< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 22 >

1 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.
ئینجا داود گوتی: «ئێرە ماڵی یەزدانی پەروەردگارە، هەر ئێرەش قوربانگای قوربانی سووتاندنی ئیسرائیلە.»
2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
ئیتر داود فەرمانی دا بە کۆکردنەوەی ئەو نامۆیانەی لە خاکی ئیسرائیل بوون، هەندێکی لێ کردنە نەقاڕ بۆ تاشینی بەردی چوارگۆشەیی بۆ بنیادنانی ماڵی خودا.
3 ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
داود ئاسنێکی زۆری بۆ بزمار و ئەڵقەڕیزی دەرگاکان ئامادە کرد، بڕۆنزێکی زۆری لەکێش نەهاتووشی ئامادە کرد.
4 ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.
هەروەها داری ئورزیشی ئامادە کرد کە لە ژمارە نەدەهات، چونکە سەیدائییەکان و سورییەکان دار ئورزێکی زۆریان بۆ داود هێنا.
5 ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
داود گوتی: «سلێمانی کوڕم منداڵە و پێنەگەیشتووە، ئەم ماڵەش کە بۆ یەزدان بنیاد دەنرێت دەبێت لەبەرچاوی هەموو گەلان زۆر گەورە و بەناوبانگ و شکۆدار بێت، لەبەر ئەوە من ئێستا ئامادەکاری بۆ دەکەم.» جا داود بەر لە مردنی ئامادەکارییەکی زۆری بۆ کرد.
6 ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
پاشان سلێمانی کوڕی بانگکرد و ڕایسپارد کە ماڵێک بۆ یەزدانی پەروەردگاری ئیسرائیل بنیاد بنێت.
7 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.
داود بە سلێمانی گوت: «کوڕی خۆم، من لە دڵمدا بوو ماڵێک بۆ ناوی یەزدانی پەروەردگارم بنیاد بنێم.
8 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
بەڵام فەرمایشتی یەزدانم بۆ هات، پێی فەرمووم:”تۆ خوێنێکی زۆرت ڕشتووە و جەنگی گەورەشت کردووە، لەبەر ئەوە ماڵ بۆ ناوەکەم دروستناکەیت، چونکە لەبەردەمم خوێنێکی زۆرت ڕشتووەتە سەر زەوی.
9 ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
بەڵام کوڕێکت دەبێت، دەبێتە پیاوی ئاشتی و حەسانەوە، لە هەموو دوژمنەکانی دەوروبەری دەیحەسێنمەوە. ناوی سلێمان دەبێت، لە ماوەی پاشایەتی ئەودا ئاشتی و ئارامی بە ئیسرائیل دەبەخشم.
10 ೧೦ ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
ئەو ماڵێک بۆ ناوەکەم بنیاد دەنێت، من دەبمە باوکی ئەو و ئەویش دەبێتە کوڕی من، تەختی پاشایەتییەکەشی هەتاهەتایە لەسەر ئیسرائیل جێگیر دەکەم.“
11 ೧೧ ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
«کوڕی خۆم، ئێستاش یەزدانت لەگەڵدا بێت و سەرکەوتوو بیت و ماڵەکەی یەزدانی پەروەردگارت بنیاد بنێیت بەو شێوەیەی سەبارەت بە تۆ فەرمووی.
12 ೧೨ ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.
کاتێک فەرمانڕەوایەتی ئیسرائیل دەکەیت یەزدان دانایی و تێگەیشتنت بداتێ بۆ ئەوەی فێرکردنەکانی یەزدانی پەروەردگارت پەیڕەو بکەیت.
13 ೧೩ ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
ئەگەر ئاگاداربیت لەوەی ئەو فەرز و حوکمانە بەجێبهێنیت کە یەزدان لە ڕێگەی موساوە فەرمانی بە گەلی ئیسرائیل کرد، ئەو کاتە سەرکەوتوو دەبیت. ئیتر بەهێزبە و ئازابە، مەترسە و ورە بەرمەدە.
14 ೧೪ ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
«من ناخۆشی زۆرم چێژتووە بۆ دابینکردنی ئەمانە بۆ پەرستگای یەزدان، سەد هەزار تالنت زێڕ و ملیۆنێک تالنت زیو، بڕۆنز و ئاسنێکی زۆری لە کێش نەهاتووش، دار و بەردیشم ئامادە کردووە. تۆش دەتوانیت زیاتریان بکەیت.
15 ೧೫ ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
کرێکارێکی زۆرت لەلایە، لە نەقاڕ و بەنا و دارتاش و کەسانی شارەزا لە هەموو کار و پیشەیەک
16 ೧೬ ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
لەسەر زێڕ و زیو و بڕۆنز و ئاسن، وەستاکان لە ژمارە نایەن. ئیتر هەستە و دەستبەکار بە و یەزدانت لەگەڵ بێت.»
17 ೧೭ ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
پاشان داود فەرمانی بە هەموو سەرکردەکانی ئیسرائیل کرد هاریکاری سلێمانی کوڕی بکەن:
18 ೧೮ ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
«ئایا یەزدانی پەروەردگارتان لەگەڵتان نییە؟ ئایا لە هەموو لایەکەوە نەیحەساندوونەتەوە؟ دانیشتووی خاکەکەی داوەتە دەستم و خاکەکەی ژێردەستەی یەزدان و گەلەکەی کردووە.
19 ೧೯ ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
ئێستاش بە هەموو دڵ و گیانتانەوە ڕووتان لە یەزدانی پەروەردگارتان بکەن. هەستن و پیرۆزگای یەزدانی پەروەردگار بنیاد بنێن، بۆ ئەوەی سندوقی پەیمانی یەزدان و قاپوقاچاغی پیرۆزگای خودا بهێنرێتە ناو ئەو پەرستگایەی کە بۆ ناوی یەزدان بنیاد دەنرێت.»

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 22 >