< 2 थिस्सलुनीकियों 2 >
1 १ हे भाइयों, हम अपने प्रभु यीशु मसीह के आने, और उसके पास अपने इकट्ठे होने के विषय में तुम से विनती करते हैं।
೧ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
2 २ कि किसी आत्मा, या वचन, या पत्री के द्वारा जो कि मानो हमारी ओर से हो, यह समझकर कि प्रभु का दिन आ पहुँचा है, तुम्हारा मन अचानक अस्थिर न हो जाए; और न तुम घबराओ।
೨ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
3 ३ किसी रीति से किसी के धोखे में न आना क्योंकि वह दिन न आएगा, जब तक विद्रोह नहीं होता, और वह अधर्मी पुरुष अर्थात् विनाश का पुत्र प्रगट न हो।
೩ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
4 ४ जो विरोध करता है, और हर एक से जो परमेश्वर, या पूज्य कहलाता है, अपने आपको बड़ा ठहराता है, यहाँ तक कि वह परमेश्वर के मन्दिर में बैठकर अपने आपको परमेश्वर प्रगट करता है।
೪ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
5 ५ क्या तुम्हें स्मरण नहीं, कि जब मैं तुम्हारे यहाँ था, तो तुम से ये बातें कहा करता था?
೫ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
6 ६ और अब तुम उस वस्तु को जानते हो, जो उसे रोक रही है, कि वह अपने ही समय में प्रगट हो।
೬ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.
7 ७ क्योंकि अधर्म का भेद अब भी कार्य करता जाता है, पर अभी एक रोकनेवाला है, और जब तक वह दूर न हो जाए, वह रोके रहेगा।
೭ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
8 ८ तब वह अधर्मी प्रगट होगा, जिसे प्रभु यीशु अपने मुँह की फूँक से मार डालेगा, और अपने आगमन के तेज से भस्म करेगा।
೮ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
9 ९ उस अधर्मी का आना शैतान के कार्य के अनुसार सब प्रकार की झूठी सामर्थ्य, चिन्ह, और अद्भुत काम के साथ,
೯ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
10 १० और नाश होनेवालों के लिये अधर्म के सब प्रकार के धोखे के साथ होगा; क्योंकि उन्होंने सत्य के प्रेम को ग्रहण नहीं किया जिससे उनका उद्धार होता।
೧೦ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
11 ११ और इसी कारण परमेश्वर उनमें एक भटका देनेवाली सामर्थ्य को भेजेगा ताकि वे झूठ पर विश्वास करें।
೧೧ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
12 १२ और जितने लोग सत्य पर विश्वास नहीं करते, वरन् अधर्म से प्रसन्न होते हैं, सब दण्ड पाएँ।
೧೨ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
13 १३ पर हे भाइयों, और प्रभु के प्रिय लोगों, चाहिये कि हम तुम्हारे विषय में सदा परमेश्वर का धन्यवाद करते रहें, कि परमेश्वर ने आदि से तुम्हें चुन लिया; कि आत्मा के द्वारा पवित्र बनकर, और सत्य पर विश्वास करके उद्धार पाओ।
೧೩ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
14 १४ जिसके लिये उसने तुम्हें हमारे सुसमाचार के द्वारा बुलाया, कि तुम हमारे प्रभु यीशु मसीह की महिमा को प्राप्त करो।
೧೪ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
15 १५ इसलिए, हे भाइयों, स्थिर रहो; और जो शिक्षा तुम ने हमारे वचन या पत्र के द्वारा प्राप्त किया है, उन्हें थामे रहो।
೧೫ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
16 १६ हमारा प्रभु यीशु मसीह आप ही, और हमारा पिता परमेश्वर जिसने हम से प्रेम रखा, और अनुग्रह से अनन्त शान्ति और उत्तम आशा दी है। (aiōnios )
೧೬ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, (aiōnios )
17 १७ तुम्हारे मनों में शान्ति दे, और तुम्हें हर एक अच्छे काम, और वचन में दृढ़ करे।
೧೭ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.