< 民数記 31 >

1 さて主はモーセに言われた、
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2 「ミデアンびとにイスラエルの人々のあだを報いなさい。その後、あなたはあなたの民に加えられるであろう」。
“ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.
3 モーセは民に言った、「あなたがたのうちから人を選んで戦いのために武装させ、ミデアンびとを攻めて、主のためミデアンびとに復讐しなさい。
ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.
4 すなわちイスラエルのすべての部族から、部族ごとに千人ずつを戦いに送り出さなければならない」。
ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.
5 そこでイスラエルの部族のうちから部族ごとに千人ずつを選び、一万二千人を得て、戦いのために武装させた。
ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
6 モーセは各部族から千人ずつを戦いにつかわし、また祭司エレアザルの子ピネハスに、聖なる器と吹き鳴らすラッパとを執らせて、共に戦いにつかわした。
ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.
7 彼らは主がモーセに命じられたようにミデアンびとと戦って、その男子をみな殺した。
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,
8 その殺した者のほかにまたミデアンの王五人を殺した。その名はエビ、レケム、ツル、フル、レバである。またベオルの子バラムをも、つるぎにかけて殺した。
ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.
9 またイスラエルの人々はミデアンの女たちとその子供たちを捕虜にし、その家畜と、羊の群れと、貨財とをことごとく奪い取り、
ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.
10 そのすまいのある町々と、その部落とを、ことごとく火で焼いた。
ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
11 こうして彼らはすべて奪ったものと、かすめたものとは人をも家畜をも取り、
ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.
12 その生けどった者と、かすめたものと、奪ったものとを携えて、エリコに近いヨルダンのほとりのモアブの平野の宿営におるモーセと祭司エレアザルとイスラエルの人々の会衆のもとへもどってきた。
ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.
13 ときにモーセと祭司エレアザルと会衆のつかさたちはみな宿営の外に出て迎えたが、
ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
14 モーセは軍勢の将たち、すなわち戦場から帰ってきた千人の長たちと、百人の長たちに対して怒った。
ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.
15 モーセは彼らに言った、「あなたがたは女たちをみな生かしておいたのか。
ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?
16 彼らはバラムのはかりごとによって、イスラエルの人々に、ペオルのことで主に罪を犯させ、ついに主の会衆のうちに疫病を起すに至った。
ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.
17 それで今、この子供たちのうちの男の子をみな殺し、また男と寝て、男を知った女をみな殺しなさい。
ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
18 ただし、まだ男と寝ず、男を知らない娘はすべてあなたがたのために生かしておきなさい。
ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.
19 そしてあなたがたは七日のあいだ宿営の外にとどまりなさい。あなたがたのうちすべて人を殺した者、およびすべて殺された者に触れた者は、あなたがた自身も、あなたがたの捕虜も共に、三日目と七日目とに身を清めなければならない。
“ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.
20 またすべての衣服と、すべての皮の器と、すべてやぎの毛で作ったものと、すべての木の器とを清めなければならない」。
ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.
21 祭司エレアザルは戦いに出たいくさびとたちに言った、「これは主がモーセに命じられた律法の定めである。
ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:
22 金、銀、青銅、鉄、すず、鉛など、
ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು
23 すべて火に耐える物は火の中を通さなければならない。そうすれば清くなるであろう。なおその上、汚れを清める水で、清めなければならない。しかし、すべて火に耐えないものは水の中を通さなければならない。
ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.
24 あなたがたは七日目に衣服を洗わなければならない。そして清くなり、その後宿営にはいることができる」。
ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.
25 主はモーセに言われた、
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
26 「あなたと祭司エレアザルおよび会衆の氏族のかしらたちは、その生けどった人と家畜の獲物の総数を調べ、
“ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.
27 その獲物を戦いに出た勇士と、全会衆とに折半しなさい。
ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.
28 そして戦いに出たいくさびとに、人または牛、またはろば、または羊を、おのおの五百ごとに一つを取り、みつぎとして主にささげさせなさい。
ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.
29 すなわち彼らが受ける半分のなかから、それを取り、主にささげる物として祭司エレアザルに渡しなさい。
ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು.
30 またイスラエルの人々が受ける半分のなかから、その獲た人または牛、またはろば、または羊などの家畜を、おのおの五十ごとに一つを取り、主の幕屋の務をするレビびとに与えなさい」。
ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.
31 モーセと祭司エレアザルとは主がモーセに命じられたとおりに行った。
ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು.
32 そこでその獲物、すなわち、いくさびとたちが奪い取ったものの残りは羊六十七万五千、
ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.
33 牛七万二千、
72,000 ಪಶುಗಳು;
34 ろば六万一千、
ಕತ್ತೆಗಳು 61,000;
35 人三万二千、これはみな男と寝ず、男を知らない女であった。
ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ.
36 そしてその半分、すなわち戦いに出た者の分は羊三十三万七千五百、
ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ
37 主にみつぎとした羊は六百七十五。
ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;
38 牛は三万六千、そのうちから主にみつぎとしたものは七十二。
ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;
39 ろばは三万五百、そのうちから主にみつぎとしたものは六十一。
30,500 ಕತ್ತೆಗಳು; ಅವುಗಳಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 61;
40 人は一万六千、そのうちから主にみつぎとしたものは三十二人であった。
16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.
41 モーセはそのみつぎを主にささげる物として祭司エレアザルに渡した。主がモーセに命じられたとおりである。
ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.
42 モーセが戦いに出た人々とは別にイスラエルの人々に与えた半分、
ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ:
43 すなわち会衆の受けた半分は羊三十三万七千五百、
ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು;
44 牛三万六千、
36,000 ಪಶುಗಳು;
45 ろば三万五百、
30,500 ಕತ್ತೆಗಳು;
46 人一万六千であって、
16,000 ಜನರು;
47 モーセはイスラエルの人々の受けた半分のなかから、人および獣をおのおの五十ごとに一つを取って、主の幕屋の務をするレビびとに与えた。主がモーセに命じられたとおりである。
ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
48 時に軍勢の将であったものども、すなわち千人の長たちと百人の長たちとがモーセのところにきて、
ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,
49 モーセに言った、「しもべらは、指揮下のいくさびとを数えましたが、われわれのうち、ひとりも欠けた者はありませんでした。
ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.
50 それで、われわれは、おのおの手に入れた金の飾り物、すなわち腕飾り、腕輪、指輪、耳輪、首飾りなどを主に携えてきて供え物とし、主の前にわれわれの命のあがないをしようと思います」。
ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.
51 モーセと祭司エレアザルとは、彼らから細工を施した金の飾り物を受け取った。
ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.
52 千人の長たちと百人の長たちとが、主にささげものとした金は合わせて一万六千七百五十シケル。
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು.
53 いくさびとは、おのおの自分のぶんどり物を獲た。
ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.
54 モーセと祭司エレアザルとは、千人の長たちと百人の長たちとから、その金を受け取り、それを携えて会見の幕屋に入り、主の前に置いてイスラエルの人々のために記念とした。
ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.

< 民数記 31 >