< レビ記 12 >

1 主はまたモーセに言われた、
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,
2 「イスラエルの人々に言いなさい、『女がもし身ごもって男の子を産めば、七日のあいだ汚れる。すなわち、月のさわりの日かずほど汚れるであろう。
“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
3 八日目にはその子の前の皮に割礼を施さなければならない。
ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.
4 その女はなお、血の清めに三十三日を経なければならない。その清めの日の満ちるまでは、聖なる物に触れてはならない。また聖なる所にはいってはならない。
ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.
5 もし女の子を産めば、二週間、月のさわりと同じように汚れる。その女はなお、血の清めに六十六日を経なければならない。
ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.
6 男の子または女の子についての清めの日が満ちるとき、女は燔祭のために一歳の小羊、罪祭のために家ばとのひな、あるいは山ばとを、会見の幕屋の入口の、祭司のもとに、携えてこなければならない。
“‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
7 祭司はこれを主の前にささげて、その女のために、あがないをしなければならない。こうして女はその出血の汚れが清まるであろう。これは男の子または女の子を産んだ女のためのおきてである。
ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.
8 もしその女が小羊に手の届かないときは、山ばと二羽か、家ばとのひな二羽かを取って、一つを燔祭、一つを罪祭とし、祭司はその女のために、あがないをしなければならない。こうして女は清まるであろう』」。
ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’”

< レビ記 12 >