< 詩篇 21 >

1 聖歌隊の指揮者によってうたわせたダビデの歌 主よ、王はあなたの力によって喜び、あなたの助けによって、いかに大きな喜びをもつことでしょう。
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!
2 あなたは彼の心の願いをゆるし、そのくちびるの求めをいなまれなかった。 (セラ)
ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ.
3 あなたは大いなる恵みをもって彼を迎え、そのかしらに純金の冠をいただかせられる。
ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.
4 彼がいのちを求めると、あなたはそれを彼にさずけ、世々限りなくそのよわいを長くされた。
ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.
5 あなたの助けによって彼の栄光は大きい。あなたは誉と威厳とを彼に与えられる。
ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.
6 まことに、あなたは彼をとこしえに恵まれた者とし、み前に喜びをもって楽しませられる。
ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ.
7 王は主に信頼するゆえ、いと高き者のいつくしみをこうむって、動かされることはない。
ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.
8 あなたの手はもろもろの敵を尋ね出し、あなたの右の手はあなたを憎む者を尋ね出すであろう。
ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು.
9 あなたが怒る時、彼らを燃える炉のようにするであろう。主はみ怒りによって彼らをのみつくされる。火は彼らを食いつくすであろう。
ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.
10 あなたは彼らのすえを地から断ち、彼らの種を人の子らの中から滅ぼすであろう。
ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ.
11 たとい彼らがあなたにむかって悪い事を企て、悪いはかりごとを思いめぐらしても、なし遂げることはできない。
ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.
12 あなたは彼らを逃げ走らせ、あなたの弓弦を張って、彼らの顔をねらうであろう。
ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.
13 主よ、力をあらわして、みずからを高くしてください。われらはあなたの大能をうたい、かつほめたたえるでしょう。
ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.

< 詩篇 21 >