< Atti 27 >

1 ORA, dopo che fu determinato che noi navigheremmo in Italia, Paolo, e certi altri prigioni, furono consegnati ad un centurione, [chiamato] per nome Giulio, della schiera Augusta.
ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.
2 E, montati sopra una nave Adramittina, noi partimmo, con intenzion di costeggiare i luoghi dell'Asia, avendo con noi Aristarco Macedone Tessalonicese.
ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.
3 E il [giorno] seguente arrivammo a Sidon; e Giulio, usando umanità inverso Paolo, gli permise di andare a' suoi amici, perchè avesser cura di lui.
ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.
4 Poi, essendo partiti di là, navigammo sotto Cipri; perciocchè i venti erano contrari.
ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,
5 E, passato il mar di Cilicia, e di Panfilia, arrivammo a Mira di Licia.
ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು.
6 E il centurione, trovata qui una nave Alessandrina che faceva vela in Italia, ci fece montar sopra.
ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.
7 E, navigando per molti giorni lentamente, ed appena pervenuti di rincontro a Gnido, per l'impedimento che ci dava il vento, navigammo sotto Creti, di rincontro a Salmona.
ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.
8 E, costeggiando quella con gran difficoltà, venimmo in un certo luogo, detto Belli porti, vicin del quale era la città [di] Lasea.
ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.
9 Ora, essendo già passato molto tempo, ed essendo la navigazione omai pericolosa; poichè anche il digiuno era già passato, Paolo ammonì que' [della nave], dicendo loro:
ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,
10 Uomini, io veggo che la navigazione sarà con offesa, e grave danno, non solo del carico, e della nave, ma anche delle nostre proprie persone.
“ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು.
11 Ma il centurione prestava più fede al padron della nave, ed al nocchiero, che alle cose dette da Paolo.
ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.
12 E, perchè il porto non era ben posto da vernare, i più furono di parere di partirsi di là, per vernare in Fenice, porto di Creti, che riguarda verso il vento Libeccio, e Maestro; se pure in alcun modo potevano arrivarvi.
ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.
13 Ora, messosi a soffiar l'Austro, pensando esser venuti a capo del lor proponimento, levate [le ancore], costeggiavano Creti più da presso.
ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.
14 Ma, poco stante, un vento turbinoso, che si domanda Euroclidone percosse [l'isola].
ಆದರೆ ಸ್ವಲ್ಪ ಸಮಯದಲ್ಲಿಯೇ “ಈಶಾನ್ಯ ಮಾರುತ” ಎಂಬ ಪ್ರಚಂಡ ಗಾಳಿ ದ್ವೀಪದ ಕಡೆಯಿಂದ ಬೀಸತೊಡಗಿತು.
15 Ed essendo la nave portata via, e non potendo reggere al vento, noi [la] lasciammo in abbandono; [e così] eravamo portati.
ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.
16 E scorsi sotto una isoletta, chiamata Clauda, appena potemmo avere in nostro potere lo schifo.
ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು.
17 Il quale avendo pur tratto sopra [la nave, i marinari] usavano [tutti] i ripari, cingendo la nave di sotto; e, temendo di percuoter nella secca, calarono le vele, ed erano così portati.
ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.
18 Ed essendo noi fieramente travagliati dalla tempesta, il [giorno] seguente fecero il getto.
ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.
19 E tre giorni appresso, con le nostre proprie mani gettammo [in mare] gli arredi della nave.
ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು.
20 E non apparendo nè sole, nè stelle, già per molti giorni, e soprastando non piccola tempesta, omai era tolta ogni speranza di scampare.
ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.
21 Ora, dopo che furono stati lungamente senza prender pasto, Paolo si levò in mezzo di loro, e disse: Uomini, ben conveniva credermi, e non partir di Creti; e risparmiar quest'offesa, e questa perdita.
ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.
22 Ma pure, al presente vi conforto a star di buon cuore, perciocchè non vi sarà perdita della vita d'alcun di voi, ma sol della nave.
ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.
23 Perciocchè un angelo dell'Iddio, di cui sono, ed al qual servo, mi è apparito questa notte, dicendo:
ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,
24 Paolo, non temere; ei ti conviene comparir davanti a Cesare; ed ecco, Iddio ti ha donati tutti coloro che navigan teco.
‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.
25 Perciò, o uomini, state di buon cuore, perciocchè io ho fede in Dio che così avverrà, come mi è stato detto.
ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.
26 Or ci bisogna percuotere in un'isola.
ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು.
27 E la quartadecima notte essendo venuta, mentre eravamo portati qua e là nel [mare] Adriatico, in su la mezzanotte i marinari ebbero opinione ch'erano vicini di qualche terra.
ಹದಿನಾಲ್ಕನೇ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಬಿರುಗಾಳಿಯು ನಮ್ಮನ್ನು ಹೊಯ್ದಾಡಿಸುತ್ತಿದ್ದಾಗ, ಸುಮಾರು ಮಧ್ಯರಾತ್ರಿಯಲ್ಲಿ ನಾವು ನೆಲವನ್ನು ತಲುಪುತ್ತಿದ್ದೇವೆಂದು ನಾವಿಕರು ಭಾವಿಸಿ,
28 E, calato lo scandaglio, trovarono venti braccia; ed essendo passati un poco più oltre, ed avendo scandagliato di nuovo, trovarono quindici braccia.
ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು.
29 E temendo di percuotere in luoghi scogliosi, gettarono dalla poppa quattro ancore, aspettando con desiderio che si facesse giorno.
ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.
30 Ora, cercando i marinari di fuggir dalla nave, ed avendo calato lo schifo in mare, sotto specie di voler calare le ancore dalla proda.
ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.
31 Paolo disse al centurione, ed a' soldati: Se costoro non restano nella nave, voi non potete scampare.
ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.
32 Allora i soldati tagliarono le funi dello schifo, e lo lasciarono cadere.
ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.
33 Ed aspettando che si facesse giorno, Paolo confortava tutti a prender cibo, dicendo: Oggi sono quattordici giorni che voi dimorate digiuni, aspettando, senza prender nulla.
ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.
34 Perciò, io vi esorto di prender cibo: perciocchè, questo farà la vostra salute; imperocchè non caderà pur un capello dal capo d'alcun di voi.
ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.
35 E, dette queste cose, prese del pane, e rendè grazie a Dio, in presenza di tutti; poi rottolo, cominciò a mangiare.
ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.
36 E tutti, fatto buon animo, presero anch'essi cibo.
ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.
37 Or noi eravamo in su la nave fra tutti dugensettantasei persone.
ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು.
38 E quando furono saziati di cibo, alleviarono la nave, gittando il frumento in mare.
ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು.
39 E, quando fu giorno, non riconoscevano il paese; ma scorsero un certo seno che avea lito, nel qual presero consiglio di spinger la nave, se potevano.
ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.
40 Ed avendo ritratte le ancore, ed insieme sciolti i legami de' timoni, si rimisero alla mercè del mare; ed alzata la vela maestra al vento, traevano al lito.
ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು.
41 Ma, incorsi in una piaggia, che avea il mare da amendue i lati, vi percossero la nave; e la proda, ficcatasi [in quella], dimorava immobile; ma la poppa si sdruciva per lo sforzo delle onde.
ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.
42 Or il parer de' soldati era d'uccidere i prigioni, acciocchè niuno se ne fuggisse a nuoto.
ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು.
43 Ma il centurione, volendo salvar Paolo, li stolse da quel consiglio, e comandò che coloro che potevano nuotare si gettassero i primi, e scampassero in terra.
ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.
44 E gli altri, chi sopra tavole, chi sopra alcuni [pezzi] della nave; e così avvenne che tutti si salvarono in terra.
ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.

< Atti 27 >