< コリント人への手紙第一 15 >

1 兄弟たち。私は今、あなたがたに福音を知らせましょう。これは、私があなたがたに宣べ伝えたもので、あなたがたが受け入れ、また、それによって立っている福音です。
ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.
2 また、もしあなたがたがよく考えもしないで信じたのでないなら、私の宣べ伝えたこの福音のことばをしっかりと保っていれば、この福音によって救われるのです。
ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
3 私があなたがたに最もたいせつなこととして伝えたのは、私も受けたことであって、次のことです。キリストは、聖書の示すとおりに、私たちの罪のために死なれたこと、
ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;
4 また、葬られたこと、また、聖書に従って三日目によみがえられたこと、
ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
5 また、ケパに現われ、それから十二弟子に現われたことです。
ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.
6 その後、キリストは五百人以上の兄弟たちに同時に現われました。その中の大多数の者は今なお生き残っていますが、すでに眠った者もいくらかいます。
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
7 その後、キリストはヤコブに現われ、それから使徒たち全部に現われました。
ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.
8 そして、最後に、月足らずで生まれた者と同様な私にも、現われてくださいました。
ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.
9 私は使徒の中では最も小さい者であって、使徒と呼ばれる価値のない者です。なぜなら、私は神の教会を迫害したからです。
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
10 ところが、神の恵みによって、私は今の私になりました。そして、私に対するこの神の恵みは、むだにはならず、私はほかのすべての使徒たちよりも多く働きました。しかし、それは私ではなく、私にある神の恵みです。
೧೦ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
11 そういうわけですから、私にせよ、ほかの人たちにせよ、私たちはこのように宣べ伝えているのであり、あなたがたはこのように信じたのです。
೧೧ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.
12 ところで、キリストは死者の中から復活された、と宣べ伝えられているのなら、どうして、あなたがたの中に、死者の復活はない、と言っている人がいるのですか。
೧೨ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
13 もし、死者の復活がないのなら、キリストも復活されなかったでしょう。
೧೩ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.
14 そして、キリストが復活されなかったのなら、私たちの宣教は実質のないものになり、あなたがたの信仰も実質のないものになるのです。
೧೪ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.
15 それどころか、私たちは神について偽証をした者ということになります。なぜなら、もしもかりに、死者の復活はないとしたら、神はキリストをよみがえらせなかったはずですが、私たちは神がキリストをよみがえらせた、と言って神に逆らう証言をしたからです。
೧೫ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.
16 もし、死者がよみがえらないのなら、キリストもよみがえらなかったでしょう。
೧೬ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.
17 そして、もしキリストがよみがえらなかったのなら、あなたがたの信仰はむなしく、あなたがたは今もなお、自分の罪の中にいるのです。
೧೭ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
18 そうだったら、キリストにあって眠った者たちは、滅んでしまったのです。
೧೮ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.
19 もし、私たちがこの世にあってキリストに単なる希望を置いているだけなら、私たちは、すべての人の中で一番哀れな者です。
೧೯ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.
20 しかし、今やキリストは、眠った者の初穂として死者の中からよみがえられました。
೨೦ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
21 というのは、死がひとりの人を通して来たように、死者の復活もひとりの人を通して来たからです。
೨೧ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
22 すなわち、アダムにあってすべての人が死んでいるように、キリストによってすべての人が生かされるからです。
೨೨ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
23 しかし、おのおのにその順番があります。まず初穂であるキリスト、次にキリストの再臨のときキリストに属している者です。
೨೩ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.
24 それから終わりが来ます。そのとき、キリストはあらゆる支配と、あらゆる権威、権力を滅ぼし、国を父なる神にお渡しになります。
೨೪ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
25 キリストの支配は、すべての敵をその足の下に置くまで、と定められているからです。
೨೫ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
26 最後の敵である死も滅ぼされます。
೨೬ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.
27 「彼は万物をその足の下に従わせた。」からです。ところで、万物が従わせられた、と言うとき、万物を従わせたその方がそれに含められていないことは明らかです。
೨೭“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.
28 しかし、万物が御子に従うとき、御子自身も、ご自分に万物を従わせた方に従われます。これは、神が、すべてにおいてすべてとなられるためです。
೨೮ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
29 もしこうでなかったら、死者のゆえにバプテスマを受ける人たちは、何のためにそうするのですか。もし、死者は決してよみがえらないのなら、なぜその人たちは、死者のゆえにバプテスマを受けるのですか。
೨೯ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
30 また、なぜ私たちもいつも危険にさらされているのでしょうか。
೩೦ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?
