< תְהִלִּים 139 >

לַ֭מְנַצֵּחַ לְדָוִ֣ד מִזְמֹ֑ור יְהוָ֥ה חֲ֝קַרְתַּ֗נִי וַתֵּדָֽע׃ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
אַתָּ֣ה יָ֭דַעְתָּ שִׁבְתִּ֣י וְקוּמִ֑י בַּ֥נְתָּה לְ֝רֵעִ֗י מֵרָחֹֽוק׃ 2
ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
אָרְחִ֣י וְרִבְעִ֣י זֵרִ֑יתָ וְֽכָל־דְּרָכַ֥י הִסְכַּֽנְתָּה׃ 3
ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
כִּ֤י אֵ֣ין מִ֭לָּה בִּלְשֹׁונִ֑י הֵ֥ן יְ֝הוָ֗ה יָדַ֥עְתָּ כֻלָּֽהּ׃ 4
ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
אָחֹ֣ור וָקֶ֣דֶם צַרְתָּ֑נִי וַתָּ֖שֶׁת עָלַ֣י כַּפֶּֽכָה׃ 5
ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
פִּלְאִיָּה (פְּלִ֣יאָֽה) דַ֣עַת מִמֶּ֑נִּי נִ֝שְׂגְּבָ֗ה לֹא־א֥וּכַֽל לָֽהּ׃ 6
ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
אָ֭נָ֥ה אֵלֵ֣ךְ מֵרוּחֶ֑ךָ וְ֝אָ֗נָה מִפָּנֶ֥יךָ אֶבְרָֽח׃ 7
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
אִם־אֶסַּ֣ק שָׁ֭מַיִם שָׁ֣ם אָ֑תָּה וְאַצִּ֖יעָה שְּׁאֹ֣ול הִנֶּֽךָּ׃ (Sheol h7585) 8
ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol h7585)
אֶשָּׂ֥א כַנְפֵי־שָׁ֑חַר אֶ֝שְׁכְּנָ֗ה בְּאַחֲרִ֥ית יָֽם׃ 9
ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
גַּם־שָׁ֭ם יָדְךָ֣ תַנְחֵ֑נִי וְֽתֹאחֲזֵ֥נִי יְמִינֶֽךָ׃ 10
೧೦ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
וָ֭אֹמַר אַךְ־חֹ֣שֶׁךְ יְשׁוּפֵ֑נִי וְ֝לַ֗יְלָה אֹ֣ור בַּעֲדֵֽנִי׃ 11
೧೧ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
גַּם־חֹשֶׁךְ֮ לֹֽא־יַחְשִׁ֪יךְ מִ֫מֶּ֥ךָ וְ֭לַיְלָה כַּיֹּ֣ום יָאִ֑יר כַּ֝חֲשֵׁיכָ֗ה כָּאֹורָֽה׃ 12
೧೨ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
כִּֽי־אַ֭תָּה קָנִ֣יתָ כִלְיֹתָ֑י תְּ֝סֻכֵּ֗נִי בְּבֶ֣טֶן אִמִּֽי׃ 13
೧೩ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
אֹֽודְךָ֗ עַ֤ל כִּ֥י נֹורָאֹ֗ות נִ֫פְלֵ֥יתִי נִפְלָאִ֥ים מַעֲשֶׂ֑יךָ וְ֝נַפְשִׁ֗י יֹדַ֥עַת מְאֹֽד׃ 14
೧೪ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
לֹא־נִכְחַ֥ד עָצְמִ֗י מִ֫מֶּ֥ךָּ אֲשֶׁר־עֻשֵּׂ֥יתִי בַסֵּ֑תֶר רֻ֝קַּ֗מְתִּי בְּֽתַחְתִּיֹּ֥ות אָֽרֶץ׃ 15
೧೫ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
גָּלְמִ֤י ׀ רָ֘א֤וּ עֵינֶ֗יךָ וְעַֽל־סִפְרְךָ֮ כֻּלָּ֪ם יִכָּ֫תֵ֥בוּ יָמִ֥ים יֻצָּ֑רוּ וְלֹא (וְלֹ֖ו) אֶחָ֣ד בָּהֶֽם׃ 16
೧೬ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
וְלִ֗י מַה־יָּקְר֣וּ רֵעֶ֣יךָ אֵ֑ל מֶ֥ה עָ֝צְמוּ רָאשֵׁיהֶֽם׃ 17
೧೭ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
אֶ֭סְפְּרֵם מֵחֹ֣ול יִרְבּ֑וּן הֱ֝קִיצֹ֗תִי וְעֹודִ֥י עִמָּֽךְ׃ 18
೧೮ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
אִם־תִּקְטֹ֖ל אֱלֹ֥והַּ ׀ רָשָׁ֑ע וְאַנְשֵׁ֥י דָ֝מִ֗ים ס֣וּרוּ מֶֽנִּי׃ 19
೧೯ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
אֲשֶׁ֣ר יֹ֭אמְרֻךָ לִמְזִמָּ֑ה נָשֻׂ֖א לַשָּׁ֣וְא עָרֶֽיךָ׃ 20
೨೦ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
הֲלֹֽוא־מְשַׂנְאֶ֖יךָ יְהוָ֥ה ׀ אֶשְׂנָ֑א וּ֝בִתְקֹומְמֶ֗יךָ אֶתְקֹוטָֽט׃ 21
೨೧ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
תַּכְלִ֣ית שִׂנְאָ֣ה שְׂנֵאתִ֑ים לְ֝אֹויְבִ֗ים הָ֣יוּ לִֽי׃ 22
೨೨ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ.
חָקְרֵ֣נִי אֵ֭ל וְדַ֣ע לְבָבִ֑י בְּ֝חָנֵ֗נִי וְדַ֣ע שַׂרְעַפָּֽי׃ 23
೨೩ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
וּרְאֵ֗ה אִם־דֶּֽרֶךְ־עֹ֥צֶב בִּ֑י וּ֝נְחֵ֗נִי בְּדֶ֣רֶךְ עֹולָֽם׃ 24
೨೪ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.

< תְהִלִּים 139 >