< レビ記 2 >

1 人が素祭の供え物を主にささげるときは、その供え物は麦粉でなければならない。その上に油を注ぎ、またその上に乳香を添え、
“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
2 これをアロンの子なる祭司たちのもとに携えて行かなければならない。祭司はその麦粉とその油の一握りを乳香の全部と共に取り、これを記念の分として、祭壇の上で焼かなければならない。これは火祭であって、主にささげる香ばしいかおりである。
ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
3 素祭の残りはアロンとその子らのものになる。これは主の火祭のいと聖なる物である。
ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
4 あなたが、もし天火で焼いたものを素祭としてささげるならば、それは麦粉に油を混ぜて作った種入れぬ菓子、または油を塗った種入れぬ煎餅でなければならない。
“‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
5 あなたの供え物が、もし、平鍋で焼いた素祭であるならば、それは麦粉に油を混ぜて作った種入れぬものでなければならない。
ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
6 あなたはそれを細かく砕き、その上に油を注がなければならない。これは素祭である。
ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
7 あなたの供え物が、もし深鍋で煮た素祭であるならば、麦粉に油を混ぜて作らなければならない。
ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
8 あなたはこれらの物で作った素祭を、主に携えて行かなければならない。それを祭司に渡すならば、祭司はそれを祭壇に携えて行き、
ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
9 その素祭のうちから記念の分を取って、祭壇の上で焼かなければならない。これは火祭であって、主にささげる香ばしいかおりである。
ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
10 素祭の残りはアロンとその子らのものになる。これは、主の火祭のいと聖なる物である。
೧೦ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
11 あなたがたが主にささげる素祭は、すべて種を入れて作ってはならない。パン種も蜜も、すべて主にささげる火祭として焼いてはならないからである。
೧೧“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
12 ただし、初穂の供え物としては、これらを主にささげることができる。しかし香ばしいかおりとして祭壇にささげてはならない。
೧೨ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
13 あなたの素祭の供え物は、すべて塩をもって味をつけなければならない。あなたの素祭に、あなたの神の契約の塩を欠いてはならない。すべて、あなたの供え物は、塩を添えてささげなければならない。
೧೩ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
14 もしあなたが初穂の素祭を主にささげるならば、火で穂を焼いたもの、新穀の砕いたものを、あなたの初穂の素祭としてささげなければならない。
೧೪“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
15 あなたはそれに油を加え、その上に乳香を置かなければならない。これは素祭である。
೧೫ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
16 祭司は、その砕いた物およびその油のうちから記念の分を取って、乳香の全部と共に焼かなければならない。これは主にささげる火祭である。
೧೬ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.

< レビ記 2 >