< テモテへの手紙第一 4 >

1 しかし、御霊が明らかに言われるように、後の時代になると、ある人たちは惑わす霊と悪霊の教えとに心を奪われ、信仰から離れるようになります。
ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
2 それは、うそつきどもの偽善によるものです。彼らは良心が麻痺しており、
ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,
3 結婚することを禁じたり、食物を断つことを命じたりします。しかし食物は、信仰があり、真理を知っている人が感謝して受けるようにと、神が造られた物です。
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
4 神が造られた物はみな良い物で、感謝して受けるとき、捨てるべき物は何一つありません。
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.
5 神のことばと祈りとによって、きよめられるからです。
ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
6 これらのことを兄弟たちに教えるなら、あなたはキリスト・イエスのりっぱな奉仕者になります。信仰のことばと、あなたが従って来た良い教えのことばとによって養われているからです。
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
7 俗悪な、年寄り女がするような空想話を避けなさい。むしろ、敬虔のために自分を鍛練しなさい。
ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.
8 肉体の鍛練もいくらかは有益ですが、今のいのちと未来のいのちが約束されている敬虔は、すべてに有益です。
ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.
9 このことばは、真実であり、そのまま受け入れるに値することばです。
ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.
10 私たちはそのために労し、また苦心しているのです。それは、すべての人々、ことに信じる人々の救い主である、生ける神に望みを置いているからです。
೧೦ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.
11 これらのことを命じ、また教えなさい。
೧೧ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
12 年が若いからといって、だれにも軽く見られないようにしなさい。かえって、ことばにも、態度にも、愛にも、信仰にも、純潔にも信者の模範になりなさい。
೧೨ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
13 私が行くまで、聖書の朗読と勧めと教えとに専念しなさい。
೧೩ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
14 長老たちによる按手を受けたとき、預言によって与えられた、あなたのうちにある聖霊の賜物を軽んじてはいけません。
೧೪ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
15 これらの務めに心を砕き、しっかりやりなさい。そうすれば、あなたの進歩はすべての人に明らかになるでしょう。
೧೫ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
16 自分自身にも、教える事にも、よく気をつけなさい。あくまでそれを続けなさい。そうすれば、自分自身をも、またあなたの教えを聞く人たちをも救うことになります。
೧೬ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

< テモテへの手紙第一 4 >