< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 2 >

1 ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
پسران اسرائيل اينانند: رؤبين وشَمعون و لاوي يهودا ويسّاکار زبِولون۱
2 ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
و دان ويوسف و بنيامين و نَفتالي وجاد واَشِير.۲
3 ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.
پسران يهودا: عِير واُونان وشيلَه؛ اين سه نفر از بَتشُوعِ کَنعانيه براي او زاييده شدند؛ وعير نخست زاده يهودا به نظر خداوند شرير بود؛ پس او را کُشت.۳
4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.
و عروس وي تامار فارَص و زارَح را براي وي زاييد، و همه پسران يهودا پنج نفر بودند.۴
5 ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್.
و پسران فارَص: حَصرون وحامول.۵
6 ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.
و پسران زارَح: زِمري و اِيتان وهِيمان و کَلکُول و دارَع که همگي ايشان پنج نفر بودند.۶
7 ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.
واز پسران کَرمِي، عاکار مضطرب کننده اسرائيل بود که درباره چيز حرام خيانت ورزيد.۷
8 ಏತಾನನ ಮಗನು ಅಜರ್ಯನು.
و پسر اِيتان: عَزَريا بود.۸
9 ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು.
و پسران حَصرُون که براي وي زاييده شدند، يرحَمئيل ورام وکَلُوباي.۹
10 ೧೦ ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.
و رام عَميناداب را آورد وعَميناداب نَحشُون را آورد که رئيس بني يهودا بود.۱۰
11 ೧೧ ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.
و نَحشُون سَلما را آورد و سَلما بُوعَز را آورد.۱۱
12 ೧೨ ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
و بُوعَز عوبيد را آورد و عُوبيد يسي را آورد.۱۲
13 ೧೩ ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,
يسي نخست زاده خويش اَلِيآب را آورد،و دومين ابيناداب را، و سومين شِمعي را،۱۳
14 ೧೪ ಮೂರನೆಯವನು ಶಿಮ್ಮ, ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ.
وچهارمين نَتَنئيل را و پنجمين رَدّاي را،۱۴
15 ೧೫ ಆರನೆಯವನು ಓಚೆಮ್, ಏಳನೆಯವನು ದಾವೀದ್.
وششمين اُوصَم را وهفتمين داود را آورد.۱۵
16 ೧೬ ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.
و خواهران ايشان صَرُويه و اَبيحايل بودند. و پسران صَرُويه، اَبشاي و يوآب و عَسائيل، سه نفر بودند.۱۶
17 ೧೭ ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.
و اَبيحايل عَماسا را زائيد و پدر عَماسا يتَرِ اِسماعيلي بود.۱۷
18 ೧೮ ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.
و کاليب بن حَصرُون از زن خود عَزُوبَه واز يرِيعُوت اولاد به هم رسانيد و پسران وي اينانند: ياشَر و شُوباب و اَردُون.۱۸
19 ೧೯ ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.
و عَزُوبَه مُرد وکاليب اَفرات را به زني گرفت و او حور را براي وي زاييد.۱۹
20 ೨೦ ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು.
وحُور، اُوري را آورد واُوري بَصَلئيل را آورد.۲۰
21 ೨೧ ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.
وبعد از آن، حَصرُون به دختر ماکير پدر جِلعاد درآمده، او را به زني گرفت حيني که شصت ساله بود و او سَجُوب را براي وي زاييد.۲۱
22 ೨೨ ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.
و سَجُوب يائير را آورد و او بيست و سه شهر در زمين جِلعاد داشت.۲۲
23 ೨೩ ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.
واو جَشور و اَرام را که حَوُّوب يائير باشد، با قنات و دهات آنها که شصت شهر بود، از ايشان گرفت و جمييع اينها از آن بني ماکير پدر جِلعاد بودند.۲۳
24 ೨೪ ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.
و بعد از آنکه حَصرُون در کاليب اَفراته وفات يافت، اَبِيه زن حَصرُون اَشحُور پدر تَقُوع را براي وي زاييد.۲۴
25 ೨೫ ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು.
و پسران يرحَمئيل نخست زاده حَصرُون نخست زاده اش: رام و بُونَه و اُورَن و اُوصَم و اَخيا بودند.۲۵
26 ೨೬ ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ.
و يرحَمئيل را زن ديگر مسمّاة به عطارَه بود که مادرِ اُونام باشد.۲۶
27 ೨೭ ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್, ಯಾಮೀನ್ ಮತ್ತು ಏಕೆರ್ ಇವರೇ.
و پسران رام نخست زاده يرحَمئيل مَعص ويامِين و عاقَر بودند.۲۷
28 ೨೮ ಓನಾಮನ ಮಕ್ಕಳು ಶಮ್ಮೈ ಮತ್ತು ಯಾದ ಎಂಬುವವರು. ಶಮ್ಮೈನ ಮಕ್ಕಳು ನಾದಾಬ್ ಮತ್ತು ಅಬಿಷೂರ್.
