< ヨハネの黙示録 17 >

1 それから、七つの鉢を持つ七人の御使のひとりがきて、わたしに語って言った、「さあ、きなさい。多くの水の上にすわっている大淫婦に対するさばきを、見せよう。
ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
2 地の王たちはこの女と姦淫を行い、地に住む人々はこの女の姦淫のぶどう酒に酔いしれている」。
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.
3 御使は、わたしを御霊に感じたまま、荒野へ連れて行った。わたしは、そこでひとりの女が赤い獣に乗っているのを見た。その獣は神を汚すかずかずの名でおおわれ、また、それに七つの頭と十の角とがあった。
ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
4 この女は紫と赤の衣をまとい、金と宝石と真珠とで身を飾り、憎むべきものと自分の姦淫の汚れとで満ちている金の杯を手に持ち、
ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.
5 その額には、一つの名がしるされていた。それは奥義であって、「大いなるバビロン、淫婦どもと地の憎むべきものらとの母」というのであった。
ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.
6 わたしは、この女が聖徒の血とイエスの証人の血に酔いしれているのを見た。この女を見た時、わたしは非常に驚きあやしんだ。
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
7 すると、御使はわたしに言った、「なぜそんなに驚くのか。この女の奥義と、女を乗せている七つの頭と十の角のある獣の奥義とを、話してあげよう。
ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.
8 あなたの見た獣は、昔はいたが、今はおらず、そして、やがて底知れぬ所から上ってきて、ついには滅びに至るものである。地に住む者のうち、世の初めからいのちの書に名をしるされていない者たちは、この獣が、昔はいたが今はおらず、やがて来るのを見て、驚きあやしむであろう。 (Abyssos g12)
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. (Abyssos g12)
9 ここに、知恵のある心が必要である。七つの頭は、この女のすわっている七つの山であり、また、七人の王のことである。
“ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.
10 そのうちの五人はすでに倒れ、ひとりは今おり、もうひとりは、まだきていない。それが来れば、しばらくの間だけおることになっている。
೧೦ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
11 昔はいたが今はいないという獣は、すなわち第八のものであるが、またそれは、かの七人の中のひとりであって、ついには滅びに至るものである。
೧೧ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.
12 あなたの見た十の角は、十人の王のことであって、彼らはまだ国を受けてはいないが、獣と共に、一時だけ王としての権威を受ける。
೧೨“ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
13 彼らは心をひとつにしている。そして、自分たちの力と権威とを獣に与える。
೧೩ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.
14 彼らは小羊に戦いをいどんでくるが、小羊は、主の主、王の王であるから、彼らにうち勝つ。また、小羊と共にいる召された、選ばれた、忠実な者たちも、勝利を得る」。
೧೪ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
15 御使はまた、わたしに言った、「あなたの見た水、すなわち、淫婦のすわっている所は、あらゆる民族、群衆、国民、国語である。
೧೫ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
16 あなたの見た十の角と獣とは、この淫婦を憎み、みじめな者にし、裸にし、彼女の肉を食い、火で焼き尽すであろう。
೧೬ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
17 神は、御言が成就する時まで、彼らの心の中に、御旨を行い、思いをひとつにし、彼らの支配権を獣に与える思いを持つようにされたからである。
೧೭ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
18 あなたの見たかの女は、地の王たちを支配する大いなる都のことである」。
೧೮ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”

< ヨハネの黙示録 17 >