< ルツ記 1 >

1 さばきづかさが世を治めているころ、国に飢きんがあったので、ひとりの人がその妻とふたりの男の子を連れてユダのベツレヘムを去り、モアブの地へ行ってそこに滞在した。
ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
2 その人の名はエリメレク、妻の名はナオミ、ふたりの男の子の名はマロンとキリオンといい、ユダのベツレヘムのエフラタびとであった。彼らはモアブの地へ行って、そこにおったが、
ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ
3 ナオミの夫エリメレクは死んで、ナオミとふたりの男の子が残された。
ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು.
4 ふたりの男の子はそれぞれモアブの女を妻に迎えた。そのひとりの名はオルパといい、ひとりの名はルツといった。彼らはそこに十年ほど住んでいたが、
ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.
5 マロンとキリオンのふたりもまた死んだ。こうしてナオミはふたりの子と夫とに先だたれた。
ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
6 その時、ナオミはモアブの地で、主がその民を顧みて、すでに食物をお与えになっていることを聞いたので、その嫁と共に立って、モアブの地からふるさとへ帰ろうとした。
ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
7 そこで彼女は今いる所を出立し、ユダの地へ帰ろうと、ふたりの嫁を連れて道に進んだ。
ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ
8 しかしナオミはふたりの嫁に言った、「あなたがたは、それぞれ自分の母の家に帰って行きなさい。あなたがたが、死んだふたりの子とわたしに親切をつくしたように、どうぞ、主があなたがたに、いつくしみを賜わりますよう。
ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.
9 どうぞ、主があなたがたに夫を与え、夫の家で、それぞれ身の落ち着き所を得させられるように」。こう言って、ふたりの嫁に口づけしたので、彼らは声をあげて泣き、
ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
10 ナオミに言った、「いいえ、わたしたちは一緒にあなたの民のところへ帰ります」。
೧೦ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು,
11 しかしナオミは言った、「娘たちよ、帰って行きなさい。どうして、わたしと一緒に行こうというのですか。あなたがたの夫となる子がまだわたしの胎内にいると思うのですか。
೧೧ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.
12 娘たちよ、帰って行きなさい。わたしは年をとっているので、夫をもつことはできません。たとい、わたしが今夜、夫をもち、また子を産む望みがあるとしても、
೧೨ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ,
13 そのためにあなたがたは、子どもの成長するまで待っているつもりなのですか。あなたがたは、そのために夫をもたずにいるつもりなのですか。娘たちよ、それはいけません。主の手がわたしに臨み、わたしを責められたことで、あなたがたのために、わたしは非常に心を痛めているのです」。
೧೩ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.
14 彼らはまた声をあげて泣いた。そしてオルパはそのしゅうとめに口づけしたが、ルツはしゅうとめを離れなかった。
೧೪ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
15 そこでナオミは言った、「ごらんなさい。あなたの相嫁は自分の民と自分の神々のもとへ帰って行きました。あなたも相嫁のあとについて帰りなさい」。
೧೫ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
16 しかしルツは言った、「あなたを捨て、あなたを離れて帰ることをわたしに勧めないでください。わたしはあなたの行かれる所へ行き、またあなたの宿られる所に宿ります。あなたの民はわたしの民、あなたの神はわたしの神です。
೧೬ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
17 あなたの死なれる所でわたしも死んで、そのかたわらに葬られます。もし死に別れでなく、わたしがあなたと別れるならば、主よ、どうぞわたしをいくえにも罰してください」。
೧೭ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
18 ナオミはルツが自分と一緒に行こうと、固く決心しているのを見たので、そのうえ言うことをやめた。
೧೮ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು.
19 そしてふたりは旅をつづけて、ついにベツレヘムに着いた。彼らがベツレヘムに着いたとき、町はこぞって彼らのために騒ぎたち、女たちは言った、「これはナオミですか」。
೧೯ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು
20 ナオミは彼らに言った、「わたしをナオミ(楽しみ)と呼ばずに、マラ(苦しみ)と呼んでください。なぜなら全能者がわたしをひどく苦しめられたからです。
೨೦ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
21 わたしは出て行くときは豊かでありましたが、主はわたしをから手で帰されました。主がわたしを悩まし、全能者がわたしに災をくだされたのに、どうしてわたしをナオミと呼ぶのですか」。
೨೧ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.
22 こうしてナオミは、モアブの地から帰った嫁、モアブの女ルツと一緒に帰ってきて、大麦刈の初めにベツレヘムに着いた。
೨೨ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.

< ルツ記 1 >