< コリント人への手紙第一 2 >

1 さて兄弟たち。私があなたがたのところへ行ったとき、私は、すぐれたことば、すぐれた知恵を用いて、神のあかしを宣べ伝えることはしませんでした。
ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
2 なぜなら私は、あなたがたの間で、イエス・キリスト、すなわち十字架につけられた方のほかは、何も知らないことに決心したからです。
ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
3 あなたがたといっしょにいたときの私は、弱く、恐れおののいていました。
ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.
4 そして、私のことばと私の宣教とは、説得力のある知恵のことばによって行なわれたものではなく、御霊と御力の現われでした。
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
5 それは、あなたがたの持つ信仰が、人間の知恵にささえられず、神の力にささえられるためでした。
6 しかし私たちは、成人の間で、知恵を語ります。この知恵は、この世の知恵でもなく、この世の過ぎ去って行く支配者たちの知恵でもありません。 (aiōn g165)
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. (aiōn g165)
7 私たちの語るのは、隠された奥義としての神の知恵であって、それは、神が、私たちの栄光のために、世界の始まる前から、あらかじめ定められたものです。 (aiōn g165)
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. (aiōn g165)
8 この知恵を、この世の支配者たちは、だれひとりとして悟りませんでした。もし悟っていたら、栄光の主を十字架につけはしなかったでしょう。 (aiōn g165)
ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; (aiōn g165)
9 まさしく、聖書に書いてあるとおりです。 「目が見たことのないもの、 耳が聞いたことのないもの、 そして、人の心に思い浮かんだことのないもの。 神を愛する者のために、 神の備えてくださったものは、みなそうである。」
ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
10 神はこれを、御霊によって私たちに啓示されたのです。御霊はすべてのことを探り、神の深みにまで及ばれるからです。
೧೦ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
11 いったい、人の心のことは、その人のうちにある霊のほかに、だれが知っているでしょう。同じように、神のみこころのことは、神の御霊のほかにはだれも知りません。
೧೧ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
12 ところで、私たちは、この世の霊を受けたのではなく、神の御霊を受けました。それは、恵みによって神から私たちに賜わったものを、私たちが知るためです。
೧೨ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
13 この賜物について話すには、人の知恵に教えられたことばを用いず、御霊に教えられたことばを用います。その御霊のことばをもって御霊のことを解くのです。
೧೩ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
14 生まれながらの人間は、神の御霊に属することを受け入れません。それらは彼には愚かなことだからです。また、それを悟ることができません。なぜなら、御霊のことは御霊によってわきまえるものだからです。
೧೪ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
15 御霊を受けている人は、すべてのことをわきまえますが、自分はだれによってもわきまえられません。
೧೫ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
16 いったい、「だれが主のみこころを知り、主を導くことができたか。」ところが、私たちには、キリストの心があるのです。
೧೬“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

< コリント人への手紙第一 2 >