< マタイの福音書 17 >

1 それから六日たって、イエスは、ペテロとヤコブとその兄弟ヨハネだけを連れて、高い山に導いて行かれた。
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
2 そして彼らの目の前で、御姿が変わり、御顔は太陽のように輝き、御衣は光のように白くなった。
ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
3 しかも、モーセとエリヤが現われてイエスと話し合っているではないか。
ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
4 すると、ペテロが口出ししてイエスに言った。「先生。私たちがここにいることは、すばらしいことです。もし、およろしければ、私が、ここに三つの幕屋を造ります。あなたのために一つ、モーセのために一つ、エリヤのために一つ。」
ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
5 彼がまだ話している間に、見よ、光り輝く雲がその人々を包み、そして、雲の中から、「これは、わたしの愛する子、わたしはこれを喜ぶ。彼の言うことを聞きなさい。」という声がした。
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
6 弟子たちは、この声を聞くと、ひれ伏して非常にこわがった。
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
7 すると、イエスが来られて、彼らに手を触れ、「起きなさい。こわがることはない。」と言われた。
ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.
8 それで、彼らが目を上げて見ると、だれもいなくて、ただイエスおひとりだけであった。
ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
9 彼らが山を降りるとき、イエスは彼らに、「人の子が死人の中からよみがえるときまでは、いま見た幻をだれにも話してはならない。」と命じられた。
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
10 そこで、弟子たちは、イエスに尋ねて言った。「すると、律法学者たちが、まずエリヤが来るはずだと言っているのは、どうしてでしょうか。」
೧೦ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
11 イエスは答えて言われた。「エリヤが来て、すべてのことを立て直すのです。
೧೧ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
12 しかし、わたしは言います。エリヤはもうすでに来たのです。ところが彼らはエリヤを認めようとせず、彼に対して好き勝手なことをしたのです。人の子もまた、彼らから同じように苦しめられようとしています。」
೧೨ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
13 そのとき、弟子たちは、イエスがバプテスマのヨハネのことを言われたのだと気づいた。
೧೩ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
14 彼らが群衆のところに来たとき、ひとりの人がイエスのそば近くに来て、御前にひざまずいて言った。
೧೪ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
15 「主よ。私の息子をあわれんでください。てんかんで、たいへん苦しんでおります。何度も何度も火の中に落ちたり、水の中に落ちたりいたします。
೧೫“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
16 そこで、その子をお弟子たちのところに連れて来たのですが、直すことができませんでした。」
೧೬ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
17 イエスは答えて言われた。「ああ、不信仰な、曲がった今の世だ。いつまであなたがたといっしょにいなければならないのでしょう。いつまであなたがたにがまんしていなければならないのでしょう。その子をわたしのところに連れて来なさい。」
೧೭ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
18 そして、イエスがその子をおしかりになると、悪霊は彼から出て行き、その子はその時から直った。
೧೮ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
19 そのとき、弟子たちはそっとイエスのもとに来て、言った。「なぜ、私たちには悪霊を追い出せなかったのですか。」
೧೯ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
20 イエスは言われた。「あなたがたの信仰が薄いからです。まことに、あなたがたに告げます。もし、からし種ほどの信仰があったら、この山に、『ここからあそこに移れ。』と言えば移るのです。どんなことでも、あなたがたにできないことはありません。
೨೦ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
21 [ただし、この種のものは、祈りと断食によらなければ出て行きません。]」
೨೧ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
22 彼らがガリラヤに集まっていたとき、イエスは彼らに言われた。「人の子は、いまに人々の手に渡されます。
೨೨ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
23 そして彼らに殺されるが、三日目によみがえります。」すると、彼らは非常に悲しんだ。
೨೩ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
24 また、彼らがカペナウムに来たとき、宮の納入金を集める人たちが、ペテロのところに来て言った。「あなたがたの先生は、宮の納入金を納めないのですか。」
೨೪ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
25 彼は「納めます。」と言って、家にはいると、先にイエスのほうからこう言い出された。「シモン。どう思いますか。世の王たちはだれから税や貢を取り立てますか。自分の子どもたちからですか、それともほかの人たちからですか。」
೨೫ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
26 ペテロが「ほかの人たちからです。」と言うと、イエスは言われた。「では、子どもたちにはその義務がないのです。
೨೬ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.
27 しかし、彼らにつまずきを与えないために、湖に行って釣りをして、最初に釣れた魚を取りなさい。その口をあけるとスタテル一枚が見つかるから、それを取って、わたしとあなたとの分として納めなさい。」
೨೭ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

< マタイの福音書 17 >