< תְהִלִּים 51 >

לַמְנַצֵּ֗חַ מִזְמֹ֥ור לְדָוִֽד׃ בְּֽבֹוא־אֵ֭לָיו נָתָ֣ן הַנָּבִ֑יא כַּֽאֲשֶׁר־בָּ֝֗א אֶל־בַּת־שָֽׁבַע׃ חָנֵּ֣נִי אֱלֹהִ֣ים כְּחַסְדֶּ֑ךָ כְּרֹ֥ב רַ֝חֲמֶ֗יךָ מְחֵ֣ה פְשָׁעָֽי׃ 1
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ದಾವೀದನು ಬತ್ಷೆಬೆಳ ಸಂಗಡ ಪಾಪಮಾಡಿದ ಮೇಲೆ, ಪ್ರವಾದಿಯಾದ ನಾತಾನನು ಅವನ ಹತ್ತಿರ ಬಂದಾಗ ರಚಿಸಿದ ಕೀರ್ತನೆ. ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
הַרְבֵּה (הֶ֭רֶב) כַּבְּסֵ֣נִי מֵעֲוֹנִ֑י וּֽמֵחַטָּאתִ֥י טַהֲרֵֽנִי׃ 2
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.
כִּֽי־פְ֭שָׁעַי אֲנִ֣י אֵדָ֑ע וְחַטָּאתִ֖י נֶגְדִּ֣י תָמִֽיד׃ 3
ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ, ನನ್ನ ಪಾಪವು ಯಾವಾಗಲೂ ನನ್ನ ಕಣ್ಮುಂದೆಯೇ ಇದೆ.
לְךָ֤ לְבַדְּךָ֨ ׀ חָטָאתִי֮ וְהָרַ֥ע בְּעֵינֶ֗יךָ עָ֫שִׂ֥יתִי לְ֭מַעַן תִּצְדַּ֥ק בְּדָבְרֶ֗ךָ תִּזְכֶּ֥ה בְשָׁפְטֶֽךָ׃ 4
ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.
הֵן־בְּעָוֹ֥ון חֹולָ֑לְתִּי וּ֝בְחֵ֗טְא יֶֽחֱמַ֥תְנִי אִמִּֽי׃ 5
ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.
הֵן־אֱ֭מֶת חָפַ֣צְתָּ בַטֻּחֹ֑ות וּ֝בְסָתֻ֗ם חָכְמָ֥ה תֹודִיעֵֽנִי׃ 6
ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.
תְּחַטְּאֵ֣נִי בְאֵזֹ֣וב וְאֶטְהָ֑ר תְּ֝כַבְּסֵ֗נִי וּמִשֶּׁ֥לֶג אַלְבִּֽין׃ 7
ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.
תַּ֭שְׁמִיעֵנִי שָׂשֹׂ֣ון וְשִׂמְחָ֑ה תָּ֝גֵ֗לְנָה עֲצָמֹ֥ות דִּכִּֽיתָ׃ 8
ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.
הַסְתֵּ֣ר פָּ֭נֶיךָ מֵחֲטָאָ֑י וְֽכָל־עֲוֹ֖נֹתַ֣י מְחֵֽה׃ 9
ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.
לֵ֣ב טָ֭הֹור בְּרָא־לִ֣י אֱלֹהִ֑ים וְר֥וּחַ נָ֝כֹ֗ון חַדֵּ֥שׁ בְּקִרְבִּֽי׃ 10
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
אַל־תַּשְׁלִיכֵ֥נִי מִלְּפָנֶ֑יךָ וְר֥וּחַ קָ֝דְשְׁךָ֗ אַל־תִּקַּ֥ח מִמֶּֽנִּי׃ 11
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
הָשִׁ֣יבָה לִּ֭י שְׂשֹׂ֣ון יִשְׁעֶ֑ךָ וְר֖וּחַ נְדִיבָ֣ה תִסְמְכֵֽנִי׃ 12
ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.
אֲלַמְּדָ֣ה פֹשְׁעִ֣ים דְּרָכֶ֑יךָ וְ֝חַטָּאִ֗ים אֵלֶ֥יךָ יָשֽׁוּבוּ׃ 13
ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.
הַצִּ֘ילֵ֤נִי מִדָּמִ֨ים ׀ אֱ‍ֽלֹהִ֗ים אֱלֹהֵ֥י תְּשׁוּעָתִ֑י תְּרַנֵּ֥ן לְשֹׁונִ֗י צִדְקָתֶֽךָ׃ 14
ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು.
אֲ֭דֹנָי שְׂפָתַ֣י תִּפְתָּ֑ח וּ֝פִ֗י יַגִּ֥יד תְּהִלָּתֶֽךָ׃ 15
ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.
כִּ֤י ׀ לֹא־תַחְפֹּ֣ץ זֶ֣בַח וְאֶתֵּ֑נָה עֹ֝ולָ֗ה לֹ֣א תִרְצֶֽה׃ 16
ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.
זִֽבְחֵ֣י אֱלֹהִים֮ ר֪וּחַ נִשְׁבָּ֫רָ֥ה לֵב־נִשְׁבָּ֥ר וְנִדְכֶּ֑ה אֱ֝לֹהִ֗ים לֹ֣א תִבְזֶֽה׃ 17
ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.
הֵיטִ֣יבָה בִ֭רְצֹונְךָ אֶת־צִיֹּ֑ון תִּ֝בְנֶ֗ה חֹומֹ֥ות יְרוּשָׁלָֽ͏ִם׃ 18
ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.
אָ֤ז תַּחְפֹּ֣ץ זִבְחֵי־צֶ֭דֶק עֹולָ֣ה וְכָלִ֑יל אָ֤ז יַעֲל֖וּ עַל־מִזְבַּחֲךָ֣ פָרִֽים׃ 19
ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.

< תְהִלִּים 51 >