و پسران اُونام: شَمّاي وياداع بودند، و پسران شَمّاي ناداب و اَبيشور.۲۸
29 ೨೯ ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು.
و اسم زن ابيشور اَبِيحايل بود و او اَحبان و مُوليد را براي وي زاييد.۲۹
30 ೩೦ ನಾದಾಬನ ಮಕ್ಕಳು ಸೆಲೆದ್ ಮತ್ತು ಅಪ್ಪಯಿಮ್ ಎಂಬುವವರು. ಸೇಲೆದನು ಮಕ್ಕಳಿಲ್ಲದೆ ಸತ್ತುಹೋದನು.
ناداب سَلَد و اَفّايم بودند و سَلَد بي اولاد مُرد.۳۰
31 ೩೧ ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ.
و بني اَفّايم يشعي و بني يشعي شيشان و بني شيشان اَحلاي.۳۱
32 ೩೨ ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು.
و پسران ياداع برادر شَماي يتَر ويوناتان؛ و يتَر بي اولاد مُرد.۳۲
33 ೩೩ ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಮೇಲನ ಸಂತಾನದವರು.
و پسران يوناتان: فالَت وزازا. اينها پسران يرحَمئيل بودند.۳۳
34 ೩೪ ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.
و شيشان را پسري نبود ليکن دختران داشت وشيشان را غلامي مصري بود که يرحاع نام داشت.۳۴
35 ೩೫ ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು.
و شيشان دختر خود را به غلام خويش يرحاع به زني داد و او عَتّاي را براي وي زاييد.۳۵
36 ೩೬ ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.
وعتاي ناتان را آورد و ناتان زاباد را آورد.۳۶
37 ೩೭ ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.
و زاباد اَفلال را آورد و اَفلال عوبيد را آورد.۳۷
38 ೩೮ ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು.
و عوبيد ييهُو را آورد، ييهُوعَزَريا را آورد.۳۸
39 ೩೯ ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
و عَزَريا حالَص را آورد و حالص اَلعاسَه را آورد.۳۹
40 ೪೦ ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
و اَلعاسَه سَسماي را آورد و سَسماي شَلُّوُم را آورد.۴۰
41 ೪೧ ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನನು ಎಲೀಷಾಮನನ್ನು ಪಡೆದನು.
و شَلوم يقَميا را آورد و يقَميا اَلِيشَمَع را آورد.۴۱
42 ೪೨ ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು.
و بني کاليب برادر يرحَمئيل نخست زاده اش ميشاع که پدر زِيف باشد و بني ماريشَه که پدرحَبرُون باشد بودند.۴۲
43 ೪೩ ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.
و پسران حَبرُون: قُورَح و تَفُّوح و راقَم و شامَع.۴۳
44 ೪೪ ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು.
و شامَع راحَم پدر يرقَعام راآورد و راقَم شَمّاي را آورد.۴۴
45 ೪೫ ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು.
و پسر شَمّاي ماعئون و ماعون پدر بَيت صُور بود.۴۵
46 ೪೬ ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು.
عِيفَه مُتعه کاليب حاران و موصا و جازيز را زاييد و حاران جازيز را آورد.۴۶
47 ೪೭ ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು.
وپسران يهداي راجَم و يوتام و جيشان و فالَت و عِيفَه و شاعَف.۴۷
48 ೪೮ ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು.
و مَعکه مُتعه کاليب، شابَرو تِرحَنه را زاييد.۴۸
49 ೪೯ ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.
و او نيز شاعَف، پدر مَدمَنَه و شوا، پدر مَکبينا پدر جِبعا را زاييد؛ و دختر کاليب عَکسَه بود.۴۹
50 ೫೦ ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್,
و پسران کاليب بن حُور نخست زاده اَفراته اينانند: شُوبال پدر قربه يعاريم،۵۰
51 ೫೧ ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.
و سَلما پدر بيت لحم و حاريف پدر بيت جادَر.۵۱
52 ೫೨ ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,
و پسران شوبال پدر قريه يعاريم اينانند: هَرُواه و نصف مَنُوحُوت.۵۲
53 ೫೩ ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.
و قبايل قريه يعاريم اينانند: يترِيان و فُوتيان و شُوماتيان و مِشراعيان که از ايشان صارعاتيان و اِشطاوُليان پيدا شدند.۵۳
54 ೫೪ ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು.
وبني سَلما بيت لحم و نطوفاتيان و عَطروت بيت يوآب و نصف مانَحتيان و صُرعيان بودند.۵۴
55 ೫೫ ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
و قبايل کاتباني که در يعبيص ساکن بودند، تِرعاتيان و شِمعاتيان و سُوکاتيان بودند. اينان قينيان اند که از حَمَّت پدرِبَيت ريکاب بيرون آمدند.۵۵

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 2 >