< マルコの福音書 2 >

1 数日たって、イエスがカペナウムにまた来られると、家におられることが知れ渡った。
ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.
2 それで多くの人が集まったため、戸口のところまですきまもないほどになった。この人たちに、イエスはみことばを話しておられた。
ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.
3 そのとき、ひとりの中風の人が四人の人にかつがれて、みもとに連れて来られた。
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.
4 群衆のためにイエスに近づくことができなかったので、その人々はイエスのおられるあたりの屋根をはがし、穴をあけて、中風の人を寝かせたままその床をつり降ろした。
ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
5 イエスは彼らの信仰を見て、中風の人に、「子よ。あなたの罪は赦されました。」と言われた。
ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
6 ところが、その場に律法学者が数人すわっていて、心の中で理屈を言った。
ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು,
7 「この人は、なぜ、あんなことを言うのか。神をけがしているのだ。神おひとりのほか、だれが罪を赦すことができよう。」
“ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.
8 彼らが心の中でこのように理屈を言っているのを、イエスはすぐにご自分の霊で見抜いて、こう言われた。「なぜ、あなたがたは心の中でそんな理屈を言っているのか。
ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?
9 中風の人に、『あなたの罪は赦された。』と言うのと、『起きて、寝床をたたんで歩け。』と言うのと、どちらがやさしいか。
ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?
10 人の子が地上で罪を赦す権威を持っていることを、あなたがたに知らせるために。」こう言ってから、中風の人に、
ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ,
11 「あなたに言う。起きなさい。寝床をたたんで、家に帰りなさい。」と言われた。
“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
12 すると彼は起き上がり、すぐに床を取り上げて、みなの見ている前を出て行った。それでみなの者がすっかり驚いて、「こういうことは、かつて見たことがない。」と言って神をあがめた。
ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
13 イエスはまた湖のほとりに出て行かれた。すると群衆がみな、みもとにやって来たので、彼らに教えられた。
ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.
14 イエスは、道を通りながら、アルパヨの子レビが収税所にすわっているのをご覧になって、「わたしについて来なさい。」と言われた。すると彼は立ち上がって従った。
ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
15 それから、イエスは、彼の家で食卓に着かれた。取税人や罪人たちも大ぜい、イエスや弟子たちといっしょに食卓に着いていた。こういう人たちが大ぜいいて、イエスに従っていたのである。
ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.
16 パリサイ派の律法学者たちは、イエスが罪人や取税人たちといっしょに食事をしておられるのを見て、イエスの弟子たちにこう言った。「なぜ、あの人は取税人や罪人たちといっしょに食事をするのですか。」
ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.
17 イエスはこれを聞いて、彼らにこう言われた。「医者を必要とするのは丈夫な者ではなく、病人です。わたしは正しい人を招くためではなく、罪人を招くために来たのです。」
ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
18 ヨハネの弟子たちとパリサイ人たちは断食をしていた。そして、イエスのもとに来て言った。「ヨハネの弟子たちやパリサイ人の弟子たちは断食するのに、あなたの弟子たちはなぜ断食しないのですか。」
ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
19 イエスは彼らに言われた。「花婿が自分たちといっしょにいる間、花婿につき添う友だちが断食できるでしょうか。花婿といっしょにいる時は、断食できないのです。
ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು.
20 しかし、花婿が彼らから取り去られる時が来ます。その日には断食します。
ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.
21 だれも、真新しい布切れで古い着物の継ぎをするようなことはしません。そんなことをすれば、新しい継ぎ切れは古い着物を引き裂き、破れはもっとひどくなります。
“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.
22 また、だれも新しいぶどう酒を古い皮袋に入れるようなことはしません。そんなことをすれば、ぶどう酒は皮袋を張り裂き、ぶどう酒も皮袋もだめになってしまいます。新しいぶどう酒は新しい皮袋に入れるのです。」
ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು.
23 ある安息日のこと、イエスは麦畑の中を通って行かれた。すると、弟子たちが道々穂を摘み始めた。
ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.
24 すると、パリサイ人たちがイエスに言った。「ご覧なさい。なぜ彼らは、安息日なのに、してはならないことをするのですか。」
ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.
25 イエスは彼らに言われた。「ダビデとその連れの者たちが、食物がなくてひもじかったとき、ダビデが何をしたか、読まなかったのですか。
ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?
26 アビヤタルが大祭司のころ、ダビデは神の家にはいって、祭司以外の者が食べてはならない供えのパンを、自分も食べ、またともにいた者たちにも与えたではありませんか。」
ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.
27 また言われた。「安息日は人間のために設けられたのです。人間が安息日のために造られたのではありません。
ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.
28 人の子は安息日にも主です。」
ಆದ್ದರಿಂದ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದೇನೆ,” ಎಂದು ಹೇಳಿದರು.

< マルコの福音書 2 >