͏ָה׃ 1
ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?
בְּגַאֲוַ֣ת רָ֭שָׁע יִדְלַ֣ק עָנִ֑י יִתָּפְשׂ֓וּ ׀ בִּמְזִמֹּ֖ות ז֣וּ חָשָֽׁבוּ׃ 2
ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.
כִּֽי־הִלֵּ֣ל רָ֭שָׁע עַל־תַּאֲוַ֣ת נַפְשֹׁ֑ו וּבֹצֵ֥עַ בֵּ֝רֵ֗ךְ נִ֘אֵ֥ץ ׀ יְהוָֽה׃ 3
ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.
רָשָׁ֗ע כְּגֹ֣בַהּ אַ֭פֹּו בַּל־יִדְרֹ֑שׁ אֵ֥ין אֱ֝לֹהִ֗ים כָּל־מְזִמֹּותָֽיו׃ 4
ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.
יָ֘חִ֤ילוּ דָרְכּו (דְרָכָ֨יו) ׀ בְּכָל־עֵ֗ת מָרֹ֣ום מִ֭שְׁפָּטֶיךָ מִנֶּגְדֹּ֑ו כָּל־צֹ֝ורְרָ֗יו יָפִ֥יחַ בָּהֶֽם׃ 5
ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.
אָמַ֣ר בְּ֭לִבֹּו בַּל־אֶמֹּ֑וט לְדֹ֥ר וָ֝דֹ֗ר אֲשֶׁ֣ר לֹֽא־בְרָֽע׃ 6
ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”
אָלָ֤ה פִּ֣יהוּ מָ֭לֵא וּמִרְמֹ֣ות וָתֹ֑ךְ תַּ֥חַת לְ֝שֹׁונֹ֗ו עָמָ֥ל וָאָֽוֶן׃ 7
ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.
יֵשֵׁ֤ב ׀ בְּמַאְרַ֬ב חֲצֵרִ֗ים בַּֽ֭מִּסְתָּרִים יַהֲרֹ֣ג נָקִ֑י עֵ֝ינָ֗יו לְֽחֵלְכָ֥ה יִצְפֹּֽנוּ׃ 8
ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;
יֶאֱרֹ֬ב בַּמִּסְתָּ֨ר ׀ כְּאַרְיֵ֬ה בְסֻכֹּ֗ה יֶ֭אֱרֹב לַחֲטֹ֣וף עָנִ֑י יַחְטֹ֥ף עָ֝נִ֗י בְּמָשְׁכֹ֥ו בְרִשְׁתֹּֽו׃ 9
ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.
וַדָּכַה (יִדְכֶּ֥ה) יָשֹׁ֑חַ וְנָפַ֥ל בַּ֝עֲצוּמָ֗יו חֶלְכָּאִים (חֵ֣יל כָּאִֽים)׃ 10
ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.
אָמַ֣ר בְּ֭לִבֹּו שָׁ֣כַֽח אֵ֑ל הִסְתִּ֥יר פָּ֝נָ֗יו בַּל־רָאָ֥ה לָנֶֽצַח׃ 11
“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.
קוּמָ֤ה יְהוָ֗ה אֵ֭ל נְשָׂ֣א יָדֶ֑ךָ אַל־תִּשְׁכַּ֥ח עֲנִיִּים (עֲנָוֽ͏ִים)׃ 12
ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.
עַל־מֶ֤ה ׀ נִאֵ֖ץ רָשָׁ֥ע ׀ אֱלֹהִ֑ים אָמַ֥ר בְּ֝לִבֹּ֗ו לֹ֣א תִּדְרֹֽשׁ׃ 13
ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?
רָאִ֡תָה כִּֽי־אַתָּ֤ה ׀ עָ֘מָ֤ל וָכַ֨עַס ׀ תַּבִּיט֮ לָתֵ֪ת בְּיָ֫דֶ֥ךָ עָ֭לֶיךָ יַעֲזֹ֣ב חֵלֶ֑כָה יָ֝תֹ֗ום אַתָּ֤ה ׀ הָיִ֬יתָ עֹוזֵֽר׃ 14
ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.
שְׁ֭בֹר זְרֹ֣ועַ רָשָׁ֑ע וָ֝רָ֗ע תִּֽדְרֹושׁ־רִשְׁעֹ֥ו בַל־תִּמְצָֽא׃ 15
ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.
יְהוָ֣ה מֶ֭לֶךְ עֹולָ֣ם וָעֶ֑ד אָבְד֥וּ גֹ֝ויִ֗ם מֵֽאַרְצֹֽו׃ 16
ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.
תַּאֲוַ֬ת עֲנָוִ֣ים שָׁמַ֣עְתָּ יְהוָ֑ה תָּכִ֥ין לִ֝בָּ֗ם תַּקְשִׁ֥יב אָזְנֶֽךָ׃ 17
ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.
לִשְׁפֹּ֥ט יָתֹ֗ום וָ֫דָ֥ךְ בַּל־יֹוסִ֥יף עֹ֑וד לַעֲרֹ֥ץ אֱ֝נֹ֗ושׁ מִן־הָאָֽרֶץ׃ 18
ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.

< תְהִלִּים 10 >