< 申命記 31 >

1 そこでモーセは続いてこの言葉をイスラエルのすべての人に告げて、
ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.
2 彼らに言った、「わたしは、きょう、すでに百二十歳になり、もはや出入りすることはできない。また主はわたしに『おまえはこのヨルダンを渡ることはできない』と言われた。
ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
3 あなたの神、主はみずからあなたに先立って渡り、あなたの前から、これらの国々の民を滅ぼし去って、あなたにこれを獲させられるであろう。また主がかつて言われたように、ヨシュアはあなたを率いて渡るであろう。
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
4 主がさきにアモリびとの王シホンとオグおよびその地にされたように、彼らにもおこなって彼らを滅ぼされるであろう。
ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
5 主は彼らをあなたがたに渡されるから、あなたがたはわたしが命じたすべての命令のとおりに彼らに行わなければならない。
ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
6 あなたがたは強く、かつ勇ましくなければならない。彼らを恐れ、おののいてはならない。あなたの神、主があなたと共に行かれるからである。主は決してあなたを見放さず、またあなたを見捨てられないであろう」。
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
7 モーセはヨシュアを呼び、イスラエルのすべての人の目の前で彼に言った、「あなたはこの民と共に行き、主が彼らの先祖たちに与えると誓われた地に入るのであるから、あなたは強く、かつ勇ましくなければならない。あなたは彼らにそれを獲させるであろう。
ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
8 主はみずからあなたに先立って行き、またあなたと共におり、あなたを見放さず、見捨てられないであろう。恐れてはならない、おののいてはならない」。
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
9 モーセはこの律法を書いて、主の契約の箱をかつぐレビの子孫である祭司およびイスラエルのすべての長老たちに授けた。
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
10 そしてモーセは彼らに命じて言った、「七年の終りごとに、すなわち、ゆるしの年の定めの時になり、かりいおの祭に、
೧೦ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
11 イスラエルのすべての人があなたの神、主の前に出るため、主の選ばれる場所に来るとき、あなたはイスラエルのすべての人の前でこの律法を読んで聞かせなければならない。
೧೧ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
12 すなわち男、女、子供およびあなたの町のうちに寄留している他国人など民を集め、彼らにこれを聞かせ、かつ学ばせなければならない。そうすれば彼らはあなたがたの神、主を恐れてこの律法の言葉を、ことごとく守り行うであろう。
೧೨ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
13 また彼らの子供たちでこれを知らない者も聞いて、あなたがたの神、主を恐れることを学ぶであろう。あなたがたがヨルダンを渡って行って取る地にながらえる日のあいだ常にそうしなければならない」。
೧೩ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.
14 主はまたモーセに言われた、「あなたの死ぬ日が近づいている。ヨシュアを召して共に会見の幕屋に立ちなさい。わたしは彼に務を命じるであろう」。モーセとヨシュアが行って会見の幕屋に立つと、
೧೪ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
15 主は幕屋で雲の柱のうちに現れられた。その雲の柱は幕屋の入口のかたわらにとどまった。
೧೫ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
16 主はモーセに言われた、「あなたはまもなく眠って先祖たちと一緒になるであろう。そのときこの民はたちあがり、はいって行く地の異なる神々を慕って姦淫を行い、わたしを捨て、わたしが彼らと結んだ契約を破るであろう。
೧೬ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
17 その日には、わたしは彼らにむかって怒りを発し、彼らを捨て、わたしの顔を彼らに隠すゆえに、彼らは滅ぼしつくされ、多くの災と悩みが彼らに臨むであろう。そこでその日、彼らは言うであろう、『これらの災がわれわれに臨むのは、われわれの神がわれわれのうちにおられないからではないか』。
೧೭ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
18 しかも彼らがほかの神々に帰して、もろもろの悪を行うゆえに、わたしはその日には必ずわたしの顔を隠すであろう。
೧೮ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
19 それであなたがたは今、この歌を書きしるし、イスラエルの人々に教えてその口に唱えさせ、この歌をイスラエルの人々に対するわたしのあかしとならせなさい。
೧೯“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
20 わたしが彼らの先祖たちに誓った、乳と蜜の流れる地に彼らを導き入れる時、彼らは食べて飽き、肥え太るに及んで、ほかの神々に帰し、それに仕えて、わたしを軽んじ、わたしの契約を破るであろう。
೨೦ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
21 こうして多くの災と悩みとが彼らに臨む時、この歌は彼らに対して、あかしとなるであろう。(それはこの歌が彼らの子孫の口にあって、彼らはそれを忘れないからである。)わたしが誓った地に彼らを導き入れる前、すでに彼らが思いはかっている事をわたしは知っているからである」。
೨೧ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
22 モーセはその日、この歌を書いてイスラエルの人々に教えた。
೨೨ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
23 主はヌンの子ヨシュアに命じて言われた、「あなたはイスラエルの人々をわたしが彼らに誓った地に導き入れなければならない。それゆえ強くかつ勇ましくあれ。わたしはあなたと共にいるであろう」。
೨೩ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
24 モーセがこの律法の言葉を、ことごとく書物に書き終った時、
೨೪ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,
25 モーセは主の契約の箱をかつぐレビびとに命じて言った、
೨೫ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,
26 「この律法の書をとって、あなたがたの神、主の契約の箱のかたわらに置き、その所であなたにむかってあかしをするものとしなさい。
೨೬“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
27 わたしはあなたのそむくことと、かたくななこととを知っている。きょう、わたしが生きながらえて、あなたがたと一緒にいる間ですら、あなたがたは主にそむいた。ましてわたしが死んだあとはどんなであろう。
೨೭ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
28 あなたがたの部族のすべての長老たちと、つかさたちをわたしのもとに集めなさい。わたしはこれらの言葉を彼らに語り聞かせ、天と地とを呼んで彼らにむかってあかしさせよう。
೨೮ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
29 わたしは知っている。わたしが死んだのち、あなたがたは必ず悪い事をして、わたしが命じた道を離れる。そして後の日に災があなたがたに臨むであろう。これは主の悪と見られることを行い、あなたがたのすることをもって主を怒らせるからである」。
೨೯ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
30 そしてモーセはイスラエルの全会衆に次の歌の言葉を、ことごとく語り聞かせた。
೩೦ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.

< 申命記 31 >