< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 17 >

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.
וַיְהִי כַּאֲשֶׁר יָשַׁב דָּוִיד בְּבֵיתוֹ וַיֹּאמֶר דָּוִיד אֶל־נָתָן הַנָּבִיא הִנֵּה אָנֹכִי יוֹשֵׁב בְּבֵית הָאֲרָזִים וַאֲרוֹן בְּרִית־יְהֹוָה תַּחַת יְרִיעֽוֹת׃
2 ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.
וַיֹּאמֶר נָתָן אֶל־דָּוִיד כֹּל אֲשֶׁר בִּֽלְבָבְךָ עֲשֵׂה כִּי הָאֱלֹהִים עִמָּֽךְ׃
3 ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,
וַיְהִי בַּלַּיְלָה הַהוּא וַֽיְהִי דְּבַר־אֱלֹהִים אֶל־נָתָן לֵאמֹֽר׃
4 “ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು.
לֵךְ וְאָֽמַרְתָּ אֶל־דָּוִיד עַבְדִּי כֹּה אָמַר יְהֹוָה לֹא אַתָּה תִּבְנֶה־לִּי הַבַּיִת לָשָֽׁבֶת׃
5 ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.
כִּי לֹא יָשַׁבְתִּי בְּבַיִת מִן־הַיּוֹם אֲשֶׁר הֶעֱלֵיתִי אֶת־יִשְׂרָאֵל עַד הַיּוֹם הַזֶּה וָאֶהְיֶה מֵאֹהֶל אֶל־אֹהֶל וּמִמִּשְׁכָּֽן׃
6 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.
בְּכֹל אֲשֶֽׁר־הִתְהַלַּכְתִּי בְּכׇל־יִשְׂרָאֵל הֲדָבָר דִּבַּרְתִּי אֶת־אַחַד שֹׁפְטֵי יִשְׂרָאֵל אֲשֶׁר צִוִּיתִי לִרְעוֹת אֶת־עַמִּי לֵאמֹר לָמָּה לֹא־בְנִיתֶם לִי בֵּית אֲרָזִֽים׃
7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
וְעַתָּה כֹּֽה־תֹאמַר לְעַבְדִּי לְדָוִיד כֹּה אָמַר יְהֹוָה צְבָאוֹת אֲנִי לְקַחְתִּיךָ מִן־הַנָּוֶה מִֽן־אַחֲרֵי הַצֹּאן לִֽהְיוֹת נָגִיד עַל עַמִּי יִשְׂרָאֵֽל׃
8 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
וָאֶהְיֶה עִמְּךָ בְּכֹל אֲשֶׁר הָלַכְתָּ וָאַכְרִית אֶת־כׇּל־אוֹיְבֶיךָ מִפָּנֶיךָ וְעָשִׂיתִֽי לְךָ שֵׁם כְּשֵׁם הַגְּדוֹלִים אֲשֶׁר בָּאָֽרֶץ׃
9 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.
וְשַׂמְתִּי מָקוֹם לְעַמִּי יִשְׂרָאֵל וּנְטַעְתִּיהוּ וְשָׁכַן תַּחְתָּיו וְלֹא יִרְגַּז עוֹד וְלֹֽא־יוֹסִיפוּ בְנֵֽי־עַוְלָה לְבַלֹּתוֹ כַּאֲשֶׁר בָּרִאשׁוֹנָֽה׃
10 ೧೦ ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.
וּלְמִיָּמִים אֲשֶׁר צִוִּיתִי שֹֽׁפְטִים עַל־עַמִּי יִשְׂרָאֵל וְהִכְנַעְתִּי אֶת־כׇּל־אוֹיְבֶיךָ וָאַגִּד לָךְ וּבַיִת יִֽבְנֶה־לְּךָ יְהֹוָֽה׃
11 ೧೧ ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
וְהָיָה כִּֽי־מָלְאוּ יָמֶיךָ לָלֶכֶת עִם־אֲבֹתֶיךָ וַהֲקִימוֹתִי אֶֽת־זַרְעֲךָ אַחֲרֶיךָ אֲשֶׁר יִהְיֶה מִבָּנֶיךָ וַהֲכִינוֹתִי אֶת־מַלְכוּתֽוֹ׃
12 ೧೨ ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
הוּא יִבְנֶה־לִּי בָּיִת וְכֹנַנְתִּי אֶת־כִּסְאוֹ עַד־עוֹלָֽם׃
13 ೧೩ ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.
אֲנִי אֶֽהְיֶה־לּוֹ לְאָב וְהוּא יִֽהְיֶה־לִּי לְבֵן וְחַסְדִּי לֹא־אָסִיר מֵעִמּוֹ כַּאֲשֶׁר הֲסִירוֹתִי מֵאֲשֶׁר הָיָה לְפָנֶֽיךָ׃
14 ೧೪ ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.
