< ヨシュア記 17 >

1 マナセの部族が、くじによって獲た地は、次のとおりである。マナセはヨセフの長子であった。マナセの長子で、ギレアデの父であるマキルは、軍人であったので、ギレアデとバシャンを獲た。
ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.
2 マナセの部族の他のものにも、その家族にしたがって、地を与えたが、それは、アビエゼル、ヘレク、アスリエル、シケム、ヘペル、セミダで、これらはヨセフの子マナセの男の子孫であって、その家族にしたがって、あげたものである。
ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.
3 しかし、マナセの子マキル、その子ギレアデ、その子ヘペル、その子であったゼロペハデには、女の子だけで、男の子がなかった。女の子たちの名は、マヘラ、ノア、ホグラ、ミルカ、テルザといった。
ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.
4 彼女たちは、祭司エレアザル、ヌンの子ヨシュアおよび、つかさたちの前に進み出て、「わたしたちの兄弟と同じように、わたしたちにも、嗣業を与えよと、主はモーセに命じおきになりました」と言ったので、ヨシュアは主の命にしたがって、彼らの父の兄弟たちと同じように、彼女たちにも嗣業を与えた。
ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
5 こうしてマナセはヨルダンの向こう側で、ギレアデとバシャンの地のほかに、なお十の部分を獲た。
ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
6 マナセの娘たちが、男の子らと共に、嗣業を獲たからである。ギレアデの地は、そのほかのマナセの子孫に分け与えられた。
ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
7 マナセの獲た地の境は、アセルからシケムの東のミクメタテに及び、その境は南に延びて、エンタップアの住民に達する。
ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.
8 タップアの地はマナセに属していたが、マナセの境にあるタップアの町は、エフライムの子孫に属していた。
ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;
9 またその境はカナの川に下って、川の南に至る。そこの町々はマナセの町々の中にあって、エフライムに属した。マナセの境は、川の北に沿って進み、海に達して尽きる。
ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.
10 その川の南の地は、エフライムに属し、北はマナセに属する。海がその境となる。マナセは北はアセルに接し、東はイッサカルに接する。
೧೦ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.
11 マナセはまたイッサカルとアセルの中に、ベテシャンとその村々、イブレアムとその村々、ドルの住民とその村々、エンドルの住民とその村々、タアナクの住民とその村々、メギドの住民とその村々を獲た。このうち第三のものは高地である。
೧೧ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.
12 しかし、マナセの子孫は、これらの町々を取ることができなかったので、カナンびとは長くこの地に住み続けようとした。
೧೨ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.
13 しかし、イスラエルの人々が強くなるにしたがって、カナンびとを使役するようになり、ことごとく追い払うことはしなかった。
೧೩ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.
14 ヨセフの子孫はヨシュアに言った、「主が今まで、わたしを祝福されたので、わたしは数の多い民となったのに、あなたはなぜ、わたしの嗣業として、ただ一つのくじ、一つの分だけを、くださったのですか」。
೧೪ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು
15 ヨシュアは彼らに言った、「もしあなたが数の多い民ならば、林に上っていって、そこで、ペリジびとやレパイムびとの地を自分で切り開くがよい。エフライムの山地が、あなたがたには狭いのだから」。
೧೫ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.
16 ヨセフの子孫は答えた、「山地はわたしどもに十分ではありません。かつまた平地におるカナンびとは、ベテシャンとその村々におるものも、エズレルの谷におるものも、みな鉄の戦車を持っています」。
೧೬ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು
17 ヨシュアはまたヨセフの家、すなわちエフライムとマナセに言った、「あなたは数の多い民で、大きな力をもっています。それでただ一つのくじでは足りません。
೧೭ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.
18 山地をもあなたのものとしなければなりません。それは林ではあるが、切り開いて、向こうの端まで、自分のものとしなければなりません。カナンびとは鉄の戦車があって、強くはあるが、あなたはそれを追い払うことができます」。
೧೮ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.

< ヨシュア記 17 >