< ヨブ 記 4 >

1 その時、テマンびとエリパズが答えて言った、
ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:
2 「もし人があなたにむかって意見を述べるならば、あなたは腹を立てるでしょうか。しかしだれが黙っておれましょう。
“ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?
3 見よ、あなたは多くの人を教えさとし、衰えた手を強くした。
ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.
4 あなたの言葉はつまずく者をたすけ起し、かよわいひざを強くした。
ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.
5 ところが今、この事があなたに臨むと、あなたは耐え得ない。この事があなたに触れると、あなたはおじ惑う。
ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.
6 あなたが神を恐れていることは、あなたのよりどころではないか。あなたの道の全きことは、あなたの望みではないか。
ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ?
7 考えてみよ、だれが罪のないのに、滅ぼされた者があるか。どこに正しい者で、断ち滅ぼされた者があるか。
“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?
8 わたしの見た所によれば、不義を耕し、害悪をまく者は、それを刈り取っている。
ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.
9 彼らは神のいぶきによって滅び、その怒りの息によって消えうせる。
ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;
10 ししのほえる声、たけきししの声はともにやみ、若きししのきばは折られ、
ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ.
11 雄じしは獲物を得ずに滅び、雌じしの子は散らされる。
ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.
12 さて、わたしに、言葉がひそかに臨んだ、わたしの耳はそのささやきを聞いた。
“ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.
13 すなわち人の熟睡するころ、夜の幻によって思い乱れている時、
ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ
14 恐れがわたしに臨んだので、おののき、わたしの骨はことごとく震えた。
ಭಯವೂ ನಡುಕವೂ ನನ್ನನ್ನು ಹಿಡಿದು, ನನ್ನ ಎಲ್ಲಾ ಎಲುಬುಗಳನ್ನು ನಡುಗಿಸಿತು.
15 時に、霊があって、わたしの顔の前を過ぎたので、わたしの身の毛はよだった。
ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು.
16 そのものは立ちどまったが、わたしはその姿を見わけることができなかった。一つのかたちが、わたしの目の前にあった。わたしは静かな声を聞いた、
ಆ ಆತ್ಮ ನಿಂತಿದ್ದರೂ ಅದು ಏನೆಂದು ನನಗೆ ತಿಳಿಯಲಿಲ್ಲ. ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು:
17 『人は神の前に正しくありえようか。人はその造り主の前に清くありえようか。
‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ?
18 見よ、彼はそのしもべをさえ頼みとせず、その天使をも誤れる者とみなされる。
ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,
19 まして、泥の家に住む者、ちりをその基とする者、しみのようにつぶされる者。
ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?
20 彼らは朝から夕までの間に打ち砕かれ、顧みる者もなく、永遠に滅びる。
ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ.
21 もしその天幕の綱が彼らのうちに取り去られるなら、ついに悟ることもなく、死にうせるではないか』。
ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’

< ヨブ 記 4 >