וְהַעֲמַדְתִּיהוּ בְּבֵיתִי וּבְמַלְכוּתִי עַד־הָעוֹלָם וְכִסְאוֹ יִהְיֶה נָכוֹן עַד־עוֹלָֽם׃
15 ೧೫ ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
כְּכֹל הַדְּבָרִים הָאֵלֶּה וּכְכֹל הֶֽחָזוֹן הַזֶּה כֵּן דִּבֶּר נָתָן אֶל־דָּוִֽיד׃
16 ೧೬ ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?
וַיָּבֹא הַמֶּלֶךְ דָּוִיד וַיֵּשֶׁב לִפְנֵי יְהֹוָה וַיֹּאמֶר מִֽי־אֲנִי יְהֹוָה אֱלֹהִים וּמִי בֵיתִי כִּי הֲבִיאֹתַנִי עַד־הֲלֹֽם׃
17 ೧೭ ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.
וַתִּקְטַן זֹאת בְּעֵינֶיךָ אֱלֹהִים וַתְּדַבֵּר עַל־בֵּֽית־עַבְדְּךָ לְמֵרָחוֹק וּרְאִיתַנִי כְּתוֹר הָאָדָם הַמַּעֲלָה יְהֹוָה אֱלֹהִֽים׃
18 ೧೮ ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.
מַה־יּוֹסִיף עוֹד דָּוִיד אֵלֶיךָ לְכָבוֹד אֶת־עַבְדֶּךָ וְאַתָּה אֶֽת־עַבְדְּךָ יָדָֽעְתָּ׃
19 ೧೯ ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.
יְהֹוָה בַּעֲבוּר עַבְדְּךָ וּֽכְלִבְּךָ עָשִׂיתָ אֵת כׇּל־הַגְּדוּלָּה הַזֹּאת לְהֹדִיעַ אֶת־כׇּל־הַגְּדֻלּֽוֹת׃
20 ೨೦ ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.
יְהֹוָה אֵין כָּמוֹךָ וְאֵין אֱלֹהִים זוּלָתֶךָ בְּכֹל אֲשֶׁר־שָׁמַעְנוּ בְּאׇזְנֵֽינוּ׃
21 ೨೧ ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.
וּמִי כְּעַמְּךָ יִשְׂרָאֵל גּוֹי אֶחָד בָּאָרֶץ אֲשֶׁר הָלַךְ הָאֱלֹהִים לִפְדּוֹת לוֹ עָם לָשׂוּם לְךָ שֵׁם גְּדֻלּוֹת וְנֹרָאוֹת לְגָרֵשׁ מִפְּנֵי עַמְּךָ אֲשֶׁר־פָּדִיתָ מִמִּצְרַיִם גּוֹיִֽם׃
22 ೨೨ ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.
וַתִּתֵּן אֶת־עַמְּךָ יִשְׂרָאֵל ׀ לְךָ לְעָם עַד־עוֹלָם וְאַתָּה יְהֹוָה הָיִיתָ לָהֶם לֵאלֹהִֽים׃
23 ೨೩ ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
וְעַתָּה יְהֹוָה הַדָּבָר אֲשֶׁר דִּבַּרְתָּ עַֽל־עַבְדְּךָ וְעַל־בֵּיתוֹ יֵאָמֵן עַד־עוֹלָם וַעֲשֵׂה כַּאֲשֶׁר דִּבַּֽרְתָּ׃
24 ೨೪ ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.
וְיֵאָמֵן וְיִגְדַּל שִׁמְךָ עַד־עוֹלָם לֵאמֹר יְהֹוָה צְבָאוֹת אֱלֹהֵי יִשְׂרָאֵל אֱלֹהִים לְיִשְׂרָאֵל וּבֵית־דָּוִיד עַבְדְּךָ נָכוֹן לְפָנֶֽיךָ׃
25 ೨೫ ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
כִּי ׀ אַתָּה אֱלֹהַי גָּלִיתָ אֶת־אֹזֶן עַבְדְּךָ לִבְנוֹת לוֹ בָּיִת עַל־כֵּן מָצָא עַבְדְּךָ לְהִתְפַּלֵּל לְפָנֶֽיךָ׃
26 ೨೬ ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.
וְעַתָּה יְהֹוָה אַתָּה־הוּא הָאֱלֹהִים וַתְּדַבֵּר עַֽל־עַבְדְּךָ הַטּוֹבָה הַזֹּֽאת׃
27 ೨೭ ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.
וְעַתָּה הוֹאַלְתָּ לְבָרֵךְ אֶת־בֵּית עַבְדְּךָ לִֽהְיוֹת לְעוֹלָם לְפָנֶיךָ כִּֽי־אַתָּה יְהֹוָה בֵּרַכְתָּ וּמְבֹרָךְ לְעוֹלָֽם׃

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 17 >