< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 29 >

1 ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
וַיֹּ֨אמֶר דָּוִ֤יד הַמֶּ֙לֶךְ֙ לְכָל־הַקָּהָ֔ל שְׁלֹמֹ֨ה בְנִ֥י אֶחָ֛ד בָּֽחַר־בּ֥וֹ אֱלֹהִ֖ים נַ֣עַר וָרָ֑ךְ וְהַמְּלָאכָ֣ה גְדוֹלָ֔ה כִּ֣י לֹ֤א לְאָדָם֙ הַבִּירָ֔ה כִּ֖י לַיהוָ֥ה אֱלֹהִֽים׃
2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.
וּֽכְכָל־כֹּחִ֞י הֲכִינ֣וֹתִי לְבֵית־אֱלֹהַ֗י הַזָּהָ֣ב ׀ לַ֠זָּהָב וְהַכֶּ֨סֶף לַכֶּ֜סֶף וְהַנְּחֹ֣שֶׁת לַנְּחֹ֗שֶׁת הַבַּרְזֶל֙ לַבַּרְזֶ֔ל וְהָעֵצִ֖ים לָעֵצִ֑ים אַבְנֵי־שֹׁ֨הַם וּמִלּוּאִ֜ים אַבְנֵי־פ֣וּךְ וְרִקְמָ֗ה וְכֹ֨ל אֶ֧בֶן יְקָרָ֛ה וְאַבְנֵי־שַׁ֖יִשׁ לָרֹֽב׃
3 ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ
וְע֗וֹד בִּרְצוֹתִי֙ בְּבֵ֣ית אֱלֹהַ֔י יֶשׁ־לִ֥י סְגֻלָּ֖ה זָהָ֣ב וָכָ֑סֶף נָתַ֤תִּי לְבֵית־אֱלֹהַי֙ לְמַ֔עְלָה מִכָּל־הֲכִינ֖וֹתִי לְבֵ֥ית הַקֹּֽדֶשׁ׃
4 ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.
שְׁלֹ֧שֶׁת אֲלָפִ֛ים כִּכְּרֵ֥י זָהָ֖ב מִזְּהַ֣ב אוֹפִ֑יר וְשִׁבְעַ֨ת אֲלָפִ֤ים כִּכַּר־כֶּ֙סֶף֙ מְזֻקָּ֔ק לָט֖וּחַ קִיר֥וֹת הַבָּתִּֽים׃
5 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು.
לַזָּהָ֤ב לַזָּהָב֙ וְלַכֶּ֣סֶף לַכֶּ֔סֶף וּלְכָל־מְלָאכָ֖ה בְּיַ֣ד חָרָשִׁ֑ים וּמִ֣י מִתְנַדֵּ֔ב לְמַלֹּ֥אות יָד֛וֹ הַיּ֖וֹם לַיהוָֽה׃
6 ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ
וַיִּֽתְנַדְּבוּ֩ שָׂרֵ֨י הָאָב֜וֹת וְשָׂרֵ֣י ׀ שִׁבְטֵ֣י יִשְׂרָאֵ֗ל וְשָׂרֵ֤י הָאֲלָפִים֙ וְהַמֵּא֔וֹת וּלְשָׂרֵ֖י מְלֶ֥אכֶת הַמֶּֽלֶךְ׃
7 ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.
וַֽיִּתְּנ֞וּ לַעֲבוֹדַ֣ת בֵּית־הָאֱלֹהִ֗ים זָהָ֞ב כִּכָּרִ֣ים חֲמֵֽשֶׁת־אֲלָפִים֮ וַאֲדַרְכֹנִ֣ים רִבּוֹ֒ וְכֶ֗סֶף כִּכָּרִים֙ עֲשֶׂ֣רֶת אֲלָפִ֔ים וּנְחֹ֕שֶׁת רִבּ֛וֹ וּשְׁמוֹנַ֥ת אֲלָפִ֖ים כִּכָּרִ֑ים וּבַרְזֶ֖ל מֵֽאָה־אֶ֥לֶף כִּכָּרִֽים׃
8 ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.
וְהַנִּמְצָ֤א אִתּוֹ֙ אֲבָנִ֔ים נָתְנ֖וּ לְאוֹצַ֣ר בֵּית־יְהוָ֑ה עַ֥ל יַד־יְחִיאֵ֖ל הַגֵּרְשֻׁנִּֽי׃
9 ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
וַיִּשְׂמְח֤וּ הָעָם֙ עַל־הִֽתְנַדְּבָ֔ם כִּ֚י בְּלֵ֣ב שָׁלֵ֔ם הִֽתְנַדְּב֖וּ לַיהוָ֑ה וְגַם֙ דָּוִ֣יד הַמֶּ֔לֶךְ שָׂמַ֖ח שִׂמְחָ֥ה גְדוֹלָֽה׃ פ
10 ೧೦ ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.