31 兄弟たち。私にとって、毎日が死の連続です。これは、私たちの主キリスト・イエスにあってあなたがたを誇る私の誇りにかけて、誓って言えることです。
೩೧ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
32 もし、私が人間的な動機から、エペソで獣と戦ったのなら、何の益があるでしょう。もし、死者の復活がないのなら、「あすは死ぬのだ。さあ、飲み食いしようではないか。」ということになるのです。
೩೨ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
33 思い違いをしてはいけません。友だちが悪ければ、良い習慣がそこなわれます。
೩೩ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
34 目をさまして、正しい生活を送り、罪をやめなさい。神についての正しい知識を持っていない人たちがいます。私はあなたがたをはずかしめるために、こう言っているのです。
೩೪ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
35 ところが、ある人はこう言うでしょう。「死者は、どのようにしてよみがえるのか。どのようなからだで来るのか。」
೩೫“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.
36 愚かな人だ。あなたの蒔く物は、死ななければ、生かされません。
೩೬ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.
37 あなたが蒔く物は、後にできるからだではなく、麦やそのほかの穀物の種粒です。
೩೭ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
38 しかし神は、みこころに従って、それにからだを与え、おのおのの種にそれぞれのからだをお与えになります。
೩೮ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.
39 すべての肉が同じではなく、人間の肉もあり、獣の肉もあり、鳥の肉もあり、魚の肉もあります。
೩೯ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ.
40 また、天上のからだもあり、地上のからだもあり、天上のからだの栄光と地上のからだの栄光とは異なっており、
೪೦ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
41 太陽の栄光もあり、月の栄光もあり、星の栄光もあります。個々の星によって栄光が違います。
೪೧ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
42 死者の復活もこれと同じです。朽ちるもので蒔かれ、朽ちないものによみがえらされ、
೪೨ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
43 卑しいもので蒔かれ、栄光あるものによみがえらされ、弱いもので蒔かれ、強いものによみがえらされ、
೪೩ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;
44 血肉のからだで蒔かれ、御霊に属するからだによみがえらされるのです。血肉のからだがあるのですから、御霊のからだもあるのです。
೪೪ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ.
45 聖書に「最初の人アダムは生きた者となった。」と書いてありますが、最後のアダムは、生かす御霊となりました。
೪೫“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
46 最初にあったのは血肉のものであり、御霊のものではありません。御霊のものはあとに来るのです。
೪೬ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು.
47 第一の人は地から出て、土で造られた者ですが、第二の人は天から出た者です。
೪೭ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.
48 土で造られた者はみな、この土で造られた者に似ており、天からの者はみな、この天から出た者に似ているのです。
೪೮ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
49 私たちは土で造られた者のかたちを持っていたように、天上のかたちをも持つのです。
೪೯ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
50 兄弟たちよ。私はこのことを言っておきます。血肉のからだは神の国を相続できません。朽ちるものは、朽ちないものを相続できません。
೫೦ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
51 聞きなさい。私はあなたがたに奥義を告げましょう。私たちはみなが眠ってしまうのではなく、みな変えられるのです。
೫೧ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.
52 終わりのラッパとともに、たちまち、一瞬のうちにです。ラッパが鳴ると、死者は朽ちないものによみがえり、私たちは変えられるのです。
೫೨ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
53 朽ちるものは、必ず朽ちないものを着なければならず、死ぬものは、必ず不死を着なければならないからです。
೫೩ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
54 しかし、朽ちるものが朽ちないものを着、死ぬものが不死を着るとき、「死は勝利にのまれた。」としるされている、みことばが実現します。
೫೪ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
55 「死よ。おまえの勝利はどこにあるのか。死よ。おまえのとげはどこにあるのか。」 (Hadēs g86)
೫೫“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” (Hadēs g86)
56 死のとげは罪であり、罪の力は律法です。
೫೬ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.
57 しかし、神に感謝すべきです。神は、私たちの主イエス・キリストによって、私たちに勝利を与えてくださいました。
೫೭ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
58 ですから、私の愛する兄弟たちよ。堅く立って、動かされることなく、いつも主のわざに励みなさい。あなたがたは自分たちの労苦が、主にあってむだでないことを知っているのですから。
೫೮ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

< コリント人への手紙第一 15 >