וַיְבָ֤רֶךְ דָּוִיד֙ אֶת־יְהוָ֔ה לְעֵינֵ֖י כָּל־הַקָּהָ֑ל וַיֹּ֣אמֶר דָּוִ֗יד בָּר֨וּךְ אַתָּ֤ה יְהוָה֙ אֱלֹהֵי֙ יִשְׂרָאֵ֣ל אָבִ֔ינוּ מֵעוֹלָ֖ם וְעַד־עוֹלָֽם׃
11 ೧೧ ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
לְךָ֣ יְ֠הוָה הַגְּדֻלָּ֨ה וְהַגְּבוּרָ֤ה וְהַתִּפְאֶ֙רֶת֙ וְהַנֵּ֣צַח וְהַה֔וֹד כִּי־כֹ֖ל בַּשָּׁמַ֣יִם וּבָאָ֑רֶץ לְךָ֤ יְהוָה֙ הַמַּמְלָכָ֔ה וְהַמִּתְנַשֵּׂ֖א לְכֹ֥ל ׀ לְרֹֽאשׁ׃
12 ೧೨ ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
וְהָעֹ֤שֶׁר וְהַכָּבוֹד֙ מִלְּפָנֶ֔יךָ וְאַתָּה֙ מוֹשֵׁ֣ל בַּכֹּ֔ל וּבְיָדְךָ֖ כֹּ֣חַ וּגְבוּרָ֑ה וּבְיָ֣דְךָ֔ לְגַדֵּ֥ל וּלְחַזֵּ֖ק לַכֹּֽל׃
13 ೧೩ ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
וְעַתָּ֣ה אֱלֹהֵ֔ינוּ מוֹדִ֥ים אֲנַ֖חְנוּ לָ֑ךְ וּֽמְהַֽלְלִ֖ים לְשֵׁ֥ם תִּפְאַרְתֶּֽךָ׃
14 ೧೪ ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
וְכִ֨י מִ֤י אֲנִי֙ וּמִ֣י עַמִּ֔י כִּֽי־נַעְצֹ֣ר כֹּ֔חַ לְהִתְנַדֵּ֖ב כָּזֹ֑את כִּֽי־מִמְּךָ֣ הַכֹּ֔ל וּמִיָּדְךָ֖ נָתַ֥נּוּ לָֽךְ׃
15 ೧೫ ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.
כִּֽי־גֵרִ֨ים אֲנַ֧חְנוּ לְפָנֶ֛יךָ וְתוֹשָׁבִ֖ים כְּכָל־אֲבֹתֵ֑ינוּ כַּצֵּ֧ל ׀ יָמֵ֛ינוּ עַל־הָאָ֖רֶץ וְאֵ֥ין מִקְוֶֽה׃
16 ೧೬ ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.
יְהוָ֣ה אֱלֹהֵ֔ינוּ כֹ֣ל הֶהָמ֤וֹן הַזֶּה֙ אֲשֶׁ֣ר הֲכִינֹ֔נוּ לִבְנֽוֹת־לְךָ֥ בַ֖יִת לְשֵׁ֣ם קָדְשֶׁ֑ךָ מִיָּדְךָ֥ היא וּלְךָ֥ הַכֹּֽל׃
17 ೧೭ ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
וְיָדַ֣עְתִּי אֱלֹהַ֔י כִּ֤י אַתָּה֙ בֹּחֵ֣ן לֵבָ֔ב וּמֵישָׁרִ֖ים תִּרְצֶ֑ה אֲנִ֗י בְּיֹ֤שֶׁר לְבָבִי֙ הִתְנַדַּ֣בְתִּי כָל־אֵ֔לֶּה וְעַתָּ֗ה עַמְּךָ֙ הַנִּמְצְאוּ־פֹ֔ה רָאִ֥יתִי בְשִׂמְחָ֖ה לְהִֽתְנַדֶּב־לָֽךְ׃
18 ೧೮ ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
יְהוָ֗ה אֱ֠לֹהֵי אַבְרָהָ֞ם יִצְחָ֤ק וְיִשְׂרָאֵל֙ אֲבֹתֵ֔ינוּ שֳׁמְרָה־זֹּ֣את לְעוֹלָ֔ם לְיֵ֥צֶר מַחְשְׁב֖וֹת לְבַ֣ב עַמֶּ֑ךָ וְהָכֵ֥ן לְבָבָ֖ם אֵלֶֽיךָ׃
19 ೧೯ ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.
וְלִשְׁלֹמֹ֣ה בְנִ֗י תֵּ֚ן לֵבָ֣ב שָׁלֵ֔ם לִשְׁמוֹר֙ מִצְוֺתֶ֔יךָ עֵדְוֺתֶ֖יךָ וְחֻקֶּ֑יךָ וְלַעֲשׂ֣וֹת הַכֹּ֔ל וְלִבְנ֖וֹת הַבִּירָ֥ה אֲשֶׁר־הֲכִינֽוֹתִי ׃ פ
20 ೨೦ ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
וַיֹּ֤אמֶר דָּוִיד֙ לְכָל־הַקָּהָ֔ל בָּֽרְכוּ־נָ֖א אֶת־יְהוָ֣ה אֱלֹהֵיכֶ֑ם וַיְבָרֲכ֣וּ כָֽל־הַקָּהָ֗ל לַיהוָה֙ אֱלֹהֵ֣י אֲבֹֽתֵיהֶ֔ם וַיִּקְּד֧וּ וַיִּֽשְׁתַּחֲו֛וּ לַיהוָ֖ה וְלַמֶּֽלֶךְ׃
21 ೨೧ ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.
וַיִּזְבְּח֣וּ לַיהוָ֣ה ׀ זְ֠בָחִים וַיַּעֲל֨וּ עֹל֜וֹת לַיהוָ֗ה לְֽמָחֳרַת֮ הַיּ֣וֹם הַהוּא֒ פָּרִ֨ים אֶ֜לֶף אֵילִ֥ים אֶ֛לֶף כְּבָשִׂ֥ים אֶ֖לֶף וְנִסְכֵּיהֶ֑ם וּזְבָחִ֥ים לָרֹ֖ב לְכָל־יִשְׂרָאֵֽל׃
22 ೨೨ ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.
וַיֹּאכְל֨וּ וַיִּשְׁתּ֜וּ לִפְנֵ֧י יְהוָ֛ה בַּיּ֥וֹם הַה֖וּא בְּשִׂמְחָ֣ה גְדוֹלָ֑ה וַיַּמְלִ֤יכוּ שֵׁנִית֙ לִשְׁלֹמֹ֣ה בֶן־דָּוִ֔יד וַיִּמְשְׁח֧וּ לַיהוָ֛ה לְנָגִ֥יד וּלְצָד֖וֹק לְכֹהֵֽן׃
23 ೨೩ ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.
וַיֵּ֣שֶׁב שְׁ֠לֹמֹה עַל־כִּסֵּ֨א יְהוָ֧ה ׀ לְמֶ֛לֶךְ תַּֽחַת־דָּוִ֥יד אָבִ֖יו וַיַּצְלַ֑ח וַיִּשְׁמְע֥וּ אֵלָ֖יו כָּל־יִשְׂרָאֵֽל׃
24 ೨೪ ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.
וְכָל־הַשָּׂרִים֙ וְהַגִּבֹּרִ֔ים וְגַ֕ם כָּל־בְּנֵ֖י הַמֶּ֣לֶךְ דָּוִ֑יד נָ֣תְנוּ יָ֔ד תַּ֖חַת שְׁלֹמֹ֥ה הַמֶּֽלֶךְ׃
25 ೨೫ ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.
וַיְגַדֵּ֨ל יְהוָ֤ה אֶת־שְׁלֹמֹה֙ לְמַ֔עְלָה לְעֵינֵ֖י כָּל־יִשְׂרָאֵ֑ל וַיִּתֵּ֤ן עָלָיו֙ ה֣וֹד מַלְכ֔וּת אֲ֠שֶׁר לֹֽא־הָיָ֧ה עַל־כָּל־מֶ֛לֶךְ לְפָנָ֖יו עַל־יִשְׂרָאֵֽל׃ פ
26 ೨೬ ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು.
וְדָוִיד֙ בֶּן־יִשָׁ֔י מָלַ֖ךְ עַל־כָּל־יִשְׂרָאֵֽל׃
27 ೨೭ ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು.
וְהַיָּמִ֗ים אֲשֶׁ֤ר מָלַךְ֙ עַל־יִשְׂרָאֵ֔ל אַרְבָּעִ֖ים שָׁנָ֑ה בְּחֶבְר֤וֹן מָלַךְ֙ שֶׁ֣בַע שָׁנִ֔ים וּבִירוּשָׁלִַ֥ם מָלַ֖ךְ שְׁלֹשִׁ֥ים וְשָׁלֽוֹשׁ׃
28 ೨೮ ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.
וַיָּ֙מָת֙ בְּשֵׂיבָ֣ה טוֹבָ֔ה שְׂבַ֥ע יָמִ֖ים עֹ֣שֶׁר וְכָב֑וֹד וַיִּמְלֹ֛ךְ שְׁלֹמֹ֥ה בְנ֖וֹ תַּחְתָּֽיו׃
29 ೨೯ ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.
וְדִבְרֵי֙ דָּוִ֣יד הַמֶּ֔לֶךְ הָרִאשֹׁנִ֖ים וְהָאֲחרֹנִ֑ים הִנָּ֣ם כְּתוּבִ֗ים עַל־דִּבְרֵי֙ שְׁמוּאֵ֣ל הָרֹאֶ֔ה וְעַל־דִּבְרֵי֙ נָתָ֣ן הַנָּבִ֔יא וְעַל־דִּבְרֵ֖י גָּ֥ד הַחֹזֶֽה׃
30 ೩೦ ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.
עִ֥ם כָּל־מַלְכוּת֖וֹ וּגְבוּרָת֑וֹ וְהָעִתִּ֗ים אֲשֶׁ֨ר עָבְר֤וּ עָלָיו֙ וְעַל־יִשְׂרָאֵ֔ל וְעַ֖ל כָּל־מַמְלְכ֥וֹת הָאֲרָצֽוֹת׃ פ

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 29 >